Breaking News

Monthly Archives: ಮೇ 2026

ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ – ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಿರುದ್ಧ FIR

ಮೈಸೂರು: ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್  ವಿರುದ್ಧ ಎಫ್ಐಆರ್ ದಾಖಲಾಗಿದೆ. 55 ಲಕ್ಷ ಹಿಂದಿರುಗಿಸದ ಆರೋಪ ವಿಶ್ವನಾಥ್‌ ಮೇಲಿದೆ. ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ವಿಧಾನ ಪರಿಷತ್ ಸದಸ್ಯ ಅಡಗೂರು ವಿಶ್ವನಾಥ್ ಹಲ್ಲೆ ನಡೆಸಿದ್ದಾರೆ ಎಂದು ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ವಿಶ್ವನಾಥ್ ಇರುವಾಗ ಹಣ ಕೇಳಲು …

Read More »

ಸದ್ಯಕ್ಕಿಲ್ಲ ಜಿಬಿಎ ಚುನಾವಣೆ – ಮತ್ತೆ 2 ತಿಂಗಳು ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ರಾಜ್ಯ ಸರ್ಕಾರವು ಚುನಾವಣೆ ವಿಳಂಬಗೊಳಿಸಲು ಯತ್ನಿಸುತ್ತಿದೆ ಎಂದು ಕಟುವಾಗಿ ಟೀಕಿಸಿದ ಸುಪ್ರೀಂ ಕೋರ್ಟ್‌, ಆಗಸ್ಟ್‌ 31ರೊಳಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಡಿ ಬರುವ ಐದೂ ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಡಿ ಬರುವ ಐದು ಪಾಲಿಕೆಗಳಿಗೆ ಚುನಾವಣೆ ಮುಂದೂಡಿಕೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಮಧ್ಯಂತರ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌, ನ್ಯಾಯಮೂರ್ತಿಗಳಾದ ಜೋಯಮಲ್ಯ ಬಾಗ್ಚಿ ಮತ್ತು ವಿಪುಲ್‌ …

Read More »

ಬೆಂಗ್ಳೂರಲ್ಲಿ ಬೃಹತ್ ಡ್ರಗ್ಸ್ ಜಾಲ ಪತ್ತೆ – 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್

ಬೆಂಗಳೂರು: ಹೆಬ್ಬಾಳ ಪೊಲೀಸರು  ದೆಹಲಿ ಮೂಲದ ಬೃಹತ್ ಡ್ರಗ್ಸ್‌ ಜಾಲವೊಂದನ್ನ ಭೇದಿಸಿ, ಎಂಟು ಆರೋಪಿಗಳನ್ನು ಬಂಧಿಸಿ, ಬರೋಬ್ಬರಿ 35 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ  ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡ್ತಿದ್ದ ಗ್ಯಾಂಗ್‌ವೊಂದನ್ನು ಹೆಡೆಮುರಿ ಕಟ್ಟಿದ್ದಾರೆ. ಪೊಲೀಸರು ಒಟ್ಟು ಎಂಟು ಜನ ಆರೋಪಿಗಳನ್ನು ಅರೆಸ್ಟ್ ಮಾಡಿ, ಒಂದೇ ಗ್ಯಾಂಗ್‌ನಿಂದ ಸುಮಾರು 35 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಮಾದಕ ವಸ್ತುಗಳ …

Read More »

6,000 ಕೋಟಿ ಹೂಡಿಕೆಗೆ ಆ್ಯಕ್ಸಿಸ್‌ಕೇಡ್ಸ್‌ ಏರೊಸ್ಪೇಸ್‌ ಒಲವು: ಎಂ.ಬಿ ಪಾಟೀಲ್‌

ಬೆಂಗಳೂರು: ವೈಮಾಂತರಿಕ್ಷ ಹಾಗೂ ರಕ್ಷಣಾ ವಲಯದ ಬೆಂಗಳೂರು ಮೂಲದ ಆ್ಯಕ್ಸಿಸ್‌ಕೇಡ್ಸ್‌ ಏರೊಸ್ಪೇಸ್‌ ಇನ್‌ಫ್ರಾಸ್ಟ್ರಕ್ಚರ್‌ ಪ್ರೈವೇಟ್‌ ಲಿಮಿಟೆಡ್‌, ರಾಜ್ಯದಲ್ಲಿ 6,000 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಮುಂದೆ ಬಂದಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌  ತಿಳಿಸಿದ್ದಾರೆ. ಬುಧವಾರ (ಮೇ 20) ಖನಿಜ ಭವನದಲ್ಲಿ ಕಂಪನಿಯ ಉನ್ನತಾಧಿಕಾರಿಗಳ ಜೊತೆಗೆ ನಡೆದ ವಿಸ್ತೃತ ಸಮಾಲೋಚನೆಯ ನಂತರ ಸಚಿವರು ಈ ಮಾಹಿತಿ ನೀಡಿದ್ದಾರೆ. 200 ಎಕರೆ ಪ್ರದೇಶದಲ್ಲಿ ವೈಮಾಂತರಿಕ್ಷ, ರಕ್ಷಣೆ, ಸೆಮಿಕಂಡಕ್ಟರ್‌ ಹಾಗೂ …

