Breaking News

Monthly Archives: ಜೂನ್ 2026

ಜೂ.22 ರವರೆಗೆ ದೇಶದಲ್ಲಿ ಟೆಲಿಗ್ರಾಂ ನಿಷೇಧ – ನೀಟ್‌ ಮರು ಪರೀಕ್ಷೆಗೂ ಮುನ್ನ ಕೇಂದ್ರ ಆದೇಶ

ನವದೆಹಲಿ: ನೀಟ್‌ ಮರುಪರೀಕ್ಷೆಗೆ  ಮುಂಚಿತವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರ ಜೂನ್‌ 22 ರ ವರೆಗೆ ದೇಶದಲ್ಲಿ ಟೆಲಿಗ್ರಾಂ ಅಪ್ಲಿಕೇಷನ್‌ ಅನ್ನು ನಿಷೇಧಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ  ಶಿಫಾರಸಿನ ಮೇರೆಗೆ ʻಮಾಹಿತಿ ತಂತ್ರಜ್ಞಾನ ಕಾಯ್ದೆ-2020 ರ ಸೆಕ್ಷನ್ 69Aʼ ಅಡಿಯಲ್ಲಿ ಟೆಲಿಗ್ರಾಂ ಗೆ ತಾತ್ಕಾಲಿಕ ನಿರ್ಬಂಧ ಹೇರಿದೆ. ಇದರೊಂದಿಗೆ ಜೂನ್ 30 ರ ವರೆಗೆ ಟೆಲಿಗ್ರಾಂನ Message Editing ವೈಶಿಷ್ಟ್ಯವನ್ನ ಸ್ಥಗಿತಗೊಳಿಸಲು ಸೂಚನೆ ನೀಡಿದೆ. ಈಗಾಗಲೇ ಪೋಸ್ಟ್ ಮಾಡಿದ …

Read More »

ನಮ್ಮ ದೇಶದಲ್ಲಿ ಶ್ರೀರಾಮನೇ ಲೆಕ್ಕ ಕೊಡಬೇಕು, ರಾಮನ ಹೆಸ್ರಲ್ಲಿ ರಾಜಕೀಯ ಮಾಡಿದವರು ಲೆಕ್ಕ ಕೊಡಬಾರದ?: ಪ್ರಿಯಾಂಕ್‌ ಖರ್ಗೆ

ನವದೆಹಲಿ: ನಮ್ಮ ದೇಶದಲ್ಲಿ ಶ್ರೀರಾಮನೇ ಲೆಕ್ಕ ಕೊಡಬೇಕು, ಶ್ರೀರಾಮನ ಹೆಸರಿನಲ್ಲಿ ರಾಜಕೀಯ ಮಾಡಿದವರು ಲೆಕ್ಕ ಕೊಡಬಾರದಾ ಅಂತ ಸಚಿವ ಪ್ರಿಯಾಂಕ್‌ ಖರ್ಗೆ  ಪ್ರಶ್ನೆ ಮಾಡಿದರು. ಆರ್‌ಎಸ್‌ಎಸ್ ನೋಂದಣಿ ಮತ್ತು ಹಣಕಾಸು ವಹಿವಾಟುಗಳ ಮಾಹಿತಿ ಕೋರಿ ಸರ ಸಂಘ ಸಂಚಾಲಕ ಮೋಹನ್ ಭಾಗವತ್‌ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬರೆದ ಪತ್ರ ರಾಜ್ಯದಲ್ಲಿ ಸಂಚಲನ ಸೃಷ್ಠಿಸಿದೆ. ಪತ್ರದ ಬೆನ್ನಲ್ಲೇ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದಿದ್ದಾರೆ. ಬಿಜೆಪಿ …

Read More »

ಧರ್ಮಸ್ಥಳ ಬುರುಡೆ ಕೇಸ್‌ – ತನಿಖಾ ತಂಡದ ಕಾರು ಚಾರ್ಮಾಡಿಯಲ್ಲಿ ಪಲ್ಟಿ

ಮಂಗಳೂರು: ಧರ್ಮಸ್ಥಳಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಎಸ್ಪಿ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್‌ ಬಳಿ ನಡೆದಿದೆ. ಎಸ್‌ಐಟಿ ಎಸ್ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಚಾಲಕ ಹಾಗೂ ಮತ್ತೋರ್ವ ಸಿಬ್ಬಂದಿ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಿಕ್ಕಮಗಳೂರು ಎಸ್ಪಿ ಹಾಗೂ ಎಸ್‌ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಲು ತೆರಳುತ್ತಿದ್ದ ವೇಳೆ …

Read More »

