Breaking News

Monthly Archives: ಮೇ 2026

ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು

ಮಂಗಳೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ನಾಲ್ವರಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ದಾರುಣ ಸಾವನ್ನಪ್ಪಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಕಡಬದ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ಗುಂಡ್ಯಹೊಳೆಯಲ್ಲಿ ಘಟನೆ ನಡೆದಿದೆ. ಕುಟ್ರುಪ್ಪಾಡಿ ನಿವಾಸಿಗಳಾದ ಸುನೀತಾ (21), ಅರ್ಪಿತಾ (15) ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ. ಒಂದೇ ಕುಟುಂಬದ ಇಬ್ಬರು ಯುವತಿಯರು ನೀರಲ್ಲಿ ಮುಳುಗಿ ದಾರುಣ ಸಾವನ್ನಪ್ಪಿದ್ದಾರೆ. ಸ್ಥಳೀಯರು ಇವರಿಬ್ಬರ ಮೃತದೇಹ ಹೊರ ತೆಗೆದರು. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ಗೆ ಬೆಂಕಿ – ಓರ್ವ ಸಿಬ್ಬಂದಿ ಸಾವು, ನಾಲ್ವರ ಸ್ಥಿತಿ ಗಂಭೀರ

ಬೆಂಗಳೂರು: ಇಲ್ಲಿನ ನಾಗರಬಾವಿಯ  ರಿಂಗ್ ರೋಡ್ ಬಳಿಯ ಸರ್ವೀಸ್ ರೋಡ್‌ನಲ್ಲಿರುವ ಖಾಸಗಿ ಹೋಟೆಲ್‌ಗೆ ಬೆಂಕಿ ತಗುಲಿ, ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಮೃತ ಸಿಬ್ಬಂದಿಯನ್ನು ರಾಜ್‌ಕುಮಾರ್ ಎಂದು ಗುರುತಿಸಲಾಗಿದ್ದು, ನಾಲ್ವರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಶುಕ್ರವಾರ (ಮೇ 8) ತಡರಾತ್ರಿ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್‌ನಲ್ಲಿ ಕೆಲಸ ಮಾಡುವ ಎಂಟು ಜನ ಸಿಬ್ಬಂದಿ ಅದೇ ಹೋಟೆಲ್‌ನ ಮೇಲಿನ ಫ್ಲೋರ್‌ನಲ್ಲಿ ವಾಸವಿದ್ರು. ಬೆಂಕಿಯ ಕೆನ್ನಾಲಿಗೆ ಮೇಲಿನ …

Read More »

ಸವದತ್ತಿ ಜಾತ್ರಾ ಮಹೋತ್ಸವದಲ್ಲಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರೊಂದಿಗೆ ಭಕ್ತಿಪೂರ್ವಕ ಭಾಗಿ

ನಮ್ಮ ಸವದತ್ತಿ ಪಟ್ಟಣದ ಐತಿಹಾಸಿಕ ಶ್ರೀ ಗ್ರಾಮದೇವಿ ಜಾತ್ರಾ ಮಹೋತ್ಸವದ ಸುಸಂದರ್ಭದಲ್ಲಿ ಇಂದು ಮಾನ್ಯ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ನಮ್ಮ ಜಿಲ್ಲೆಯ ಪ್ರಭಾವಿ ನಾಯಕರಾದ ಶ್ರೀ ಸತೀಶ್ ಜಾರಕಿಹೊಳಿ ಅವರೊಂದಿಗೆ ಪಾಲ್ಗೊಂಡು ತಾಯಿ ಗ್ರಾಮದೇವಿಯ ದರ್ಶನ ಪಡೆದೆವು. ​45 ವರ್ಷಗಳ ಬಳಿಕ ಜರುಗುತ್ತಿರುವ ಈ ಮಹೋತ್ಸವದ ಸಂಭ್ರಮಕ್ಕೆ ಸಚಿವರ ಆಗಮನವು ಮತ್ತಷ್ಟು ಮೆರುಗು ನೀಡಿತು. ಸವದತ್ತಿಯ ಸಮಸ್ತ ಜನತೆಗೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ತಾಯಿಯ ಆಶೀರ್ವಾದ ಸದಾ ಇರಲಿ …

Read More »

ವೈದ್ಯ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ನೇಣಿಗೆ ಶರಣಾದ ನರ್ಸ್‌ – ಅಕ್ರಮ ಸಂಬಂಧ ಶಂಕೆ

