ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ, ಮುಂದಿನ ಎರಡು ವರ್ಷಗಳ ಕಾಲ ಮಾತ್ರವಲ್ಲ, ಮುಂದಿನ ಚುನಾವಣೆಯಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರಲಿದ್ದೇವೆ, ಅದರ ನಂತರವೂ ಅದು ಮುಂದುವರಿಯಲಿದೆ. ಯೋಜನೆಗಳ ಅನುಷ್ಠಾನದಲ್ಲಿ ಕಂಡು ಬರುವ ದೋಷಗಳನ್ನು ಸರಿಪಡಿಸುವ ಕೆಲಸ ಪ್ರಾರಂಭದಿಂದಲೇ ನಡೆಯುತ್ತಾ ಬಂದಿದೆ, ಈಗಲೂ ಮುಂದುವರೆದಿದೆ. ಈ ಯೋಜನೆಗಳ ಫಲಾನುಭವಿಗಳು ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಟ್ಟು ಆತಂಕಕ್ಕೆ ಈಡಾಗಬೇಕಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಿಜೆಪಿ ಮೂಲತ: ಬಡವರ …
Read More »Daily Archives: ಜೂನ್ 16, 2026
ಹೆಲ್ಮೆಟ್ ರಹಿತರಿಗೆ ಪೆಟ್ರೋಲ್ ಇಲ್ಲ ಅಭಿಯಾನ
ಬೆಳಗಾವಿ: ಹೆಲ್ಮೆಟ್ ರಹಿತ ಬೈಕ್ ಚಾಲನೆ ಹೆಚ್ಚಾಗುತ್ತಿರುವುದರಿಂದ ಜೂ.15ರಿಂದ 21ರವರೆಗೆ ನಗರ ಪೊಲೀಸ್ ಕಮೀಷ್ನರೇಟ್ ಹಾಗೂ ನಗರ ಸಂಚಾರ ಪೊಲೀಸರಿಂದ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಹೆಲ್ಮೆಟ್ ರಹಿತರಿಗೆ ಪೆಟ್ರೋಲ್ ಇಲ್ಲ ಎಂಬ ಕಾರ್ಯಕ್ರಮಕ್ಕೆ ಮುಂದಾಗಿದ್ದಾರೆ. ಸೋಮವಾರ ಬೆಳಗ್ಗೆ 11ಕ್ಕೆ ಹೆಲ್ಮೆಟ್ ಜಾಗೃತಿ ಅಭಿಯಾನಕ್ಕೆ ರಾಣಿ ಚನ್ನಮ್ಮ ವೃತ್ತದಲ್ಲಿ ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಸಂದೀಪ ಪಾಟೀಲ ಚಾಲನೆ ನೀಡುವರು. ಜಿಪಂ ಸಿಇಒ ರಾಹುಲ ಶಿಂಧೆ, ಎಸ್ಪಿ ಕೆ.ರಾಮರಾಜನ್, ನಗರ …
Read More »ಸಚಿವ ಸತೀಶ ಜಾರಕಿಹೊಳಿಗೆ ಅವಹೇಳನಕಾರಿ ಸಹಿಸಲ್ಲ
ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಜ್ಯಾತ್ಯಾತೀಯ ನಾಯಕನಾಗಿ ರಾಷ್ಟ್ರ ಮಟ್ಟದಲ್ಲಿ ಬೆಳೆದಿರುವ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಯನ್ನು ತುಳಿಯುವ, ಅವಹೇಳನಕಾರಿ ಕೃತ್ಯಗಳನ್ನು ಸಹಿಸುವುದಿಲ್ಲ ಎಂದು ದಲಿತ, ಲಿಂಗಾಯತ, ಅಹಿಂದ ವರ್ಗದ ಮುಖಂಡರು ಎಚ್ಚರಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರೆದಿದ್ದ ಎಲ್ಲ ಸಮುದಾಯ, ವಿವಿಧ ಸಂಘಟನೆ ಮುಖಂಡರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಲ್ಲೇಶ ಚೌಗುಲೆ, ಮಹಾವೀರ ಮೋಹಿತೆ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕಿ ಸುನೀತಾ ಐಹೊಳೆ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಸಚಿವ …
Read More »ಮಾಜಿ ಸೈನಿಕನ ಕೊಲೆ ರಹಸ್ಯ ಬಯಲು!
ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಮಾಜಿ ಸೈನಿಕ ಸಂದೀಪ್ ಮಂಜರಗಿ (46) ಕೊಲೆ ಪ್ರಕರಣ ರಹಸ್ಯ ಬಯಲಾಗಿದ್ದು, ಪತ್ನಿ, ಆರ್‌ಎಫ್‌ಎಸ್‌ಎಲ್ ಅಧಿಕಾರಿ, ಯ್ಯೂಟೂಬರ್ ಸೇರಿ 9ಜನರನ್ನು ಬಂಧಿಸಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ಅಕ್ರಮ ಸಂಬಂಧ, 2 ಕೋಟಿ ರೂ. ವಿಮೆಗಾಗಿ ನಡೆದಿರುವ ಮಾಜಿ ಸೈನಿಕ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೊಂದು ಪೂರ್ವನಿಯೋಜಿತ ಕೊಲೆ ಎಂಬುದು ಮೃತ ಸೈನಿಕನ …
Read More »ಅಮೆರಿಕಾ ಇರಾನ್ ಯುದ್ಧ ನಿಂತಲ್ಲಿ ವಿಮಾನಯಾನಕ್ಕೆ ವೇಗ
ಬೆಳಗಾವಿ : ಅಮೆರಿಕಾ-ಇರಾನ್ ಒಂದು ಒಪ್ಪಂದಕೆ ಬರುವ ಲಕ್ಷಣಗಳು ಗೋಚರಿಸಿವೆ. ಇನ್ನೆರಡು ದಿನದಲ್ಲಿ ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಬಹುದು. ಇದರಿಂದ ದೇಶದೊಳಗೆ ಕಡಿತಗೊಂಡಿದ್ದ ಎಲ್ಲ ವಿಮಾನಯಾನ ಸೇವೆಗಳಿಗೆ ಪುನಃ ವೇಗ ಸಿಗಲಿದೆ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಆಯೋಜಿಸಿದ್ದ ಯಾತ್ರಿ ಸುವಿಧಾ ದಿನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಲ್ಲಿಂದ ದೇಶದ ಪ್ರಮುಖ ನಗರಗಳಿಗೆ ವಿಮಾನ ಸೇವೆ ನೀಡಲು ಅನೇಕ ಕಂಪನಿಗಳನ್ನು ಕೇಳಿಕೊಂಡಿದ್ದೇವು. ಕೆಲವರು ಒಪ್ಪಿಗೆ …
Read More »ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿ ಸಮುದ್ರಪಾಲು
ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಸಮುದ್ರ ತೀರದಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಐಟಿ ಕಂಪನಿಯ ಉದ್ಯೋಗಿ ಜೀವನ್ ಭಟ್ಟರಾಯಿ (26) ರೀಲ್ಸ್ ಮಾಡಲು ಹೋಗಿ ಸಮುದ್ರದಲ್ಲಿ ಕಾಣೆಯಾಗಿದ್ದಾರೆ. ಐದು ಜನ ಸ್ನೇಹಿತರೊಂದಿಗೆ ಕುಮಟಾ ಭಾಗಕ್ಕೆ ಪ್ರವಾಸ ಬಂದಿದ್ದ ಯುವಕ ಖಾಸಗಿ ರೆಸಾರ್ಟ್ನಲ್ಲಿ ಮೂರು ದಿನದಿಂದ ತಂಗಿದ್ದರು. ಇಂದು ಚಕ್ ಔಟ್ ಮಾಡಬೇಕಿದ್ದ ಯುವಕ ಸ್ಬೇಹಿತರ …
Read More »ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸಾವು, ಐವರಿಗೆ ಗಾಯ
ರಾಯಚೂರು: ರಸ್ತೆಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಉಪನ್ಯಾಸಕ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಗಡಿ ತೆಲಂಗಾಣದ ಗುಡೆಬಲ್ಲೂರು ಗ್ರಾಮದ ಬಳಿ ನಡೆದಿದೆ. ಟೈಯರ್ ರೋಡ್‌ನಲ್ಲಿ ಅಪಘಾತ ಸಂಭವಿಸಿದ್ದು, ರಾಯಚೂರಿನ ನಿವೃತ್ತ ಉಪನ್ಯಾಸಕ ಶೇಖರಪ್ಪ ಗೌಡ (70) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಯಾದಗಿರಿಯಲ್ಲಿನ ಮನೆ ದೇವರು ಕಾಳಬೆಳಗುಂದಿ ಬನದೇಶ್ವರ ದೇವಾಲಯಕ್ಕೆ ತೆರಳಿದ್ದ ಕುಟುಂಬ ವಾಪಸ್ ರಾಯಚೂರಿಗೆ ಮರಳುವಾಗ ಅಪಘಾತ ನಡೆದಿದೆ. ಅಪಘಾತದಲ್ಲಿ ಶೇಖರಪ್ಪ …
