ಶಿವಮೊಗ್ಗ: ಷೇರು ಮಾರುಕಟ್ಟೆ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ, ಕೃಷಿಕರೊಬ್ಬರಿಂದ 9.91 ಲಕ್ಷ ರೂ. ಪಡೆದು ವಂಚಿಸಿರುವ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ. ಕಳೆದ ಮಾರ್ಚ್‌ನಲ್ಲಿ ವಾಟ್ಸಪ್ ನೋಡುತ್ತಿದ್ದಾಗ, ಅಪರಿಚಿತರು ಇವರ ಮೊಬೈಲ್ ಸಂಖ್ಯೆಯನ್ನು ವಿಐಪಿ ಹೆಸರಿನ ವಾಟ್ಸಪ್ ಗ್ರೂಪ್‌ವೊಂದಕ್ಕೆ ಸೇರಿಸಿದ್ದರು. ಆ ಗ್ರೂಪ್‌ನಲ್ಲಿ ಟ್ರೇಡಿಂಗ್ ಕಂಪನಿಯೊಂದರ ಹೆಸರಿನಲ್ಲಿ ಮೆಸೇಜ್‌ಗಳನ್ನು ಕಳುಹಿಸಲಾಗಿತ್ತು. ಕಂಪನಿಯ ಪ್ರತಿನಿಧಿಗಳಂತೆ ನಟಿಸಿದ ವಂಚಕರು, ತಮ್ಮಲ್ಲಿ ಹಣ ಹೂಡಿಕೆ ಮಾಡಿದರೆ ಅತಿಹೆಚ್ಚು …
Read More »Monthly Archives: ಮೇ 2026
ಹಾಸನ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆ
ಹಾಸನ: ಜಿಲ್ಲೆಯ ವಿವಿಧೆಡೆ ಇಂದು ಕೂಡ ಬಾರಿ ಮಳೆಯಾಗಿದೆ. ಕಳೆದ ಒಂದು ಗಂಟೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಾಸನ, ಅರಸೀಕೆರೆ, ಚನ್ನರಾಯಪಟ್ಟಣ ತಾಲ್ಲೂಕಿನ ವಿವಿಧೆಡೆ ವರುಣ ಅಬ್ಬರಿಸಿದ್ದು, ಗುಡುಗು, ಸಿಡಿಲು ಸಹಿತ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿದ್ದಾರೆ. ಮಳೆಗೆ ವಾಹನ ಸವಾರರು, ಬೀದಿ ಬದಿ ವ್ಯಾಪಾರಿಗಳು ಪರದಾಡುವಂತಾಗಿತ್ತು. ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಉತ್ತಮ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಆದರೆ ಕೃಷಿ …
Read More »ಸೋಮವಾರ ಗೋಧೂಳಿ ಮುಹೂರ್ತದಲ್ಲಿ ಡಿಕೆ ಶಿವಕುಮಾರ್ ಪಟ್ಟಾಭಿಷೇಕ?
ಬೆಂಗಳೂರು: ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ, ಡಿಸಿಎಂ ಡಿ.ಕೆ ಶಿವಕುಮಾರ್ ಅವರ ರಾಜ್ಯಭಾರಕ್ಕೆ ಕೌಂಟ್‌ಡೌನ್ ಶುರುವಾಗಿದೆ. ರಾಜ್ಯಪಾಲರು ರಾಜೀನಾಮೆ ಅಂಗೀಕರಿಸುತ್ತಿದ್ದಂತೆ, ಹೊಸ ಸರ್ಕಾರ ರಚನೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಶುಕ್ರವಾರ (ಮೇ 29) ಉಪರಾಷ್ಟ್ರಪತಿಗಳು ಬೆಂಗಳೂರಿಗೆ ಆಗಮಿಸುತ್ತಿದ್ದು, ರಾಜ್ಯಪಾಲರು ಕಾರ್ಯದ ಒತ್ತಡದಲ್ಲಿದ್ದಾರೆ. ಶುಕ್ರವಾರ ಸಂಜೆಯೊಳಗೆ ರಾಜೀನಾಮೆ ಅಂಗೀಕಾರವಾಗಬೇಕಿದೆ. ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಗಳಿದೆ. ಸಿಎಲ್‌ಪಿ ನಾಯಕರಾಗಿ ಡಿಕೆಶಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಎಲ್ಲವೂ ಅಂದುಕೊಂಡಂತೆ …
Read More »ನಮ್ಮ ಆಸೆ, ಅಭಿಲಾಷೆಯನ್ನ ಭಗವಂತ ಈಡೇರಿಸುತ್ತಿದ್ದಾನೆ: ಇಕ್ಬಾಲ್ ಹುಸೇನ್
