Breaking News

Daily Archives: ಜೂನ್ 13, 2026

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಪರ ಜಿಲ್ಲಾಧಿಕಾರಿಗೆ ಮನವಿ

ಬೆಳಗಾವಿ : ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯವನ್ನು ರದ್ದುಪಡಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯಗೊಳಿಸಿದ್ದರಿಂದ ಅಗತ್ಯ ಪ್ರಮಾಣದ ಗೊಬ್ಬರ ಪಡೆಯಲು ತೊಂದರೆಯಾಗುತ್ತಿದೆ. ಈ ನಿಯಮ ರದ್ದುಪಡಿಸಿ ಸುಲಭವಾಗಿ ರಸಗೊಬ್ಬರ ದೊರಕಿಸಿಕೊಡಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿರುವ ಉಚಿತ …

Read More »

ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್​​: ಇಬ್ಬರು ಆರೋಪಿಗಳು ಅಂದರ್​​

ಚಿಕ್ಕಮಗಳೂರು: ಯುವತಿಯೋರ್ವಳ ಫೋಟೋವನ್ನು ಪೇಸ್​​ಬುಕ್​ನಿಂದ ಪಡೆದು ಅದನ್ನು ಬಳಸಿ ಅಶ್ಲೀಲ ವಿಡಿಯೋ ಕ್ರಿಯೇಟ್ ಮಾಡಿ ಹಣಕ್ಕೆ ಬ್ಲ್ಯಾಕ್​​ಮೇಲ್​​ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. AI, ವಿಡಿಯೋ ಎಡಿಟಿಂಗ್ ಅಪ್ಲಿಕೇಶನ್ ಬಳಸಿ ಮಾಡಿದ ವಿಡಿಯೋವನ್ನು ಯುವತಿಯ ತಾಯಿಗೆ ಕಳುಹಿಸಿದ್ದ ಆರೋಪಿಗಳು, ದುಡ್ಡಿಗಾಗಿ ಪೀಡಿಸಿದ್ದರು. ಹಣ ನೀಡದಿದ್ದರೆ ಜಾಲತಾಣದಲ್ಲಿ ವಿಡಿಯೋ ಹಾಕುವುದಾಗಿ ಬೆದರಿಕೆ ಹಾಕಿದ್ದರು. ನೊಂದ ಯುವತಿಯ ಕಡೆಯವರು ಲಕ್ಕವಳ್ಳಿ ಪೊಲೀಸರಿಗೆ ನೀಡಿದ್ದ ದೂರಿನ ಅಧಾರದಲ್ಲಿ ಬೆಂಗಳೂರಿನಲ್ಲಿ ಕೆಲಸ …

Read More »

ಶಿವಮೊಗ್ಗ ನಗರದಲ್ಲಿ ಮತ್ತೆ ರಕ್ತದೋಕುಳಿ – ಗ್ಯಾಂಗ್‌ವಾರ್‌ಗೆ ರೌಡಿಶೀಟರ್ ಬರ್ಬರ ಹತ್ಯೆ

ಶಿವಮೊಗ್ಗ: ಕಳೆದ ಒಂದೆರಡು ವರ್ಷಗಳಿಂದ ತಣ್ಣಗಿದ್ದ ಮಲೆನಾಡು ಶಿವಮೊಗ್ಗದಲ್ಲಿ ರೌಡಿಗಳ ಗ್ಯಾಂಗ್‌ವಾರ್ ಮತ್ತೆ ಮುನ್ನೆಲೆಗೆ ಬಂದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್  ಒಬ್ಬನನ್ನು ಎದುರಾಳಿ ಗ್ಯಾಂಗ್ ಭೀಕರವಾಗಿ ಹತ್ಯೆ ಮಾಡಿದೆ. ಹಾಡಹಗಲೇ ನಡೆದ ಈ ಗ್ಯಾಂಗ್‌ವಾರ್‌ನಿಂದ ಶಿವಮೊಗ್ಗದ ಜನತೆ ಬೆಚ್ಚಿಬಿದ್ದಿದೆ. ಶಿವಮೊಗ್ಗ ನಗರದಲ್ಲಿ ಮತ್ತೆ ರಕ್ತದೋಕುಳಿ ಹರಿದಿದೆ. ಗ್ಯಾಂಗ್‌ವಾರ್‌ಗೆ ರೌಡಿಶೀಟರ್ ಬಲಿಯಾಗಿದ್ದಾನೆ. ಶಿವಮೊಗ್ಗದ ಗಾಂಧಿ ಬಜಾರ್‌ನ 1ನೇ ಕ್ರಾಸ್‌ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್, ಇಸ್ಪಿಟ್ ಗ್ಯಾಂಬ್ಲರ್ ನರಸಿಂಹ ಹತ್ಯೆಯಾಗಿದ್ದಾನೆ. ಗೋವಿಂದಾಪುರ …

