ನವದೆಹಲಿ: ಯುದ್ಧ ಹಾಗೂ ಜಾಗತಿಕ ಆರ್ಥಿಕ ಅನಿಶ್ಚಿತತೆಯ ನಡುವೆಯೂ ಭಾರತದ ಆರ್ಥಿಕತೆಯ ಬೆಳವಣಿಗೆ ಕಳೆದ ವರ್ಷಕ್ಕಿಂತ ಉತ್ತಮ ರೀತಿಯಲ್ಲಿದೆ. ದೇಶದ 2026ರ ವಾರ್ಷಿಕ ಜಿಡಿಪಿ ಬೆಳವಣಿಗೆ ಶೇಕಡಾ 7.7ಕ್ಕೆ ತಲುಪಿದೆ. ಕಳೆದ ವರ್ಷ ಜಿಡಿಪಿ ಪ್ರಮಾಣ ಶೇಕಡ 7.1ರಷ್ಟಿತ್ತು. ಯುದ್ಧ ಹಾಗೂ ಜಾಗತಿಕ ಅಸ್ಥಿರತೆಯ ನಡುವೆಯೂ ಭಾರತ ತನ್ನ ಆರ್ಥಿಕ ಚೈತನ್ಯವನ್ನು ಗಟ್ಟಿಯಾಗಿ ಉಳಿಸಿಕೊಂಡಿದೆ ಎಂದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅಂಕಿ ಅಂಶಗಳು ತಿಳಿಸುತ್ತಿವೆ. ಅಂಕಿ ಅಂಶ ಮತ್ತು ಕಾರ್ಯಕ್ರಮ …
Read More »Daily Archives: ಜೂನ್ 6, 2026
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿಯಾದ ಬಸವರಾಜ್ ಬೊಮ್ಮಾಯಿ
ನವದೆಹಲಿ: ಸಂಸದ, ಕರ್ನಾಟಕ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಂದು (ಜೂ.5) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿದ್ದಾರೆ. ಇಂದು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬೊಮ್ಮಾಯಿ ಅವರು ನಿತಿನ್ ನಬಿನ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಕುರಿತು ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಸೌಹಾರ್ದಯುತವಾಗಿ …
Read More »ಜೂ.7ಕ್ಕೆ ಕನಕಪುರಕ್ಕೆ ಡಿಕೆಶಿ, ಗ್ರಾಮಸ್ಥರ ಭೇಟಿಯಾಗಲಿರುವ ಸಿಎಂ
ಬೆಂಗಳೂರು: ಭಾನುವಾರ (ಜೂ.5) ಸಿಎಂ ಡಿಕೆಶಿ ಅವರು ಕನಕಪುರ ತಾಲೂಕು ಪ್ರವಾಸ ಹಮ್ಮಿಕೊಂಡಿದ್ದು, ಕುಲದೇವರಿಗೆ ವಿಶೇಪ ಪೂಜೆ ನೆರವೇರಿಸಲಿದ್ದಾರೆ. ಬಳಿಕ ಗ್ರಾಮಸ್ಥರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಸ್ವಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಜೊತೆಗೆ ಮನೆದೇವತೆ ಕೆಂಕೇರಮ್ಮ ಹಾಗೂ ಕುಲದೇವತೆ ಕಬ್ಬಾಳಮ್ಮ ದೇವಾಲಯಗಳಿಗೂ ಭೇಟಿ ನೀಡಿ, ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಜೊತೆಗೆ ಹುಟ್ಟೂರು ದೊಡ್ಡಾಲಹಳ್ಳಿಯಲ್ಲಿರುವ ತಂದೆ ಕೆಂಪೇಗೌಡ ಸಮಾಧಿಗೂ ಪೂಜೆ ಸಲ್ಲಿಸಲಿರುವ ಡಿಕೆಶಿ ಹುಟ್ಟೂರಿನ ಗ್ರಾಮಸ್ಥರನ್ನೂ ಭೇಟಿ ಮಾಡಲಿದ್ದಾರೆ. …
Read More »ಸೇತುವೆಗೆ ಆಟೋ ಡಿಕ್ಕಿ – ಇಬ್ಬರು ಸಾವು
