Breaking News

Monthly Archives: ಮೇ 2026

ದೆಹಲಿಯಿಂದ ಬೆಂಗ್ಳೂರಿಗೆ ಡಿಕೆಶಿ ವಾಪಸ್ – ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಲ್ಲಿ ಪ್ರಯಾಣ

ಬೆಂಗಳೂರು: ದೆಹಲಿಯಿಂದ‌ ಬೆಂಗಳೂರಿಗೆ  ಡಿಸಿಎಂ ಡಿ.ಕೆ ಶಿವಕುಮಾರ್‌  ಆಗಮಿಸಿದರು. ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು ಸರ್ಕಾರಿ ಕಾರನ್ನು ಬಿಟ್ಟು ಖಾಸಗಿ ಕಾರಲ್ಲಿ ಮನೆಗೆ ಪ್ರಯಾಣ ಬೆಳೆಸಿದರು. ಈ ವೇಳೆ ಏನೂ ಮಾತಾಡದೇ, ಅಭಿಮಾನಿಗಳತ್ತ ಕೈಬೀಸಿ ಅಲ್ಲಿಂದ ತೆರಳಿದ್ದಾರೆ. ಮೇ 28 ರಂದು ಅವರು ಬೆಂಗಳೂರಿಗೆ ಬರುತ್ತಾರೆ ಎನ್ನಲಾಗಿತ್ತು. ಆದರೆ ಒಂದು ದಿನ ಮುಂಚೆಯೇ ಅವರು ಆಗಮಿಸಿದ್ದಾರೆ. ಅವರ ಅಭಿಮಾನಿಗಳು ಭಾರೀ ಪ್ರಮಾಣದಲ್ಲಿ ಸೇರುವ ನಿರೀಕ್ಷೆ ಇದ್ದಿದ್ದರಿಂದ ಏರ್ಪೋರ್ಟ್‌ನಲ್ಲಿ ಭಾರೀ …

Read More »

ನನಗೆ ಸ್ಥಾನ ಕೊಡುವುದರಿಂದ ಉತ್ತರ ಕರ್ನಾಟಕ ಅಭಿವೃದ್ಧಿಗೆ ಅನುಕೂಲ: ಆಸೀಫ್ ಸೇಠ್

ಬೆಳಗಾವಿ: ಉತ್ತರ ಕರ್ನಾಟಕದಿಂದ ಅಲ್ಪಸಂಖ್ಯಾತರು ಯಾರೂ ಸಚಿವರು ಆಗಿಲ್ಲ. ನನಗೆ ಸ್ಥಾನ ಕೊಡುವುದರಿಂದ ಉತ್ತರ ಕರ್ನಾಟಕ ಅಭಿವೃದ್ಧಿಗೆ ಅನುಕೂಲ ಆಗಲಿದೆ. ಅಲ್ಪಸಂಖ್ಯಾತ ಕೋಟಾದಲ್ಲಿ ನನಗೆ ಸಚಿವ ಸ್ಥಾನ ನೀಡಬೇಕು ಎಂದು ಶಾಸಕ ಆಸೀಫ್ ಸೇಠ್ ಬೇಡಿಕೆ ಇಟ್ಟರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಬರೀ ಅಲ್ಪಸಂಖ್ಯಾತ ಇಲ್ಲಾ. ಇಲ್ಲಿವರೆಗೆ ಬೆಳಗಾವಿಗೆ ಅಲ್ಪಸಂಖ್ಯಾತರ ನಾಯಕರಲ್ಲಿ ಯಾರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಹಾಗಾಗಿ ನನಗೆ ಸ್ಥಾನ ನೀಡಬೇಕು ಎಂದು ತಿಳಿಸಿದರು. …

Read More »

ನಗರವಾಸಿಗಳೇ ಸ್ವಚ್ಛ ಸರ್ವೇಕ್ಷಣ ಅಭಿಯಾನದಲ್ಲಿ ಪಾಲ್ಗೊಳ್ಳಿ : ಪಾಲಿಕೆ ಆಯುಕ್ತ ಕಾರ್ತಿಕ್ ಎಂ ಕರೆ

