ಬೆಳಗಾವಿ: ಬೆಳಗಾವಿ ನಗರ ಪೊಲೀಸರು ವಿನೂತನ ಕ್ರಮಕ್ಕೆ ಮುಂದಾಗಿದ್ದು, ಇವತ್ತಿನಿಂದ ಒಂದು ವಾರ ಕಾಲ ಹೆಲ್ಮೆಟ್ ಜಾಗೃತಿ ಅಭಿಯಾನವನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಲ್ಮೆಟ್ ಧರಿಸದೆ ಬೇಕಾಬಿಟ್ಟಿ ಬೈಕ್ ಚಲಾಯಿಸಿ ಸಾಕಷ್ಟು ಜನರು ಜೀವ ಕಳೆದುಕೊಳ್ಳುತ್ತಿದ್ದಾರೆ. ಸರ್ಕಾರ, ಜಿಲ್ಲಾಡಳಿತ, ಪೊಲೀಸರು ಅದೇಷ್ಟೇ ಜಾಗೃತಿ ಮೂಡಿಸಿದರೂ ಸವಾರರು ಮಾತ್ರ ಬದಲಾಗುತ್ತಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ ಅವರು, ಯಾರು ಹೆಲ್ಮೆಟ್ ಹಾಕದೇ ಬರುತ್ತಾರೋ, ಅಂತವರ ಬೈಕ್ …
Read More »Monthly Archives: ಜೂನ್ 2026
2 ಕೋಟಿ ವಿಮಾ ಹಣಕ್ಕಾಗಿ ಪತಿ ಹತ್ಯೆ: 9 ಆರೋಪಿಗಳ ಬಂಧನ
ಬೆಳಗಾವಿ: ಬೆಳಗಾವಿ ಜಿಲ್ಲೆಯ ಘಟಪ್ರಭಾ ಮತ್ತು ಯಮಕನಮರ್ಡಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಸಂಚಲನ ಮೂಡಿಸಿದ ಕೊಲೆ ಪ್ರಕರಣವೊಂದನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿ, ಈ ಸಂಬಂಧ ಒಟ್ಟು 9 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮೃತ ಸಂದೀಪ ಕಲಗೌಡ ಮಂಜರಗಿ (46) ಅವರು ನಿವೃತ್ತ ಸೈನಿಕರಾಗಿದ್ದರು. ಅವರ ಹೆಸರಿನಲ್ಲಿ ಎಚ್‌ಡಿಎಫ್‌ಸಿ (HDFC) ಮತ್ತು ಎಸ್‌ಬಿಐ (SBI) ಬ್ಯಾಂಕ್‌ಗಳಲ್ಲಿ ವಿಮೆ ಮಾಡಿಸಲಾಗಿತ್ತು. ರಸ್ತೆ ಅಪಘಾತದಲ್ಲಿ ಮರಣ ಹೊಂದಿದರೆ ಸುಮಾರು 2 ಕೋಟಿ ರೂ. …
Read More »ಹಿರಿಯ ನಾಗರಿಕರೊಂದಿಗೆ ಸೌಜನ್ಯತೆಯಿಂದ ನಡೆದುಕೊಳ್ಳಿ: ನ್ಯಾ.ಕೆ.ಎನ್ ಶಿವಕುಮಾರ
ಬೆಳಗಾವಿ: ಹಿರಿಯ ನಾಗರಿಕರೊಂದಿಗೆ ಸೌಜನ್ಯತೆಯಿಂದ ವರ್ತಿಸುವುದರ ಜೊತೆಗೆ ಅವರಲ್ಲಿನ ಅನುಭವಗಳನ್ನು ಇಂದಿನ ಯುವ ಜನತೆ ಅನುಸರಿಸರಿಸಿದಲ್ಲಿ ಜೀವನದಲ್ಲಿ ಸಾಧನೆಗೈಯಲು ಅನುಕೂಲವಾಗುವುದು ಎಂದು ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿಗಳಾದ ಕೆ.ಎನ್.ಶಿವಕುಮಾರ ಅವರು ಹೇಳಿದರು. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಜೂನ್ 15( ಸೋಮ ವಾರ) ಜರುಗಿದ ವಿಶ್ವ ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆ ಜಾಗೃತಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದ. ಬದಲಾಗುತ್ತಿರುವ ಇಂದಿನ ಆಧುನಿಕ ಜೀವನ ಶೈಲಿಯಲ್ಲಿ …
Read More »ಬೆಳಗಾವಿ ವಿಮಾನ ನಿಲ್ದಾಣದಲ್ಲಿ “ಕಲಾ ನಡಿಗೆ ನಿಮ್ಮ ಬಳಿಗೆ” ಕಾರ್ಯಕ್ರಮ ಯಶಸ್ವಿ
