Breaking News

Daily Archives: ಜೂನ್ 20, 2026

ಎಂಎಲ್‌ಸಿ ಚುನಾವಣೆಯಲ್ಲಿ ನಮಗೆ ಬಿದ್ದಿರುವುದು ಆತ್ಮಸಾಕ್ಷಿಯ ಮತಗಳು: ಸಚಿವ ಸತೀಶ್ ಜಾರಕಿಹೊಳಿ

ಎಂಎಲ್‌ಸಿ ಚುನಾವಣೆಯಲ್ಲಿ ಇಷ್ಟೊಂದು ಮತಗಳು ಬರುತ್ತವೆ ಎಂದು ನಾವು ನಿರೀಕ್ಷಿಸಿರಲಿಲ್ಲ. ಕೇವಲ ನಾಲೈದು ಮತಗಳು ಬರಬಹುದು ಅಂದುಕೊಂಡಿದ್ದೆವು. ಆದರೆ ಇಲ್ಲಿ ಬಿದ್ದಿರುವುದು ಆತ್ಮಸಾಕ್ಷಿಯ ಮತಗಳು ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ರಾಜಧಾನಿಯ ಅರಮನೆ ಮೈದಾನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೆಹಲಿ ಮಾಡೆಲ್ ಈಗ ಕರ್ನಾಟಕದಲ್ಲೂ ಅನುಷ್ಠಾನಗೊಂಡಿದೆ. ನಾವು ಬಿಜೆಪಿಯ ಮಾಡೆಲ್ ಅನ್ನೇ ಅನುಕರಿಸಿದ್ದೇವೆ. ಇದು ಕುದುರೆ ವ್ಯಾಪಾರ ಅಲ್ಲ ಬದಲಿಗೆ ಇದೊಂದು ರಾಜಕೀಯ ತಂತ್ರಗಾರಿಕೆ ಎಂದು …

Read More »

ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಬೆಳಗಾವಿಯಲ್ಲಿ ನಡೆಯಲಿದೆ ನೇರ ಸಂದರ್ಶನ ಮತ್ತು ಉದ್ಯೋಗ ಮೇಳ

ಬೆಳಗಾವಿ: ಬೆಳಗಾವಿ ನಗರದ ಕಾ.ರಾ.ವಿ ಆಸ್ಪತ್ರೆ ಹಾಗೂ ಇಲ್ಲಿನ ಚಿಕಿತ್ಸಾಲಯಗಳಿಗೆ ಗುತ್ತಿಗೆ ಆಧಾರದ ಮೇಲೆ 5 ವಿಮಾ ವೈದ್ಯಾಧಿಕಾರಿಗಳನ್ನು (ಮೆರಿಟ್ ಕಮ್ ರೊಸ್ಟರ್) ಮೂಲಕ ನೇರ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಾಗುವುದು. ಜೂನ್ 24 ರಂದು ಬೆಳಗ್ಗೆ 10.30 ರಿಂದ ಸಂಜೆ 4, ಗಂಟೆಯವರೆಗೆ ಬೆಳಗಾವಿಯ ಕಾ.ರಾ.ವಿ ಆಸ್ಪತ್ರೆಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-23324216 / 23324218 ಗೆ ಸಂಪರ್ಕಿಸಬಹುದು …

Read More »

ಬೆಳಗಾವಿ ಸಿಸಿಬಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: 5 ಲಕ್ಷ ಮೌಲ್ಯದ ಅಫೀಮ್ ಜಪ್ತಿ

ಬೆಳಗಾವಿ: ರಾಜಸ್ಥಾನದ ಪಾಲಿಯಿಂದ ತಂದು ಬೆಳಗಾವಿಯ ಹಿಂಡಾಲ್ಕೋ ಫ್ಯಾಕ್ಟರಿ ಸಮೀಪ ಎನ್.ಹೆಚ್ 48 ಹೆದ್ದಾರಿಯ ಸರ್ವಿಸ್ ರಸ್ತೆಯ ಹತ್ತಿರ  ಅಫೀಮ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.‌ ರಾಜಸ್ಥಾನದ ಮೂಲದ ರೋಪಿತನಾದ ಶುಭಂ ಮದನಲಾಲ ಶರ್ಮ (29) ಎಂಬಾತನನ್ನು ಬಂಧಿಸಲಾಗಿದೆ.‌ ಈತ ಖೇತಾರಾಮ ಚೌಧರಿ ಎಂಬುವ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾಗ ಸಿಸಿಬಿ ವಿಭಾಗದ ಪಿಐ ರವರಾದ ಮಂಜುನಾಥ ನಾಯಿಕ ಹಾಗೂ ಸಿಬ್ಬಂದಿಯವರು ದಾಳಿ ಮಾಡಿದ್ದಾರೆ.ದಾಳಿ ವೇಳೆ 5,00,000 ರೂ. ಮೌಲ್ಯದ 1.048 …

Read More »

ಜಲಾಶಯಗಳಲ್ಲಿ ನೀರಿನ ಪ್ರಮಾಣ ಕುಸಿತ: ನೀರು ಮಿತವಾಗಿ ಬಳಸಲು ಬೆಳಗಾವಿ ಪಾಲಿಕೆ ಮನವಿ

ಬೆಳಗಾವಿ: ಪ್ರಸ್ತುತ ಮುಂಗಾರು ಮಳೆಯ ಅಭಾವದ ಕಾರಣ, ಬೆಳಗಾವಿ ಮಹಾನಗರಕ್ಕೆ ನೀರು ಸರಬರಾಜು ಮಾಡುವ, ರಕ್ಕಸಕೊಪ್ಪ ಜಲಾಶಯ ಹಾಗೂ ಹಿಡಕಲ್ ಜಲಾಶಯಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕುಸಿತವಾಗಿರುತ್ತದೆ. ಮಹಾನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಕೊರತೆಯನ್ನು ನಿಭಾಯಿಸಲು ಈ ಕೆಳಗಿನಂತೆ ತುರ್ತು ಕ್ರಮ ತೆಗೆದುಕೊಳ್ಳಲಾಗಿದೆ. ಪ್ರಸ್ತುತ 24/7 ವಲಯಗಳಿಗೆ ದಿನನಿತ್ಯ 2 ತಾಸಿನವರೆಗೆ ನೀರನ್ನು ಸರಬರಾಜು ಮಾಡಲಾಗುವುದು. 4 ರಿಂದ 5 ದಿನಗಳಿಗೊಮ್ಮೆ 3 ರಿಂದ 4 ತಾಸಿನವರೆಗೆ ನೀರು ಸರಬರಾಜು …

Read More »

ಗೋಕಾಕದ ಪಂಚನಟ್ಟಿ ಬಳಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನಲ್ಲಿ ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಗೋಕಾಕ ತಾಲೂಕಿನ ಪಂಚನಟ್ಟಿ ಗ್ರಾಮದ ಬಳಿ ಇರುವ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಸ್ಥಳದಲ್ಲೇ ಇಬ್ಬರು ದುರದೈವಿಗಳು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ್ನು ಪಂಚನಟ್ಟಿ ಗ್ರಾಮದ ಈರಪ್ಪ ಮಲ್ಲಪ್ಪ ನಂದಿಗೌಡರ (32) ಮತ್ತು ಮಲ್ಲಪ್ಪ ಮಹಾದೇವ ನಂದಿಗೌಡರ …

Read More »