Read More »

ಇಂದಿನಿಂದ ಧರ್ಮಸ್ಥಳಕ್ಕೆ ಹೊಸ ಪ್ಯಾಕೇಜ್ ಪರಿಚಯಿಸಿದ KSTDC

ಬೆಂಗಳೂರು: ಕರ್ನಾಟಕದಲ್ಲಿ ಅತೀ ಹೆಚ್ಚು ಶಿವ ಭಕ್ತರು ಭೇಟಿ ನೀಡುವ ದೇವಾಲಯ ಅಂದರೆ ಅದು ಧರ್ಮಸ್ಥಳ. ಬೆಂಗಳೂರು ಸೇರಿದಂತೆ ಪ್ರತಿನಿತ್ಯ ಸಾವಿರಾರು ಭಕ್ತರು ಧರ್ಮಸ್ಥಳ  ಮಂಜುನಾಥನ ದರ್ಶನಕ್ಕಾಗಿ ಹೋಗುತ್ತಾರೆ. ಜೊತೆಗೆ ಅಲ್ಲಿ ಗಂಟೆಗಟ್ಟಲೆ ಕ್ಯೂನಲ್ಲಿ ನಿಂತು ದರ್ಶನ ಮಾಡಿಕೊಂಡು ಬರುತ್ತಾರೆ. ಇದೀಗ ರಾಜಧಾನಿಯಿಂದ ಧರ್ಮಸ್ಥಳಕ್ಕೆ ತೆರಳುವ ಭಕ್ತಾದಿಗಳಿಗೆ ಕೆಎಸ್‌ಟಿಡಿಸಿ ಗುಡ್ ನ್ಯೂಸ್ ನೀಡಿದೆ. ಇನ್ಮುಂದೆ ರಾಜಧಾನಿಗರು ಶೀಘ್ರದಲ್ಲೇ ಮಂಜುನಾಥನ ದರ್ಶನ ಮಾಡಬಹುದಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಕೇವಲ ಧಾರ್ಮಿಕ ಸ್ಥಳ …

Read More »

ರೈತರ ವಿರೋಧದ ನಡುವೆಯೂ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ: ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ಹೆಚ್‌ಡಿಕೆ ಆಕ್ರೋಶ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿರುವುದನ್ನು ಖಂಡಿಸಿದ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ರೈತರ ವಿರೋಧದ ನಡುವೆಯೂ ಭೂಸ್ವಾಧೀನಕ್ಕೆ ಮುಂದಾಗಿರುವ ಸರ್ಕಾರದ ವಿರುದ್ಧ ಕಿಡಿಕಾರಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಅಂತಿಮ ಅಧಿಸೂಚನೆ ಹೊರಡಿಸಿದೆ. ಬಹಳ ದಿನಗಳಿಂದ ಅಲ್ಲಿನ ರೈತರು ಪ್ರತಿಭಟನೆ ಮಾಡುತ್ತಲೇ ಇದ್ದಾರೆ. ಅಲ್ಲಿ ಯಶಸ್ವಿಯಾಗಿ ಕೃಷಿ, ತೋಟಗಾರಿಕೆ ಕೆಲಸ ನಡೆಯುತ್ತಿದೆ. ಆ ಭಾಗದ ರೈತರಿಂದ ಹಾಲು ಉತ್ಪಾದನೆ ಹೆಚ್ಚಾಗಿದೆ. ಆ ಸ್ಥಳದಲ್ಲಿ …