Read More »ಪೆಟ್ರೋಲ್ ಬಂಕ್‌ಗೆ ರೈತರ ಮುತ್ತಿಗೆ – ಹೆದ್ದಾರಿ ತಡೆದು ಪ್ರತಿಭಟನೆ
ಚಿಕ್ಕಬಳ್ಳಾಪುರ: ಪ್ಲಾಸ್ಟಿಕ್ ಕ್ಯಾನ್‌ಗಳಿಗೆ ಪೆಟ್ರೋಲ್ ಹಾಗೂ ಡೀಸೆಲ್ ನೀಡದ ಹಿನ್ನೆಲೆಯಲ್ಲಿ ರೈತರು ಪೆಟ್ರೋಲ್ ಬಂಕ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಗರದ ಜಿಲ್ಲಾಡಳಿತ ಭವನದ ಸಮೀಪದ ಭಾರತ್ ಪೆಟ್ರೋಲಿಯಂ ಬಂಕ್ ಎದುರು ರೈತರು ಆಕ್ರೋಶ ವ್ಯಕ್ತಪಡಿಸಿದರು. ರೈತರಿಗೆ ಇಂಧನ ನೀಡದಿದ್ದರೆ ಬೇರೆ ಯಾರಿಗೂ ನೀಡಬಾರದು ಎಂದು ಆಗ್ರಹಿಸಿದರು. ಟ್ರ್ಯಾಕ್ಟರ್ ಹಾಗೂ ಪವರ್ ಟಿಲ್ಲರ್‌ಗಳೊಂದಿಗೆ ಬಂಕ್‌ಗೆ ಬಂದ ರೈತರು ಬಂಕ್ ಮಾಲೀಕ ಸಂದೀಪ್ ಜೊತೆ ವಾಗ್ವಾದ ನಡೆಸಿದರು. …
Read More »ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಸಜೀವ ದಹನ, 7 ಮಂದಿಗೆ ಗಾಯ
ಮೈಸೂರು: ಮೈಸೂರಿನ ರಿಂಗ್ ರಸ್ತೆಯ ಸಮೀಪದ ಫಾಕ್ಸ್ ಜೆನ್ ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ದಟ್ಟಗಳ್ಳಿ 4ನೇ ಹಂತದ ಬಳಿ ಇರುವ ಪಬ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ ಪಬ್ ಸಂಪೂರ್ಣ ಸುಟ್ಟು ಹೋಗಿದೆ. ಅವಘಡದಲ್ಲಿ ಸಾಹೀನ್ ಮತ್ತು ಪ್ರಕಾಶ್ ಎಂಬ ಇಬ್ಬರು ಸಜೀವ ದಹನಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. …
Read More »ಅಕ್ರಮವಾಗಿ ಸಂಗ್ರಹಿಸಿದ್ದ ಗ್ಯಾಸ್ ಸಿಲಿಂಡರ್‌ಗಳ ಗೋದಾಮಿನಲ್ಲಿ ಸ್ಫೋಟ – ಮಾಲೀಕನಿಗೆ ಗಂಭೀರ ಗಾಯ
ದಾವಣಗೆರೆ: ಅಡಿಕೆ ತೋಟದ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡ ಘಟನೆ ದಾವಣಗೆರೆಯಲ್ಲಿಡೆದಿದೆ. ನಗರದ ರಾಷ್ಟ್ರೀಯ ಹೆದ್ದಾರಿ-48ರ ಸಮೀಪದ ಕೆ. ಕಲ್ಪನಹಳ್ಳಿ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಅನಿಲ್ (40) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಕುಮಾರ್ ಅವರಿಗೆ ಸೇರಿದ ಗೋದಾಮನ್ನು ಅನಿಲ್ ಗುತ್ತಿಗೆ ಪಡೆದಿದ್ದ. ಗೋದಾಮಿನಲ್ಲಿ ಸಂಗ್ರಹಿಸಿದ್ದ ಗ್ಯಾಸ್ ಸಿಲಿಂಡರ್‌ಗಳಲ್ಲಿ ಅನಿಲ ಸೋರಿಕೆ ಸಂಭವಿಸಿ ಏಕಾಏಕಿ ಸ್ಫೋಟ ಉಂಟಾಗಿದೆ …
Read More »
Laxmi News 24×7