ರಾಮನಗರ: ವೈದ್ಯನ  ಸಾವಿನ ಬೆನ್ನಲ್ಲೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಸಹ ಆತ್ಮಹತ್ಯೆಗೆ ಶರಣಾದ ಘಟನೆ ಕನಕಪುರ  ನಗರದ ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ. ಎರಡು ದಿನಗಳ ಅಂತರದಲ್ಲಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನವೋದಯ ಆಸ್ಪತ್ರೆಯ ನರ್ಸ್ ಸರಸ್ವತಿ (45) ನೇಣಿಗೆ ಶರಣಾದ ನರ್ಸ್. 2 ದಿನಗಳ ಹಿಂದೆ ಕೌಟುಂಬಿಕ ಕಲಹದಿಂದ ಕನಕಪುರ ನವೋದಯ ಆಸ್ಪತ್ರೆ ವೈದ್ಯ ಡಾ.ಚೇತನ್ ಟೆಂಕರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಡಾ.ಚೇತನ್ ಅವರ ಆಸ್ಪತ್ರೆಯಲ್ಲಿ ಸಾಕಷ್ಟು …

Read More »

ಜಿಬಿಎ ಚುನಾವಣೆ – ಜೂ.14 ರಿಂದ 24ರ ಒಳಗೆ ದಿನಾಂಕ ಘೋಷಣೆಗೆ ಸೂಚನೆ

ಬೆಂಗಳೂರು: ಕೊನೆಗೂ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ  ಮುಹೂರ್ತ ಕೂಡಿಬಂದಿದೆ. ಮುಂದಿನ ಜೂನ್‌ 14 ರಿಂದ 24ರ ಒಳಗೆ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎ ಸಂಗ್ರೇಶಿ ಸೂಚನೆ ನೀಡಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ 5 ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ಕರೆಯಲಾಗಿತ್ತು.ಜಿಬಿಎ ಅಧ್ಯಕ್ಷರಾಗಿರುವ ಸಿಎಂ ಹಾಗೂ ಡಿಸಿಎಂ ಸಭೆಗೆ ಗೈರಾಗಿದ್ದರು. ಈ ಹಿನ್ನೆಲೆ ರಾಜ್ಯ ಚುನಾವಣಾ ಆಯುಕ್ತ …

Read More »

ರೈಲ್ವೆ ಪರೀಕ್ಷೆ ಕನ್ನಡದಲ್ಲೂ ನಡೆಸಿ – ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಪತ್ರ

ಬೆಂಗಳೂರು: ರೈಲ್ವೆ ಇಲಾಖೆಯ ಪರೀಕ್ಷೆಗಳನ್ನು  ಕನ್ನಡದಲ್ಲೂ ನಡೆಸುವಂತೆ ಒತ್ತಾಯಿಸಿ ಜೆಡಿಎಸ್‌  ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ಈ ಪತ್ರವನ್ನು ತಮ್ಮ ಎಕ್ಸ್ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ನೈರುತ್ಯ ರೈಲ್ವೆ ಇಲಾಖೆಯಲ್ಲಿ ನಡೆಯುವ ಇಲಾಖಾ ಬಡ್ತಿ ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ನಡೆಸುತ್ತಿರುವುದು ಸರಿಯಲ್ಲ. ನಮ್ಮ ಕನ್ನಡಿಗ ಉದ್ಯೋಗಿಗಳಿಗೆ ಇದರಿಂದ ಅನ್ಯಾಯವಾಗುತ್ತಿದೆ ಎಂದು ನಿಖಿಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಷಯವಾಗಿ …

Read More »

11 ಜಿಲ್ಲೆಗಳಲ್ಲಿ ಬೆಂಬಲ ಬೆಲೆ ನೀಡಿ ಸೂರ್ಯಕಾಂತಿ ಖರೀದಿಗೆ ಆದೇಶ

ಬೆಂಗಳೂರು: ಬೆಂಬಲ ಬೆಲೆ ಯೋಜನೆ (MSP) ಅಡಿಯಲ್ಲಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿಯನ್ನು (Sunflower) ಪ್ರತಿ ಕ್ವಿಂಟಾಲ್‌ಗೆ 7,721 ರೂ. ದರದಲ್ಲಿ ಖರೀದಿಗೆ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್‌ (Shivanand Patil) ಆದೇಶ ಮಾಡಿದ್ದಾರೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ, ರಾಯಚೂರು ಹಾಗೂ ಧಾರವಾಡ ಜಿಲ್ಲೆಗಳಲ್ಲಿ …

Read More »

ಬಿಜೆಪಿ ನಾಯಕರನ್ನ ಬ್ಲ್ಯಾಕ್‌ಮೇಲ್‌ ಮಾಡೋಕೆ ಮಾಡ್ತಿದ್ದಾರೆ, ಇದು ಅಭಿಮಾನೋತ್ಸವ ಅಲ್ಲ, ಬ್ಲ್ಯಾಕ್‌ಮೇಲೋತ್ಸವ: ಯತ್ನಾಳ್