ಟೈರ್ ಬ್ಲಾಸ್ಟ್ ಆಗಿ ಬಸ್ಸಿಗೆ ಟಿಪ್ಪರ್ ಡಿಕ್ಕಿ – ಮೂವರು ದುರ್ಮರಣ, 10 ಮಂದಿಗೆ ಗಾಯ

ವಿಜಯಪುರ: ಟೈರ್ ಬ್ಲಾಸ್ಟ್  ಆಗಿ ಟಿಪ್ಪರ್  ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಮಂದಿ ಪ್ರಯಾಣಿಕರು ಗಂಭೀರ ಗಾಯಗೊಂಡಿರುವ ಘಟನೆ ವಿಜಯಪುರ  ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ನಡೆದಿದೆ. ಟಿಪ್ಪರ್ ಟೈರ್ ಬ್ಲಾಸ್ಟ್ ಆದ ಕಾರಣ ಅಪಘಾತ ಉಂಟಾಗಿದೆ. ಭೀಕರ ಅಪಘಾತದಲ್ಲಿ ಟಿಪ್ಪರ್‌ನಲ್ಲಿದ್ದ ಚಾಲಕ ಹಾಗೂ ಆತನ ಪತ್ನಿ, ಸರ್ಕಾರಿ ಬಸ್ ಚಾಲಕ ಮೃತಪಟ್ಟಿದ್ದಾರೆ. ಟಿಪ್ಪರ್ ಚಾಲಕ ಅಶೋಕ ಉಟಗಿ ಹಾಗೂ ಪತ್ನಿ …

Read More »

ಬಾಸ್ ಚಿತ್ರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್,ವಿಜಯಲಕ್ಷ್ಮೀ

ಬೆಂಗಳೂರು: ಜೂನ್ 19ರಂದು ರಾಜ್ಯಾದ್ಯಂತ ಬಿಡುಗಡೆ ಆಗಬೇಕಿದ್ದ ಬಹುಚರ್ಚಿತ ಬಾಸ್ (Boss) ಚಲನಚಿತ್ರಕ್ಕೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್ ಅವರು ಚಿತ್ರದ ಬಿಡುಗಡೆಗೆ ತಡೆ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ನಗರ ಸಿವಿಲ್ ನ್ಯಾಯಾಲಯವು ಈ ಹಿಂದೆ ಚಿತ್ರದ ಬಿಡುಗಡೆಗೆ ವಿಧಿಸಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿ ಬಿಡುಗಡೆಗೆ ಅವಕಾಶ ನೀಡಿತ್ತು. ಅದರ ಬೆನ್ನಲ್ಲೇ ಚಿತ್ರತಂಡವು ಜೂನ್ …

Read More »

ಪಂಚ ಗ್ಯಾರಂಟಿ ಯೋಜನೆ ಬಗ್ಗೆ ಆತಂಕ ಬೇಡ: ಮುಂದಿನ ಚುನಾವಣೆ ಬಳಿಕವೂ ಮುಂದುವರೆಯಲಿದೆ: ಸಿದ್ದರಾಮಯ್ಯ ಭರವಸೆ

ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ, ಮುಂದಿನ ಎರಡು ವರ್ಷಗಳ ಕಾಲ ಮಾತ್ರವಲ್ಲ, ಮುಂದಿನ ಚುನಾವಣೆಯಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರಲಿದ್ದೇವೆ, ಅದರ ನಂತರವೂ ಅದು ಮುಂದುವರಿಯಲಿದೆ. ಯೋಜನೆಗಳ ಅನುಷ್ಠಾನದಲ್ಲಿ ಕಂಡು ಬರುವ ದೋಷಗಳನ್ನು ಸರಿಪಡಿಸುವ ಕೆಲಸ ಪ್ರಾರಂಭದಿಂದಲೇ ನಡೆಯುತ್ತಾ ಬಂದಿದೆ, ಈಗಲೂ ಮುಂದುವರೆದಿದೆ. ಈ ಯೋಜನೆಗಳ ಫಲಾನುಭವಿಗಳು ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಟ್ಟು ಆತಂಕಕ್ಕೆ ಈಡಾಗಬೇಕಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಿಜೆಪಿ ಮೂಲತ: ಬಡವರ …

Read More »

