ನವದೆಹಲಿ: ಭಾರತದ ರಕ್ಷಣಾ ಉತ್ಪಾದನೆಯು 2025-26ರ ಹಣಕಾಸು ವರ್ಷದಲ್ಲಿ ದಾಖಲೆಯ 1.78 ಲಕ್ಷ ಕೋಟಿ ರೂ. ಮಟ್ಟ ತಲುಪಿದೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ 15.6 ಪ್ರತಿಶತ ಹೆಚ್ಚಳವಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇದನ್ನು ಆತ್ಮನಿರ್ಭರ ಭಾರತದ ದೊಡ್ಡ ಸಾಧನೆ ಎಂದು ಬಣ್ಣಿಸಿದ್ದಾರೆ. ಹಿಂದಿನ ಹಣಕಾಸು ವರ್ಷ 2024-25ರಲ್ಲಿ ರಕ್ಷಣಾ ಉತ್ಪಾದನೆ 1.54 ಲಕ್ಷ ಕೋಟಿ ರೂ. ಇತ್ತು. 2020-21ರಲ್ಲಿ ಇದು 84,643 ಕೋಟಿ ರೂ. ಮಾತ್ರ ಇತ್ತು. …
Read More »Monthly Archives: ಜೂನ್ 2026
ನಾನು ಚಿನ್ನಯ್ಯನ ಜೊತೆ ಮಾತನಾಡಿದ್ದು ನಿಜ: ಪ್ರಕಾಶ್ ರಾಜ್
ಬೆಂಗಳೂರು: ಚಿನ್ನಯ್ಯನ ಜೊತೆಗೆ ಮಾತನಾಡಿದ್ದು ನಿಜ, ಆತ ನನ್ನೊಂದಿಗೆ ತಮಿಳಿನಲ್ಲಿ ಮಾತನಾಡಿದ್ದ ಎಂದು ನಟ ಪ್ರಕಾಶ್ ರಾಜ್ ಒಪ್ಪಿಕೊಂಡರು. ಬೆಂಗಳೂರಿನ ಪತ್ರಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ತನ್ನ ಹೆಸರು ತಳುಕು ವಿಚಾರಕ್ಕೆ ಸ್ಪಷ್ಟನೆ ನೀಡಿದರು. ಕೋರ್ಟ್ ನಲ್ಲಿ ಚಿನ್ನಯ್ಯ ಹೇಳಿಕೆ ನೀಡಿದ್ದಾನೆ. ಗಿರೀಶ್ ಮಟ್ಟಣ್ಣನವರ್ ಹೇಳಿದ ರೀತಿಯಲ್ಲಿ ಕೇಳಿದ್ರೆ ನಾನು ನಿನ್ನ ಅಪ್ಪಿಕೊಳ್ತಿನಿ ಅಂದಿದ್ದೆ ಅಂತ ಹೇಳಿದ್ದಾನೆ. ಕೇರಳದಿಂದ ಹಣ ಬಂದಿದೆ ಅಂತಲೂ ಹೇಳಿ, …
Read More »ಭಾನುವಾರ ಅಖಂಡ ಶ್ರೀನಿವಾಸ ಮೂರ್ತಿ ಜೆಡಿಎಸ್‌ಗೆ ಸೇರ್ಪಡೆ
ಬೆಂಗಳೂರು: ಅಖಂಡ ಶ್ರೀನಿವಾಸ ಮೂರ್ತಿ ತಮ್ಮ ಬೆಂಬಲಿಗರೊಂದಿಗೆ ಭಾನುವಾರ ಜೆಡಿಎಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ, ಕುಮಾರಸ್ವಾಮಿ ಸಮ್ಮುಖದಲ್ಲಿ ಪಕ್ಷ ಸೇರಲಿದ್ದಾರೆ. ಇತ್ತೀಚೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಅಖಂಡ ಮನೆಗೆ ತೆರಳಿ ಮಾತುಕತೆ ನಡೆಸಿ ಪಕ್ಷಕ್ಕೆ ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಸಗಾಯಪುರಂ ಪುಟ್ಬಾಲ್ ಕ್ರೀಡಾಂಗಣದಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ. ಸಮಾವೇಶದಲ್ಧಿಕೃತವಾಗಿ ಪಕ್ಷ ಸೇರಲಿದ್ದಾರೆ.
