Breaking News

Daily Archives: ಜೂನ್ 7, 2026

ಶಿಕ್ಷಕರ ವಿವಿಧ ಬೇಡಿಕೆ ಈಡೇರಿಸುವಂತೆ ಚಿಕ್ಕೋಡಿ ಬಿಇಒ ಅವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಮನವಿ ಸಲ್ಲಿಕೆ

ಚಿಕ್ಕೋಡಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿಕ್ಕೋಡಿ ತಾಲೂಕು ಘಟಕದ ವತಿಯಿಂದ ಶಿಕ್ಷಣಾಧಿಕಾರಿಗಳಾದ ಪ್ರಭಾವತಿ ಪಾಟೀಲಯವರಿಗೆ ಶಿಕ್ಷಕರ ವಿವಿಧ ಬೇಡಿಕೆ ಹಾಗೂ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲಾಯಿತು. KAAMS ಹಾಜರಾತಿ ವ್ಯವಸ್ಥೆಯ ತಾಂತ್ರಿಕ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಿ, ವಲಯಾದ್ಯಂತ ಏಕರೂಪದ ವೇಳಾಪಟ್ಟಿ ಜಾರಿಗೊಳಿಸಬೇಕು. ಶಿಕ್ಷಕರ ವೇತನವನ್ನು ಪ್ರತಿ ತಿಂಗಳ ೧ನೇ ತಾರೀಖಿನಂದೇ ಪಾವತಿಸಬೇಕು. ಹಿರಿಯ ಮುಖ್ಯೋಪಾಧ್ಯಾಯರಾಗಿ ಬಡ್ತಿ ಪಡೆದವರಿಗೆ ಕಳೆದ ನಾಲ್ಕು ತಿಂಗಳಿಂದ ಬಾಕಿ ಇರುವ ವೇತನ …

Read More »

ರಾಜೀನಾಮೆ ವಾಪಸ್‌ ಪಡೆದ ರಾಮಲಿಂಗಾರೆಡ್ಡಿ: ಸಚಿವ ಸಂಪುಟದಲ್ಲಿ ಮುಂದುವರಿಕೆ

ರಾಮಲಿಂಗಾರೆಡ್ಡಿ ಅವರು ತಮ್ಮ ರಾಜೀನಾಮೆಯನ್ನು ವಾಪಸ್‌ ಪಡೆದಿದ್ದು, ಸಚಿವ ಸಂಪುಟದಲ್ಲಿಯೇ ಮುಂದುವರಿಯಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ, ಬಿಜೆಪಿ ಪಕ್ಷವು ಈ ರಾಜೀನಾಮೆ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ಹಿರಿಯ ನಾಯಕರಾಗಿರುವ ರಾಮಲಿಂಗಾರೆಡ್ಡಿ ಅವರು ಪಕ್ಷದೊಂದಿಗೆ ಸದೃಢ ಬಾಂಧವ್ಯ ಹೊಂದಿದ್ದಾರೆ ಎಂದು ಸುರ್ಜೇವಾಲ ಹೇಳಿದ್ದಾರೆ.

Read More »

ಮನೆಗೆ ನುಗ್ಗಿ ಚಿನ್ನಾಭರಣ ಕದ್ದಿದ್ದ ಆರೋಪಿ ಅರೆಸ್ಟ್: ಚಿನ್ನಾಭರಣ ವಶಕ್ಕೆ

ಬೆಳಗಾವಿ: ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಭೋವಿ ಗಲ್ಲಿಯ ನಿವಾಸಿ ನಿಲೇಶ ಸುತಾರ ಬಂಧಿತ ಆರೋಪಿ. 2026ರ ಜ. 1ರಂದು ಮಂಡೋಳಿ ರಸ್ತೆಯ ಭವಾನಿ ನಗರದ ತಮ್ಮ ಮನೆಯಿಂದ ಚಿನ್ನಾಭರಣ ಕಳ್ಳತನವಾಗಿವೆ ಎಂದು ರೋಹನ್ ಜಾಧವ ಎಂಬುವರು ಗ್ರಾಮೀಣ ಠಾಣೆಗೆ ದೂರು ನೀಡಿದ್ದರು. ಈ ಕುರಿತು ತನಿಖೆ ಕೈಗೊಂಡಿದ್ದ ಪೊಲೀಸರು, ಸಂಶಯ ವ್ಯಕ್ತಪಡಿಸಿ ನಿಲೇಶ ಸುತಾರ ಎಂಬಾತನನ್ನು ವಶಕ್ಕೆ ಪಡೆದು …