ಬೆಳಗಾವಿ : ಭಾರತ ಸರ್ಕಾರದ ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸುವ ದಿಸೆಯಲ್ಲಿ ಹಮ್ಮಿಕೊಂಡಿರುವ  “ಸ್ವಚ್ಛ ಸರ್ವೇಕ್ಷಣ ಅಭಿಯಾನ”ದಲ್ಲಿ ನಗರವಾಸಿಗಳೆಲ್ಲರೂ ಪಾಲ್ಗೊಳ್ಳಬೇಕೆಂದು  ಪಾಲಿಕೆ ಆಯುಕ್ತ ಕಾರ್ತಿಕ್ ಎಂ.ಅವರು ಕರೆ ನೀಡಿದ್ದಾರೆ. ಬುಧವಾರ ಈ ಕುರಿತು ಪಾಲಿಕೆಯ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು, ಭಾರತ ಸರ್ಕಾರವು 2016 ರಿಂದ  ” ಸ್ವಚ್ಛ ಭಾರತ್ ಮಿಷನ್ ” ಆರಂಭಿಸಿದ್ದು, ನಗರವಾಸಿಗಳ ಅಭಿಪ್ರಾಯಕ್ಕನುಗುಣವಾಗಿ ಉತ್ತಮ ಪರಿಸರಪೂರಿತ ವಾತಾವರಣ …

Read More »

ಭ್ರೂಣ ಲಿಂಗ ಪತ್ತೆ ನಿಷೇಧ ಶಾಸನ: ಜಿಲ್ಲಾ ಸಲಹಾ ಸಮಿತಿ ಸಭೆ ನಡೆಸಿದ ಡಿಎಚ್‌ಓ

ಬೆಳಗಾವಿ: ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಶಾಸನ 1994 (ಪಿ.ಸಿ.ಪಿ.ಎನ್.ಡಿ.ಟಿ 1994 ಕಾಯ್ದೆ) ನೂತನ ಜಿಲ್ಲಾ ಸಲಹಾ ಸಮಿತಿ ಸಭೆ ಇಂದು ಜರುಗಿತು. ಸಕಾರದ ಉಪ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಸೂಚನೆ ಪ್ರಕಾರ ಮುಂದಿನ 3 ವರ್ಷಗಳ ಅವಧಿಗೆ ಬೆಳಗಾವಿ ಜಿಲ್ಲಾ ಮಟ್ಟದ ನೂತನ ಸಲಹಾ ಸಮಿತಿಯ ಸಭೆಯನ್ನು ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ …

Read More »

ಶಿವಾನಂದ ನೀಲಣ್ಣವರ್‌ಗೆ ನ್ಯಾಯಾಂಗ ಬಂಧನ: ಹಿಂಡಲಗಾ ಜೈಲಿಗೆ ಶಿಪ್ಟ್

ಬೆಳಗಾವಿ: ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣವರ ವಿರುದ್ಧದ 4,500 ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣ ಸಿಐಡಿ ಅಧಿಕಾರಿಗಳ ಹತ್ತು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಬಳಿಕ ಶಿವಾನಂದ ನೀಲಣ್ಣವರ್ ರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. 4,500 ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿ ಶಿವಾನಂದ ನೀಲಣ್ಣವರ್ ಅವರನ್ನು ಇಂದು 2ನೇ ಹೆಚ್ಚುವರಿ ಸತ್ರ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಹಾಜರುಪಡಿಸಿದರು. …

Read More »

ಬೆಂಗಳೂರು: ಲಿವಿಂಗ್‌ ಟುಗೆದರ್‌ನಲ್ಲಿದ್ದ ಮಾಜಿ ಆರ್‌ಜೆ ಮನೀಷಾ ಆತ್ಮಹತ್ಯೆ; ಪ್ರಿಯಕರನ ವಿರುದ್ಧ 3 ಪುಟಗಳ ಡೆತ್‌ನೋಟ್‌!

