ಬೆಂಗಳೂರು: ಭಾನುವಾರ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಪದಗ್ರಹಣ ಮಾಡಲಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ಪ್ಯಾಲೆಸ್ ಗ್ರೌಂಡ್‌ನಲ್ಲಿ ಸಮಾರಂಭ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಸೇರಿದಂತೆ ಎಐಸಿಸಿ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಿರ್ಗಮಿತ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ ಬಾವುಟ ಹಸ್ತಾಂತರ ಮಾಡುವ ಮೂಲಕ ಅಧಿಕೃತವಾಗಿ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ಅಂದಾಜು 1 ಲಕ್ಷ …
Read More »Monthly Archives: ಜೂನ್ 2026
ವಿಧಾನಸೌಧದ ಮುಂಭಾಗ ಗಣ್ಯರಿಂದ ಯೋಗ
ಬೆಂಗಳೂರು: 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ವಿಧಾನಸೌಧದ ಮುಂಭಾಗದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ ರಾಜ್ಯ ಆಯುಷ್ ಇಲಾಖೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಗಣ್ಯರು, ಸೆಲೆಬ್ರಿಟಿಗಳು ಹಾಗೂ ಯೋಗಪಟುಗಳು ಪಾಲ್ಗೊಂಡು ಯೋಗಾಭ್ಯಾಸ ಮಾಡಿದರು ‘ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದಡಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಸಾವಿರಾರು ಯೋಗಾಸಕ್ತರು ಭಾಗವಹಿಸಿದರು. ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು. ಈ ವೇಳೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ಆರೋಗ್ಯ ಸಚಿವ ಯು.ಟಿ. ಖಾದರ್ ಸೇರಿದಂತೆ …
Read More »ಯೋಗವು ಕೇವಲ ದೈಹಿಕ ಕಸರತ್ತಲ್ಲ, ಇದು ಮಾನವ ಚೇತನದ ಅದ್ಭುತ ಅಭಿವ್ಯಕ್ತಿ: ಮೋದಿ
ಕೋಲ್ಕತ್ತಾ: ಯೋಗವು ಕೇವಲ ದೈಹಿಕ ಕಸರತ್ತಲ್ಲ ಅಥವಾ ಇದು ಯಾವುದೇ ನಿರ್ದಿಷ್ಟ ವಯೋಮಾನದವರಿಗೆ ಸೀಮಿತವಾಗಿಲ್ಲ. ಇದು ಮಾನವ ಚೇತನದ ಅದ್ಭುತ ಅಭಿವ್ಯಕ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಕೋಲ್ಕತ್ತಾದಐತಿಹಾಸಿಕ ‘ರೆಡ್ ರೋಡ್’ನಲ್ಲಿ ನಡೆದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ) ಕಾರ್ಯಕ್ರಮದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಜೂನ್ 21 ಭೂಮಿಯ ಮೇಲಿನ ಸುದೀರ್ಘ ದಿನವಾಗಿದೆ. ಆದರೆ ಈಗ ಯೋಗದ ಕಾರಣದಿಂದಾಗಿ ಇದು ವಿಶ್ವದ ಅತಿ ಹೆಚ್ಚು ಜನ ಭಾಗವಹಿಸುವ …
Read More »ಭೀಕರ ರಸ್ತೆ ಅಪಘಾತ; ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ 2 ಲಾರಿಗಳು
