Breaking News

Daily Archives: ಜೂನ್ 4, 2026

ಕಾರಿನೊಳಗೆ ಉಸಿರುಗಟ್ಟಿ 3 ವರ್ಷದ ಮಗು ಸಾವು

ಕಲಬುರಗಿ: ಕಾರಿನಲ್ಲಿ  ಉಸಿರುಗಟ್ಟಿ ಮೂರು ವರ್ಷದ ಮಗು ಸಾವನಪ್ಪಿರುವ ಘಟನೆ, ಕಲಬುರಗಿ  ಜಿಲ್ಲೆಯ ಶಹಾಬಾದ್  ತಾಲೂಕಿನ ತೊನಸನಹಳ್ಳಿ (ಎಸ್) ಗ್ರಾಮದಲ್ಲಿ ನಡೆದಿದೆ. ಕೊಟ್ಟುರೇಶ್ವರ ಎಂಬವರ ಮೂರು ವರ್ಷದ ಮಗು ಬಸವಪ್ರಭು ಮೃತ ದುರ್ದೈವಿ. ಮಗುವನ್ನ ಕರೆದುಕೊಂಡು ಶಾಲೆಗೆ ಕಾರಿನಲ್ಲಿ ಹೋಗಿದ್ದ ಪೋಷಕರು ಶಾಲೆ ಬಳಿ ಕಾರು ಪಾರ್ಕ್ ಮಾಡಿ ಲಾಕ್ ಮಾಡದೇ ಹೊಗಿದ್ದರು. ಈ ವೇಳೆ ಮಗು ಆಟವಾಡುತ್ತಾ ಕಾರಿನೊಳಗೆ ಹೋಗಿದೆ. ಈ ವೇಳೆ ಕಾರಿನ ಎಲ್ಲಾ ಡೋರ್‌ಗಳು ಲಾಕ್ …

Read More »

ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಧನ್ಯವಾದ ಸಲ್ಲಿಸಿದ್ದಾರೆ. ಇಂದು (ಜೂ.4) ಭೇಟಿ ಮಾಡಿದ ಅವರು ಸಚಿವ ಸಂಪುಟದಲ್ಲಿ 3 ವರ್ಷಗಳ ಕಾಲ ಸಚಿವೆಯಾಗಿ ರಾಜ್ಯದ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.  ಶೋಷಿತರ, ಹಿಂದುಳಿದವರ ಹಾಗೂ ಬಡವರ ಧ್ವನಿಯಾಗಿ ನಿಂತು, ಜನಪರ ಆಡಳಿತ ನೀಡಿದ ಹೆಗ್ಗಳಿಕೆ ತಮ್ಮದು. ನಿಮ್ಮ ದೂರದೃಷ್ಟಿಯ ಯೋಜನೆಗಳು, ಸಾಮಾಜಿಕ ನ್ಯಾಯದ ಬದ್ಧತೆ ಮತ್ತು …

Read More »

ಕೆಆರ್‌ಎಸ್‌ನಲ್ಲಿ ನೀರಿನ ಕೊರತೆಯಿಲ್ಲ, ಬೆಂಗಳೂರಿಗೆ ಆತಂಕ ಬೇಡ – ಶಾಸಕ ರಮೇಶ್ ಬಂಡಿಸಿದ್ದೇಗೌಡ

ಮಂಡ್ಯ: ರೈತರು ಹಾಗೂ ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ​ಕೆಆರ್‌ಎಸ್‌ನಲ್ಲಿ ಸದ್ಯಕ್ಕೆ ನೀರಿನ ಕೊರತೆಯಿಲ್ಲ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ  ಹೇಳಿದ್ದಾರೆ. ರಾಜ್ಯದಲ್ಲಿ ಮುಂಗಾರು ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದ ಜನರು ಹಾಗೂ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಆತಂಕ ಶುರುವಾಗಿದೆ. ಈ ಕುರಿತು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಬಳಿ ಮಾತನಾಡಿದ ಅವರು, ಪ್ರಸ್ತುತ ಜಲಾಶಯದಲ್ಲಿ ಸುಮಾರು 82 ಅಡಿಗಳಷ್ಟು ನೀರಿದೆ. ಮುಂಗಾರು ಮಳೆ …

Read More »

