Breaking News

Monthly Archives: ಜೂನ್ 2026

ಪವಿತ್ರಾಗೌಡಗೆ ಯಾವುದೇ ವಿಶೇಷ ಸೌಲಭ್ಯ ನೀಡ್ತಿಲ್ಲ– ಜೈಲಧಿಕಾರಿಗಳ ಸ್ಪಷ್ಟನೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪವನ್ನು ಜೈಲಧಿಕಾರಿಗಳು ತಳ್ಳಿ ಹಾಕಿ, ಯಾವುದೇ ವಿಶೇಷ ಸೌಲಭ್ಯ ನೀಡುತ್ತಿಲ್ಲ ಎಂದು ಸ್ಷಷ್ಟನೆ ನೀಡಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದರಲ್ಲಿ ಮಾತನಾಡಿದ್ದ ಸಂಧ್ಯಾ ನಾಗರಾಜ್‌, ಜೈಲಿನಲ್ಲಿ ಅಧಿಕಾರಿಗಳು ಆಕೆಗೆ ಸಹಕಾರ ಕೊಡ್ತಿದ್ದಾರೆ. ಪ್ರತಿದಿನ ಬಾಕ್ಸ್‌ನಲ್ಲಿ ಊಟ ತಂದುಕೊಡ್ತಾರೆ. ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ಇದೀಗ ಜೈಲಧಿಕಾರಿಗಳು ಅಧಿಕೃತ ಮಾಧ್ಯಮ …

Read More »

ಬೆಂಗಳೂರಲ್ಲಿ ನೀರಿನ ಘಟಕಕ್ಕೆ ಬಿದ್ದು ಇಬ್ಬರು ಕಾರ್ಮಿಕರು ಕಣ್ಮರೆ

ಬೆಂಗಳೂರು: ಜಲಮಂಡಳಿಯ ನೀರಿನ ಘಟಕಕ್ಕೆ ಬಿದ್ದು ಇಬ್ಬರು ಕಾರ್ಮಿಕರು ಕಣ್ಮರೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಹಾರ ಮೂಲದ ಬ್ರಿಜೇಶ್ (30), ತಮಿಳುನಾಡು ಮೂಲದ ಅಖಿಲೇಶ್ (30) ನಾಪತ್ತೆಯಾದ ಕಾರ್ಮಿಕರು. ವರ್ತೂರಿನ ಬೆಳಗೆರೆಯಲ್ಲಿರುವ ಸಂರಕ್ಷಣಾ ಘಟಕದಲ್ಲಿ ಅವಘಡ ಸಂಭವಿಸಿದೆ. ಟ್ಯಾಂಕ್ ಬಳಿ ಮೂವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಮೂವರು ಸಹ ಆಯತಪ್ಪಿ ಟ್ಯಾಂಕ್ ಒಳಗೆ ಬಿದ್ದಿದ್ದಾರೆ. ತಕ್ಷಣ ಓರ್ವನನ್ನ ಉಳಿದ ಕಾರ್ಮಿಕರು ಬಚಾವ್‌ ಮಾಡಿದ್ದಾರೆ. ಆದರೆ, ಇನ್ನಿಬ್ಬರು ನಾಪತ್ತೆಯಾಗಿದ್ದು, ಹುಡುಕಾಟ …

Read More »

ವಚನಾನಂದ ಶ್ರೀ ಜಾಮೀನು ರದ್ದತಿ ಅರ್ಜಿ ಅದೇಶ ಜೂನ್ 30ಕ್ಕೆ ಮುಂದೂಡಿಕೆ

ದಾವಣಗೆರೆ: ಹರಿಹರದ ( ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು ದಾವಣಗೆರೆಯ ವಿಶೇಷ ಪೋಕ್ಸೋ ನ್ಯಾಯಾಲಯ ಜೂನ್ 30ಕ್ಕೆ ಕಾಯ್ದಿರಿಸಿದೆ. ವಚನಾನಂದ ಸ್ವಾಮೀಜಿ ಪಡೆದಿರುವ ನಿರೀಕ್ಷಣಾ ಜಾಮೀನು ರದ್ದು ಕೋರಿ ಹರಿಹರ ಗ್ರಾಮಾಂತರ ಠಾಣೆಯ ಪೊಲೀಸರು ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.‌ ಜಾಮೀನು ರದ್ದು ಅರ್ಜಿ ವಿಚಾರಣೆ ಕಳೆದ ಜೂ.11 ರಂದು ನಡೆದಿತ್ತು. ಈಗ ಹೈಕೋರ್ಟ್‌‌ನಲ್ಲಿ ಜೂ.23ಕ್ಕೆ ವಚನಾನಂದ ಸ್ವಾಮೀಜಿ ಜಾಮೀನು ಅರ್ಜಿ ವಿಚಾರಣೆ ಇದ್ದು, ಹೈಕೋರ್ಟ್ ಅದೇಶದ ಬಳಿಕ …