​ಬೆಂಗಳೂರು: ಮುಂಬೈ ಮೂಲದ ಮಾಜಿ ರೇಡಿಯೋ ಜಾಕಿ (RJ) ಮನೀಷಾ ಪ್ರಸಾದ್ (48) ಅವರು ಬೆಂಗಳೂರಿನ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೇ 23 ರಂದು ಹೆಣ್ಣೂರು ಸಮೀಪದ ಮಾನ್ಯತಾ ಟೆಕ್ ಪಾರ್ಕ್ ಆವರಣದಲ್ಲಿರುವ ಫ್ಲ್ಯಾಟ್‌ನಲ್ಲಿ ಈ ದುರ್ಘಟನೆ ನಡೆದಿದೆ. ​ಸ್ಥಳದಲ್ಲಿ 3 ಪುಟಗಳ ಡೆತ್‌ನೋಟ್ ಪತ್ತೆಯಾಗಿದ್ದು, ಲಿವಿಂಗ್ ಟುಗೆದರ್‌ನಲ್ಲಿದ್ದ ಪ್ರಿಯಕರ ಹರ್ಷವರ್ಧನ್ ಸಿಂಗ್ ಬನ್ಸಾಲ್ ನೀಡಿದ ಮಾನಸಿಕ ಕಿರುಕುಳವೇ …

Read More »

ಧಾರವಾಡ ಶೂಟೌಟ್ ಕೇಸ್ ಭೇದಿಸಿದ ಖಾಕಿ: ಐವರು ಆರೋಪಿಗಳ ಬಂಧನ, ಪಿಸ್ತೂಲ್ ಹಾಗೂ ರಿವಾಲ್ವರ್ ಜಪ್ತಿ!

ಧಾರವಾಡ ಹೊರವಲಯದ ತಡಸಿನಕೊಪ್ಪ ಬಳಿಯ ಇಟಿಗಟ್ಟಿ ರಸ್ತೆ ಮಾರ್ಗದಲ್ಲಿ ಕಳೆದ ದಿನ ನಡೆದ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಭೀಕರ ಗಲಾಟೆ ನಡೆದು ಗಾಳಿಯಲ್ಲಿ ಗುಂಡು ಹಾರಿಸಿ ವ್ಯಕ್ತಿಯೊಬ್ಬನಿಗೆ ಗಾಯಗೊಳಿಸಿದ ಪ್ರಕರಣದಲ್ಲಿ ಐವರನ್ನ ಬಂಧಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ತಿಳಿಸಿದ್ದಾರೆ. ಈ ಕುರಿತು ಧಾರವಾಡದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲು ಅಂಗರಕ್ಷಕರು (ಬೌನ್ಸರ್ಸ್) ಗುಂಡು ಹಾರಿಸಿದ್ದಾರೆ ಎಂಬ ಮಾಹಿತಿ ಇತ್ತಾದರೂ, ಘಟನೆಯ ಬಳಿಕ ಪೊಲೀಸರಿಗೆ …

Read More »

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ಅಭಿವೃದ್ಧಿ ಪ್ರಾಧಿಕಾರದ ಪ್ರಮುಖ ಸಭೆ!

