Breaking News

Daily Archives: ಜೂನ್ 29, 2026

ರಾಮದೇವ್ ಹೋಟೆಲ್ ಬಳಿ ಕ್ಷಣಾರ್ಧದಲ್ಲೆ ಸುಟ್ಟು ಕರಕಲಾದ ಕಾರ್

ಬೆಳಗಾವಿ: ಕುಂದಾನಗರಿ ಬೆಳಗಾವಿಯ ರಾಮದೇವ್ ಹೋಟೆಲ್ ರಸ್ತೆ ಮೇಲೆ ಚಲಿಸುತ್ತಿದ್ದ ಕಾರ್ ನಲ್ಲಿ ದಿಢೀರನೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೆ ಕಾರು ಸುಟ್ಟು ಕರಕಲಾಗಿದೆ.‌ ನಗರದ ರಾಮದೇವ್ ಹೋಟೆಲ್ ಎದುರಿನ ಡಿ-ಮಾರ್ಟ್ ಕಾರ್ನರ್ ಕಡೆಗೆ ಹೋಗುವ ರಸ್ತೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಕೇವಲ 10 ರಿಂದ 15 ನಿಮಿಷಗಳಲ್ಲೇ ಇಡೀ ಸ್ವಿಫ್ಟ್ ಕಾರು ಧಗಧಗನೆ ಹೊತ್ತಿ ಉರಿದು ಭಸ್ಮವಾಗಿದೆ. ಕಾರು ರಸ್ತೆಯಲ್ಲಿ ಚಲಿಸುತ್ತಿದ್ದಾಗಲೇ ಎಂಜಿನ್ ಭಾಗದಲ್ಲಿ ಅಚಾನಕ್ ಬೆಂಕಿ ಕಾಣಿಸಿಕೊಂಡಿದೆ …

Read More »

DNA ಟೆಸ್ಟ್ ಮಾಡಿಸುವಂತೆ ಪತಿ ಮನೆಯವರಿಂದ ಕಿರುಕುಳ – ಮನನೊಂದು 5 ತಿಂಗಳ ಗರ್ಭಿಣಿ ಆತ್ಮಹತ್ಯೆ

ಹೈದರಾಬಾದ್‌: ಗರ್ಭದಲ್ಲಿರುವ ಮಗುವಿನ ಪಿತೃತ್ವವನ್ನು ಶಂಕಿಸಿ, ಡಿಎನ್‌ಎ ಪರೀಕ್ಷೆ ನಡೆಸುವಂತೆ ಪತಿ ಹಾಗೂ ಅತ್ತೆ ನಿರಂತರ ಕಿರುಕುಳ ನೀಡಿದ ಹಿನ್ನೆಲೆ ಐದು ತಿಂಗಳ ಗರ್ಭಿಣಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ  ನಡೆದಿದೆ. ತೆಲಂಗಾಣದ ಮೇದಕ್  ಜಿಲ್ಲೆಯ ಅಲ್ಲಾದುರ್ಗ್‌ದ ಗಡಿಪೆದ್ದಾಪುರ  ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಸುಶ್ಮಿತಾ (23) ಎಂದು ಗುರುತಿಸಲಾಗಿದೆ. 18 ತಿಂಗಳ ಹಿಂದೆಯಷ್ಟೇ ಸುಶ್ಮಿಕಾ ಹಾಗೂ ಜಿ.ಅಭಿಲಾಷ್ ಮದುವೆಯಾಗಿದ್ದರು. ಸದ್ಯ ಸುಶ್ಮಿತಾ 5 ತಿಂಗಳ ಗರ್ಭಿಣಿಯಾಗಿದ್ದರು …

Read More »

ನೀಟ್ ಪೇಪರ್ ಲೀಕ್: ಬೆಳಗಾವಿಯಲ್ಲಿ ಯುವ ಕಾಂಗ್ರೆಸ್‌ನಿಂದ ಬೃಹತ್ ಪಂಜಿನ ಮೆರವಣಿಗೆ

ಬೆಳಗಾವಿ: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ‘ನೀಟ್’ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಬೇಕೆಂದು ಆಗ್ರಹಿಸಿ ಭಾನುವಾರ ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪಂಜಿನ ಮೆರವಣಿಗೆಯನ್ನು ನಡೆಸಿ ತೀವ್ರ ಪ್ರತಿಭಟನೆ ದಾಖಲಿಸಲಾಯಿತು. ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಡೆದ ಈ ಬೃಹತ್ ಪ್ರತಿಭಟನೆಯಲ್ಲಿ ನೂರಾರು ಯುವ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು …

Read More »

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್ – ಬಸ್‌ಪಾಸ್ ಶುಲ್ಕ ಮರುಪಾವತಿ; ಜೂ.29 ರಿಂದ ಅರ್ಜಿ ಪ್ರಕ್ರಿಯೆ ಶುರು