ಹೆಲ್ಮೆಟ್ ರಹಿತರಿಗೆ ಪೆಟ್ರೋಲ್ ಇಲ್ಲ ಅಭಿಯಾನ

ಬೆಳಗಾವಿ: ಹೆಲ್ಮೆಟ್ ರಹಿತ ಬೈಕ್ ಚಾಲನೆ ಹೆಚ್ಚಾಗುತ್ತಿರುವುದರಿಂದ ಜೂ.15ರಿಂದ 21ರವರೆಗೆ ನಗರ ಪೊಲೀಸ್ ಕಮೀಷ್ನರೇಟ್ ಹಾಗೂ ನಗರ ಸಂಚಾರ ಪೊಲೀಸರಿಂದ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಹೆಲ್ಮೆಟ್ ರಹಿತರಿಗೆ ಪೆಟ್ರೋಲ್ ಇಲ್ಲ ಎಂಬ ಕಾರ್ಯಕ್ರಮಕ್ಕೆ ಮುಂದಾಗಿದ್ದಾರೆ. ಸೋಮವಾರ ಬೆಳಗ್ಗೆ 11ಕ್ಕೆ ಹೆಲ್ಮೆಟ್ ಜಾಗೃತಿ ಅಭಿಯಾನಕ್ಕೆ ರಾಣಿ ಚನ್ನಮ್ಮ ವೃತ್ತದಲ್ಲಿ ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಸಂದೀಪ ಪಾಟೀಲ ಚಾಲನೆ ನೀಡುವರು. ಜಿಪಂ ಸಿಇಒ ರಾಹುಲ ಶಿಂಧೆ, ಎಸ್ಪಿ ಕೆ.ರಾಮರಾಜನ್, ನಗರ …

Read More »

ಸಚಿವ ಸತೀಶ ಜಾರಕಿಹೊಳಿಗೆ ಅವಹೇಳನಕಾರಿ ಸಹಿಸಲ್ಲ

ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಜ್ಯಾತ್ಯಾತೀಯ ನಾಯಕನಾಗಿ ರಾಷ್ಟ್ರ ಮಟ್ಟದಲ್ಲಿ ಬೆಳೆದಿರುವ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಯನ್ನು  ತುಳಿಯುವ, ಅವಹೇಳನಕಾರಿ ಕೃತ್ಯಗಳನ್ನು ಸಹಿಸುವುದಿಲ್ಲ ಎಂದು ದಲಿತ, ಲಿಂಗಾಯತ, ಅಹಿಂದ ವರ್ಗದ ಮುಖಂಡರು ಎಚ್ಚರಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರೆದಿದ್ದ  ಎಲ್ಲ ಸಮುದಾಯ, ವಿವಿಧ ಸಂಘಟನೆ ಮುಖಂಡರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ  ಮಲ್ಲೇಶ ಚೌಗುಲೆ, ಮಹಾವೀರ ಮೋಹಿತೆ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕಿ ಸುನೀತಾ ಐಹೊಳೆ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಸಚಿವ …

Read More »

ಮಾಜಿ ಸೈನಿಕನ ಕೊಲೆ ರಹಸ್ಯ ಬಯಲು!

ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಮಾಜಿ ಸೈನಿಕ ಸಂದೀಪ್ ಮಂಜರಗಿ (46) ಕೊಲೆ ಪ್ರಕರಣ ರಹಸ್ಯ ಬಯಲಾಗಿದ್ದು, ಪತ್ನಿ,  ಆರ್‌ಎಫ್‌ಎಸ್‌ಎಲ್ ಅಧಿಕಾರಿ, ಯ್ಯೂಟೂಬರ್ ಸೇರಿ 9ಜನರನ್ನು ಬಂಧಿಸಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ಅಕ್ರಮ ಸಂಬಂಧ, 2 ಕೋಟಿ ರೂ. ವಿಮೆಗಾಗಿ ನಡೆದಿರುವ ಮಾಜಿ ಸೈನಿಕ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೊಂದು ಪೂರ್ವನಿಯೋಜಿತ ಕೊಲೆ ಎಂಬುದು  ಮೃತ ಸೈನಿಕನ …

Read More »

ಅಮೆರಿಕಾ ಇರಾನ್ ಯುದ್ಧ ನಿಂತಲ್ಲಿ ವಿಮಾನಯಾನಕ್ಕೆ ವೇಗ

ಬೆಳಗಾವಿ : ಅಮೆರಿಕಾ-ಇರಾನ್ ಒಂದು ಒಪ್ಪಂದಕೆ ಬರುವ ಲಕ್ಷಣಗಳು ಗೋಚರಿಸಿವೆ. ಇನ್ನೆರಡು ದಿನದಲ್ಲಿ ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಬಹುದು. ಇದರಿಂದ ದೇಶದೊಳಗೆ ಕಡಿತಗೊಂಡಿದ್ದ ಎಲ್ಲ ವಿಮಾನಯಾನ ಸೇವೆಗಳಿಗೆ ಪುನಃ ವೇಗ ಸಿಗಲಿದೆ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಆಯೋಜಿಸಿದ್ದ ಯಾತ್ರಿ ಸುವಿಧಾ ದಿನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಲ್ಲಿಂದ ದೇಶದ ಪ್ರಮುಖ ನಗರಗಳಿಗೆ ವಿಮಾನ ಸೇವೆ ನೀಡಲು ಅನೇಕ ಕಂಪನಿಗಳನ್ನು ಕೇಳಿಕೊಂಡಿದ್ದೇವು. ಕೆಲವರು ಒಪ್ಪಿಗೆ …

Read More »