Breaking News

Daily Archives: ಜೂನ್ 1, 2026

ಸತ್ತಿಗೇರಿ ಗ್ರಾಮದಲ್ಲಿ ಜಲ ಸಂಗ್ರಹಾಲಯ ನಿರ್ಮಾಣ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಭೂಮಿಪೂಜೆ

ಸತ್ತಿಗೇರಿ: ಗ್ರಾಮೀಣ ಭಾಗದ ಪ್ರತಿ ಮನೆ ಮನೆಗೂ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಒದಗಿಸುವುದು ಮುಖ್ಯ ಧ್ಯೇಯವಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು. ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ 2025-26ನೇ ಸಾಲಿನ ಯೋಜನೆಯಡಿ 30 ಲಕ್ಷ ರೂ. ವೆಚ್ಚದಲ್ಲಿ ಮೇಲ್ಮಟ್ಟದ ಜಲ ಸಂಗ್ರಹಾಲಯ ನಿರ್ಮಾಣ ಕಾಮಗಾರಿಗೆ ಈಚೆಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಮೇಲ್ಮಟ್ಟದ ಜಲ ಸಂಗ್ರಹಾಲಯ ನಿರ್ಮಾಣದಿಂದ ಸತ್ತಿಗೇರಿ ಗ್ರಾಮದ ಸಾರ್ವಜನಿಕರ ಕುಡಿಯುವ ನೀರಿನ …

Read More »

ನೇಣುಬಿಗಿದುಕೊಂಡು ಉಪತಹಶೀಲ್ದಾರ್ ಆತ್ಮಹತ್ಯೆ – 4 ಪುಟದ ಡೆತ್‌ನೋಟ್ ಪತ್ತೆ

ಹಾಸನ: ನೇಣುಬಿಗಿದುಕೊಂಡು ಉಪತಹಶೀಲ್ದಾರ್  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ನಗರದ  ಬಿಎಂ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ನಡೆದಿದೆ‌. ತಿಮ್ಮಯ್ಯ (52) ಆತ್ಮಹತ್ಯೆಗೆ ಶರಣಾದ ಉಪತಹಶೀಲ್ದಾರ್. ಮೈಸೂರು ಜಿಲ್ಲೆ, ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿದ್ದ ತಿಮ್ಮಯ್ಯ, ಮೂರು ವರ್ಷಗಳ ಹಿಂದೆ ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ನಿನ್ನೆ (ಮೇ 30) ಲಾಡ್ಜ್‌ನಲ್ಲಿ 4 ಪುಟದ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತಃ ಕೊಡಗು ಜಿಲ್ಲೆಯವರಾದ ತಿಮ್ಮಯ್ಯ ಹಾಸನ ನಗರದ ಚನ್ನಪಟ್ಟಣದ ದ್ಯಾವಮ್ಮ ಬಡಾವಣೆಯಲ್ಲಿ ಕುಟುಂಬಸ್ಥರೊಂದಿಗೆ ವಾಸವಿದ್ದರು. …

Read More »

ಡಿಕೆ ಶಿವಕುಮಾರ್‌ಗೆ ಅಧಿಕಾರ ಸಿಕ್ಕರೆ ನನಗೆ ಸಿಕ್ಕಹಾಗೇ – ಮಂಡ್ಯ ಜಿಲ್ಲೆಗೆ 2 ಸಚಿವ ಸ್ಥಾನದ ಬೇಡಿಕೆಯಿಟ್ಟ ಗಣಿಗ ರವಿಕುಮಾರ್

ಮಂಡ್ಯ: ಡಿಕೆ ಶಿವಕುಮಾರ್‌ಗೆ  ಅಧಿಕಾರ ಸಿಕ್ಕರೆ ನನಗೆ ಸಿಕ್ಕಹಾಗೇ. ಮಂಡ್ಯ ಜಿಲ್ಲೆಗೆ ಎರಡು ಸಚಿವ ಸ್ಥಾನ ಸಿಗಲಿ ಎಂಬುದು ನನ್ನ ಬೇಡಿಕೆ ಎಂದು ಶಾಸಕ ಗಣಿಗ ರವಿಕುಮಾರ್  ಹೇಳಿದ್ದಾರೆ. ಮಂಡ್ಯದಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 40 ವರ್ಷದ ಪರಿಶ್ರಮಕ್ಕೆ ಫಲ ಸಿಕ್ಕಿದೆ. ನನ್ನ ಕಷ್ಟ ಕಾಲದಲ್ಲಿ ಡಿಕೆಶಿ ನನ್ನೊಂದಿಗಿದ್ದರು. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಿರುವುದು ಖುಷಿ ತಂದಿದೆ. ಸಿದ್ದರಾಮಯ್ಯ  ಒಂದು ಕಪ್ಪು ಚುಕ್ಕೆ ಇಲ್ಲದೆ ಆಡಳಿತ ನಡೆಸಿದ್ದಾರೆ. ಅದನ್ನೇ ಡಿಕೆಶಿ …

Read More »

