ಮಂಡ್ಯ: ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಆರಂಭದಲ್ಲೇ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದೆ. ಇದರ ಬೆನ್ನಲ್ಲೇ ಬರದ ಆತಂಕದಲ್ಲಿರೋ ಮಂಡ್ಯ ಜಿಲ್ಲೆಯ ರೈತರಿಗೆ ಜಿಲ್ಲಾಡಳಿತ ಮತ್ತೊಂದು ಬಿಗ್ ಶಾಕ್ ನೀಡಿದೆ. ಕೃಷ್ಣರಾಜಸಾಗರ ಜಲಾಶಯ ನಾಡಿಗೆ ನೀರುಣಿಸುವ ಡ್ಯಾಂ. ಮಂಡ್ಯ, ಮೈಸೂರು ಕೊಡಗು ಭಾಗದ ರೈತರನ್ನು ಕಾಪಾಡುವ ಜೀವನದಿ. ಬೆಂಗಳೂರಿಗರು ಕುಡಿಯುವ ಹನಿ ಹನಿ ನೀರು ಕೂಡ ಇದೇ ಡ್ಯಾಂನಿಂದ ಬರೋದು. ಜೀವನದಿ ಎಂಬ ಕಾವೇರಿ ಈಗ ಜೀವಕಳೆ ಕಳೆದುಕೊಂಡಿದ್ದಾಳೆ. …
Read More »Daily Archives: ಜೂನ್ 17, 2026
ಮಳೆ ಇಲ್ಲದೆ ಬರಿದಾದ ಹೇಮಾವತಿ ಒಡಲು
ಹಾಸನ: ಮಲೆನಾಡಿನ ಮಡಿಲು ಹಾಸನ ಜಿಲ್ಲೆಯಲ್ಲಿಯೇ ಈ ಬಾರಿ ಮಳೆಯ ಕೊರತೆ ಆಗಿದ್ದು, ಐದಾರು ಜಿಲ್ಲೆಗಳಿಗೆ ನೀರು ಒದಗಿಸುವ ಹೇಮಾವತಿ ಒಡಲು ಬರಿದಾಗುತ್ತಿದೆ. ಹೀಗಾಗಿ ಇದೇ ನೀರನ್ನು ನಂಬಿ ಬದುಕುತ್ತಿರುವವರಲ್ಲಿ ಆತಂಕ ಹೆಚ್ಚಿದ್ದು, ಮಳೆ ಬಂದರೆ ಸಾಕಪ್ಪ ಎನ್ನುವಂತಾಗಿದೆ. ಜಿಲ್ಲೆಯ ಸಕಲೇಶಫುರ ಬೇಲೂರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಭಾಗದಲ್ಲಿ ಮಳೆ ಸುರಿದರೆ ತುಂಬಿ ಹರಿಯುತ್ತಿದ್ದ ಹೇಮಾವತಿ ನದಿ, ಜಲಾಶಯಕ್ಕೆ ನೀರು ತುಂಬಿಸುತ್ತಿತ್ತು. ಆದರೆ ಈ ವರ್ಷ ಮುಂಗಾರು ಮಳೆಯ ತೀವ್ರ ಕೊರತೆ ಬರದ …
Read More »ಗದಗದ ನರೇಗಲ್ ಪಟ್ಟಣದಲ್ಲಿ ಇದ್ದೂ ಇಲ್ಲದಂತಾದ ಸರ್ಕಾರಿ ಆಸ್ಪತ್ರೆ: ರೋಗಿಗಳಿಗೆ ತಪ್ಪದ ಪರದಾಟ
ಗದಗ: ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಆಸ್ಪತ್ರೆ ನಿರ್ಮಿಸಲಾಗಿದ್ದರೂ ವೈದ್ಯರು ಮತ್ತು ಸಿಬ್ಬಂದಿ ಕೊರತೆಯ ಕಾರಣ ರೋಗಿಗಳು ಪರದಾಟ ನಡೆಸುತ್ತಿರುವ ಸ್ಥಿತಿ ಗದಗ ಜಿಲ್ಲೆಯ ನರೇಗಲ್ ಪಟ್ಟಣದಲ್ಲಿ ಕಂಡುಬಂದಿದೆ. ಕೇಂದ್ರ ಸರ್ಕಾರ ಎನ್ಎಚ್ಎಂ ಯೋಜನೆಯಲ್ಲಿ 2 ಕೋಟಿಗೂ ಅಧಿಕ ಮೊತ್ತದಲ್ಲಿ ಹೈಟೆಕ್ ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡಲಾಗಿದೆ. ಆ ಮೂಲಕ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಭಡ್ತಿ ಪಡೆದಿದೆಯಾದರೂ, ವೈದ್ಯರ ಕೊರತೆಯಿಂದ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಮಾತ್ರ ಮರಿಚೀಕೆಯಾಗಿಯೇ …
