Breaking News

Daily Archives: ಜೂನ್ 18, 2026

ಮತದಾರರ ಪಟ್ಟಿ ನವೀಕರಣ ನಿಖರವಾಗಿರಲಿ

ಗೋಕಾಕ: ಮತದಾರರ ಪಟ್ಟಿಯಿಂದ ಮತಪಟ್ಟ, ನಕಲಿ ಮತ್ತು ತಪ್ಪಾಗಿ ನಮೂದಿಸಲಾದ ಹೆಸರುಗಳನ್ನು ತೆಗೆದುಹಾಕುವಲ್ಲಿ ಮತ್ತು ಅರ್ಹ ನಾಗರಿಕರ ಹೆಸರನ್ನು ಮತದಾರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವಲ್ಲಿ ಬಿಎಲ್‌ಎ-2 ಪಾತ್ರ ಮಹತ್ವದ್ದಾಗಿದೆ. ಮತದಾರರ ಪಟ್ಟಿ ಪರಿಶೀಲನೆ ಹಾಗೂ ನವೀಕರಿಸುವ ಅಭಿಯಾನ ಯಶಸ್ವಿಯಾಗಿ ನಡೆಸಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಎನ್‌ಎಸ್‌ಎಸ್‌  ಕಚೇರಿಯಲ್ಲಿ ಅರಬಾವಿ ಬಿಜೆಪಿ ಮಂಡಲ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಕುರಿತಾದ ಎಸ್‌ಐಆರ್ ವಿಶೇಷ ಸಭೆಯಲ್ಲಿ ಮಾತನಾಡಿದರು. ಯಾವ ಮುಲಾಜಿಲ್ಲದೆ ನಕಲಿ …

Read More »

ಪಠ್ಯೇತರ ಚಟುವಟಿಕೆಗೆ ಆದ್ಯತೆ ಅಗತ್ಯ

ಮಾಂಜರಿ: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಶಿವಶಕ್ತಿ ಶುಗರ್ಸ್‌ ಮಾನವ ಸಂಪನ್ಮೂಲ ಅಧಿಕಾರಿ ಬಿ.ಎಸ್.ಮುಧೋಳ ಹೇಳಿದರು. ಯಡ್ರಾವ ಗ್ರಾಮದಲ್ಲಿರುವ ಕೆಎಲ್‌ಇ ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಸಮಾರಂಭಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು. ಸಲಹಾ ಸಮಿತಿ ಅಧ್ಯಕ್ಷ ಸತ್ಯಪ್ಪ ಭಿಷ್ಟೆ ಮಾತನಾಡಿ, ಸೃಜನಾತ್ಮಕ ಕಲಿಕೆಯಿಂದ ಮಕ್ಕಳ ವ್ಯಕ್ತಿತ್ವ ವೃದ್ಧಿಯಾಗುತ್ತದೆ ಎಂದು ತಿಳಿಸಿದರು. ದಯಾನಂದ ಕಬ್ಬೂರಿ, ಸದಾಶಿವ …

Read More »

ಗಾಂಜಾ ಮಾರುತ್ತಿದ್ದವ ಪೊಲೀಸ್ ವಶಕ್ಕೆ

ರಾಮದುರ್ಗ: ನಗರದ ಸಮೀಪದ ಹಲಗತ್ತಿ ಮುಖ್ಯ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವನನ್ನು ರಾಮದುರ್ಗ ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ಮಾಡಿದ ಪೊಲೀಸರು ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ಕೆರೂರ ಗ್ರಾಮದ ನವೀನ ಲಕ್ಷ್ಮಣ ಹೆದ್ದೇರಿ (21) ಎಂಬಾತನಿಂದ 180 ಗ್ರಾಂ ಗಾಂಜಾ, ಬೈಕ್, ಒಂದು ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಪಿಐಎಸ್ ಸವಿತಾ ಮುನ್ಯಾಳ, ಗ್ರೇಡ್-2 ತಹಸೀಲ್ದಾರ್ ಸಂಜಯ ಖಾತೇದಾರ, ಪೊಲೀಸ್ ಸಿಬ್ಬಂದಿ …

Read More »

