ನವದೆಹಲಿ: ನಿಮ್ಮ ಶಕ್ತಿ ಅದಮ್ಯ. ನೀವು ಮನಸ್ಸು ಮಾಡಿದರೆ ಅಭಿವೃದ್ಧಿ ರಥ ಮುನ್ನುಗ್ಗುತ್ತದೆ. ಹೀಗಾಗಿ ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಕೈಜೋಡಿಸಿ ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳಿಗೆ ಕರೆ ನೀಡಿದರು. ಕರ್ನಾಟಕ ಭವನದಲ್ಲಿ ಅಧಿಕಾರಿಗಳ ಜತೆ ಬುಧವಾರ ರಾತ್ರಿ ಏರ್ಪಡಿಸಿದ್ದ ಔತಣಕೂಟ ಸಂವಾದದಲ್ಲಿ ಅವರು ಈ ಮನವಿ ಮಾಡಿದರು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಬಳಿಕ ಇದೇ ಮೊದಲ ಬಾರಿಗೆ ದೆಹಲಿಗೆ ಆಗಮಿಸಿದ್ದ ಅವರು ಇಷ್ಟು …
Read More »Daily Archives: ಜೂನ್ 11, 2026
ಗೃಹಿಣಿ ಅನುಮಾನಾಸ್ಪದ ಸಾವು – ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ಹಾಲೇನಹಳ್ಳಿಯಲ್ಲಿ ನಡೆದಿದೆ. ಸುಮ (55) ಮೃತ ಗೃಹಿಣಿ. ಮನೆಯಲ್ಲಿ ಯಾರು ಇಲ್ಲದ ವೇಳೆ ಘಟನೆ ನಡೆದಿದ್ದು, ಲೈಸೆನ್ಸ್ ಹೊಂದಿದ್ದ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಸುಮ ಪತಿ ರಾಜೇಶ್ ಉದ್ಯಮಿಯಾಗಿದ್ದಾರೆ. ಸಾವಿನ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಡೆತ್ ನೋಟ್ …
Read More »ರೌಡಿಶೀಟರ್ ಆವಲಹಳ್ಳಿ ಮಂಜೇಶ್ ಹತ್ಯೆ ಪ್ರಕರಣ – ಠಾಣೆಗೆ ಹಾಜರಾದ ಐವರು ವಶಕ್ಕೆ
ಹಾಸನ: ಕುಖ್ಯಾತ ರೌಡಿಶೀಟರ್ ಆವಲಹಳ್ಳಿ ಮಂಜೇಶ್ ಹತ್ಯೆ ಪ್ರಕರಣದಲ್ಲಿ ಐವರು ಶಂಕಿತ ಆರೋಪಿಗಳು ಹಾಸನ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಸಾಯಿನಾಥ್, ನಿಂಗರಾಜ್, ಶಶಿ, ಭರತ್ ಸೇರಿ ಐವರು ಪೊಲೀಸರ ಮುಂದೆ ಹಾಜರಾದ ಶಂಕಿತರು. ಸೋಮವಾರ ಮುಂಜಾನೆ ರೌಡಿಶೀಟರ್ ಮಂಜೇಶ್‌ನನ್ನು ಜಿಲ್ಲಾ ನ್ಯಾಯಾಲಯದ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯ್ಯಲಾಗಿತ್ತು. ಈ ಪ್ರಕರಣಕ್ಕೆ ಸಂಬಧಿಸಿದಂತೆ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದರು. ಈ ಬೆನ್ನಲ್ಲೇ ಬೆಂಗಳೂರು ಮೂಲದ ನಾಲ್ವರು ಹಾಗೂ ತುಮಕೂರು ಮೂಲದ ಓರ್ವ ಯುವಕ …
Read More »ಸಿಗರೇಟ್ ಸೇದಿರುವ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್ – ಬಾಲಕನಿಂದ 120 ಗ್ರಾಂ ಚಿನ್ನ ಲೂಟಿ