Read More »

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಧನ್ಯವಾದ ಹೇಳಿದ ನೂತನ ಸಿಎಂ ಡಿ.ಕೆ.ಶಿವಕುಮಾರ್

ಸಿಎಂ ಡಿ ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸದಾಶಿವನಗರ ನಿವಾಸದಲ್ಲಿ ಶುಕ್ರವಾರ ಭೇಟಿ ಮಾಡಿ ಧನ್ಯವಾದ ಹೇಳಿದರು. ಮಲ್ಲಿಕಾರ್ಜುನ ಖರ್ಗೆ ಅವರ ಪತ್ನಿ ರಾಧಾಬಾಯಿ, ಸಚಿವ ಪ್ರಿಯಾಂಕ್ ಖರ್ಗೆ ಅವರ ಅತ್ತೆ ಸುಮಾ ಪ್ರಭು ಅವರು ಉಪಸ್ಥಿತರಿದ್ದರು.

Read More »

ಶಿವಾಪೂರವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಅಣ್ಣಾಸಾಹೇಬ ಜೊಲ್ಲೆ ಅವರಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ನಿಪ್ಪಾಣಿ:ಪ್ರಕೃತಿಯೇ ನಮ್ಮ ಪ್ರೇರಣೆ, ಪರಿಸರವೇ ನಮ್ಮ ಭವಿಷ್ಯ. ಉತ್ತಮ ಹವಾಮಾನ ಹಾಗೂ ಸುಸ್ಥಿರ ಭವಿಷ್ಯಕ್ಕಾಗಿ ನಾವೆಲ್ಲರೂ ಪರಿಸರ ಸಂರಕ್ಷಣೆಯ ಸಂಕಲ್ಪ ಮಾಡಬೇಕು” ಎಂದು ಮಾಜಿ ಸಚಿವರು ಹಾಗೂ ನಿಪ್ಪಾಣಿ ಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಕರೆ ನೀಡಿದರು. ಕ್ಷೇತ್ರದ ಶಿವಾಪೂರವಾಡಿ ಗ್ರಾಮದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ರವರ “ತಾಯಿಯ …

Read More »

ಸಂಕೇಶ್ವರದ ಶ್ರೀ ಶಂಕರಲಿಂಗ ಸಹಕಾರಿ ಸಂಘದಲ್ಲಿ ಮುಂಗಾರು ಬಿತ್ತನೆ ಬೀಜ ವಿತರಣೆಗೆ ಶಾಸಕ ನಿಖಿಲ ಕತ್ತಿ ಚಾಲನೆ

ಹುಕ್ಕೇರಿ:ಸಂಕೇಶ್ವರ ಮುಂಗಾರು ಹಂಗಾಮು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಸಕಾಲದಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ದೊರೆಯುವಂತಾಗಬೇಕು ಎಂದು ಹುಕ್ಕೇರಿ ಮತಕ್ಷೇತ್ರದ ಶಾಸಕರಾದ ನಿಖಿಲ ಕತ್ತಿ ಹೇಳಿದರು. ತಾಲೂಕಿನ ಸಂಕೇಶ್ವರ ಪಟ್ಟಣದ ಶ್ರೀ ಶಂಕರಲಿಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ರೈತರು ಕೃಷಿ ಇಲಾಖೆ ಹಾಗೂ ಸಹಕಾರಿ ಸಂಘಗಳ ಮೂಲಕ ಸಿಗುವ ಸೌಲಭ್ಯಗಳನ್ನು …

Read More »

ಚಿಕ್ಕೋಡಿಯ ಸಿ. ಟಿ. ಇ. ಸಂಸ್ಥೆಯ ಮಹಿಳಾ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