Read More »

ಮಗನ ನೆನೆದು ವೇದಿಕೆಯಲ್ಲೇ ಬಿಕ್ಕಿ ಬಿಕ್ಕಿ ಅತ್ತ ಜಿಟಿ ದೇವೇಗೌಡ

ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ ದೇವೇಗೌಡ  ಮಗನನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಮೈಸೂರಿನ  ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಶಾಸಕ ಜಿ.ಟಿ ದೇವೇಗೌಡ ಪತ್ನಿ ಲಲಿತಾ ಜಿ.ಟಿ ದೇವೇಗೌಡ ಅವರಿಗೆ ʻಸಹಕಾರ ಸೇವಾ ರತ್ನ’ ಪ್ರಶಸ್ತಿ ನೀಡಿದ್ದ ಬೆನ್ನಲ್ಲೇ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ ಭಾಷಣಕ್ಕೆ ನಿಂತ ಕೂಡಲೇ ಶಾಸಕ ಜಿ.ಟಿ ದೇವೇಗೌಡರು ಗಳಗಳನೆ ಅತ್ತರು. ಕಾರ್ಯಕ್ರಮದಲ್ಲಿ ಪುತ್ರ ಶಾಸಕ ಹರೀಶ್ ಗೌಡ …

Read More »

ಶಿಕ್ಷಕನ ಋಣ ತೀರಿಸಿದ ಶಿಷ್ಯ: ಶುಲ್ಕ ಕಟ್ಟಿದ ಗುರುವಿಗೆ ನಿವೃತ್ತಿ ದಿನವೇ ಕಾರು ಉಡುಗೊರೆ

ಹುಬ್ಬಳ್ಳಿ: ಬಾಲ್ಯದಲ್ಲಿ ಶಾಲಾ ಶುಲ್ಕ ಪಾವತಿಸಿ ಶಿಕ್ಷಣ ಮುಂದುವರಿಸಲು ನೆರವಾಗಿದ್ದ ಶಿಕ್ಷಕರಿಗೆ ಹಳೆಯ ವಿದ್ಯಾರ್ಥಿಯೊಬ್ಬ ಹೊಸ ಕಾರನ್ನು ಉಡುಗೊರೆಯಾಗಿ ನೀಡಿರುವ ಭಾವನಾತ್ಮಕ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗುರು-ಶಿಷ್ಯರ ಬಾಂಧವ್ಯಕ್ಕೆ ಹೊಸ ಅರ್ಥ ನೀಡುವ ಈ ಘಟನೆ ಹಾವೇರಿ ಜಿಲ್ಲೆಯ ಹಾನಗಲ್‌ನ ಕುಮಾರೇಶ್ವರ ಪ್ರೌಢಶಾಲೆಯಲ್ಲಿ ನಡೆದಿದೆ. ನಿವೃತ್ತ ಶಿಕ್ಷಕ ಸಿ.ಎಸ್. ವಸ್ತ್ರದ್ ಅವರಿಗೆ ಅವರ ಹಳೆಯ ವಿದ್ಯಾರ್ಥಿ ನವೀನ್ ಹುಲಿಹಳ್ಳಿ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. 2007ರ ಎಸ್‌ಎಸ್‌ಎಲ್‌ಸಿ …

Read More »

