ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ ಇರುವ ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ಆಘಾತದಿಂದ ಮಾಲೀಕ ಅಂಗಡಿ ಮುಂದೆಯೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಣಜೇನಹಳ್ಳಿ ಗ್ರಾಮದ ವೆಂಕಟೇಶ್ (55) ಮೃತ ದುರ್ದೈವಿ. ಸೋಮವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಮಿಲ್ಕ್ ಪಾರ್ಲರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಮಾಹಿತಿ ವೆಂಕಟೇಶ್ ಅವರಿಗೆ ತಲುಪಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಅವರು ಸ್ಥಳೀಯರ ಸಹಾಯದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ನಂದಿಸಿದ್ದಾರೆ. …
Read More »
Laxmi News 24×7