Read More »RSS ನೋಂದಣಿ ಬಗ್ಗೆ ಪ್ರಶ್ನಿಸಿದ್ದ ಪ್ರಿಯಾಂಕ್ ಖರ್ಗೆಗೆ ಬಹಿರಂಗ ಪತ್ರ ಬರೆದ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ನೋಂದಣಿಯ ಬಗ್ಗೆ ಪ್ರಶ್ನೆ ಮಾಡುತ್ತಲೇ ಬಂದಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಈ ಸಂಬಂಧ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಬಹಿರಂಗ ಪತ್ರವೊಂದನ್ನು ಬರೆದಿರೋದು ಚರ್ಚೆಗೆ ಗ್ರಾಸವಾಗಿತ್ತು. ಸಂಘಟನೆಯ ಕಾನೂನುಬದ್ಧ ಸ್ಥಾನಮಾನ ಮತ್ತು ಪಾರದರ್ಶಕತೆಯ ಬಗ್ಗೆ ಅವರು ಕೇಳಿದ್ದ ಪ್ರಶ್ನೆಗಳಿಗೆ ತಿರುಗೇಟು ನೀಡಿದ್ದ ಭಾಗವತ್, ಹಿಂದೂ ಧರ್ಮ ರಿಜಿಸ್ಟರ್ ಆಗಿದೆಯೇ? ಎಂದು ಪ್ರಶ್ನಿಸಿದ್ದರು. ಸರ್ಕಾರಿ ಅನುದಾನ ಪಡೆಯುವವರಿಗೆ ಮಾತ್ರ ನೋಂದಣಿ ಅಗತ್ಯವಿದೆ ಎಂದಿದ್ದರು. ಆ …
Read More »ಜಿಮ್ ಮುಗಿಸಿಕೊಂಡು ಮನೆಗೆ ಬಂದಿದ್ದೇ ತಡ ಕುಸಿದು ಬಿದ್ದು ಬಾಡಿ ಬಿಲ್ಡರ್ ಸಾವು
ದಾವಣಗೆರೆ: ಜಿಮ್ ಮುಗಿಸಿಕೊಂಡು ಮನೆಗೆ ಬಂದಿದ್ದೇ ತಡ ಕುಸಿದು ಬಿದ್ದು ಬಾಡಿ ಬಿಲ್ಡರ್ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ (Davanagere) ನಡೆದಿದೆ. ದಾವಣಗೆರೆಯ ಕೆಟಿಜೆ ನಗರದ ನಿವಾಸಿ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿ ಅಂತರರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಂಗ್ ಕಾಂಪಿಟೇಷನ್‌ಗೆ ರೆಡಿಯಾಗುತ್ತಿದ್ದ 26 ವರ್ಷದ ಸುಶೀಲ್ ಕುಮಾರ್ ಸಾವನ್ನಪ್ಪಿದ್ದಾರೆ. ರಾತ್ರಿ 8:30 ರ ಸುಮಾರಿಗೆ ಜಿಮ್ ಮುಗಿಸಿಕೊಂಡು ಮನೆಗೆ ಬಂದಿದ್ದ. ತಲೆ ಸುತ್ತುವುದಾಗಿ ಹೇಳಿ, ಕೆಲ ಕ್ಷಣದಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಕುಟುಂಬಸ್ಥರು …
Read More »ಬೆಳಗಾವಿ ಕೈಗಾರಿಕಾ ಪ್ರದೇಶದಲ್ಲಿ 59 ಗುಂಡುಗಳು ಪತ್ತೆ
ಬೆಳಗಾವಿ: ಬೆಳಗಾವಿ ನಗರದ ಕೈಗಾರಿಕಾ ಪ್ರದೇಶವಾದ ಉದ್ಯಮಬಾಗದಲ್ಲಿ ಪೌರಕಾರ್ಮಿಕರು ನಡೆಸುತ್ತಿದ್ದ ಕಸ ವಿಲೇವಾರಿ ಕಾರ್ಯದ ವೇಳೆ ಕಸದ ರಾಶಿಯಲ್ಲಿ 59 ಜೀವಂತ ಗುಂಡುಗಳು ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಶನಿವಾರ ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದೆ. ಪಾಲಿಕೆಯ ಪೌರಕಾರ್ಮಿಕರು ಎಂದಿನಂತೆ ಉದ್ಯಮಬಾಗದ ರಸ್ತೆಯ ಬದಿಯಲ್ಲಿ ಸಂಗ್ರಹವಾದ ಕಸವನ್ನು ವಿಂಗಡಿಸುತ್ತಿದ್ದಾಗ, ಈ ಜೀವಂತ ಗುಂಡುಗಳು ಪತ್ತೆಯಾಗಿವೆ. ಉದ್ಯಮಬಾಗ ಪೊಲೀಸರು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರುಮ ಸದ್ಯ ಘಟನಾ …
Read More »ಬೆಳಗಾವಿಯಲ್ಲಿ ಉರ್ದು ಶಾಲೆ ಶಿಕ್ಷಕನ ನೀಚ ಕೃತ್ಯ: ಧರ್ಮದೇಟು ನೀಡಿದ ಪಾಲಕರು
ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗ್ರಾಮ ಒಂದರ ಉರ್ದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಲೆಯಲ್ಲೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪದ ಮೇಲೆ ಧರ್ಮದೇಟು ನೀಡಲಾಗಿದೆ. ಧರ್ಮದೇಟು ತಿಂದ ಶಿಕ್ಷಕನ ಹೆಸರು ಶ್ರೀಶೈಲ ಕುಂಬಾರ. ಕಳೆದ 18 ವರ್ಷಗಳಿಂದ ಇದೇ ಉರ್ದು ಶಾಲೆಯಲ್ಲಿ ಕನ್ನಡ ಶಿಕ್ಷಕನಾಗಿ ಕೆಸಲ ಮಾಡುತ್ತಿದ್ದಾನೆ. 10 ನೇ ತರಗತಿಯಲ್ಲಿರುವ ವಿದ್ಯಾರ್ಥಿಗಳಿಗೆ ಈತ ನಿಮ್ಮನ್ನು 10ನೇ ತರಗತಿಯಲ್ಲಿ ಪಾಸ್ ಮಾಡಿಸುತ್ತೆನೆ ಎಂದು …