ರಾಮನಗರ: ನಮ್ಮ ಆಸೆ, ಅಭಿಲಾಷೆಯನ್ನ ಭಗವಂತ ಈಡೇರಿಸುತ್ತಿದ್ದಾನೆ, ಪ್ರಾರ್ಥನೆ ನೆರವೇರುವ ಕಾಲ ಬಂದಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಡಿಕೆ ಶಿವಕುಮಾರ್ ) ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗುವ ವಿಚಾರ ಕುರಿತು ರಾಮನಗರದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲರಿಗೂ ಆಸೆ ಇರುತ್ತದೆ, ನನಗೂ ಆಸೆ, ಅಭಿಲಾಷೆ ಇದೆ. ಪಕ್ಷದ ಲಕ್ಷಾಂತರ ಕಾರ್ಯಕರ್ತರು, ಮುಖಂಡರುಗಳಿಗೂ ಒಂದು ಆಸೆ ಇತ್ತು. ಆ ಆಸೆಯನ್ನ ಭಗವಂತ ಈಡೇರಿಸುತ್ತಿದ್ದಾನೆ. ನಾನು ಮೌನ …
Read More »ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ಜೈಪುರದಲ್ಲಿ ಲ್ಯಾಂಡಿಂಗ್
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಪ್ರಯಾಣಿಸುತ್ತಿದ್ದ ವಿಮಾನ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ರಾಜಸ್ಥಾನದ ಜೈಪುರದಲ್ಲಿ ಲ್ಯಾಂಡ್ ಆಗಿದೆ. ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿ, ಸುದ್ದಿಗೋಷ್ಠಿ ನಡೆಸಿದ ಬಳಿಕ ವಿಶೇಷ ವಿಮಾನದಲ್ಲಿ ದೆಹಲಿಗೆ ಹೊರಟಿದ್ದರು. ಆದರೆ ದೆಹಲಿಯಲ್ಲಿ ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಜೈಪುರಕ್ಕೆ ಮಾರ್ಗ ಬದಲಿಸಲಾಯಿತು. ವಿಶೇಷ ವಿಮಾನದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಚಿವರಾದ ಕೆ.ಜೆ ಜಾರ್ಜ್, ಬೈರತಿ ಸುರೇಶ್, ಕಾನೂನು …
Read More »ತೆರಿಗೆ ವಂಚನೆ ಪ್ರಕರಣ – 2 ವರ್ಷ ವಿದೇಶಿ ಪ್ರವಾಸಕ್ಕೆ ತೆರಳಲು ಡಿಕೆಶಿಗೆ ಕೋರ್ಟ್ ಅನುಮತಿ
ಬೆಂಗಳೂರು: ತೆರಿಗೆ ವಂಚನೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ವಿಧಿಸಿದ್ದ ಜಾಮೀನು ಷರತ್ತಿನಲ್ಲಿ ಸಡಿಲಿಕೆ ಮಾಡಿರುವ ಬೆಂಗಳೂರಿನ ವಿಶೇಷ ಮ್ಯಾಜಿಸ್ಟ್ರೇಟ್ ಕೋರ್ಟ್ 2 ವರ್ಷ ವಿದೇಶ ಪ್ರವಾಸ ಕೈಗೊಳ್ಳಲು ಇತ್ತೀಚೆಗೆ ಅನುಮತಿ ನೀಡಿದೆ. ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಕೆ.ಎನ್ ಶಿವಕುಮಾರ್ ಅವರು ವಿವಿಧ ದೇಶಗಳಿಗೆ ಅಧಿಕೃತ ಉದ್ಯಮ ಪ್ರವಾಸ ಕೈಗೊಳ್ಳಲು ಕೆಲವು ಷರತ್ತು ವಿಧಿಸಿ, ಶಿವಕುಮಾರ್ ಅವರಿಗೆ ಅನುಮತಿಸಿದ್ದಾರೆ. ಪ್ರತಿ ಬಾರಿಯೂ ವಿದೇಶಕ್ಕೆ ತೆರಳುವಾಗ ಶಿವಕುಮಾರ್ ಅವರು ತಮ್ಮ …
Read More »ಸಿದ್ದರಾಮಯ್ಯ ರಾಜೀನಾಮೆಯಿಂದ ಕಾಂಗ್ರೆಸ್‌ಗೆ ಮುಂದಿನ ಚುನಾವಣೆಯಲ್ಲಿ ಪೆಟ್ಟು: ಯತ್ನಾಳ್
