Breaking News

Daily Archives: ಜೂನ್ 16, 2026

ಸಿಇಟಿ ಪರಿಶೀಲನಾ ಚೀಟಿ ಡೌನ್‌ಲೋಡ್ ಆಗದಿದ್ದರೆ ಜೂ.19ರೊಳಗೆ ಬೋರ್ಡ್‌ಗೆ ಭೇಟಿ ನೀಡಿ: ಕೆಇಎ

ಬೆಂಗಳೂರು: ತಮ್ಮ ಕ್ಲೇಮ್ ಹಾಗೂ ವಿವಿಧ ಕೋರ್ಸ್‌ಗಳ ರ‍್ಯಾಂಕ್ ಮಾಹಿತಿ ಒಳಗೊಂಡಿರುವ ಪರಿಶೀಲನಾ ಚೀಟಿ ಡೌನ್‌ಲೋಡ್ ಆಗದವರು ಜೂನ್ 19ರೊಳಗೆ ಸಮಯ ನಿಗದಿ ಮಾಡಿಕೊಂಡು ಕೆಇಎ ಕಚೇರಿಗೆ ಖುದ್ದು ಭೇಟಿ ನೀಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಆಪ್ಷನ್ಸ್ ದಾಖಲಿಸುವ ಮುನ್ನ ಪರಿಶೀಲನಾ ಚೀಟಿ ಹೊಂದುವುದು ಕಡ್ಡಾಯ. ಕೆಲವರಿಗೆ ಪಿಯುಸಿ ಅಂಕ ನಮೂದಿಸದೆ ಇರುವುದು, ಇನ್ನೂ ಕೆಲವರು ವ್ಯಾಸಂಗದ ದಾಖಲೆಗಳನ್ನು ಪರಿಶೀಲನೆ …

Read More »

ಸತ್ಯ ಕೊನೆಗೂ ಹೊರಗೆ ಬಂದಿದೆ – ಗ್ಯಾರಂಟಿ ಪರಿಷ್ಕರಣೆಗೆ ನಿಖಿಲ್ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಗ್ಯಾರಂಟಿ ಯೋಜನೆ ಪರಿಷ್ಕರಣೆಗೆ ಮುಂದಾಗಿರೋ ಸರ್ಕಾರದ ಕ್ರಮಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ನಿಖಿಲ್, ಸತ್ಯ ಕೊನೆಗೂ ಹೊರಗೆ ಬಂದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸತ್ಯ ಕೊನೆಗೂ ಹೊರಬಂದಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಿಗೆ ಸಂಪೂರ್ಣವಾಗಿ ಮರುಅರ್ಜಿ ಸಲ್ಲಿಸಲು ಸಿಎಂ ಡಿಕೆ ಶಿವಕುಮಾರ್ ಅವರು ನೀಡಿರುವ ಆದೇಶ, ಕಳೆದ 3 ವರ್ಷಗಳ ಸಿದ್ದರಾಮಯ್ಯ ಅವರ ನೇತೃತ್ವದ ಆಡಳಿತದ …

Read More »

‘ಶಕ್ತಿ’ ಸ್ಮಾರ್ಟ್ ಕಾರ್ಡ್‌ಗೆ ಅಂತಿಮ ಸಿದ್ಧತೆ: ಬೈರತಿ ಸುರೇಶ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣೆ ಬಗ್ಗೆ ಅಂತಿಮ ರೂಪುರೇಶೆ ಸಿದ್ಧಪಡಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್  ತಿಳಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸಾರಿಗೆ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸುಮಾರು 2 ಕೋಟಿಗೂ ಅಧಿಕ ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ವಿತರಿಸುವ ಸಾಧ್ಯತೆಗಳಿವೆ. ಈ ಸ್ಮಾರ್ಟ್ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ ವಿಶೇಷ ಉದ್ದೇಶಿತ ವಾಹನವನ್ನು ರಚನೆ ಮಾಡಿ, ಇದರಡಿಯೇ ವಿತರಣಾ …

Read More »

