ವಿಜಯಪುರ: ಭೀಮಾತೀರದಲ್ಲಿ 6 ಜನರ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಮುಖ್ಯ ಆರೋಪಿ ಮಹೇಶ್ ತಳವಾರ್ ಮೇಲೆ ಫೈರಿಂಗ್ ನಡೆದಿದೆ. ಕಾಲಿಗೆ ಗುಂಡು ಹಾರಿಸಿ ಚಡಚಣ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇಟ್ಟಿಂಗಿಹಾಳ ಗ್ರಾಮದ ಹೊರವಲಯದಲ್ಲಿ ಮಹೇಶ್ ಕಾಲಿಗೆ ಫೈರಿಂಗ್ ಮಾಡಲಾಗಿದೆ. ಮಹೇಶನನ್ನ ಬಂಧಿಸಲು ಹೋದಾಗ ಓಡಿ ಹೋಗಲು ಯತ್ನಿಸಿದ ಮಹೇಶ್ ತಳವಾರ್ ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ್ದಾನೆ. ಪೊಲೀಸ್ ಸಿಬ್ಬಂದಿ ಮೇಲೆ …
Read More »Daily Archives: ಜೂನ್ 22, 2026
ಹೆಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಗೆ ಬಿಗ್ ಶಾಕ್: ಕ್ಲಿನಿಕಲ್ ಟ್ರಯಲ್ ನಡೆಸದಂತೆ ಕೇಂದ್ರ ಸರ್ಕಾರದಿಂದ 2 ವರ್ಷ ನಿಷೇಧ
ಬೆಂಗಳೂರು: ನಗರದ ಪ್ರತಿಷ್ಠಿತ ಹೆಚ್‌ಸಿಜಿ (HCG) ಕ್ಯಾನ್ಸರ್ ಆಸ್ಪತ್ರೆಯ ನೈತಿಕ ಸಮಿತಿಗೆ ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ(CDSCO) ಕಠಿಣ ಶಾಕ್ ನೀಡಿದೆ. ಮಾನವ ಪ್ರಯೋಗಗಳ ವೇಳೆ ಕಂಡುಬಂದ ಗಂಭೀರ ಲೋಪಗಳು ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಆಸ್ಪತ್ರೆಯು ಮುಂದಿನ 2 ವರ್ಷಗಳ ಕಾಲ (24 ತಿಂಗಳು) ಯಾವುದೇ ಹೊಸ ಕ್ಲಿನಿಕಲ್ ಟ್ರಯಲ್ ನಡೆಸದಂತೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ. ಆಸ್ಪತ್ರೆಯ ನೈತಿಕ ಸಮಿತಿಯ ಮಾಜಿ ಮುಖ್ಯಸ್ಥರೂ ಹಾಗೂ ನಿವೃತ್ತ …
Read More »ಶೀಘ್ರವೇ ಬಸ್ ಟಿಕೆಟ್ ದರ ಏರಿಕೆ – BMTC 44%, KSRTC 33% ರಷ್ಟು ಹೆಚ್ಚಳಕ್ಕೆ ಪ್ರಸ್ತಾಪ
ಬೆಂಗಳೂರು: ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಸಂಸ್ಥೆಗಳು ದರ ಏರಿಕೆಯ ಬಿಸಿ ಮುಟ್ಟಿಸಲು ಸಜ್ಜಾಗಿವೆ. ತೀವ್ರ ಆರ್ಥಿಕ ನಷ್ಟ ಹಾಗೂ ಡೀಸೆಲ್ ದರ ಏರಿಕೆಯಿಂದ ತತ್ತರಿಸಿರುವ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ನಾಲ್ಕೂ ಸಾರಿಗೆ ನಿಗಮಗಳು ಬಸ್ ಟಿಕೆಟ್ ದರವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್(ಅವರಿಗೆ ಅಧಿಕೃತ ಪ್ರಸ್ತಾವನೆ ಸಲ್ಲಿಸಿವೆ. ನಾಲ್ಕೂ ಸಾರಿಗೆ ನಿಗಮಗಳು ಪ್ರತ್ಯೇಕವಾಗಿ ದರ ಪರಿಷ್ಕರಣೆಗೆ ಬೇಡಿಕೆ ಇಟ್ಟಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು …
Read More »ಧೈರ್ಯವಿದ್ದರೆ ನನ್ನ ಜೊತೆ ಭೈರಮಂಗಲಕ್ಕೆ ಬನ್ನಿ, ರೈತರ ಜೊತೆ ಮಾತನಾಡೋಣ – ಡಿಕೆಶಿಗೆ ಹೆಚ್‌ಡಿಕೆ ಸವಾಲು
ಬೆಂಗಳೂರು: ಇತ್ತೀಚಿನ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಬಿಡದಿ ಸ್ಮಾರ್ಟ್ ಸಿಟಿ ಟೌನ್‌ಶಿಪ್ಯೋಜನೆ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ದಾಖಲೆಗಳ ಸಮೇತ ಸಿಡಿದೆದ್ದಿದ್ದಾರೆ. ಅಷ್ಟೇ ಅಲ್ಲದೇ ಧೈರ್ಯವಿದ್ದರೆ ನನ್ನ ಜೊತೆ ಭೈರಮಂಗಲಕ್ಕೆ ಬನ್ನಿ ರೈತರ ಜೊತೆ ಮಾತನಾಡೋಣ ಎಂದು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಸವಾಲು ಎಸೆದಿದ್ದಾರೆ. ಮಾಜಿ ಶಾಸಕ ಮಾಗಡಿ ಮಂಜುನಾಥ್ ಮತ್ತು ಜೆಡಿಎಸ್‌ನ ಗ್ರೇಟರ್ ಬೆಂಗಳೂರು ಅಧ್ಯಕ್ಷ ಎಚ್‌ಎಂ …
Read More »NEET ಮರುಪರೀಕ್ಷೆ ಬರೆಯಲು ಬಂದಿದ್ದ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಅರೆಸ್ಟ್
ಪಾಟ್ನಾ: ಬಿಹಾರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಿನ್ನೆ ನಡೆದ NEET UG ಮರುಪರೀಕ್ಷೆ ವೇಳೆ 9 ನಕಲಿ ಅಭ್ಯರ್ಥಿಗಳು ಹಾಗೂ ಅವರೊಂದಿಗಿದ್ದ 30 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಲಖಿಸರಾಯ್ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿದೆ. ಪರೀಕ್ಷಾ ಕೇಂದ್ರಗಳ ಮೇಲೆ ದಾಳಿ ನಡೆಸಿ ಬೇರೆಯವರ ಹೆಸರಿನಲ್ಲಿ ಪರೀಕ್ಷೆ ಬರೆಯಲು ಬಂದಿದ್ದ 9 ನಕಲಿ ಅಭ್ಯರ್ಥಿಗಳು ಸೇರಿ 30 ಜನರನ್ನು ಪತ್ತೆಹಚ್ಚಿದೆ. ಮೂಲಗಳ ಪ್ರಕಾರ, ಲಖಿಸರಾಯ್ ಜಿಲ್ಲೆಯ …
Read More »ಇನ್ಮುಂದೆ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗುವೆ – ಸದಾಶಿವನಗರ ನಿವಾಸಕ್ಕೆ ಬಾರದಂತೆ ಡಿಕೆಶಿ ಮನವಿ