Read More »ಬೆಳಗಾವಿಯಲ್ಲಿ ಮೆಗಾ ರಕ್ತದಾನ ಶಿಬಿರ ಹಾಗೂ ಜಾಗೃತಿ ರ್ಯಾಲಿ ಆಯೋಜನೆ
ಬೆಳಗಾವಿ: ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ, ಎಸ್ಬಿಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಬೆಳಗಾವಿಯ ರೋಗನಿದಾನ ವಿಭಾಗ ಹಾಗೂ ಎನ್ಎಸ್ಎಸ್ ಘಟಕವು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ (DAPCU) ಬೆಳಗಾವಿ, ಕೆಎಸ್ಎಪಿಎಸ್ ಹಾಗೂ ಬೆಳಗಾವಿ ರಕ್ತ ಕೇಂದ್ರದ ಸಹಯೋಗದಲ್ಲಿ 2026ರ ಜೂನ್ 16ರಂದು ಎಸ್ಬಿಜಿ ಆಯುರ್ವೇದ ಆಸ್ಪತ್ರೆ, ಬೆಳಗಾವಿಯಲ್ಲಿ ಮೆಗಾ ರಕ್ತದಾನ ಶಿಬಿರ ಹಾಗೂ ಜಾಗೃತಿ ರ್ಯಾಲಿಯನ್ನು …
Read More »ನಿಪ್ಪಾಣಿಯಲ್ಲಿ ಮನೆಗಳ ಹಂಚಿಕೆ ಪಾರದರ್ಶಕವಾಗಿ ನಡೆಯಲಿದೆ: ಶಾಸಕಿ ಶಶಿಕಲಾ ಜೊಲ್ಲೆ
ಬೆಳಗಾವಿ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಬಡ, ನಿರಾಶ್ರಿತ ಮತ್ತು ಅಗತ್ಯವಿರುವ ನಾಗರಿಕರಿಗೆ ಸ್ವಂತ ಮನೆ ಒದಗಿಸಲು ನಾವು ಬದ್ಧರಾಗಿದ್ದು, ಯಾವುದೇ ಅರ್ಹ ಫಲಾನುಭವಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ‘ಪ್ರತಿಯೊಬ್ಬರಿಗೂ ಮನೆ’ ಎಂಬ ಕನಸನ್ನು ನನಸು ಮಾಡಲು ನಿಪ್ಪಾಣಿ ಕ್ಷೇತ್ರದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದು ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ಅವರು ತಿಳಿಸಿದರು. ನಿಪ್ಪಾಣಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ನಿಪ್ಪಾಣಿ ನಗರಸಭೆ ಮತ್ತು …
Read More »ಇನ್‌ಸ್ಟಾದಲ್ಲಿ ಪರಿಚಯವಾಗಿ ಲವ್ – ಲಿವ್‌ಇನ್ ಗೆಳತಿಯ ಕತ್ತು ಹಿಸುಕಿ ಕೊಲೆ
ಬೆಂಗಳೂರು: ತನ್ನ ಲಿವ್ ಇನ್ ಗೆಳತಿಯನ್ನ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ಬೆಂಗಳೂರಿನ ಮಲ್ಲೇಶ್ವರದ ಮನೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅನುಷಾ (20) ಕೊಲೆಯಾದ ಯುವತಿಯಾಗಿದ್ದು, ಶರತ್(25) ಬಂಧಿತ ಆರೋಪಿಯಾಗಿದ್ದಾನೆ. ಘಟನೆ ಸಂಬಂಧ ಈಗಾಗಲೇ ಆರೋಪಿಯನ್ನ ಬಂಧಿಸಲಾಗಿದೆ. ಶರತ್ ಹಾಗೂ ಅನುಷಾ ಹಾಸನ ಮೂಲದವರು, ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದರು. ಶರತ್ ವಾಟರ್ ಟ್ಯಾಂಕ್ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. 6 ತಿಂಗಳಿನಿಂದ ಇ ಜೋಡಿ ಮಲ್ಲೇಶ್ವರದಲ್ಲಿ ಲಿವ್ …
Read More »
Laxmi News 24×7