ಕೊಪ್ಪಳ: ಬಿಜೆಪಿ ನಾಯಕರನ್ನ ಬ್ಲ್ಯಾಕ್‌ಮೇಲ್ ಮಾಡೋಕೆ ಮಾಡ್ತಿದ್ದಾರೆ, ಇದು ಅಭಿಮಾನೋತ್ಸವ ಅಲ್ಲ, ಬ್ಲ್ಯಾಕ್‌ಮೇಲೋತ್ಸವ ಎಂದು ಬಿಜೆಪಿ  ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ  ಅಭಿಮಾನೋತ್ಸವ ಮಾಡೋಕೆ ಏನ್ ಕೆಲಸ ಮಾಡಿದ್ದಾರೆ. 50 ವರ್ಷ ಒಳ್ಳೆಯ ಕೆಲಸ ಮಾಡಿದ್ದರೆ ಮಾಡಬೇಕು, ಅದಕ್ಕಿಂತ ನೂರು ಪಟ್ಟು ಭ್ರಷ್ಟಾಚಾರ ಮಾಡಿದ್ದಾರೆ. ಅದಕ್ಕೆ ಜೈಲಿಗೆ ಹೋಗಿದ್ರು. ಸಿದ್ದರಾಮಯ್ಯ ಜೊತೆ ಅಡ್ಜಸ್ಟ್ಮೆಂಟ್ ಇರೋದಕ್ಕೆ ಹೊರಗಿದ್ದಾರೆ. ಇಲ್ಲಾಂದ್ರೆ ಜೈಲಲ್ಲಿ ಇರ್ತಿದ್ದರು. ಇದೀಗ …

Read More »

ಬಂಗಾಳ ಸರ್ಕಾರ ರಚನೆಗೆ ಕೋಲ್ಕತ್ತಾಗೆ ಆಗಮಿಸಿದ ಅಮಿತ್ ಶಾ – `ದಕ್ಷಿಣೇಶ್ವರ ಕಾಳಿ’ ಮಾತೆಗೆ ವಿಶೇಷ ಪೂಜೆ ಸಲ್ಲಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಕೇಂದ್ರ ವೀಕ್ಷಕರಾಗಿ ಗೃಹಸಚಿವ ಅಮಿತ್‌ ಶಾ ಅವರಿಂದು ಕೋಲ್ಕತ್ತಾಗೆ ಆಗಮಿಸಿದ್ದಾರೆ. ನೂತನ ಸಿಎಂ ಆಯ್ಕೆ ಹಿನ್ನೆಲೆ ನಡೆಯಲಿರುವ ಪಕ್ಷದ ಸಭೆಗೂ ಮುನ್ನ ಇಲ್ಲಿನ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದಕ್ಕ ಮುನ್ನ ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಸಿಎಂ ರೇಸ್‌ನಲ್ಲಿರುವ ಬಿಜೆಪಿ ಶಾಸಕ ಸುವೇಂದು ಅಧಿಕಾರಿ ಅಮಿತ್‌ ಶಾ ಅವರನ್ನ ಸ್ವಾಗತಿಸಿದರು. ಬಳಿಕ ವಿಮಾನ ನಿಲ್ದಾಣದ ಹೊರಗೆ …

Read More »

ಡಿಎಂಕೆ, ಎಐಎಡಿಎಂಕೆ ಮೈತ್ರಿ – ನಾವು ತಟಸ್ಥವಾಗಿದ್ದೇವೆ, ಬೆಂಬಲ ನೀಡಲ್ಲ: ತಮಿಳುನಾಡು ಬಿಜೆಪಿ

ಚೆನ್ನೈ: ಡಿಎಂಕೆ ಮತ್ತು ಎಐಎಡಿಎಂಕೆ ಮಧ್ಯೆ ಮೈತ್ರಿ ಸುಳಿವು ಬೆನ್ನಲ್ಲೇ ತಮಿಳುನಾಡು ಬಿಜೆಪಿ  ತಟಸ್ಥವಾಗಿರಲು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ತಮಿಳುನಾಡು ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿ, ಯಾವ ಪಕ್ಷದ ಜೊತೆಗೂ ನಾವು ಕೈ ಜೋಡಿಸುವುದಿಲ್ಲ. ಯಾರ ಜೊತೆಗೂ ಸೇರಿ ಸರ್ಕಾರ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಯಾರಾದರೂ ಸರ್ಕಾರ ರಚನೆಗೆ ಮುಂದಾದರೂ ಕೂಡ, ಆ ಪಕ್ಷದ ಜೊತೆ ನಾವು ಹೋಗುವುದಿಲ್ಲ ಎಂದು ಸಂದೇಶ ರವಾನಿಸಿದ್ದಾರೆ. ಈ ಮೂಲಕ …

Read More »