ಸಿಎಂ ಆದ ಮೊದಲ ದಿನವೇ ಸಚಿವರಿಗೆ ಡಿಕೆ ಎಚ್ಚರಿಕೆ

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಮತ್ತು ಪಕ್ಷದ ನಾಯಕರಿಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಆಡಳಿತ ಮತ್ತು ಪಕ್ಷದ ಸಂಘಟನೆಯಲ್ಲಿ ಯಾವುದೇ ರೀತಿಯ ಮೈಗಳ್ಳತನವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಮುಖ್ಯಮಂತ್ರಿಯಾದ ಬೆನ್ನಲ್ಲೇ ಸಚಿವರ ಸಭೆ ನಡೆಸಿದ ಡಿ.ಕೆ. ಶಿವಕುಮಾರ್, “ನಾನು ಯಾವ ಮಂತ್ರಿಗಳನ್ನೂ ಸುಮ್ಮನೆ ಬಿಡುವುದಿಲ್ಲ. ಎಲ್ಲರೂ 24/7 ರೀತಿ ಸಕ್ರಿಯವಾಗಿ ಕೆಲಸ ಮಾಡಬೇಕು” ಎಂದು ಖಡಕ್ ಆಗಿ …

Read More »

ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ವಿರೋಧಿಸಿ ಪ್ರತಿಭಟನೆ

ಬೆಳಗಾವಿ: ರಾಜ್ಯ ಸರ್ಕಾರ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿರುವುದನ್ನು ವಿರೋಧಿಸಿ ಶ್ರೀರಾಮಸೇನೆ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟಿಸಿದರು. ಬಳಿಕ ಕಾಲೇಜುಗಳಲ್ಲಿ ಕೇಸರಿ ಶಾಲು ವಿತರಿಸಲು ಪ್ರಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಜಾತಿ ವಿಷ ಬೀಜ ಬಿತ್ತುತ್ತಿರುವ ಕಾಂಗ್ರೆಸ್ ಸರ್ಕಾರ ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುತ್ತಿದೆ. ಮತಬ್ಯಾಂಕ್ ಗಟ್ಟಿಗೊಳಿಸುವ ಉದ್ದೇಶದಿಂದ ಹಿಜಾಬ್ ಧರಿಸಲು ಮರು ಆದೇಶ ಹೊರಡಿಸಿದೆ. ಇದು ಕಲಿಕೆ ಮೇಲೆ ಕೆಟ್ಟ ಪರಿಣಾಮ …

Read More »

ಕೆಎಲ್ ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಅನ್ನಪ್ರಾಶನ ಪೋಶಕಾಂಶ ಕಾರ್ಯಕ್ರಮ ಉದ್ಘಾಟನೆ

ಮಗು ಜನಿಸಿದ ಮೊದಲ 6 ತಿಂಗಳು ತಾಯಿಯ ಹಾಲೇ ಅತ್ಯುತ್ತಮ ಆಹಾರ. ಆದರೆ 6 ತಿಂಗಳ ನಂತರ ಮಗು ಬೆಳವಣಿಗೆಗೆ ಹೆಚ್ಚುವರಿ ಪೋಷಕಾಂಶಗಳ ಅಗತ್ಯವಿರುವುದರಿಂದ ಪೂರಕ ಆಹಾರ ಪ್ರಾರಂಭಿಸುವುದು ಅತ್ಯಂತ ಮುಖ್ಯ. ಅನ್ನಪ್ರಾಶನವು ಮಗುವಿಗೆ ಮೊದಲ ಬಾರಿ ಘನ/ಅರ್ಧ ಘನ ಆಹಾರವನ್ನು ಪರಿಚಯಿಸುವ ಪ್ರಕ್ರಿಯೆ. ಇದು ಮಗುವಿನ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಬಹಳ ಮುಖ್ಯ ಹಂತ. ಆದ್ದರಿಂದ ತಾಯಿಂದಿರು ಮಕ್ಕಳ ಆಹಾರದಲ್ಲಿ ಜಾಗೃತವಾಗಿರಬೇಕು. ವೈದ್ಯರ ಸಲಹೆಯಂತೆ ಪೂರಕ ಆಹಾರ …

Read More »

ಡಿ.ಕೆ. ಶಿವಕುಮಾರ್ ಸಿಎಂ: ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅದ್ಧೂರಿ ವಿಜಯೋತ್ಸವ