​ನಮ್ಮ ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ ಆಗಮಿಸುವ ಅಪಾರ ಸಂಖ್ಯೆಯ ಭಕ್ತಾದಿಗಳಿಗೆ ಸುಸಜ್ಜಿತ ಮೂಲಸೌಕರ್ಯ ಕಲ್ಪಿಸುವುದು ಮತ್ತು ಕ್ಷೇತ್ರದ ಸಮಗ್ರ ಅಭಿವೃದ್ಧಿ ನಮ್ಮ ಮೊದಲ ಆದ್ಯತೆಯಾಗಿದೆ. ​ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಗೌರವಾನ್ವಿತ ಜಿಲ್ಲಾಧಿಕಾರಿಗಳಾದ ಶ್ರೀ ಮೊಹಮ್ಮದ್ ರೋಷನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಉಪಸ್ಥಿತಿಯಲ್ಲಿ “ಶ್ರೀ ರೇಣುಕಾ ಯಲ್ಲಮ್ಮ ದೇವಿ ಅಭಿವೃದ್ಧಿ ಪ್ರಾಧಿಕಾರದ” ಮಹತ್ವದ ಸಭೆಯನ್ನು ನಡೆಸಲಾಯಿತು. ​ಸಭೆಯಲ್ಲಿ ಸವದತ್ತಿ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಕುಡಿಯುವ …

Read More »

ಬಾಗಲಕೋಟೆ ಶಹರ್ ಠಾಣೆ ಪೊಲೀಸರ ಭರ್ಜರಿ ಬೇಟೆ: ಅಂತರ್ ಜಿಲ್ಲಾ ಮನೆಗಳ್ಳನ ಬಂಧನ, 22 ಲಕ್ಷದ ಚಿನ್ನಾಭರಣ ವಶ!

ಬಾಗಲಕೋಟೆ ಜಿಲ್ಲೆಯ ಚೌಡಾಪೂರ ಗ್ರಾಮದಲ್ಲಿ ನಡೆದಿದ್ದ ಭಾರಿ ಮನೆ ಕಳ್ಳತನ ಪ್ರಕರಣವನ್ನು ಬಾಗಲಕೋಟೆ ಶಹರ ಪೊಲೀಸರು ಕೇವಲ ಕೆಲವೇ ದಿನಗಳಲ್ಲಿ ಯಶಸ್ವಿಯಾಗಿ ಭೇದಿಸಿದ್ದಾರೆ. ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಮೂಡಿಸಿದ್ದ ಈ ಪ್ರಕರಣದ ಅಂತರ್ ಜಿಲ್ಲಾ ಆರೋಪಿಯನ್ನು ಬಂಧಿಸಿ, ಆತನಿಂದ ಲಕ್ಷಾಂತರ ಮೌಲ್ಯದ ಚಿನ್ನದ ಆಭರಣಗಳನ್ನು ಜಪ್ತಿ ಮಾಡಲಾಗಿದೆ. ಕಳೆದ ಮಾರ್ಚ್ 19 ರಂದು ಚೌಡಾಪೂರ ಗ್ರಾಮದ ನಿವಾಸಿ ಪುಂಡಲಿಕಪ್ಪ ಪಾಟೀಲ್ ಅವರ ಮನೆಯ ಬೀಗ ಒಡೆದು ಕನ್ನ ಹಾಕಿದ್ದ …

Read More »

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್: ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್ ರಿಪೋರ್ಟ್‌ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಸಚಿವ ದಿನೇಶ್ ಗುಂಡೂರಾವ್  ಸ್ಪಷ್ಟಪಡಿಸಿದ್ದಾರೆ. ಉಗಾಂಡದಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆಯೊಬ್ಬರಲ್ಲಿ ಎಬೋಲಾ ವೈರಸ್‌ನ ರೋಗಲಕ್ಷಣಗಳು ಕಂಡುಬಂದಿತ್ತು. ಈ ಹಿನ್ನೆಲೆ ಮಹಿಳೆಯನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ಶಿಫ್ಟ್ ಮಾಡಿ ಕ್ವಾರಂಟೈನ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೇ ಮಹಿಳೆಯ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್‌ಗೆ ರವಾನಿಸಲಾಗಿತ್ತು. ಇದೀಗ ಲ್ಯಾಬ್ ರಿಪೋರ್ಟ್ ನೆಗೆಟಿವ್ ಬಂದಿದ್ದು, ಆ ವ್ಯಕ್ತಿಗೆ ಯಾವುದೇ …

Read More »