Read More »

ಅನುಮಾನ ಏನಿಲ್ಲ, ನಮ್ಮಪ್ಪ ಜೆಡಿಎಸ್‌ಗೆ ಮತ ಹಾಕಿದ್ದಾರೆ – ಪುತ್ರ ಹರೀಶ್‌ ಗೌಡ ವಿಶ್ವಾಸ

ಬೆಂಗಳೂರು: ರಾಜ್ಯದಲ್ಲಿ ವಿಧಾನಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಎಲ್ಲಾ ಪಕ್ಷಗಳ ಶಾಸಕರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಆದ್ರೆ ಕಾಂಗ್ರೆಸ್‌ ಐದನೇ ಅಭ್ಯರ್ಥಿಯ ಗೆಲುವಿನ ಲೆಕ್ಕಾಚಾರ ಜೋರಾಗಿರುವ ಹೊತ್ತಿನಲ್ಲೇ ಜೆಡಿಎಸ್‌ಗೆ ಅಡ್ಡಮತದಾನದ ಭೀತಿ ಎದುರಾಗಿದೆ. ಇಂದು ಪರಿಷತ್‌ ಚುನಾವಣೆಯಲ್ಲಿ  ಜೆಡಿಎಸ್‌ ಶಾಸಕ ಜಿ.ಟಿ ದೇವೇಗೌಡ ಅವರು ಅಡ್ಡ ಮತದಾನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಜಿ.ಟಿ ದೇವೇಗೌಡ ಅವರ ಪುತ್ರ ಜಿ.ಡಿ ಹರೀಶ್‌ ಗೌಡ ( ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. …

Read More »

ಕರ್ನಾಟಕ ಹೆಚ್ಚುವರಿ ಕಾವೇರಿ ನೀರನ್ನು ಮಾತ್ರ ಹರಿಸುತ್ತಿದೆ – ವಿಜಯ್‌ ಸರ್ಕಾರದ ಕ್ಯಾತೆ

ಚೆನ್ನೈ: ಸುಪ್ರೀಂಕೋರ್ಟ್ ಆದೇಶದ ಅನ್ವಯ ಪ್ರತಿ ವರ್ಷ ನಿಗಧಿತ ಪ್ರಮಾಣದಲ್ಲಿ ಕಾವೇರಿ ನೀರು ಹರಿಸಿದರೂ ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳುನಾಡಿನ ಹೊಸ ಸರ್ಕಾರ ತಗಾದೆ ತೆಗೆದಿದೆ. ಕರ್ನಾಟಕ, ತಮಿಳುನಾಡಿನ ನೀರಿನ ಪಾಲು ಹರಿಸುತ್ತಿಲ್ಲ. ಅದರ ಬದಲಿಗೆ ಕೇವಲ ಹೆಚ್ಚುವರಿ ನೀರನ್ನು ಮಾತ್ರ ಹರಿಸಲಾಗುತ್ತಿದೆ ಎಂದು ಆರೋಪಿಸಿದೆ.  ತಮಿಳುನಾಡಿನಲ್ಲಿ ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾತನಾಡಿದರು. ರಾಜ್ಯಪಾಲರ ಭಾಷಣದಲ್ಲಿ ಕರ್ನಾಟಕದ ವಿರುದ್ಧ ತಮಿಳುನಾಡು ಸರ್ಕಾರದ ಈ …

Read More »