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಗಡಿನಾಡು ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಅದ್ಧೂರಿ ವಿಜಯೋತ್ಸವ ಆಚರಿಸಿದರು. ಕಾಂಗ್ರೆಸ್ ಯುವ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಅವರ ನೇತೃತ್ವದಲ್ಲಿ ನಡೆದ ಸಂಭ್ರಮಾಚರಣೆಯು ನಗರದಲ್ಲಿ ಹಬ್ಬದ ವಾತಾವರಣವನ್ನು ನಿರ್ಮಿಸಿತು. ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರದ ಚುಕ್ಕಾಣಿ ಹಿಡಿದಿರುವುದು ಬೆಳಗಾವಿ ಕಾಂಗ್ರೆಸ್ ಪಾಳಯದಲ್ಲಿ ಹೊಸ ಉತ್ಸಾಹ ಮೂಡಿಸಿದ್ದು, ಕಾರ್ಯಕರ್ತರು ಈ ಐತಿಹಾಸಿಕ ಕ್ಷಣವನ್ನು ವಿಶೇಷವಾಗಿ ಸಂಭ್ರಮಿಸಿದರು. ನಗರದ ಕಾಂಗ್ರೆಸ್ ಭವನದ …

Read More »

ಸಿಎಂ ಆದ ಬೆನ್ನಲ್ಲೇ ಕುಟುಂಬ ಸಮೇತರಾಗಿ ಅಜ್ಜಯ್ಯನ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಡಿ.ಕೆ ಶಿವಕುಮಾರ್‌ ಅವರು ನಾಗರಭಾವಿಯಲ್ಲಿರುವ ಅಜ್ಜಯ್ಯನ ಶಾಖಾ ಮಠಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದರು. ಸತತ 2:15 ಗಂಟೆ ಅಜ್ಜಯ್ಯನ ಜೊತೆ ಮಾತುಕತೆ ನಡೆಸಿದರು. ಮುಂದಿನ ರಾಜಕೀಯ ನಡೆ, ಆಡಳಿತ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು. ಬಳಿಕ ಅಜ್ಜಯ್ಯನ  ಆಶಿರ್ವಾದ ಪಡೆದು ತೆರಳಿದರು. ಕರ್ನಾಟಕದ  25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್‌  ಅವರು ಬುಧವಾರ (ಜೂ.3) ಪ್ರಮಾಣ ವಚನ ಸ್ವೀಕರಿಸಿದರು. …

Read More »

ರಾಜಕಾರಣಕ್ಕೆ ಮರಳಲು ಕಾಲ ಕೂಡಿಬರಬೇಕು: ನಟಿ ರಮ್ಯಾ

ಬೆಂಗಳೂರು: ನಾನು ರಾಜಕಾರಣಕ್ಕೆ ಮರಳಲು ಕಾಲ ಕೂಡಿಬರಬೇಕು ಎಂದು ನಟಿ ರಮ್ಯಾ ತಿಳಿಸಿದ್ದಾರೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಇಂದು ಗದ್ದುಗೆಗೇರುತ್ತಿದ್ದು, ಅವರ ಜೊತೆಗೆ ಒಟ್ಟು 13 ಮಂದಿ ಶಾಸಕರು ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಗಣ್ಯರು, ಸೆಲಬ್ರಿಟಿಗಳ ದಂಡೇ ಆಗಮಿಸಿದೆ. ನಟಿ ರಮ್ಯಾ ಕೂಡ ಡಿಕೆ ಶಿವಕುಮಾರ್‌ ಅವರ ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ್ದಾರೆ. ಈ ವೇಳೆ ತಮ್ಮ ಮುಂದಿನ ರಾಜಕೀಯ ನಡೆ ಕುರಿತು …

Read More »

ಮತ್ತಷ್ಟು ಯಶಸ್ಸು ನಿಮ್ಮದಾಗಲಿ – ಡಿಕೆಶಿಗೆ ಸೋನಿಯಾ ಗಾಂಧಿ ಶುಭ ಹಾರೈಕೆ

ಬೆಂಗಳೂರು: ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ  ಅವರು ನಿಯೋಜಿತ ಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ಶುಭ ಹಾರೈಸಿದರು. ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಿರಿ. ಕರ್ನಾಟಕವನ್ನ ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ. ಹೊಸ ಜವಾಬ್ದಾರಿಯನ್ನ ಸಮರ್ಥವಾಗಿ ನಿಭಾಯಿಸಿ. ಮತ್ತಷ್ಟು ಯಶಸ್ಸು ನಿಮ್ಮದಾಗಲಿ ಎಂದು ಸೋನಿಯಾ ಗಾಂಧಿ ಅವರು ಡಿಕೆ ಶಿವಕುಮಾರ್  ಅವರಿಗೆ ಶುಭಾಶಯ ಹೇಳಿದರು.

Read More »