ಚಿಕ್ಕೋಡಿ: ಮನುಷ್ಯ ಎಲ್ಲ ಪ್ರಾಣಿಗಳಲ್ಲಿ ಬುದ್ಧಿಜೀವಿಯಾಗಿದ್ದರೂ, ಇಂದು ಪರಿಸರದ ಮೇಲೆ ಕೆಟ್ಟ ಪರಿಣಾಮ ಬೀರಲು ಅವನೇ ಪ್ರಮುಖ ಕಾರಣನಾಗಿದ್ದಾನೆ. ಪರಿಸರ ಸಂರಕ್ಷಣೆ ಎಂಬುದು ಇಂದು ನಮ್ಮ ಮುಂದಿರುವ ಆಯ್ಕೆಯಲ್ಲ, ಬದಲಿಗೆ ಅದು ನಮ್ಮ ಅನಿವಾರ್ಯತೆಯಾಗಿದೆ,” ಎಂದು ಚಿಕ್ಕೋಡಿ ಪಟ್ಟಣದ ಸಿ. ಟಿ. ಇ. ಸಂಸ್ಥೆಯ ಶ್ರೀಮತಿ ಎ. ಎ. ಪಾಟೀಲ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಸ್. ಸಿ. ಜಕಾತಿ ಅವರು ಅಭಿಪ್ರಾಯಪಟ್ಟರು. ಜೂನ್ 5ರಂದು …

Read More »

ʻಡಿಕೆʼ ಸರ್ಕಾರದಲ್ಲಿ ಮಹಿಳೆಯರಿಗಿಲ್ಲ ʻಸಚಿವ ಸ್ಥಾನʼ.!

ಬೆಳಗಾವಿ: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದ ಮೊದಲ ಹಂತದ ಸಚಿವ ಸಂಪುಟ ರಚನೆಯಲ್ಲಿ ಪುರುಷರಿಗೆ ಆಧ್ಯತೆ ನೀಡಲಾಗಿದ್ದು, ಕೈ ಪಾಳೆಯದಲ್ಲಿರುವ ಮಹಿಳಾ ಶಾಸಕರಿಗೂ ಮಂತ್ರಿಯಾಗುವ ಸೌಭಾಗ್ಯ ದೊರೆಯದಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಹೌದು…ಈಗಾಗಲೇ ಪ್ರಮಾಣವಚನ ಸ್ವೀಕರಿಸಿದ ಹದಿನಾಲ್ಕು ಜನರ ಇಡೀ ಮಂತ್ರಿಮಂಡಲದಲ್ಲಿ ಒಬ್ಬರೇ ಒಬ್ಬ ಮಹಿಳಾ ಶಾಸಕರಿಗೆ ಪ್ರಾತಿನಿಧ್ಯ ನೀಡಲಾಗಿಲ್ಲ. ಪ್ರಮಾಣ ವಚನ ಸ್ವೀಕಾರ ಮಾಡುವವರೆಲ್ಲರೂ ಪುರುಷರಾಗಿದ್ದಾರೆ. ವಿವಿಧ …

Read More »

ಸಹಾಯಕ ಪ್ರಾಧ್ಯಾಪಕಿಯ ನಿಗೂಢ ಹತ್ಯೆ

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿಯೊಬ್ಬರ ನಿಗೂಢ ಹತ್ಯೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಶಿವಾಜಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿದ್ದ ದೇವಸ್ಮಿತಾ ಪೌಲ್‌ ಕೊಲೆಯಾದ ದುರ್ದೈವಿ. ಇವರು ಪೂರ್ವ ದೆಹಲಿಯ ವಸುಂಧರಾ ಎನ್‌ಕ್ಲೇವ್‌ನ ಸತ್ಯಂ ಅಪಾರ್ಟ್ಮೆಂಟ್‌ನಲ್ಲಿ ಒಂಟಿಯಾಗಿ ಜೀವನ ನಡೆಸುತ್ತಿದ್ದರು. ಇವರ ಪತಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಎನ್ನಲಾಗಿದೆ. ಗುರುವಾರ ಮಧ್ಯಾಹ್ನ 2:25 ರ ಸುಮಾರಿಗೆ ದೇವಸ್ಮಿತಾ ಪೌಲ್‌ ಸಹೋದರಿ ದೇವಾರತಿ ನ್ಯೂ ಅಶೋಕ್ ನಗರ ಪೊಲೀಸ್ ಠಾಣೆಗೆ ಕರೆ ಮಾಡಿ ಘಟನೆಯ …

Read More »