ಡಿಸಿಎಂ ಪ್ರಪೋಸಲ್ ಬಂದಿಲ್ಲ, ಜೂನ್ 3ರಂದು ಸಭೆ ಮಾಡಿ ಫೈನಲ್ ಆಗುತ್ತೆ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಸದ್ಯ ಡಿಸಿಎಂ ಪ್ರಪೋಸಲ್ ಬಂದಿಲ್ಲ, ಬಂದ ಮೇಲೆ ಎಷ್ಟು ಡಿಸಿಎಂ ಮಾಡಬೇಕು, ಎಷ್ಟು ಸಚಿವರನ್ನಾಗಿ ಮಾಡಬೇಕು ಎಂದು ನೋಡಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊದಲು ಒಂದು ಹಂತದಲ್ಲಿ ಕೆಲವರನ್ನು ಸಚಿವರನ್ನಾಗಿ ಮಾಡಲಾಗುತ್ತದೆ. ಆಮೇಲೆ ಹದಿನೈದು ದಿನದ ನಂತರ ಮತ್ತೊಂದು ಸುತ್ತಿನಲ್ಲಿ ಸಚಿವ ಸ್ಥಾನ ನೀಡುತ್ತಾರೆ. ಮೊದಲ ಹಂತದಲ್ಲಿ 8ರಿಂದ 10 ಜನ ಆಗುತ್ತಾರಾ ಏನು ಅಂತಾ ನೋಡಬೇಕು. ಸಿಎಂ …

Read More »

ಪ್ಯಾಸೆಂಜರ್ ಆಟೋಗೆ ಕಾರು ಡಿಕ್ಕಿ – ಐವರು ದುರ್ಮರಣ

ಚಿಕ್ಕಬಳ್ಳಾಪುರ: ಆಟೋಗೆ ಕಾರು ಡಿಕ್ಕಿಯಾದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ಬಾಗೇಪಲ್ಲಿ  ತಾಲೂಕಿನ ಸುಂಕಲಮ್ಮ ದೇವಾಲಯದ ಬಳಿ ನಡೆದಿದೆ. ಮುಂದೆ ಸಾಗುತ್ತಿದ್ದ ಆಟೋಗೆ ಹಿಂಬದಿಯಿಂದ ಥಾರ್ ಕಾರು ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಮುಂದೆ ನಿಂತಿದ್ದ ಲಾರಿ ಆಟೋ ಡಿಕ್ಕಿಯಾಗಿ ಅಪ್ಪಚ್ಚಿಯಾಗಿದೆ. ಅಪಘಾತದಲ್ಲಿ 3-4 ಮಂದಿ ಗಾಯಾಗೊಂಡಿದ್ದಾರೆ. ಗಾಯಾಳುಗಳನ್ನು ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಮೃತಪಟ್ಟವರು: ಆಟೋ ಚಾಲಕ ಅಂಜನಪ್ಪ ಸೇರಿ ವರ್ಷದ ಉಮಾದೇವಿ …

Read More »

ಸಿಎಂ ಆಗಿ ಪದಗ್ರಹಣ ಮಾಡಿದ ದಿನವೇ ಕಾಂಗ್ರೆಸ್ ನೂತನ ಭವನಕ್ಕೆ ಡಿಕೆಶಿ ಗುದ್ದಲಿ ಪೂಜೆ

ಬೆಂಗಳೂರು: ಮುಖ್ಯಮಂತ್ರಿ ಆಗಿ ಪದಗ್ರಹಣ ಮಾಡಿದ ದಿನವೇ ಕಾಂಗ್ರೆಸ್ ಪಕ್ಷದ ನೂತನ ಕಚೇರಿ  ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿದ್ಧತೆ ನಡೆಸಿದ್ದಾರೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನವನ್ನು ಸಂಪೂರ್ಣವಾಗಿ ಹೊಸದಾಗಿ ನಿರ್ಮಿಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಅದೇ ಸಂಜೆ ರಾಹುಲ್ ಗಾಂಧಿ ಸಮ್ಮುಖದಲ್ಲಿ ನೂತನ ಭವನಕ್ಕೆ ಭೂಮಿ ಪೂಜೆ ನೆರವೇರಿಸುವ ಯೋಜನೆ ರೂಪಿಸಲಾಗಿದೆ. ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ …

Read More »

ಹೂವಿನ ಹಾರ ನಿಷೇಧ, ನನಗೆ ಯಾರೂ ತಂದು ಹಾಕ್ಬೇಡಿ – ಡಿಕೆಶಿ

ಬೆಂಗಳೂರು: ನನಗೆ ಯಾರೂ ಹೂವಿನ ಹಾರ ಹಾಕ್ಬೇಡಿ ಎಂದು ನಿಯೋಜಿತ ಸಿಎಂ ಡಿ.ಕೆ ಶಿವಕುಮಾರ್‌  ಅವರು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ಕಾರ್ಯಕರ್ತರ ಉತ್ಸಾಹ ಗೊತ್ತಾಗುತ್ತದೆ. ಬೇರೆ ಬೇರೆ ವಿಷಯಗಳು ಇರೋದ್ರಿಂದ ಹೆಚ್ಚು ಜನರನ್ನು ಪ್ರಮಾಣ ವಚನದ ವೇಳೆ ಕರೆಸಲು ಆಗತ್ತಿಲ್ಲ. ಹೊರಗಡೆ ಬಂದು ನೋಡಿದ್ರೂ ಅಭ್ಯಂತರ ಇಲ್ಲ. ಯಾರೂ ನನಗೆ ಹೂವಿನ ಹಾರ ಹಾಕ್ಬೇಡಿ ಎಂದು ಮನವಿ ಮಾಡಿದ್ದಾರೆ. …