Read More »ಬಿಡದಿ ಟೌನ್‌ಶಿಪ್ ಯೋಜನೆ ವ್ಯಾಪ್ತಿಯ ಗ್ರಾಮಗಳಿಗೆ ಬಿಜೆಪಿ ನಿಯೋಗ ಭೇಟಿ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಲು ಬಿಜೆಪಿ ನಿಯೋಗವು ಯೋಜನಾ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹಾಗೂ ಸಂಸದ ಡಾ. ಸಿ.ಎನ್. ಮಂಜುನಾಥ್ ಅವರನ್ನೊಳಗೊಂಡ ನಿಯೋಗವು ಮೊದಲು ಭೈರಮಂಗಲ ಗ್ರಾಮದ ಹಾಲಿನ ಡೈರಿಗೆ …
Read More »ಸುಳ್ಳು ಸುದ್ದಿ ಹರಡಿದವರ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ
ತಮ್ಮ ಕುರಿತಾಗಿ ಸುಳ್ಳು ಸುದ್ದಿ ಹಬ್ಬಿಸಿದವರ ಚಳಿ ಬಿಡಿಸಲು ನಟ ದೊಡ್ಡಣ್ಣ ಮುಂದಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ದೊಡ್ಡಣ್ಣ ನಿಧನರಾಗಿದ್ದಾರೆ ಅಂತ ಸುಳ್ಳು ಸುದ್ದಿ ಹಬ್ಬಿಸಿದ್ದರು. ಈ ಸುದ್ದಿ ರಾಜ್ಯ ಮಟ್ಟದಲ್ಲಿ ವೈರಲ್ ಆಗಿತ್ತು. ಅನೇಕರು ದೊಡ್ಡಣ್ಣ ಅವರಿಗೆ ಕಾಲ್ ಮಾಡಿ ವಿಚಾರಿಸಿದ್ದರು. ಇದೀಗ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ನಟ ದೂರು ನೀಡಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿದ ದಿನವೇ ವಿಡಿಯೋ ಮಾಡಿ ತಾವು ಆರೋಗ್ಯದಿಂದ ಇರುವುದಾಗಿ …
Read More »ಇಡೀ ಸಮಾಜವಾದಿ ಪಕ್ಷ ಬಿಜೆಪಿ ಜೊತೆ ಸೇರಲು ಕಾದು ಕುಳಿತಿದೆ – ಓಂ ಪ್ರಕಾಶ್ ರಾಜ್‌ಭರ್
ಲಕ್ನೋ: ಮಹಾರಾಷ್ಟ್ರ ಮತ್ತು ಪಶ್ಚಿಮಬಂಗಾಳ ರಾಜಕೀಯವನ್ನು ಮರೆತು ಬಿಡಿ. ಸಮಾಜವಾದಿ ಪಕ್ಷದಲ್ಲಿ ಶೀಘ್ರದಲ್ಲೇ ಒಡಕು ಉಂಟಾಗಲಿದೆ. ಇಡೀ ಸಮಾಜವಾದಿ ಪಕ್ಷವೇ ಭಾರತೀಯ ಜನತಾ ಪಕ್ಷ ಸೇರಲು ಸಿದ್ಧವಾಗಿ ಕುಳಿತಿದೆ ಎಂದು ರಾಜ್ಯ ಸಚಿವ ಹಾಗೂ ಎಸ್‌ಬಿಎಸ್‌ಪಿ (ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷ) ಮುಖ್ಯಸ್ಥ ಓಂ ಪ್ರಕಾಶ್ ರಾಜ್‌ಭರ್ ಹೊಸ ಬಾಂಬ್ ಸಿಡಿಸಿದ್ದಾರೆ. ಸಮಾಜವಾದಿ ಪಕ್ಷ ವಿಭಜನೆಯಾಗಲಿದ್ದು, ಪಕ್ಷದ ಪ್ರಮುಖ ನಾಯಕರಾದ ರಾಮ್ ಗೋಪಾಲ್ ಯಾದವ್ ಈಗಾಗಲೇ ಕೇಂದ್ರ ಗೃಹ ಸಚಿವ …
Read More »KRS ಖಾಲಿ ಖಾಲಿ – ಇನ್ನಿರೋದು ಕೇವಲ 11 ಟಿಎಂಸಿ ನೀರು
ಮಂಡ್ಯ: ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಆರಂಭದಲ್ಲೇ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದೆ. ಇದರ ಬೆನ್ನಲ್ಲೇ ಬರದ ಆತಂಕದಲ್ಲಿರೋ ಮಂಡ್ಯ ಜಿಲ್ಲೆಯ ರೈತರಿಗೆ ಜಿಲ್ಲಾಡಳಿತ ಮತ್ತೊಂದು ಬಿಗ್ ಶಾಕ್ ನೀಡಿದೆ. ಕೃಷ್ಣರಾಜಸಾಗರ ಜಲಾಶಯ ನಾಡಿಗೆ ನೀರುಣಿಸುವ ಡ್ಯಾಂ. ಮಂಡ್ಯ, ಮೈಸೂರು ಕೊಡಗು ಭಾಗದ ರೈತರನ್ನು ಕಾಪಾಡುವ ಜೀವನದಿ. ಬೆಂಗಳೂರಿಗರು ಕುಡಿಯುವ ಹನಿ ಹನಿ ನೀರು ಕೂಡ ಇದೇ ಡ್ಯಾಂನಿಂದ ಬರೋದು. ಜೀವನದಿ ಎಂಬ ಕಾವೇರಿ ಈಗ ಜೀವಕಳೆ ಕಳೆದುಕೊಂಡಿದ್ದಾಳೆ. …