ಪರಪ್ಪನ ಅಗ್ರಹಾರ ಜೈಲಿನಿಂದ ಆಸ್ಪತ್ರೆಗೆ ಸಾಗಿಸುವಾಗ ಶಂಕಿತ ಉಗ್ರ ಸಾವು

ಬೆಂಗಳೂರು:ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ 2008ರ ಸರಣಿ ಬಾಂಬ್ ಸ್ಫೋಟ ಪ್ರಕರಣದ  ಶಂಕಿತ ಉಗ್ರ ಅಬ್ದುಲ್ ಖಾದರ್ (60) ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಮೂಲತಃ ಕೊಡಗು ಜಿಲ್ಲೆಯ ವಿರಾಜಪೇಟೆಯವನಾದ ಅಬ್ದುಲ್ ಖಾದರ್ 2008ರಲ್ಲಿ ಬೆಂಗಳೂರಿನ ಮಡಿವಾಳ ಸೇರಿದಂತೆ ವಿವಿಧೆಡೆ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳದಿಂದ  ಬಂಧಿತನಾಗಿದ್ದನು. 2010ರಿಂದ ಈತ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ವಿಚಾರಣೆ ಎದುರಿಸುತ್ತಿದ್ದನು. ಇಂದು ಜೈಲಿನಲ್ಲಿದ್ದ …

Read More »

ಭಾರತದ ಹಡಗು ಮೇಲೆ ದಾಳಿ ನಡೆಸಿದ್ದು ಯಾರು? – ಇರಾನ್‌ ವಿರುದ್ಧ ಟ್ರಂಪ್‌ ಕೆಂಡಾಮಂಡಲ

ವಾಷಿಂಗ್ಟನ್‌: ಹಾರ್ಮುಜ್‌ ಜಲಸಂಧಿಯಿಂದ ದಾಟಿದ್ದ ಭಾರತೀಯ ಹಡಗುಗಳ ಮೇಲೆ ದಾಳಿ ನಡೆಸಿದ್ದು ಯಾರು ಎಂಬ ಪ್ರಶ್ನೆ ಈಗ ಎದ್ದಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌  ಮಾಡಿರುವ ಪೋಸ್ಟ್‌ನಿಂದ ಈ ಪ್ರಶ್ನೆ ಈಗ ಹುಟ್ಟಿಕೊಂಡಿದೆ. ಇರಾನ್ ನಡೆಸಿದ ಡ್ರೋನ್ ದಾಳಿಯನ್ನು ಟ್ರಂಪ್ ತೀವ್ರವಾಗಿ ಖಂಡಿಸಿದ್ದು ಈ ದಾಳಿಯನ್ನು ಖಂಡಿತವಾಗಿಯೂ ಒಪ್ಪಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಹೋರ್ಮುಜ್ ಜಲಸಂಧಿಯಿಂದ ಹೊರಡುತ್ತಿದ್ದ ಭಾರತೀಯ ಹಡಗುಗಳ ಮೇಲೆ ಇರಾನ್ ನಿನ್ನೆ ರಾತ್ರಿ ನಡೆಸಿದ ಡ್ರೋನ್ …

Read More »

ಕರ್ತವ್ಯ ಲೋಪದ ಹಿನ್ನೆಲೆ ಅಮಾನತು – ಜೈಲರ್ ಆತ್ಮಹತ್ಯೆ

ಧಾರವಾಡ: ಇಲ್ಲಿನ ಕೇಂದ್ರ ಕಾರಾಗೃಹದ ಜೈಲರ್‌  ಸಿದ್ದರಾಮಪ್ಪ ವಡ್ಡರ (37) ಅವರು ತಮ್ಮ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಅವರನ್ನು ಅಮಾನತ್ತು ಮಾಡಿ, ಆಡಳಿತಾತ್ಮಕ ಕಾರಣದಿಂದ ಮೈಸೂರಿಗೆ ವರ್ಗಾವಣೆ ಮಾಡಲಾಗಿತ್ತು. ವರ್ಗಾವಣೆ ಮಾಡಿದರೂ ಅವರು ಮಾತ್ರ ಮೈಸೂರು ಕಾರಾಗೃಹಕ್ಕೆ ಹೋಗಿ ರಿಪೋರ್ಟ್ ಮಾಡಿಕೊಂಡಿರಲಿಲ್ಲ. ಮಾನಸಿಕವಾಗಿ ಜರ್ಜರಿತರಾಗಿದ್ದ ಸಿದ್ದರಾಮಪ್ಪ ಅವರು ಧಾರವಾಡದ ಹೊಸ ಬಸ್ ನಿಲ್ದಾಣದ ಬಳಿಯ ವಸತಿಗೃಹದಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ …

Read More »