ಕೊಪ್ಪಳ: ಅಪ್ರಾಪ್ತ ಬಾಲಕನಿಗೆ ಸಿಗರೇಟ್ ಸೇದುವುದನ್ನು ಕಲಿಸಿ, ಅದರ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡಿ ಸುಮಾರು 120 ಗ್ರಾಂ ಚಿನ್ನ ದೋಚಿದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕುಷ್ಟಗಿ ಪೊಲೀಸರು ಬಸವರಾಜ್ ಅಂಗಡಿ ಮತ್ತು ನವೀನ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 120 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಮೊದಲು ಅಪ್ರಾಪ್ತ ಬಾಲಕನಿಗೆ ಸಿಗರೇಟ್ ಸೇದುವುದನ್ನು ಕಲಿಸಿದ್ದರು. ಬಳಿಕ ಅದನ್ನು ವಿಡಿಯೋ ಮಾಡಿ ಇಟ್ಟುಕೊಂಡು, …
Read More »ಕಸ ಸಂಸ್ಕರಣೆ ನೆಪದಲ್ಲಿ 39,000 ಕೋಟಿ ಹಗರಣ – 10,000 ಕೋಟಿ ಕಿಕ್‌ಬ್ಯಾಕ್: ಆರ್.ಅಶೋಕ್ ಬಾಂಬ್
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ಕಸ ಸಂಸ್ಕರಣೆ ಮಾಡುವ ನೆಪದಲ್ಲಿ 39,000 ಕೋಟಿ ರೂ. ಹಗರಣ ನಡೆಸಿದೆ. 35 ವರ್ಷಗಳ ಸುದೀರ್ಘ ಅವಧಿಗೆ ಎಂಎಸ್‌ಡಬ್ಲ್ಯು ಸೊಲ್ಯೂಶನ್ಸ್ ಲಿಮಿಟೆಡ್‌ಗೆ ನೀಡುತ್ತಿರುವ ಟೆಂಡರ್‌ನ ಒಟ್ಟು ಮೊತ್ತದಲ್ಲಿ 10,000 ಕೋಟಿ ರೂ. ಕಿಕ್‌ಬ್ಯಾಕ್ ಪಡೆಯಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಸ್ವಚ್ಛತೆಯಲ್ಲಿ ಅತ್ಯುತ್ತಮ ನಗರ ಎಂಬ ಹೆಗ್ಗಳಿಕೆ ಬೆಂಗಳೂರಿಗೆ ಸಿಕ್ಕಿತ್ತು. ಈಗ ಬೆಂಗಳೂರೇ …
Read More »ಅಪ್ರಾಪ್ತೆಗೆ ಬ್ಲ್ಯಾಕ್‌ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಆರೋಪ – ಐವರ ಬಂಧನ
ಚಿಕ್ಕಮಗಳೂರು: ಅಪ್ರಾಪ್ತೆಗೆ ಬ್ಲ್ಯಾಕ್‌ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಐವರು ಆರೋಪಿಗಳನ್ನು ಚಿಕ್ಕಮಗಳೂರಿನ ಗೋಣಿಬೀಡು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ಈತ ಈ ಹಿಂದೆಯೂ ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಎಂದು ತಿಳಿದುಬಂದಿದೆ. ಫೋಟೋ ಒಂದನ್ನು ತೋರಿಸಿ ಅಪ್ರಾಪ್ತೆಗೆ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ 5 ಮಂದಿ ವಿರುದ್ಧ ಗೋಣಿಬೀಡು ಠಾಣೆಗೆ ಆಕೆ ದೂರು ನೀಡಿದ್ದಳು. ಇನ್ನೂ …
Read More »ರೇಣುಕಾಸ್ವಾಮಿ ಕೊಲೆ ಕೇಸ್ – ದರ್ಶನ್ ಅರೆಸ್ಟ್ ಆಗಿ 2 ವರ್ಷ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ಅರೆಸ್ಟ್ ಆಗಿ (ಜೂ.11) 2 ವರ್ಷ ಪೂರೈಸಲಿದೆ. ಕೊಲೆ ಕೇಸಲ್ಲಿ 2024 ಜೂನ್ 11ರಂದು ಮೈಸೂರಿನಲ್ಲಿ ಹೋಟೆಲ್‌ನಲ್ಲಿದ್ದಾಗಲೇ ಅರೆಸ್ಟ್ ಮಾಡಲಾಗಿತ್ತು. 1 ಬಾರಿ ಮಧ್ಯಂತರ ಜಾಮೀನು ಪಡೆದು ಹೊರಬಂದಿದ್ದರು. ಅದಾದ ಬಳಿಕ ಸುಪ್ರೀಂನಲ್ಲಿ ಜಾಮೀನು ರದ್ದಾದ ಹಿನ್ನೆಲೆ ದರ್ಶನ್ ಸೇರಿ 7 ಆರೋಪಿಗಳು ಮತ್ತೆ ಜೈಲುಪಾಲಾಗಿದ್ದಾರೆ. ಇನ್ನು, ದರ್ಶನ್ ಸಹಚರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ …
Read More »ಅಶೋಕ್ ಕಸ ಮಾಫಿಯಾ ಗ್ಯಾಂಗ್‌ನ ಏಜೆಂಟ್ ಆಗಿ ಮಾತನಾಡ್ತಿದ್ದಾರೆ: ಸಿಎಂ ಡಿಕೆಶಿ
ನವದೆಹಲಿ: ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರು ಬೆಂಗಳೂರು ಕಸದ ಮಾಫಿಯಾ ಗ್ಯಾಂಗಿನ ಏಜೆಂಟರಾಗಿ ಮಾತನಾಡುತ್ತಿದ್ದಾರೆ. ಈ ಮಾಫಿಯಾ ನಿಯಂತ್ರಿಸಬೇಕು ಎಂದು ನಾನು ಈ ಹಿಂದೆ ಅವರೊಂದಿಗೆ ಚರ್ಚೆ ಮಾಡಿದ್ದೆ. ಈಗ ಅಶೋಕ್ ಅವರು ಮಾಫಿಯಾದ ವಕ್ತಾರರಾಗಿರುವುದು ನನಗೆ ಆಶ್ಚರ್ಯವಾಗಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿರುಗೇಟು ನೀಡಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಕಸದ ಟೆಂಡರ್ ನಲ್ಲಿ 10 ಸಾವಿರ …
Read More »ಮೇಲುಕೋಟೆ ದೇವಸ್ಥಾನದಲ್ಲಿ ಕಳ್ಳತನ – ಅರ್ಚಕ, ಸಿಬ್ಬಂದಿ ವಿರುದ್ಧ ಕೇಸ್
ಮಂಡ್ಯ: ಐತಿಹಾಸಿಕ ಹಾಗೂ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮಂಡ್ಯ ಜಿಲ್ಲೆಯ ಮೇಲುಕೋಟೆಯ ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಾರಿ ಕಳ್ಳತನ ನಡೆದಿರುವ ಶಂಕೆ ವ್ಯಕ್ತವಾಗಿದೆ. ದೇವಸ್ಥಾನದ ಅರ್ಚಕರು ಹಾಗೂ ಸಿಬ್ಬಂದಿ ವಿರುದ್ಧವೇ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವಸ್ಥಾನದ ಹುಂಡಿಯಲ್ಲಿದ್ದ ಚಿನ್ನ, ಬೆಳ್ಳಿ ಹಾಗೂ ನಗದು ಕಳ್ಳತನವಾಗಿದೆ ಎಂದು ಆರೋಪಿಸಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಶೀಲಾ ಅವರು ಪೊಲೀಸರಿಗೆ ಅಧಿಕೃತವಾಗಿ ದೂರು ನೀಡಿದ್ದಾರೆ. ಹಿಂದೆ ನಡೆದಿದ್ದ ಪ್ರಸಿದ್ಧ ವಜ್ರಾಂಗಿ ಆಭರಣ ಕಳ್ಳತನದ ಬಳಿಕ, …
Read More »ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ: 2.50 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ
ಚಿಕ್ಕೋಡಿ: ಗ್ರಾಮೀಣ ಭಾಗದ ಸಮಗ್ರ ಪ್ರಗತಿ ಮತ್ತು ಮೂಲಭೂತ ಸೌಕರ್ಯಗಳ ಬಲವರ್ಧನೆಗೆ ಮುಂಚೂಣಿ ಆದ್ಯತೆ ನೀಡಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಬುಧವಾರ ರಾಯಬಾಗ ಮತಕ್ಷೇತ್ರದಲ್ಲಿ ಮಹತ್ತರ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದರು. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮೊರಬ ಗ್ರಾಮ ಸೇರಿದಂತೆ, ಕುಡಚಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ 2025-26ನೇ ಸಾಲಿನ ಎಸ್‌ಸಿಪಿ ಹಾಗೂ ಟಿಎಸ್ಪಿ ಯೋಜನೆಯಡಿ ಮಂಜೂರಾಗಿರುವ ಒಟ್ಟು ಅಂದಾಜು 2.50 …
Read More »
Laxmi News 24×7