ಯತ್ನಾಳ್ ಮತ ಅಸಿಂಧು ಆಕ್ಷೇಪ ತಿರಸ್ಕಾರ – ಮತಗಟ್ಟೆಯಲ್ಲಿ ಉಲ್ಲಂಘನೆ ಆಗಿಲ್ಲ ಎಂದ ಚುನಾವಣಾಧಿಕಾರಿ

ಬೆಂಗಳೂರು: ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಅವರ ಮತವನ್ನು ಅಸಿಂಧುಗೊಳಿಸಬೇಕೆಂಬ ಕಾಂಗ್ರೆಸ್‌ ಆಕ್ಷೇಪವನ್ನ ಚುನಾವಣಾಧಿಕಾರಿಗಳು ತಿಸ್ಕರಿಸಿದ್ದಾರೆ. ಮತಗಟ್ಟೆಯೊಳಗೆ ಯಾವುದೇ ನಿಯಮ ಉಲ್ಲಂಘನೆ ಆಗಲ್ಲ ಎಂದು ಹೇಳಿ ಚುನಾವಣಾಧಿಕಾರಿಗಳು ಕಾಂಗ್ರೆಸ್‌ (Congress) ಆಕ್ಷೇಪವನ್ನ ತಿರಸ್ಕರಿಸಿದ್ದಾರೆ. ಇ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಬಿಜೆಪಿ (BJP) ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರಿಗೆ ಬಹಿರಂಗವಾಗಿ ಪತ್ರ ಹಾಕುತ್ತೇನೆ ಎಂದಿದ್ದರು. ಇದನ್ನ ಕಾಂಗ್ರೆಸ್‌ ಪ್ರಶ್ನೆ ಮಾಡಿತ್ತು. ಯತ್ನಾಳ್‌ ರೂಲ್‌ 39 ಉಲ್ಲಂಘನೆ …

Read More »

10 ಲಕ್ಷ ವರದಕ್ಷಿಣೆಗಾಗಿ ಪತ್ನಿಗೆ ಚಿತ್ರಹಿಂಸೆ – ಕುಕ್ಕರ್‌ನಿಂದ ಹಲ್ಲೆ ಮಾಡಿ ಹತ್ಯೆ

ಕೋಲಾರ: ವ್ಯಕ್ತಿಯೊಬ್ಬ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕುಕ್ಕರ್‌ನಿಂದ ಹೊಡೆದು ಹತ್ಯೆ ಮಾಡಿದ ಘಟನೆ ಕೋಲಾರದ  ಹಸಾಳ ಗ್ರಾಮದಲ್ಲಿ ನಡೆದಿದೆ. ಸಹನಾ (24) ಪತಿಯಿಂದ ಹತ್ಯೆಯಾದ ಮಹಿಳೆ. ಮಂಜುನಾಥ್ ಪತ್ನಿಯನ್ನು ಹತ್ಯೆಗೈದ ಆರೋಪಿಯಾಗಿದ್ದಾನೆ. ದಂಪತಿಗೆ ಮದುವೆಯಾಗಿ 5 ವರ್ಷ ಕಳೆದಿದ್ದು, ಇಬ್ಬರು ಗಂಡುಮಕ್ಕಳಿದ್ದಾರೆ. ಈತ ಮದುವೆಯಾದಾಗಿನಿಂದ ಪದೇ ಪದೇ ಮಹಿಳೆಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ಈ ಹಿಂದೆ ಮದುವೆಗೆ ಲಕ್ಷಾಂತರ ರೂಪಾಯಿ ಖರ್ಚಾಗಿದೆ ಎಂದು 2 ಲಕ್ಷ ರೂ. ಪಡೆದಿದ್ದನಂತೆ. …

Read More »