Read More »

ಮಳೆಯಿಂದ ನಿರ್ಮಾಣ ಹಂತದ ಗೋಡೆ ಕುಸಿತ – ಇಬ್ಬರು ಕಾರ್ಮಿಕರು ದುರ್ಮರಣ

ಬೆಂಗಳೂರು: ಮಳೆಯಿಂದ ನೆನೆದಿದ್ದ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ದ್ಯಾಮಪ್ಪ ಹಾಗೂ ಬಾಬುಲಾಲ್ ಮೃತ ಕಾರ್ಮಿಕರು. ಕಳೆದ ಎರಡು ದಿನದ ಮಳೆಯಿಂದ ನಿರ್ಮಾಣ ಹಂತದ ಗೋಡೆ ನೆನೆದಿತ್ತು. ಈ ಗೋಡೆಯನ್ನು ಮತ್ತೆ ನಿರ್ಮಾಣಕ್ಕೆ ಕಾರ್ಮಿಕರು ಮುಂದಾದಾಗ ಕುಸಿದಿದೆ. ಇದರಿಂದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಪಟೇಲ್ ಎಂಬವವರಿಗೆ ಸೇರಿದ ಸೈಟ್‌ನಲ್ಲಿ ಈ ಅವಘಡ ನಡೆದಿದೆ. ಇಬ್ಬರ ಮೃತದೇಹಗಳನ್ನು ನೆಲಮಂಗಲ ಆಸ್ಪತ್ರೆಯ ಶವಾಗಾರಕ್ಕೆ …

Read More »

ಖಾನಾಪುರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಬಸವರಾಜ ವಾಳದ ಅಧಿಕಾರ ಸ್ವೀಕಾರ

ಖಾನಾಪುರ: ಪಟ್ಟಣದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ಖಾನಾಪುರ ಉಪ ವಿಭಾಗದ ನೂತನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಬಸವರಾಜ ವಾಳದ ಭಾನುವಾರ ಅಧಿಕಾರ ಸ್ವೀಕರಿಸಿದರು. ಈ ಮೊದಲು ಈ ಹುದ್ದೆಯಲ್ಲಿದ್ದ ಸುನೀತಾ ನಿಂಬರಗಿ ಅವರನ್ನು ಅರಣ್ಯ ಇಲಾಖೆ ಧಾರವಾಡ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಆದೇಶಿಸಿದ್ದರಿಂದ ತೆರವಾದ ಸ್ಥಾನಕ್ಕೆ ವಾಳದ ಕರ್ತವ್ಯಕ್ಕೆ ಹಾಜರಾಗಿದ್ದು, ನಿರ್ಗಮಿತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀತಾ ನಿಂಬರಗಿ ಅವರು ಬಸವರಾಜ ವಾಳದ ಅವರಿಗೆ ಅಧಿಕಾರ …

Read More »

15 ವರ್ಷಕ್ಕೆ 5 ಪ್ರಶಸ್ತಿ – 45 ಲಕ್ಷ ಕ್ಯಾಶ್‌ ಜೊತೆ ಸೂರ್ಯವಂಶಿಗೆ ಸಿಕ್ತು ಸಿಯೆರಾ ಕಾರು!

ಅಹಮದಾಬಾದ್‌: ಇಂಡಿಯನ್ ಪ್ರೀಮಿಯರ್ ಲೀಗ್  ಇತಿಹಾಸದಲ್ಲೇ ಹಿಂದೆಂದೂ ಕಾಣದ ದಾಖಲೆಯೊಂದಕ್ಕೆ ಪ್ರಸಕ್ತ ಟೂರ್ನಿ ಸಾಕ್ಷಿಯಾಗಿದೆ. ಕೇವಲ 15 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ, ಐಪಿಎಲ್ ಟೂರ್ನಿಯಲ್ಲಿ ಗರಿಷ್ಠ ರನ್ ಕಲೆಹಾಕುವ ಮೂಲಕ ‘ಆರೆಂಜ್ ಕ್ಯಾಪ್’ ಗೆದ್ದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ವೈಭವ್, ಆಡಿದ 16 ಪಂದ್ಯಗಳಿಂದ ಒಟ್ಟು 776 ರನ್ ಸಿಡಿಸಿ ಈ ಸಾಧನೆ ಮಾಡಿದ್ದಾರೆ. …

Read More »