Read More »

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶ ಇಲ್ಲ: ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶ ಹಾಗೂ ವನ್ಯಜೀವಿಧಾಮಗಳ ಸಫಾರಿಯಲ್ಲಿ ತೆರೆದ ಕ್ಯಾಂಪರ್ ಬದಲಿಗೆ ಸುರಕ್ಷಿತ ಬಸ್ ಬಳಕೆ ಮಾಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ  ಸೂಚನೆ ನೀಡಿದ್ದಾರೆ. ದುಬಾರೆ ಆನೆ ಶಿಬಿರದಲ್ಲಿ ನಿನ್ನೆ ಎರಡು ಸಾಕಾನೆಗಳ ಕಾಳಗದ ವೇಳೆ ಪ್ರವಾಸಿ ಮಹಿಳೆ ಮೃತಪಟ್ಟ ಆಘಾತಕಾರಿ ಘಟನೆ ಹಿನ್ನೆಲೆಯಲ್ಲಿ ಸಫಾರಿಗಳಲ್ಲಿ ಪ್ರವಾಸಿಗರ ಸುರಕ್ಷತೆಗೂ ಹೆಚ್ಚಿನ ಗಮನ ಹರಿಸುವಂತೆ ಅರಣ್ಯ ಸಚಿವರು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. …

Read More »

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • ಬಾಗಲಕೋಟೆಯಲ್ಲಿ ಹೆಸ್ಕಾಂ ಅಧಿಕಾರಿಗಳ ಭಾರೀ ನಿರ್ಲಕ್ಷ್ಯ! • ವಾರವಾದರೂ ಸರಿಯಾಗದ ಬಿದ್ದ ವಿದ್ಯುತ್ ಕಂಬಗಳು! • ನೀರಿಲ್ಲದೆ ಕರಗುತ್ತಿದೆ ರೈತರ ಕಬ್ಬಿನ ಬೆಳೆ! • ಹಲಕುರ್ಕಿ ಗ್ರಾಮಸ್ಥರ ಆಕ್ರೋಶ, ಕೂಡಲೇ ಸರಿಪಡಿಸಿ! ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಲಕುರ್ಕಿಯಲ್ಲಿ ಹೆಸ್ಕಾಂ ಅಧಿಕಾರಿಗಳ ಅಟ್ಟಹಾಸ ಮತ್ತು ಬೇಜವಾಬ್ದಾರಿತನ ಮುಗಿಲು ಮುಟ್ಟಿದೆ. ಭಾರೀ ಮಳೆಗೆ ವಿದ್ಯುತ್ …

Read More »

ಧಾರವಾಡ ಪ್ರತ್ಯೇಕ ಪಾಲಿಕೆ ಫೈಟ್: ರಾಜ್ಯಪಾಲರ ಅಂಗಳಕ್ಕೆ ತಲುಪಿದ ಹೋರಾಟ; ಬಿಜೆಪಿ ವಿರುದ್ಧ ಸಚಿವ ಲಾಡ್ ವಾಗ್ದಾಳಿ!

• ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗೆ ತೀವ್ರಗೊಂಡ ಹೋರಾಟ! • ಕೇಂದ್ರ ಸಚಿವ ಪ್ರಲ್ಹಾದ ಜೋಷಿ ನೇತೃತ್ವದಲ್ಲಿ ರಾಜ್ಯಪಾಲರಿಗೆ ಮನವಿ! • ಕ್ಯಾಬಿನೆಟ್‌ನಲ್ಲಿ ಪಾಸ್ ಆದರೂ ವಿಳಂಬವೇಕೆ?; ಸಂತೋಷ್ ಲಾಡ್ ಪ್ರಶ್ನೆ! • ರಾಜ್ಯಪಾಲರು ರಾಜಕೀಯ ಮಾಡದೇ ನಿಷ್ಪಕ್ಷಪಾತವಾಗಿ ಮಂಜೂರಾತಿ ನೀಡಲಿ! ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಯಾಗಬೇಕೆಂಬ ದಶಕಗಳ ಬೇಡಿಕೆಗೆ ಈಗ ಮತ್ತೆ ಜೀವ ಬಂದಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಷಿ ನೇತೃತ್ವದಲ್ಲಿ ಹೋರಾಟಗಾರರ ನಿಯೋಗ ಇಂದು ರಾಜ್ಯಪಾಲರನ್ನು …

