ತುಮಕೂರು: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿರುವ ಹುಳಿಯಾರು ಬಳಿಯ ಕೆಂಕೆರೆ ಗ್ರಾಮದಲ್ಲಿ ನಡೆದಿದೆ. ಮೃತರು ಆಂಧ್ರಪ್ರದೇಶ ಮೂಲದವರು. ತಂದೆ – ತಾಯಿ, ಗಂಡ – ಹೆಂಡತಿ ಹಾಗೂ ಇಬ್ಬರು ಮಕ್ಕಳು ಓಮಿನಿ ಕಾರಿನಲ್ಲಿ ಬರುತ್ತಿದ್ದರು. ಹಿರಿಯೂರು ಮಾರ್ಗವಾಗಿ ಹುಳಿಯಾರು ಕಡೆಗೆ ಬರುತ್ತಿದ್ದ ವೇಳೆ ಎದುರಿನಿಂದ ಮತ್ತೊಂದು ಕಾರು ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ …
Read More »Daily Archives: ಜೂನ್ 5, 2026
ಕುತೂಹಲ ಕೆರಳಿಸಿದ ಸಿಎಂ ಡಿಕೆಶಿ – ಬಿ.ಕೆ ಹರಿಪ್ರಸಾದ್ ಭೇಟಿ
ಬೆಂಗಳೂರು: ನೂತನ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್ ಅವರಿಂದು, ಹಾಲಿ ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ನಾಯಕರನ್ನ ಭೇಟಿಯಾಗಿ ಧನ್ಯವಾದ ಹೇಳಿದ್ದಾರೆ. ಅಧ್ಯಕ್ಷರಾಗಿ ನೇಮಕವಾದ ಮರು ದಿನವೇ ಕುಮಾರಕೃಪ ರಸ್ತೆಯಲ್ಲಿನ ಸಿಎಂ ಸರ್ಕಾರಿ ನಿವಾಸದಲ್ಲಿ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಸಭೆ ನಡೆಸಿದ್ದಾರೆ. ʻಅಧಿಕಾರ ಬೇಕಾದವರು ಡಿಕೆಶಿ ಹಿಂದೆ ಹೋಗಿ, ಸಂಘಟನೆ ಮಾಡೋರು ನನ್ನ ಜೊತೆ ಬನ್ನಿʼ ಎಂದು ಬಿ.ಕೆ ಹರಿಪ್ರಸಾದ್ ಅವರು ಹೇಳಿದ …
Read More »ಮಂತ್ರಾಲಯ ರಾಯರ ಹುಂಡಿಗೆ 22 ದಿನದಲ್ಲಿ 4.35 ಕೋಟಿ ಕಾಣಿಕೆ
ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ 22 ದಿನದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, 4.35 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಶಾಲಾ-ಕಾಲೇಜುಗಳಿಗೆ ರಜೆಯಿದ್ದ ಹಿನ್ನೆಲೆ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಭಕ್ತರು ದಂಡು ಹರಿದು ಬಂದಿದ್ದು, 22 ದಿನಗಳಲ್ಲೇ ಕೋಟ್ಯಂತರ ರೂ. ಕಾಣಿಕೆ ಸಂಗ್ರಹವಾಗಿದೆ. ಒಟ್ಟು 4,25,25,136 ರೂ. ಕಾಣಿಕೆ ಸಂಗ್ರಹವಾಗಿದ್ದು, ಇದರಲ್ಲಿ 4,19,97,861 ರೂ. ಕರೆನ್ಸಿ ನೋಟುಗಳು ಹಾಗೂ 15,27,275 ರೂ. ನಾಣ್ಯಗಳು ಸಂಗ್ರಹವಾಗಿವೆ. …
Read More »ಅಕ್ರಮ ಸಂಬಂಧಕ್ಕೆ ಬಿತ್ತು ಹೆಣ – ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ
ಬೆಂಗಳೂರು: ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜೆಜೆ ನಗರದಲ್ಲಿ ನಡೆದಿದೆ. ಅಕ್ರಂ ಪಾಷಾ (43) ಕೊಲೆಯಾದ ವ್ಯಕ್ತಿ. ಉಮರ್ ಖಾಲೀದ್ ಎಂಬವರ ಪತ್ನಿಯ ಜೊತೆ ಅಕ್ರಂನ ಪಾಷಾ ಅಕ್ರಮ ಸಂಬಂಧ ಹೊಂದಿದ್ದರು ಎಂದು ಆರೋಪಿಸಲಾಗಿದೆ. ಬುಧವಾರ ರಾತ್ರಿ ಅಕ್ರಂ ಪಾಷಾ ಉಮರ್ ಖಾಲಿದ್ ಮನೆ ಬಳಿ ಬಂದಿದ್ದ. ಈ ವೇಳೆ ಉಮರ್ ಖಾಲಿದ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಘಟನೆ …
Read More »ರಾಯಚೂರು ಭಾರತ ವನ ಯೋಜನೆಗೆ ಚಾಲನೆ ನೀಡಿದ ನಿರ್ಮಲಾ ಸೀತಾರಾಮನ್
ರಾಯಚೂರು: ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ರಾಯಚೂರು ಭಾರತ ವನ ಯೋಜನೆ ಕಾರ್ಯಕ್ರಮದಲ್ಲಿ ಕೇಂದ್ರ ವಿತ್ತ ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಯಚೂರಿನ ಯಕ್ಲಾಸಪುರ ಘನತಾಜ್ಯ ಘಟಕದಲ್ಲಿ ಭಾರತ ವನ ಯೋಜನೆ ಅಡಿ ಮಿಯಾವಾಕಿ ಪದ್ದತಿ ಮೂಲಕ ಅರಣ್ಯೀಕರಣವನ್ನ ವರ್ಚುವಲ್ ಆಗಿ ಉದ್ಘಾಟನೆ ಮಾಡಿದರು. ಸಸಿ ನೆಡುವ ವೇಳೆ ವಿದ್ಯಾರ್ಥಿಗಳ ಜೊತೆ ಪರಿಸರ ಬಗ್ಗೆ ಸಂವಾದ …
Read More »ಖಾತೆ ಹಂಚಿಕೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ – ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರ ರಾಮಲಿಂಗಾ ರೆಡ್ಡಿ?
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದ ಎಲ್ಲಾ 13 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆ ಪ್ರಕ್ರಿಯೆಯಲ್ಲಿ ಅನೇಕ ಸಚಿವರಿಗೆ ತಾವು ಬಯಸಿದ ಖಾತೆ ಸಿಗದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಬೆಂಗಳೂರು ನಗರಾಭಿವೃದ್ಧಿ (ಜಿಬಿಎ) ಇಲಾಖೆ ಕೈತಪ್ಪಿದ ಹಿನ್ನೆಲೆ ಸಚಿವ ರಾಮಲಿಂಗಾ ರೆಡ್ಡಿ ಅವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗ್ತಿದೆ. ಬೆಂಗಳೂರು ನಗರಾಭಿವೃದ್ಧಿ ಕೈತಪ್ಪಿದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ …
Read More »ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ? ಇಲ್ಲಿದೆ ಲಿಸ್ಟ್
ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಡಿಕೆಶಿ, ಡಿಸಿಎಂ ಡಾ.ಜಿ ಪರಮೇಶ್ವರ್, ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ ಹಂಚಿಕೆ ಮಾಡಿದ್ದಾರೆ. ಈ ಮೂಲಕ ಹಣಕಾಸು, ಗೃಹ, ಕಂದಾಯ, ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ ಸೇರಿದಂತೆ ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಿಎಂ ಡಿಕೆ ಶಿವಕುಮಾರ್ …
Read More »ರಾಜ್ಯಸಭೆ ಚುನಾವಣೆಗೆ ʻಕೈʼ ಅಭ್ಯರ್ಥಿಗಳ ಪಟ್ಟಿ ಪ್ರಕಟ – ಖರ್ಗೆ ಸೇರಿ ರಾಜ್ಯದಿಂದ ಮೂವರು ಸ್ಪರ್ಧೆ