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದು ಹೇಗೆ? ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಂದು ಸಿಹಿ ಸುದ್ದಿ ಕೊಟ್ಟಿದೆ. ಈಗಾಗಲೇ ಪಾವತಿಸಿಕೊಂಡಿರುವ ಬಸ್ ಪಾಸ್ ಶುಲ್ಕವನ್ನ ಮರುಪಾವತಿ ಮಾಡಲು 4 ಸಾರಿಗೆ ನಿಗಮಗಳಿಗೆ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿತ್ತು. ಆದಾಗ್ಯೂ ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ಸಾರಿಗೆ ನಿಗಮಗಳು ನಿಯಮಾನುಸಾರ ವಿದ್ಯಾರ್ಥಿಗಳಿಂದ ಪಡೆದುಕೊಂಡಿದ್ದ ಶುಲ್ಕವನ್ನ …

Read More »

ಮದ್ವೆಗೆ ಒಪ್ಪದೇ ಅವಾಯ್ಡ್‌ ಮಾಡ್ತಿದ್ದ ಪ್ರೇಯಸಿ – ಊಟಕ್ಕೆ ಕರೆದು ಕತ್ತುಕೊಯ್ದು ಕೊಂದ ಪ್ರಿಯಕರ

ಬೆಂಗಳೂರು: ಮನೆಯಲ್ಲಿ ಪ್ರೀತಿ ವಿಚಾರ ತಿಳಿದಿದ್ದರೂ ಮದುವೆಗೆ ಒಪ್ಪದೇ ಅವಾಯ್ಡ್‌ ಮಾಡುತ್ತಿದ್ದ ಪ್ರೇಯಸಿಯನ್ನು, ಪ್ರಿಯಕರನೇ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪೈಪ್‌ಲೈನ್‌ ರಸ್ತೆಯಲ್ಲಿ ನಡೆದಿದೆ. ಭಾನುವಾರ (ಜೂ.28) ರಾತ್ರಿ 9:30 ರ ಸುಮಾರಿಗೆ ಘಟನೆ ನಡೆದಿದೆ. ಅಂಜಲಿ (23) ಕೊಲೆಯಾದ ಯುವತಿ. ರಾಜೀವ್ ಪ್ರೇಯಸಿಯನ್ನ ಕೊಂದ ಪ್ರಿಯಕರ. ಪ್ರೇಯಸಿಯನ್ನ ಊಟಕ್ಕೆ ಕರೆದಿದ್ದ ಪ್ರಿಯಕರ, ಮದುವೆ ವಿಚಾರ ಪ್ರಸ್ತಾಪಿಸಿ ಗಲಾಟೆ ಮಾಡಿದ್ದಾನೆ. ಈ …

Read More »

ಕಬ್ಬು ರಕ್ಷಿಸಲು ನೀರಿಗಾಗಿ ಹೋರಾಟ – ಇಂದು ಕಾವೇರಿ ನಿಗಮದ ಕಚೇರಿಗೆ ಮಂಡ್ಯ ರೈತರಿಂದ ಮುತ್ತಿಗೆ

ಮಂಡ್ಯ: ಮುಂಗಾರು ಆರಂಭದಲ್ಲೇ ಮಂಡ್ಯ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದೆ. ಕಬ್ಬು ರಕ್ಷಣೆಗಾಗಿ ನಾಲೆಗೆ ನೀರು ಬಿಡುವಂತೆ ಆಗ್ರಹಿಸಿ ಇಂದು ಕಾವೇರಿ ನೀರಾವರಿ ನಿಗಮದ ಕಚೇರಿ ರೈತರು ಮುತ್ತಿಗೆ ಹಾಕಲಿದ್ದಾರೆ. ಸಕಾಲಕ್ಕೆ ಮಳೆಯಾಗದೇ, ಇತ್ತ ನಾಲೆಯಲ್ಲಿಯೂ ನೀರಿಲ್ಲದೇ ಕಬ್ಬು ಒಣಗುತ್ತಿದೆ. ಹೀಗಾಗಿ ಬೆಳೆದಿರುವ ಕಬ್ಬು ರಕ್ಷಣೆಗಾಗಿ ನಾಲೆಗೆ ನೀರು ಹರಿಸುವಂತೆ ಆಗ್ರಹಿಸಿ, ಮಂಡ್ಯ ರೈತರು ಇಂದು ಕಾವೇರಿ ನೀರಾವರಿ ನಿಗಮದ ಕಚೇರಿಗೆ ಹಾಕಲಿದ್ದಾರೆ. ಈ ವೇಳೆ ರೈತರು ಕೆಆರ್‌ಎಸ್‌ನಿಂದ ನಾಲೆಗಳಿಗೆ …

Read More »