Read More »

ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆ ಗೆದ್ದ ಬೆಳಗಾವಿ ವಿದ್ಯಾರ್ಥಿಗಳು

ಬೆಳಗಾವಿ : ನಗರದ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ಒಬ್ಬರು ವಿದ್ಯಾರ್ಥಿಗಳು ಇಂಡೋನೇಷ್ಯಾದಲ್ಲಿ ನಡೆದ ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ನಾಡಿನ ಕೀರ್ತಿ ಹೆಚ್ಚಿಸಿದ್ದಾರೆ. ಸುಶಾಂತ್ ಲಕ್ಕಪ್ಪ ಬಂಡಿವಡ್ಡರ್, ವಿಠ್ಠಲ ಮಲ್ಲಿಕಾರ್ಜುನ ಗಡಗ್ ಸಾಧನೆಗೈದ ಯುವಕರು. ಬೆಳಗಾವಿಯ ಶಿವಬಸವ ನಗರದ ನಾಗನೂರು ರುದ್ರಾಕ್ಷಿಮಠದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ STEAM-H Training and Research Foundation ನಲ್ಲಿ ತರಬೇತಿ ಪಡೆದಿದ್ದರು. ಪ್ರತಿಷ್ಠಾನದ ವತಿಯಿಂದ ಆಯೋಜಿಸಲ್ಪಡುವ …

Read More »

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು ಮನೆತನದ ಗೌರವ ಬೀದಿಪಾಲು ಮಾಡಿದ್ದಾಳೆ ಎಂದು ಕೋಪಗೊಂಡು ಮಗಳನ್ನೇ ತಂದೆ ಹತ್ಯೆ ಮಾಡಿದ ಘಟನೆ ತುಮಕೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ವಯಸ್ಸಿನ ಮಗಳನ್ನು ಕೊಂದು ತಲೆ ಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿರಾ ತಾಲೂಕು ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತಿಮ್ಮರಾಯಪ್ಪ ಬಂಧಿತ ಆರೋಪಿ. ಶಿರಾ ತಾಲೂಕು ನಿಂಬೆ …

Read More »

ಒಂದೇ ಮಳೆಗೆ ನಿರ್ಮಾಣ ಹಂತದ ಸೇತುವೆ ಮುಳುಗಡೆ : ಅಧಿಕಾರಿಗ ಕಾರ್ಯವೈಖರಿಗೆ ಜನ ಆಕ್ರೋಶ

ಒಂದೇ ಮಳೆಗೆ ನಿರ್ಮಾಣ ಹಂತದ ಸೇತುವೆ ಮುಳುಗಡೆ : ಅಧಿಕಾರಿಗ ಕಾರ್ಯವೈಖರಿಗೆ ಜನ ಆಕ್ರೋಶ ಬೈಲಹೊಂಗಲ: ಸಮೀಪದ ಹೊಸೂರ ಗ್ರಾಮದ ಬಳಿ ಹಾದು ಹೋಗುವ ಬೈಲಹೊಂಗಲ–ಮುನವಳ್ಳಿ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಸೋಮವಾರ ಸುರಿದ ಭಾರಿ ಮಳೆಯಿಂದ ನಿರ್ಮಾಣ ಹಂತದಲ್ಲಿದ್ದ ತಾತ್ಕಾಲಿಕ ಸೇತುವೆ ಕೊಚ್ಚಿಕೊಂಡು ಹೋಗಿ ರಸ್ತೆ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ. ಮುತವಾಡ, ಇಂಚಲ, ಮುರಗೋಡ ಹಾಗೂ ನೇಸರಗಿಯಿಂದ ಹಲಕಿ ಕ್ರಾಸ್‌ವರೆಗೆ ರಾಜ್ಯ ಹೆದ್ದಾರಿಯ ಬಲಭಾಗದ ಮಳೆ ನೀರು ಹೊಸೂರ ಗ್ರಾಮದ …

Read More »