ಪಕ್ಷ ನೀಡಿದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಬೇಕು

ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಎಲ್ಲರೂ ಜಾಗ್ರತೆಯಿಂದ ಕಾರ್ಯನಿರ್ವಹಿಸಬೇಕು. ಬಿಎಲ್‌ಒ-2 ಕಾರ್ಯಕರ್ತರು ತಮ್ಮ ವ್ಯಾಪ್ತಿಯ ಪ್ರತಿಯೊಬ್ಬ ಮತದಾರರ ಮಾಹಿತಿಯನ್ನು ಸಮಗ್ರವಾಗಿ ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳನ್ನು ಮಾಡಿಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ನಗರಸಭೆ ಸಮುದಾಯ ಭವನದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿಂದ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಕರೆಯಲಾಗಿದ್ದ ಎಸ್‌ಐಆರ್ ವಿಶೇಷ ಸಭೆಯಲ್ಲಿ ಮಾತನಾಡಿ, ಬೂತ್ ಮಟ್ಟದಲ್ಲಿ ನೇಮಕಗೊಂಡಿರುವ ಬಿಎಲ್‌ಎ-2 ಕಾರ್ಯಕರ್ತರು ಒಂದೇ ಹೆಸರಿನ …

Read More »

VTU ಬ್ಲೂಸ್‌ಗೆ KLS GITಯ 11 ವಿದ್ಯಾರ್ಥಿಗಳ ಆಯ್ಕೆ; ಹೆಮ್ಮೆಯ ಸಾಧನೆ

ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವತಿಯಿಂದ 2025-26ನೇ ಶೈಕ್ಷಣಿಕ ವರ್ಷದ ವಿವಿಧ ಕ್ರೀಡಾ ವಿಭಾಗಗಳಿಗೆ ಘೋಷಿಸಲಾದ VTU Blues ಪಟ್ಟಿಯಲ್ಲಿ ಬೆಳಗಾವಿಯ KLS ಗೋಗಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ  ಸಂಸ್ಥೆಯ 11 ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ. ಫುಟ್ಬಾಲ್, ಹಾಕಿ, ಕುಸ್ತಿ, ಹ್ಯಾಂಡ್‌ಬಾಲ್ ಹಾಗೂ ವುಷು ಸೇರಿದಂತೆ ವಿವಿಧ ಕ್ರೀಡಾ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಇದು ಅವರ ಕಠಿಣ ಪರಿಶ್ರಮ, ಪ್ರತಿಭೆ ಮತ್ತು ವಿಶ್ವವಿದ್ಯಾಲಯ ಮಟ್ಟದ ನಿರಂತರ ಸಾಧನೆಗೆ ಸಾಕ್ಷಿಯಾಗಿದೆ. …

Read More »

ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಕನಸಿನ ಸಮಾನತೆಯ ಸಮಾಜ ನಿರ್ಮಾಣಕ್ಕೆ ಎಲ್ಲ ವರ್ಗದ ಜನರು ಒಂದಾಗಬೇಕು

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣಕ್ಕೆ ಭೇಟಿ ನೀಡಿದ ಚಲನಚಿತ್ರ ನಟ ಚೇತನ್ ಅಹಿಂಸಾ, “ಸಮ ಸಮಾಜ ನಿರ್ಮಾಣ ಹಾಗೂ ಸಂವಿಧಾನದ ಆಶಯಗಳ ಸಾಕಾರಕ್ಕೆ ರಾಜ್ಯಾದ್ಯಂತ ಜನಜಾಗೃತಿ ಮೂಡಿಸಲಾಗುತ್ತಿದೆ” ಎಂದು ಹೇಳಿದರು. ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಕನಸಿನ ಸಮಾನತೆಯ ಸಮಾಜ ನಿರ್ಮಾಣಕ್ಕೆ ಎಲ್ಲ ವರ್ಗದ ಜನರು ಒಂದಾಗಬೇಕೆಂದು ಅವರು ಕರೆ ನೀಡಿದರು. ಬೈಲಹೊಂಗಲ ನಗರದ ನಿರೀಕ್ಷಣಾ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಚೇತನ್ , “ಸಂವಿಧಾನದ ಮೌಲ್ಯಗಳನ್ನು ಜನರಿಗೆ …

Read More »

ಸವದತ್ತಿ ತಾಲೂಕಿನಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ

ಬೆಳಗಾವಿ: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಬುಧವಾರ ಸವದತ್ತಿ ತಾಲೂಕಿನ ವಿವಿಧೆಡೆ ಭೇಟಿ ನೀಡಿ, ವಿವಿಧ ಇಲಾಖೆಯ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು. ತಾಲೂಕಿನ ಉಗರಗೋಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಯೋಜನೆಗಳಡಿ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿದರು. ಯಲ್ಲಮ್ಮ ತಾಂಡೆ ಗ್ರಾಮದಲ್ಲಿ 2025-26ನೇ ಸಾಲಿನ CMIDP ಯೋಜನೆಯಡಿ ಕೈಗೊಂಡಿರುವ ರಸ್ತೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿ, …

Read More »

ನರೇಗಾ ಕಾರ್ಮಿಕರು ದಿನಗೂಲಿ ವೇತನ ಕಡಿತವನ್ನು ವಿರೋಧಿಸಿ ಪಂಚಾಯತ್ ಕಚೇರಿಗೆ ಮುತ್ತಿಗೆ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಇಟಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಕಾರ್ಮಿಕರು ದಿನಗೂಲಿ ವೇತನ ಕಡಿತವನ್ನು ವಿರೋಧಿಸಿ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಧರಣಿ ನಡೆಸಿದ್ದಾರೆ. ಪ್ರತಿ ದಿನದ ಕೂಲಿ ಹಣವನ್ನು ಅರ್ಧಕ್ಕರ್ಧ ಕಡಿಮೆ ಮಾಡಿರುವುದಕ್ಕೆ ರೊಚ್ಚಿಗೆದ್ದ ಬೋಗೂರು ಗ್ರಾಮದ ಕಾರ್ಮಿಕರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾನಾಪುರ ತಾಲೂಕಿನ ಗಡಿ ಭಾಗದ ಗ್ರಾಮ ಪಂಚಾಯಿತಿಯಾದ ಇಟಗಿ ವ್ಯಾಪ್ತಿಯ ಬೋಗೂರು ಗ್ರಾಮದ ಉದ್ಯೋಗ ಖಾತ್ರಿ ಯೋಜನೆ ಕೂಲಿ …

Read More »

ಅತಿವೃಷ್ಟಿ ಎದುರಿಸಲು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ

ಖಾನಾಪುರ ತಾಲೂಕು ಅತಿ ಹೆಚ್ಚು ಮಳೆ ಬೀಳುವ ಪ್ರದೇಶವಾಗಿದ್ದು, ಮುಂಬರುವ ಪ್ರವಾಹ ಹಾಗೂ ಅತಿವೃಷ್ಟಿ ಪರಿಸ್ಥಿತಿಯನ್ನು ಎದುರಿಸಲು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಪ್ರಮುಖ ಸಭೆಗೆ ಗೈರಾದ ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ್ ದುಡಗುಂಟಿ, ತಕ್ಷಣವೇ ನೋಟಿಸ್ ಜಾರಿ ಮಾಡುವಂತೆ ಆದೇಶಿಸಿದ್ದಾರೆ. ಖಾನಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಅತಿವೃಷ್ಟಿ ಮುನ್ನೆಚ್ಚರಿಕೆ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ …

Read More »

ಸಾಮಾಜಿಕ ಕಳಕಳಿ! ಪದ್ಮಶ್ರೀ ನಾನಾ ಚುಡಾಸಮಾ ಜಯಂತಿ ಅಂಗವಾಗಿ ಬೆಳಗಾವಿಯಲ್ಲಿ ಜಾಯಿಂಟ್ಸ್ ಸಂಸ್ಥೆಯಿಂದ ಭವ್ಯ ರಕ್ತದಾನ ಶಿಬಿರ

ಜಾಯಿಂಟ್ಸ್ ಮೆನ್ ಬೆಲಗಾಮ್ ಹಾಗೂ ಜಾಯಿಂಟ್ಸ್ ಸಖಿಯ ಜಂಟಿ ಆಶ್ರಯದಲ್ಲಿ ಭಾರತ ರತ್ನ, ಪದ್ಮಶ್ರೀ ನಾನಾ ಚುಡಾಸಮಾ ಅವರ ಜಯಂತಿ ನಿಮಿತ್ತ ಕೆ. ಎಲ್. ಇ. ಡಾ. ಪ್ರಭಾಕರ್ ಕೋರೆ ರಕ್ತನಿಧಿಯಲ್ಲಿ ಭವ್ಯ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಸಾಮಾಜಿಕ ಜವಾಬ್ದಾರಿಯೊಂದಿಗೆ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 15 ರಕ್ತದಾನಿಗಳು ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕಾರ್ಯಕ್ರಮದ ಆರಂಭದಲ್ಲಿ ಪದ್ಮಶ್ರೀ ನಾನಾ ಚುಡಾಸಮಾ ಅವರ ಭಾವಚಿತ್ರಕ್ಕೆ ಪುಷ್ಪಮಾಲೆ …

Read More »