10 ದಿನದಲ್ಲೇ ಕುಸಿದ 33 ಕೋಟಿ ವೆಚ್ಚದ ಕಾಮಗಾರಿ – ಪ್ರಶ್ನಿಸಿದ್ದಕ್ಕೆ ಸ್ಥಳೀಯರ ವಿರುದ್ಧ ಅಶ್ಲೀಲ ಪದ ಬಳಸಿ ತುಕಾರಾಂ ನಿಂದನೆ

ಬಳ್ಳಾರಿ: ನಿರ್ಮಾಣಗೊಂಡ ಕೇವಲ ಹತ್ತೇ ದಿನಗಳಲ್ಲಿ ಸರ್ವಿಸ್ ರಸ್ತೆ ಕುಸಿದ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಬಳ್ಳಾರಿ  ಲೋಕಸಭಾ ಕ್ಷೇತ್ರದ ಸಂಸದ ಇ. ತುಕಾರಾಂ ಅವರು ಸ್ಥಳೀಯ ನಿವಾಸಿಗಳ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಡಣಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರ ಮೇಲ್ಸೆತುವೆ ಮತ್ತು ಸರ್ವಿಸ್ ರಸ್ತೆ ನಿರ್ಮಾಣದ …

Read More »

ಆರ್‌ಎಸ್‌ಎಸ್‌ ಆದಾಯದ ಮೂಲ ಯಾವುದು – 8 ಪ್ರಶ್ನೆ ಕೇಳಿ ಮೋಹನ್‌ ಭಾಗವತ್‌ಗೆ ಪ್ರಿಯಾಂಕ್‌ ಪ್ರಶ್ನೆ

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಯಶಸ್ವಿಯಾಗಿ 100 ವರ್ಷಗಳನ್ನು ಪೂರೈಸಿರುವುದ ಹಿನ್ನೆಲೆಯಲ್ಲಿ ಸಂಸ್ಥೆಯ ಸಾಂಸ್ಥಿಕ ಸ್ಥಾನಮಾನದ ಕುರಿತು ಕಾನೂನುಬದ್ಧ ಸ್ಪಷ್ಟನೆ ಕೋರಿ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಮುಖ್ಯಸ್ಥ ಮೋಹನ್ ಭಾಗವತ್‌ ಅವರಿಗೆ ಪತ್ರ ಬರೆದಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘವು (RSS) ತನ್ನ 100 ನೇ ವರ್ಷದ ಆಚರಣೆಯ ಹೊಸ್ತಿಲಿನಲ್ಲಿ ಇರುವುದಕ್ಕೆ ನಾನು ನನ್ನ ಪ್ರಾಮಾಣಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಒಂದು ಶತಮಾನದ ಕಾಲ ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದು …

Read More »

ಹೆಲ್ಮೆಟ್ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ಬೆಳಗಾವಿ ಪೊಲೀಸರು

ಬೆಳಗಾವಿ: ಬೆಳಗಾವಿ ನಗರ ಪೊಲೀಸರು ವಿನೂತನ ಕ್ರಮಕ್ಕೆ ಮುಂದಾಗಿದ್ದು, ಇವತ್ತಿನಿಂದ ಒಂದು ವಾರ ಕಾಲ ಹೆಲ್ಮೆಟ್ ಜಾಗೃತಿ ಅಭಿಯಾನವನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಲ್ಮೆಟ್ ಧರಿಸದೆ ಬೇಕಾಬಿಟ್ಟಿ ಬೈಕ್ ಚಲಾಯಿಸಿ ಸಾಕಷ್ಟು ಜನರು ಜೀವ ಕಳೆದುಕೊಳ್ಳುತ್ತಿದ್ದಾರೆ. ಸರ್ಕಾರ, ಜಿಲ್ಲಾಡಳಿತ, ಪೊಲೀಸರು ಅದೇಷ್ಟೇ ಜಾಗೃತಿ ಮೂಡಿಸಿದರೂ ಸವಾರರು ಮಾತ್ರ ಬದಲಾಗುತ್ತಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ ಅವರು, ಯಾರು ಹೆಲ್ಮೆಟ್ ಹಾಕದೇ ಬರುತ್ತಾರೋ, ಅಂತವರ ಬೈಕ್ …

Read More »