ಬೆಂಗಳೂರು: ಇನ್ಮುಂದೆ ಸಾರ್ವಜನಿಕರು, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರನ್ನೂ ಗೃಹ ಕಚೇರಿ `ಕೃಷ್ಣಾ’ದಲ್ಲಿ ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (ಅವರು ತಿಳಿಸಿದ್ದಾರೆ. ಅನಿವಾರ್ಯ ಕಾರಣಗಳಿಂದ ಇನ್ನು ಮುಂದೆ ಸದಾಶಿವನಗರ ನಿವಾಸದಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ. ಯಾರೂ ಇಲ್ಲಿಗೆ ಬರುವ ತೊಂದರೆ ತೆಗೆದುಕೊಳ್ಳಬೇಡಿ ಹಾಗೂ ಅನ್ಯಥಾ ಭಾವಿಸಬೇಡಿ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
Read More »ಹಾವೇರಿಯಲ್ಲಿ ಮಳೆರಾಯನ ಅವಕೃಪೆ – 11 ಎಕರೆಯಲ್ಲಿ ಬಿತ್ತನೆ ಮಾಡಿದ್ದ ಮೆಕ್ಕೆಜೋಳ ನಾಶಪಡಿಸಿದ ರೈತ
ಹಾವೇರಿ: ಮುಂಗಾರು ಮಳೆ ಸಮರ್ಪಕವಾಗಿ ಆಗದೇ ಇರುವುದರಿಂದ ಬಿತ್ತನೆ ಮಾಡಿದ ಮೆಕ್ಕೆಜೋಳದ ಬೀಜ ಮೊಳಕೆ ಒಡೆಯದೆ ಹಾಳಾಗಿದ್ದಕ್ಕೆ ಬೇಸತ್ತು ರೈತನೋರ್ವ 11 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳದ ಬೆಳೆಯನ್ನು ನಾಶಪಡಿಸಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಶಿಡೇನೂರ ಗ್ರಾಮದ ರೈತ ಕಿರಣ ಗಡಿಗೋಳ, ತನ್ನ ಸ್ವಂತ ಜಮೀನಿನ ಜೊತೆಗೆ ಬೇರೆ ರೈತರಿಂದ ಎಕರೆಗೆ ಹತ್ತು ಸಾವಿರ ರೂಪಾಯಿಯಂತೆ ಹನ್ನೊಂದು ಎಕರೆ ಜಮೀನನ್ನು ಲಾವಣಿ ಹಾಕಿಕೊಂಡು ಮೆಕ್ಕೆಜೋಳ ಬಿತ್ತನೆ ಮಾಡಿದ್ದರು. ಮೆಕ್ಕೆಜೋಳ …
Read More »ಸಮಾವೇಶದಿಂದ ನೀಟ್ ಪರೀಕ್ಷೆಯ ವಿದ್ಯಾರ್ಥಿಗಳಿಗೆ ತೊಂದರೆ| ವಿಷಾದ ವ್ಯಕ್ತಪಡಿಸಿ ಬಿಜೆಪಿ ವಿರುದ್ಧ ಬಿಕೆಹೆಚ್ ವಾಗ್ದಾಳಿ
ಬೆಂಗಳೂರು: ನಮ್ಮ ಕಾರ್ಯಕ್ರಮದಿಂದಾಗಿ ನೀಟ್ ಪರೀಕ್ಷೆಯ ವಿದ್ಯಾರ್ಥಿಗಳಿಗೆ ಏನಾದರೂ ತೊಂದರೆಯಾಗಿದ್ದರೆ ನಾನು ವೈಯಕ್ತಿಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣದ ಸಮಾವೇಶದಿಂದಾಗಿ ನೀಟ್ ಪರೀಕ್ಷೆಯ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ಆರೋಪಿಸುತ್ತಿರುವ ಬಿಜೆಪಿಹಾಗೂ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಕಠಿಣ ಪದಗಳಲ್ಲಿ ವಾಗ್ದಾಳಿ ನಡೆಸಿದರು. ಬಿಜೆಪಿಯವರು ಸರಣಿ ತಪ್ಪು ಮಾಹಿತಿ ನೀಡುವ ಸುಳ್ಳಿನ ಫ್ಯಾಕ್ಟರಿ ಇಟ್ಟುಕೊಂಡಿದ್ದಾರೆ. …
Read More »
Laxmi News 24×7