Read More »ಮಳೆ ಇಲ್ಲದೆ ಬರಿದಾದ ಹೇಮಾವತಿ ಒಡಲು
ಹಾಸನ: ಮಲೆನಾಡಿನ ಮಡಿಲು ಹಾಸನ ಜಿಲ್ಲೆಯಲ್ಲಿಯೇ ಈ ಬಾರಿ ಮಳೆಯ ಕೊರತೆ ಆಗಿದ್ದು, ಐದಾರು ಜಿಲ್ಲೆಗಳಿಗೆ ನೀರು ಒದಗಿಸುವ ಹೇಮಾವತಿ ಒಡಲು ಬರಿದಾಗುತ್ತಿದೆ. ಹೀಗಾಗಿ ಇದೇ ನೀರನ್ನು ನಂಬಿ ಬದುಕುತ್ತಿರುವವರಲ್ಲಿ ಆತಂಕ ಹೆಚ್ಚಿದ್ದು, ಮಳೆ ಬಂದರೆ ಸಾಕಪ್ಪ ಎನ್ನುವಂತಾಗಿದೆ. ಜಿಲ್ಲೆಯ ಸಕಲೇಶಫುರ ಬೇಲೂರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಭಾಗದಲ್ಲಿ ಮಳೆ ಸುರಿದರೆ ತುಂಬಿ ಹರಿಯುತ್ತಿದ್ದ ಹೇಮಾವತಿ ನದಿ, ಜಲಾಶಯಕ್ಕೆ ನೀರು ತುಂಬಿಸುತ್ತಿತ್ತು. ಆದರೆ ಈ ವರ್ಷ ಮುಂಗಾರು ಮಳೆಯ ತೀವ್ರ ಕೊರತೆ ಬರದ …
Read More »ಗದಗದ ನರೇಗಲ್ ಪಟ್ಟಣದಲ್ಲಿ ಇದ್ದೂ ಇಲ್ಲದಂತಾದ ಸರ್ಕಾರಿ ಆಸ್ಪತ್ರೆ: ರೋಗಿಗಳಿಗೆ ತಪ್ಪದ ಪರದಾಟ
ಗದಗ: ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಆಸ್ಪತ್ರೆ ನಿರ್ಮಿಸಲಾಗಿದ್ದರೂ ವೈದ್ಯರು ಮತ್ತು ಸಿಬ್ಬಂದಿ ಕೊರತೆಯ ಕಾರಣ ರೋಗಿಗಳು ಪರದಾಟ ನಡೆಸುತ್ತಿರುವ ಸ್ಥಿತಿ ಗದಗ ಜಿಲ್ಲೆಯ ನರೇಗಲ್ ಪಟ್ಟಣದಲ್ಲಿ ಕಂಡುಬಂದಿದೆ. ಕೇಂದ್ರ ಸರ್ಕಾರ ಎನ್ಎಚ್ಎಂ ಯೋಜನೆಯಲ್ಲಿ 2 ಕೋಟಿಗೂ ಅಧಿಕ ಮೊತ್ತದಲ್ಲಿ ಹೈಟೆಕ್ ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡಲಾಗಿದೆ. ಆ ಮೂಲಕ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಭಡ್ತಿ ಪಡೆದಿದೆಯಾದರೂ, ವೈದ್ಯರ ಕೊರತೆಯಿಂದ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಮಾತ್ರ ಮರಿಚೀಕೆಯಾಗಿಯೇ …
Read More »RSS ನೋಂದಣಿ ಬಗ್ಗೆ ಪ್ರಶ್ನಿಸಿದ್ದ ಪ್ರಿಯಾಂಕ್ ಖರ್ಗೆಗೆ ಬಹಿರಂಗ ಪತ್ರ ಬರೆದ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ನೋಂದಣಿಯ ಬಗ್ಗೆ ಪ್ರಶ್ನೆ ಮಾಡುತ್ತಲೇ ಬಂದಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಈ ಸಂಬಂಧ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಬಹಿರಂಗ ಪತ್ರವೊಂದನ್ನು ಬರೆದಿರೋದು ಚರ್ಚೆಗೆ ಗ್ರಾಸವಾಗಿತ್ತು. ಸಂಘಟನೆಯ ಕಾನೂನುಬದ್ಧ ಸ್ಥಾನಮಾನ ಮತ್ತು ಪಾರದರ್ಶಕತೆಯ ಬಗ್ಗೆ ಅವರು ಕೇಳಿದ್ದ ಪ್ರಶ್ನೆಗಳಿಗೆ ತಿರುಗೇಟು ನೀಡಿದ್ದ ಭಾಗವತ್, ಹಿಂದೂ ಧರ್ಮ ರಿಜಿಸ್ಟರ್ ಆಗಿದೆಯೇ? ಎಂದು ಪ್ರಶ್ನಿಸಿದ್ದರು. ಸರ್ಕಾರಿ ಅನುದಾನ ಪಡೆಯುವವರಿಗೆ ಮಾತ್ರ ನೋಂದಣಿ ಅಗತ್ಯವಿದೆ ಎಂದಿದ್ದರು. ಆ …
Read More »
Laxmi News 24×7