2 ಕೋಟಿ ವಿಮಾ ಹಣಕ್ಕಾಗಿ ಪತಿ ಹತ್ಯೆ: 9 ಆರೋಪಿಗಳ ಬಂಧನ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಘಟಪ್ರಭಾ ಮತ್ತು ಯಮಕನಮರ್ಡಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಸಂಚಲನ ಮೂಡಿಸಿದ ಕೊಲೆ ಪ್ರಕರಣವೊಂದನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿ, ಈ ಸಂಬಂಧ ಒಟ್ಟು 9 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮೃತ ಸಂದೀಪ ಕಲಗೌಡ ಮಂಜರಗಿ (46) ಅವರು ನಿವೃತ್ತ ಸೈನಿಕರಾಗಿದ್ದರು. ಅವರ ಹೆಸರಿನಲ್ಲಿ ಎಚ್‌ಡಿಎಫ್‌ಸಿ (HDFC) ಮತ್ತು ಎಸ್‌ಬಿಐ (SBI) ಬ್ಯಾಂಕ್‌ಗಳಲ್ಲಿ ವಿಮೆ ಮಾಡಿಸಲಾಗಿತ್ತು. ರಸ್ತೆ ಅಪಘಾತದಲ್ಲಿ ಮರಣ ಹೊಂದಿದರೆ ಸುಮಾರು 2 ಕೋಟಿ ರೂ. …

Read More »

ಹಿರಿಯ ನಾಗರಿಕರೊಂದಿಗೆ ಸೌಜನ್ಯತೆಯಿಂದ ನಡೆದುಕೊಳ್ಳಿ: ನ್ಯಾ.ಕೆ.ಎನ್ ಶಿವಕುಮಾರ

ಬೆಳಗಾವಿ: ಹಿರಿಯ ನಾಗರಿಕರೊಂದಿಗೆ ಸೌಜನ್ಯತೆಯಿಂದ ವರ್ತಿಸುವುದರ ಜೊತೆಗೆ ಅವರಲ್ಲಿನ ಅನುಭವಗಳನ್ನು ಇಂದಿನ ಯುವ ಜನತೆ ಅನುಸರಿಸರಿಸಿದಲ್ಲಿ ಜೀವನದಲ್ಲಿ ಸಾಧನೆಗೈಯಲು ಅನುಕೂಲವಾಗುವುದು ಎಂದು ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿಗಳಾದ ಕೆ.ಎನ್.ಶಿವಕುಮಾರ ಅವರು ಹೇಳಿದರು. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಜೂನ್ 15( ಸೋಮ ವಾರ) ಜರುಗಿದ ವಿಶ್ವ ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆ ಜಾಗೃತಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದ. ಬದಲಾಗುತ್ತಿರುವ ಇಂದಿನ ಆಧುನಿಕ ಜೀವನ ಶೈಲಿಯಲ್ಲಿ …

Read More »

ಬೆಳಗಾವಿ ವಿಮಾನ ನಿಲ್ದಾಣದಲ್ಲಿ “ಕಲಾ ನಡಿಗೆ ನಿಮ್ಮ ಬಳಿಗೆ” ಕಾರ್ಯಕ್ರಮ ಯಶಸ್ವಿ

ಬೆಳಗಾವಿ: ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಾರತೀಯ ವಿಮಾನ ನಿಲ್ದಾಣ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ “ಕಲಾ ನಡಿಗೆ ನಿಮ್ಮ ಬಳಿಗೆ” ಕಾರ್ಯಕ್ರಮವು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಭಾರತೀಯ ವಿಮಾನ ನಿಲ್ದಾಣ, ಬೆಳಗಾವಿಯ ನಿರ್ದೇಶಕರಾದ ಎಸ್. ತ್ಯಾಗರಾಜನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕಲಾವಿದರ ಅತ್ಯುತ್ತಮ ಪ್ರದರ್ಶನವನ್ನು ಮೆಚ್ಚಿ, ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ನಮ್ಮ ಪರಂಪರೆ ಮತ್ತು ಕಲೆಯನ್ನು ಜನಸಾಮಾನ್ಯರಿಗೆ ಪರಿಚಯಿಸುವಲ್ಲಿ …

Read More »