ನೀಟ್ ಮರುಪರೀಕ್ಷೆಗೂ ಮುನ್ನ ಡೆತ್‌ನೋಟ್‌ ಬರೆದು ವಿದ್ಯಾರ್ಥಿನಿ ಆತ್ಮಹತ್ಯೆ

ಡೆಹ್ರಾಡೂನ್: ನೀಟ್  ಮರುಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ 23 ವರ್ಷದ ಯುವತಿ  ಡೆತ್‌ನೋಟ್‌  ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ನಡೆದಿದೆ. ಮೃತ ಯುವತಿಯನ್ನು ರಿಯಾ ಕುಮಾರಿ ಎಂದು ಗುರುತಿಸಲಾಗಿದೆ. ರಿಯಾ ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಳು. ಪಿಯುಸಿಯಲ್ಲಿ ಶೇ.96.7 ಅಂಕ ಗಳಿಸಿ ಕಾಲೇಜ್‌ ಟಾಪರ್‌ ಕೂಡ ಆಗಿದ್ದರು. ನೀಟ್‌ ಮರುಪರೀಕ್ಷೆ ಕುರಿತು ಒತ್ತಡದಲ್ಲಿದ್ದಳು ಎಂದು ಆಕೆಯ ಕುಟುಂಬಸ್ಥರು ತಿಳಿಸಿದ್ದಾರೆ.  ಘಟನೆ ನಡೆದ ದಿನ ತಾಯಿ ಊಟಕ್ಕೆ ಕರೆಯಲು ಹೋದಾಗ ಬಾಗಿಲು …

Read More »

ಮೇಕೆದಾಟು ಹಾರ್ಟ್‌ ಆಫ್‌ ಡಿ.ಕೆ.ಶಿವಕುಮಾರ್‌ ಅಲ್ಲ, ಹಾರ್ಟ್‌ ಆಫ್‌ ದಕ್ಷಿಣ ಭಾರತ: ಸಿಎಂ

ಬೆಂಗಳೂರು: ಮೇಕೆದಾಟು ಯೋಜನೆ ( ದಕ್ಷಿಣ ಭಾರತದ ಹೃದಯದಂತ ಯೋಜನೆ. ಈ ಯೋಜನೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಹಿತ ಅಡಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್  ತಿಳಿಸಿದರು. ವಿಧಾನಸೌಧದಲ್ಲಿ ವಿಧಾನ ಪರಿಷತ್ ಚುನಾವಣೆ ಮತದಾನದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಸಿಎಂ ಪ್ರತಿಕ್ರಿಯೆ ನೀಡಿದರು. ತಮಿಳುನಾಡು ಸರ್ಕಾರ ನಿಮ್ಮ ಹೃದಯಕ್ಕೆ ಹತ್ತಿರವಾದ ಮೇಕೆದಾಟು ಯೋಜನೆ ತಡೆಯಲು ಕಾನೂನು ಅವಕಾಶ ಹುಡುಕುತ್ತಿದೆ ಎಂದು ಕೇಳಿದಾಗ, ʼಮೇಕೆದಾಟು ಕೇವಲ ನನ್ನ ಹೃದಯಕ್ಕೆ ಮಾತ್ರ ಹತ್ತಿರವಾಗಿಲ್ಲ. ಮೇಕೆದಾಟು …

Read More »

ತೋಟಕ್ಕೆ ವಾಕಿಂಗ್ ತೆರಳಿದ್ದ ವೃದ್ಧೆಯ ಭೀಕರ ಕೊಲೆ

ತುಮಕೂರು: ತೋಟಕ್ಕೆ ವಾಕಿಂಗ್‌ಗೆಂದು  ತೆರಳಿದ್ದ ವೃದ್ಧೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಸಿಎನ್ ದುರ್ಗದ ದಾಸಲುಕುಂಟೆಯಲ್ಲಿ ನಡೆದಿದೆ. ರತ್ನಮ್ಮ (74) ಕೊಲೆಯಾದ ವೃದ್ಧೆ. ರತ್ನಮ್ಮ ಮಂಗಳವಾರ ಸಂಜೆ ವಾಕಿಂಗ್‌ಗೆಂದು ತೆರಳಿದ್ದು, ರಾತ್ರಿಯಾದರೂ ಮನೆಗೆ ವಾಪಸ್ ಆಗಿರಲಿಲ್ಲ. ಈ ಹಿನ್ನೆಲೆ ಅನುಮಾನಗೊಂಡ ಸೊಸೆ ಭಾಗ್ಯಮ್ಮ ಹಾಗೂ ಊರಿನ ಜನರು ರತ್ನಮ್ಮನಿಗಾಗಿ ಹುಡುಕಾಡಿದ್ದಾರೆ. ಈ ವೇಳೆ ಮನೆಯಿಂದ ಒಂದು ಕಿ.ಮಿ ದೂರದ ತೋಟದ ಮನೆ ಬಳಿ ರತ್ನಮ್ಮ …

Read More »