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ರಾಷ್ಟ್ರೀಯ ಕಾಂಗ್ರೆಸ್ ಕೊನೆಗೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನ ಪ್ರಕಟ ಮಾಡಿದೆ. ರಾಜ್ಯಸಭಾ ಚುನಾವಣೆ ಕರ್ನಾಟಕದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಮನ್ಸೂರ್ ಅಲಿಖಾನ್, ಪವನ್ ಖೇರಾ ಮೂವರು ಸ್ಪರ್ಧಿಸುತ್ತಿದ್ದಾರೆ ಎಂದು ಎಐಸಿಸಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಮೂವರು ಅಭ್ಯರ್ಥಿಗಳು ಶುಕ್ರವಾರ (ಜೂ.5) ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇದರೊಂದಿಗೆ ಮಧ್ಯಪ್ರದೇಶದಿಂದ ಮೀನಾಕ್ಷಿ ನಟರಾಜನ್, ರಾಜಸ್ಥಾನದಿಂದ ನೀರಜ್ ಡಾಂಗಿ, ತಮಿಳುನಾಡಿನಿಂದ ಪ್ರವೀಣ್ ಚಕ್ರವರ್ತಿ ಹಾಗೂ ಜಾರ್ಖಂಡ್‌ನಿಂದ …
Read More »ನೂತನ ಸಚಿವರಿಗೆ ಖಾತೆ ಹಂಚಿಕೆ ಫೈನಲ್ ಆಗಿದೆ: ಸಿಎಂ ಡಿಕೆಶಿ
ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ಆಗಿದ್ದು, ಪಟ್ಟಿಯನ್ನ ಹೈಕಮಾಂಡ್‌ಗೆ ಕಳಿಸಿದ್ದೇವೆ. ಶೀಘ್ರವೇ ಪಟ್ಟಿ ಬಿಡುಗಡೆ ಆಗಲಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಸಂಜೆ ವಿಧಾನಸೌಧಕ್ಕೆ ತೆರಳಿದ್ದ ಸಿಎಂ ಹಲವು ಗಣ್ಯಾತಿಗಣ್ಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದರು. ವಿಧಾನಸೌಧದಲ್ಲಿರೊ ಭುವನೇಶ್ವರಿ ತಾಯಿ, ದಿ. ದೇವರಾಜ ಅರಸ್, ಕೆ.ಸಿ ರೆಡ್ಡಿಯವರ, ಎಸ್. ನಿಜಲಿಂಗಪ್ಪ, ಡಾ. ಬಾಬು ಜಗಜೀವನ್ ರಾಂ, ಕೆಂಗಲ್ ಹನುಮಂತಯ್ಯ, ಲಾಲ್ ಬಹುದ್ದೂರ್ ಶಾಸ್ತ್ರಿ ಹಾಗೂ ಸುಭಾಷ್ ಚಂದ್ರ ಭೋಸ್ …
Read More »ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು
ಬೆಂಗಳೂರು: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕಾಲು ಜಾರಿ ರೈಲಿನಡಿ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ನಿಲ್ದಾಣದಲ್ಲಿ ನಡೆದಿದೆ. ಮೆಜೆಸ್ಟಿಕ್‌ನಿಂದ ಮೈಸೂರು ಕಡೆ ತೆರಳುತ್ತಿದ್ದ ಬೆಂಗಳೂರು – ಮೈಸೂರು ಪ್ಯಾಸೆಂಜರ್ ರೈಲಿನಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿ ರಾಮನಗರದ ಕೂಟಗಲ್ ಗ್ರಾಮದ ನಿವಾಸಿ ಹರೀಶ್ ಎಂದು ತಿಳಿದುಬಂದಿದೆ. ನಿಧಾನಕ್ಕೆ ಚಲಿಸುತ್ತಿದ್ದ ವೇಳೆ ರೈಲು ಹತ್ತಲು ವ್ಯಕ್ತಿ ಯತ್ನಿಸಿದ್ದಾನೆ. ಈ ವೇಳೆ ಕಾಲು ಜಾರಿ ರೈಲಿನ ಚಕ್ರದಡಿ ಬಿದ್ದಿದ್ದಾನೆ. …
Read More »
Laxmi News 24×7