ಚಾಮರಾಜನಗರ: ಆಟೋ ಮಗುಚಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಕೊಳ್ಳೇಗಾಲ ತಾಲೂಕಿನ ನರಿಪುರ-ಮಧುವನಹಳ್ಳಿ ಬೈಪಾಸ್ ಮುಖ್ಯರಸ್ತೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬೆಂಗಳೂರು ರಾಜಗೋಪಾಲನಗರ ನಿವಾಸಿ ಮನೋಜ್ ಎಂದು ಗುರುತಿಸಲಾಗಿದೆ. ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಲಕ್ಷ್ಮಿಕಾಂತ್ ಎಂಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನರಿಪುರ-ಮಧುವನಹಳ್ಳಿ ಬೈಪಾಸ್ ಮುಖ್ಯ ರಸ್ತೆಯಲ್ಲಿರುವ ಮಧುವನಹಳ್ಳಿ ಪ್ರದೀಪ್ ಎಂಬವರ ಜಮೀನಿನ ಹತ್ತಿರ ಘಟನೆ ನಡೆದಿದೆ. ಅಪಘಾತದ ವಿಷಯ ತಿಳಿಯುತ್ತಿದ್ದಂತೆ …
Read More »ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸದ ಪಾಲಿಕೆ ವಿರುದ್ಧ ಪ್ರತಿಭಟಿಸಿದ ಕಿತ್ತೂರು ಕರ್ನಾಟಕ ಸೇನೆ
ಬೆಳಗಾವಿ: ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಲು ನಿರಾಕರಿಸುತ್ತಿರುವ ಬೆಳಗಾವಿ ಮಹಾನಗರ ಪಾಲಿಕೆಯ ಕನ್ನಡ ನಾಡು, ನುಡಿ, ಗಡಿ ಹಿತಾಸಕ್ತಿ ವಿರೋಧಿ ನಿಲುವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕಿತ್ತೂರು ಕರ್ನಾಟಕ ಸೇನೆ ಬೆಳಗಾವಿ ನಗರದ ಪ್ರಾದೇಶಿಕ ಆಯುಕ್ತ ಕಚೇರಿ ಮುಂದೆ ಪ್ರತಿಭಟಿಸಿತು. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ, ಗಡಿವಿವಾದಕ್ಕೆ ಮಹಾಜನ ಆಯೋಗದ ವರದಿಯೇ ಅಂತಿಮ ಎಂಬ ಗೊತ್ತುವಳಿ ಅಂಗೀಕರಿಸಬೇಕೆಂದು ಆಗ್ರಹಿಸಿ ಬೆಳಗಾವಿಯ 20 …
Read More »ಪರಿಸರ ರಕ್ಷಣೆ ಎಲ್ಲರ ಜವಾಬ್ದಾರಿ : ಶಾಸಕ ಆಸೀಫ್ ಸೇಠ್
ಬೆಳಗಾವಿ : ಸಕಲ ಜೀವಿಗಳ ಜೀವನಾಡಿಯಾಗಿರುವ ಪರಿಸರವನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಪ್ರಮುಖ ಕರ್ತವ್ಯವಾಗಿದೆ ಎಂದು ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ ಹೇಳಿದರು. ಬೆಳಗಾವಿ ಉತ್ತರ ಕ್ಷೇತ್ರದ ನಂದಿನಿ ಮಾರ್ಗದಲ್ಲಿರುವ ವಾರ್ಡ್ ನಂಬರ್ 35 ಗಾಜಿನ ಮನೆ ಆವರಣದಲ್ಲಿ ಮಹಾನಗರ ಪಾಲಿಕೆಯ ಯೋಜನೆಯಾಗಿರುವ “ಮಿಯಾವಾಕಿ” ಉದ್ಯಾನ ನಿರ್ಮಾಣಕ್ಕೆ ಸಸಿ ನೆಡುವುದರ ಮೂಲಕ ಚಾಲನೆ ನೀಡಿ, ನಂತರ ನಡೆದ “ವಿಶ್ವ ಪರಿಸರ ದಿನ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ …
Read More »ಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ: ಲಕ್ಷ್ಮೀ ಹೆಬ್ಬಾಳ್ಕರ್
ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ. ಪಕ್ಷದ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತೋ ಅದಕ್ಕೆ ಬದ್ಧರಾಗಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಿರಿಯರಿದ್ದಾರೆ ಮತ್ತು ಸಮರ್ಥರಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ ನಡೆಸಲಿದ್ದಾರೆ ಎಂದು ಹೇಳಿದರು. …