ಬೆಳಗಾವಿ: ಲಾರಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಹೆದ್ದಾರಿಯಲ್ಲೇ ಎರಡೂ ಲಾರಿಗಳು ಹೊತ್ತಿ ಉರಿದಿರುವ ಘಟನೆ ಬೆಳಗಾವಿ ಜಿಲ್ಲೆಯ ಎಂ.ಕೆ ಹುಬ್ಬಳ್ಳಿ ಪಟ್ಟಣದ ಬಳಿ ನಡೆದಿದೆ. ಪುಣೆ ಬೆಂಗಳೂರು ಹೆದ್ದಾರಿ ಮೇಲೆ ಸಾಗುತ್ತಿದ್ದ ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿದೆ. ಗೋವಿನ ಜೋಳದ ಮೂಟೆ ಹೊತ್ತು ಸಾಗುತ್ತಿದ್ದ ಲಾರಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಎರಡೂ ಲಾರಿಗಳಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಘಟನೆಯಲ್ಲಿ ಅದೃಷ್ಟವಶಾತ್ …
Read More »ನಾಳೆ NEET-UG ಮರುಪರೀಕ್ಷೆ, ಇಂದು ಮೆಗಾ ಮಾಕ್‌ಡ್ರಿಲ್ – 15,000 ಅರೆಸೈನಿಕ ಸಿಬ್ಬಂದಿ ಪತ್ರಿಕೆ ರವಾನೆ
ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆಯಿಂದ ದೇಶಾದ್ಯಂತ ಸಂಚಲನ ಮೂಡಿಸಿದ್ದ ನೀಟ್-ಯುಜಿ ಮರುಪರೀಕ್ಷೆ ನಾಳೆ (ಜೂ.21) ದೇಶದ 551 ನಗರಗಳಲ್ಲಿ ನಡೆಯಲಿದೆ. ಈ ಹಿನ್ನೆಲೆ ಇಂದು (ಶನಿವಾರ) ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ರಾಷ್ಟ್ರವ್ಯಾಪಿ ಮಾಕ್ ಡ್ರಿಲ್ ನಡೆಸಲಿದೆ. ನೀಟ್ ಪರೀಕ್ಷೆಗೆ ಇದುವರೆಗೂ ನೋಡಿರದ ರೀತಿಯ ಭದ್ರತಾ ವ್ಯವಸ್ಥೆಯನ್ನು ಎನ್‌ಟಿಎ ನಿಯೋಜಿಸಿದ್ದು, ಈ ಸಂಬಂಧ ಇಂದು ಅಣುಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಬೆಳಗ್ಗೆ 9 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ಪೂರ್ಣ ಪ್ರಮಾಣದ ಅಭ್ಯಾಸ ನಡೆಯಲಿದೆ. …
Read More »ಬಿ.ವಿ.ವಿ.ಸಂಘದ ನೇತೃತ್ವದಲ್ಲಿ ಜೂ.21ರಂದು 10 ಸಾವಿರ ಜನರೊಂದಿಗೆ ಬೃಹತ್ ಯೋಗ ದಿನಾಚರಣೆ
ಬಾಗಲಕೋಟೆ,: ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ನೇತೃತ್ವದಲ್ಲಿ ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಗರದ ಮೂರು ಸ್ಥಳಗಳಲ್ಲಿ ಏಕಕಾಲದಲ್ಲಿ ಆಯೋಜಿಸಲಾಗಿದ್ದು, ಸುಮಾರು 10 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ಬಿ.ವಿ.ವಿ.ಸಂಘದ ಕಾರ್ಯಾಧ್ಯಕ್ಷರಾದ ಡಾ. ವೀರಣ್ಣ ಚರಂತಿಮಠ ತಿಳಿಸಿದರು. ನಗರದ ಬಿ.ವಿ.ವಿ. ಸಂಘದ ಮಿನಿ ಸಭಾಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಆರೋಗ್ಯಕರ ಜೀವನಕ್ಕಾಗಿ ಯೋಗ” ಎಂಬ ಘೋಷವಾಕ್ಯದಡಿ ಯೋಗ ದಿನಾಚರಣೆ ನಡೆಯಲಿದ್ದು, ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಬಹುದು …
Read More »ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ
ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ ಮಾಳೂರು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಯಲ್ಲಿ ಒಂದು ಕೋಟಿ ರೂ. ಮೌಲ್ಯದ ಬಂಗಾರದ ವಸ್ತುವಿನ ಜೊತೆಗೆ ಆರೋಪಿಯನ್ನ ಸಹ ವಶಕ್ಕೆ ಪಡೆದಿದ್ದಾರೆ. ತೀರ್ಥಹಳ್ಳಿಯ ಮಹಿಷಿ ಗ್ರಾಮದಲ್ಲಿರುವ ಶ್ರೀ ಸತ್ಯಸಂಧ ಉತ್ತರಾದಿ ಮಠದಲ್ಲಿ ಜೂ.17 ರ ಸಂಜೆ ವೇಳೆಗೆ ಸುಮಾರು 1.1 ಕೋಟಿ ಮೌಲ್ಯದ 780 ಗ್ರಾಂ ತೂಕದ …
Read More »ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ ಯವಕರು ವಶಕ್ಕೆ
ಬೆಳಗಾವಿ: ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ಯುವಕರ ಗುಂಪಿನ ಮಧ್ಯೆ ನಡೆಯುತ್ತಿದ್ದ ಗಲಾಟೆ ಬಿಡಿಸಲು ಮುಂದಾದ ಪೊಲೀಸ್ ಮೇಲೆ ಹಲ್ಲೆ ಮಾಡಿದ ಘಟನೆ ಗುರುವಾರ ನಡೆದಿದ್ದು, ಮಾರ್ಕೆಟ್ ಠಾಣೆ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ. ರುಕ್ಮೀಣಿ ನಗರದ ಯುವಕರು ಹಳೇ ಪ್ರಕರಣದ ಸಾಕ್ಷಿಗಾಗಿ ನ್ಯಾಯಾಲಯಕ್ಕೆ ಬಂದಿದ್ದರು. ಈ ವೇಳೆ ಎರಡೂ ಕಡೆಯವರ ನಡುವಿನ ಗಲಾಟೆ ವಾಹನ ಸಂಚಾರಕ್ಕೂ ಅಡ್ಡಿಯಾಗಿತ್ತು. ಇವರ ಜಗಳ ಬಿಡಿಸಲು ಬಂದಿದ್ದ ಮಾರ್ಕೆಟ್ ಠಾಣೆಯ ಮಲ್ಲಿಕಾರ್ಜುನ ಗುಂಜೀಕರ …
Read More »ಉತ್ತಮ ಆಹಾರ ಪದ್ಧತಿ ರೂಢಿಸಿಕೊಳ್ಳಿ
ಬೆಳಗಾವಿ: ಆಹಾರ ಪದಾರ್ಥಗಳಿಗೆ ರಾಸಾಯನಿಕ ಬಳಸುತ್ತಿರುವುದರಿಂದ ಹಲವು ರೋಗ ಬರುತ್ತಿವೆ. ಮುಖ್ಯವಾಗಿ ಕ್ಯಾನ್ಸರ್‌ನಂತಹ ಮಾರಕ ರೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದನ್ನು ತಡೆಯಲು ಉತ್ತಮ ಆಹಾರ ಪದ್ಧತಿ ಹಾಗೂ ಕ್ರಮಬದ್ಧ ಆರೋಗ್ಯ ತಪಾಸಣೆ ರೂಢಿಸಿಕೊಳ್ಳುವುದು ಮುಖ್ಯ ಎಂದು ಕೆಎಲ್‌ಇ ಸಂಸ್ಥೆಯ ಡಾ.ಸಂಪತಕುಮಾರ ಎಸ್.ಶಿವಣಗಿ ಕ್ಯಾನ್ಸರ್ ಆಸ್ಪತ್ರೆ ವೈದ್ಯೆ ಡಾ.ಅಮೃತಾ ಹೇಳಿದರು. ಹುಕ್ಕೇರಿ ತಾಲೂಕಿನ ಅರ್ಜುನವಾಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಿಂಡಾಲ್ಕೊ, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯು ಕೆಎಲ್‌ಇ …
Read More »ಎಸ್‌ಐಆರ್ ಯಶಸ್ಸಿಗೆ ಸದಸ್ಯರ ಸಹಕಾರ ಅಗತ್ಯ
ಬೆಳಗಾವಿ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಆರಂಭವಾಗಲಿದ್ದು, ಇದರ ಯಶಸ್ಸಿಗೆ ನಗರ ಸೇವಕರ ಸಹಕಾರ ಅಗತ್ಯ. ಈ ನಿಟ್ಟಿನಲ್ಲಿ ಎಸ್‌ಐಆರ್ ಬಗ್ಗೆ ತಮ್ಮ ವಾರ್ಡ್‌ಗಳಲ್ಲಿ ಜನರಿಗೆ ಜಾಗೃತಿ ಮೂಡಿಸಬೇಕು ಎಂದು ಪಾಲಿಕೆ ಆಯುಕ್ತ ಕಾರ್ತಿಕ ಎಂ. ಮನವಿ ಮಾಡಿದರು. ಪಾಲಿಕೆಯಲ್ಲಿ ಗುರುವಾರ ನಗರ ಸೇವಕರಿಗಾಗಿ ಏರ್ಪಡಿಸಿದ್ದ ಎಸ್‌ಐಆರ್ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿ. 40 ಮೇಲ್ವಿಚಾರಕರ ಮಾರ್ಗದರ್ಶನದಲ್ಲಿ ಉತ್ತರ, ದಕ್ಷಿಣ ಸೇರಿ 514 ಮತಗಟ್ಟೆ ಅಧಿಕಾರಿಗಳು …
Read More »
Laxmi News 24×7