ವಿಜಯಪುರ: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಟ್ಟಿದ್ದಾರೆ. ಇದರಿಂದ ಕಾಂಗ್ರೆಸ್‌ಗೆ 2028ಕ್ಕೆ ದೊಡ್ಡ ಹೊಡೆತ ಬೀಳಲಿದೆ ಎಂದು ಶಾಸಕ ಬಸನಗೌಡಾ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಸಿದ್ದರಾಮಯ್ಯ ಅವರನ್ನ ಯಾವುದೆ ಕಾರಣ ಇಲ್ಲದೆ ಇಳಿಸಿದ್ದಾರೆ. ಇದರಿಂದ ಕುರುಬ ಸಮಾಜ ಕೋಪಗೊಂಡಿದೆ. ಹಾಲುಮತ ಕುರುಬ ಸಮಾಜಕ್ಕೆ ಮಾಡಿದ ಅನ್ಯಾಯ ಇದಾಗಿದೆ. ಇದರ ಎಫೆಕ್ಟ್ ಮುಂದಿನ ವಿಧಾನಸಭೆ ಚುನಾವಣೆಯ ವೇಳೆ ವಿರೋಧ ಪಕ್ಷಗಳಿಗೆ ಲಾಭ …
Read More »ಸಿದ್ದರಾಮಯ್ಯ ಮಾರ್ಗದರ್ಶನದಲ್ಲೇ ಸರ್ಕಾರ ಮುನ್ನಡೆಯುತ್ತದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಪ್ರಶ್ನಾತೀತ ನಾಯಕ. ಅವರ ಮುತ್ಸದ್ಧಿತನ, ನಾಯಕತ್ವ, ಮಾರ್ಗದರ್ಶನ ಮುಂದಿಟ್ಟುಕೊಂಡೇ ನಮ್ಮ ಸರ್ಕಾರ ಮುನ್ನಡೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ ವಿಚಾರದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ಹೈಕಮಾಂಡ್ ಹೇಳಿದಂತೆ ಸಿದ್ದರಾಮಯ್ಯ ನಡೆದುಕೊಂಡಿದ್ದಾರೆ. ಅವರು ನಮ್ಮ ನಾಯಕರು, ಪ್ರಶ್ನಾತೀತ ನಾಯಕರು. ಅವರ ನಾಯಕತ್ವ, ಮಾರ್ಗದರ್ಶನ ಮುಂದೆಯೂ …
Read More »ಇಂದು ಕಳಚಿತಾ ಸಮಾಜವಾದದ ಕೊನೆಯ ಕೊಂಡಿ ಆದರೇ ಸತೀಶ್ ಜಾರಕಿಹೊಳಿ ಹಠ, ಧೈರ್ಯದ ಹಿಂದಿದೆ ಈ ಗುರುವಿನ ದೀಕ್ಷೆ
ಇಂದು ಕಳಚುತ್ತಿರುವ ಸಮಾಜವಾದದ ಮೌಲ್ಯಗಳ ನಡುವೆ ಸಮಾಜದ ಹಿತ, ಸಮಾನತೆ ಮತ್ತು ಶೋಷಿತರ ಪರ ಧ್ವನಿಯಾಗಿರುವ ನಾಯಕರಲ್ಲಿ Satish Jarkiholi ಅವರು ಪ್ರಮುಖರು. ಅವರ ಹಠ, ಧೈರ್ಯ, ನೇರ ನಿಲುವು ಹಾಗೂ ಜನಪರ ಚಿಂತನೆಯ ಹಿಂದೆ ಒಬ್ಬ ಮಹಾನ್ ಗುರುಗಳ ದೀಕ್ಷೆ ಮತ್ತು ಸಮಾಜವಾದದ ಆಳವಾದ ಪ್ರಭಾವ ಅಡಗಿದೆ. ಸಮಾಜವಾದ ಎಂದರೆ ಕೇವಲ ರಾಜಕೀಯ ತತ್ವವಲ್ಲ, ಅದು ಸಾಮಾನ್ಯ ಜನರ ಬದುಕಿನ ಹೋರಾಟಕ್ಕೆ ನಿಂತಿರುವ ಮಾನವೀಯ ಮೌಲ್ಯ. ಆ ಮೌಲ್ಯಗಳನ್ನು …
Read More »ʻಹೈಕಮಾಂಡ್ʼ ನಡೆಗೆ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ!
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಬೆನ್ನಲ್ಲೇ ಈಗ ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೈಕಮಾಂಡ್ ಹಾಕಿರುವ ಕಂಡೀಷನ್‌ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸತೀಶ್ ಜಾರಕಿಹೊಳಿ ಬೇಡಿಕೆಯೇನು? ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷರಾಗಲು ಒಪ್ಪಿದ್ದಾರೆ. ಆದರೆ ಅವರ ಮುಂದೆ ಒಂದು ಪ್ರಬಲ ಬೇಡಿಕೆಯಿದೆ. ಅದೇನೆಂದರೆ, ಸಚಿವ ಸ್ಥಾನದ ಜೊತೆಗೆ …
Read More »
Laxmi News 24×7