Read More »ಪದವಿ ಪಡೆಯುವುದು ಹೊಸ ಜೀವನ ಆರಂಭ ಇದ್ದಹಾಗೆ: ಡಾ. ವಿದ್ಯಾ ಯೆರವಡೆಕರ
ತಾಯಿ ಜನ್ಮ ನೀಡಿದ ದಿನ ಅತ್ಯಂತ ಮುಖ್ಯವಾಗಿದ್ದು, ಅದರಂತೆ ನೀವು ಪದವಿ ಪಡೆಯುತ್ತಿರುವದು ಸಾಮಾಜಿಕ ಜನ್ಮ. ಹೊಸ ಜೀವನ ಆರಂಭವಾಗಿದೆ. ಇಲ್ಲಿಯವರೆಗೆ ನಿಮ್ಮನ್ನು ನಿಮ್ಮ ಪಾಲಕರು, ಕುಟುಂಬ, ಸ್ನೇಹಿತರು ಬೆಂಬಲಿಸಿದ್ದಾರೆ. ಆದರೆ ಇಂದಿನಿಂದ ನೀವು ಸಮಾಜದಲ್ಲಿ ವೈದ್ಯರು ಮತ್ತು ಆರೋಗ್ಯ ವೃತ್ತಿಪರರಾಗಿ ಹೊಸ ಜವಾಬ್ದಾರಿಗಳನ್ನು ನಿಭಾಯಿಸಬೇಕು. ಜಗತ್ತು ತುಂಬಾ ವಿಭಿನ್ನವಾಗಿದೆ. ವೈದ್ಯಕೀಯ ಜ್ಞಾನ ಮಾತ್ರ ಸಾಕಾಗುವುದಿಲ್ಲ. ಜಾಗತಿಕ ಬೆಳವಣಿಗೆಗಳು, ತಂತ್ರಜ್ಞಾನ, ಸಮಾಜದ ಅಗತ್ಯತೆಗಳನ್ನು ಅರಿತುಕೊಂಡು ಸಾಮಾಜಿಕ ಬದ್ದತೆ ಹಾಗೂ ಕಳಕಳಿಯಿಂದ …
Read More »ಭವಿಷ್ಯಕ್ಕಾಗಿ ಹಸಿರು ಸಂಕಲ್ಪ: ಜೈನ್ ಹೆರಿಟೇಜ್ ಶಾಲೆಯಲ್ಲಿ ಗೋಲ್ಡನ್ ಆ್ಯರೋ ಪ್ರಶಸ್ತಿ ಪ್ರದಾನ
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಜೈನ್ ಹೆರಿಟೇಜ್ ಶಾಲೆಯಲ್ಲಿ “ಪ್ರಕೃತಿಯಿಂದ ಪ್ರೇರಣೆ – ಭವಿಷ್ಯಕ್ಕಾಗಿ ಹವಾಮಾನ” ಎಂಬ ಧ್ಯೇಯವಾಕ್ಯದಡಿ ಗೋಲ್ಡನ್ ಆ್ಯರೋ ಅವಾರ್ಡ್-2026 ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಯಿತು. ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಜೀವನಶೈಲಿಯ ಮಹತ್ವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ನಡೆದ ಈ ಕಾರ್ಯಕ್ರಮದಲ್ಲಿ ಶಾಲೆಯ ಕಬ್ಸ್ ಮತ್ತು ಬುಲ್ಬುಲ್ಸ್ ವಿದ್ಯಾರ್ಥಿಗಳು ಔಷಧೀಯ ಸಸ್ಯಗಳು, ಸೀಡ್ ಬಾಲ್‌ಗಳು, ಸಾವಯವ ಗೊಬ್ಬರ …
Read More »ಜೋಯಾಲುಕ್ಕಾಸ್ ಫೌಂಡೇಶನ್‌ನಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಣ ಕಿಟ್ ವಿತರಣೆ
ಬೆಳಗಾವಿ: ಶಿಕ್ಷಣಕ್ಕೆ ಉತ್ತೇಜನ ನೀಡುವ ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ ಅಗತ್ಯ ಶೈಕ್ಷಣಿಕ ಸಾಮಗ್ರಿಗಳನ್ನು ಒದಗಿಸುವ ಉದ್ದೇಶದಿಂದ ಜೋಯಾಲುಕ್ಕಾಸ್ ಫೌಂಡೇಶನ್ ವತಿಯಿಂದ ರಾಜ್ಯಾದ್ಯಂತ 5,000 ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ನೋಟ್‌ಬುಕ್, ಛತ್ರಿ ಸೇರಿದಂತೆ ವಿವಿಧ ಅಗತ್ಯ ವಸ್ತುಗಳನ್ನು ಒಳಗೊಂಡ ಶಿಕ್ಷಣ ಕಿಟ್‌ಗಳನ್ನು ವಿತರಿಸುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಈ ಯೋಜನೆಯಡಿ ಬೆಳಗಾವಿ ಜಿಲ್ಲೆಯ ವಿವಿಧ ಸರ್ಕಾರಿ ಶಾಲೆಗಳ 600 ವಿದ್ಯಾರ್ಥಿಗಳಿಗೆ ಶಿಕ್ಷಣ ಕಿಟ್‌ಗಳನ್ನು ವಿತರಿಸಲಾಯಿತು. ಅದರ ಭಾಗವಾಗಿ …
Read More »
Laxmi News 24×7