ಬೆಳಗಾವಿ: ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಾರತೀಯ ವಿಮಾನ ನಿಲ್ದಾಣ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ “ಕಲಾ ನಡಿಗೆ ನಿಮ್ಮ ಬಳಿಗೆ” ಕಾರ್ಯಕ್ರಮವು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಭಾರತೀಯ ವಿಮಾನ ನಿಲ್ದಾಣ, ಬೆಳಗಾವಿಯ ನಿರ್ದೇಶಕರಾದ ಎಸ್. ತ್ಯಾಗರಾಜನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕಲಾವಿದರ ಅತ್ಯುತ್ತಮ ಪ್ರದರ್ಶನವನ್ನು ಮೆಚ್ಚಿ, ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ನಮ್ಮ ಪರಂಪರೆ ಮತ್ತು ಕಲೆಯನ್ನು ಜನಸಾಮಾನ್ಯರಿಗೆ ಪರಿಚಯಿಸುವಲ್ಲಿ …
Read More »ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಸೋಮವಾರ (ಜೂ.15) ಮುಂಜಾನೆ ಕೊಚ್ಚಿಯ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಪವಿತ್ರ ಮಾಲೆ ಧರಿಸಿ ಯಾತ್ರೆ ಕೈಗೊಂಡಿದ್ದಾರೆ. ರಾತ್ರಿ 8 ಗಂಟೆಗೆ ಅಯ್ಯಪ್ಪ ಸ್ವಾಮಿಯ =ದರ್ಶನ ಪಡೆಯಲಿದ್ದಾರೆ. ಬಳಿಕ ಸುಮಾರು ಎರಡು ಗಂಟೆಗಳ ಕಾಲ ಪಡಿಪೂಜೆ ಸೇರಿ ವಿಶೇಷ ಪೂಜೆ ಸಲ್ಲಿಕೆ ಮಾಡಲಿದ್ದಾರೆ. = ಕುಮಾರಸ್ವಾಮಿಯವರ ಜೊತೆ ಮಾಜಿ ಸಚಿವ ಸಾ.ರಾ. ಮಹೇಶ್, ಸಿ.ಎಸ್ ಪುಟ್ಟರಾಜು, JDLP ನಾಯಕ ಸುರೇಶ್ …
Read More »ಶಾಸಕ ಇಕ್ಬಾಲ್ ಹುಸೇನ್‌ಗೆ ಎದೆನೋವು; ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಿಎಂ
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಶಾಸಕರ ಆರೋಗ್ಯ ವಿಚಾರಿಸಿದ್ದಾರೆ. ಮುಖ್ಯಮಂತ್ರಿಯವರೊಂದಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕೂಡ ಆಸ್ಪತ್ರೆಗೆ ಆಗಮಿಸಿ ಶಾಸಕರ ಆರೋಗ್ಯ ವಿಚಾರಿಸಿದರು. ಕಳೆದ ಎರಡು ದಿನಗಳಿಂದ ಎದೆನೋವು ಕಾಣಿಸಿಕೊಂಡಿದ್ದರಿಂದ ಇಕ್ಬಾಲ್ ಹುಸೇನ್ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಅವರ ಆರೋಗ್ಯ ತಪಾಸಣೆ ನಡೆಸಿ ಆಂಜಿಯೋಗ್ರಾಂ ಪರೀಕ್ಷೆ ಮಾಡಿದ್ದಾರೆ. ಇಕ್ಬಾಲ್ ಹುಸೇನ್ …
Read More »ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸಾವು, ಐವರಿಗೆ ಗಾಯ
ರಾಯಚೂರು: ರಸ್ತೆಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಉಪನ್ಯಾಸಕ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಗಡಿ ತೆಲಂಗಾಣದ ಗುಡೆಬಲ್ಲೂರು ಗ್ರಾಮದ ಬಳಿ ನಡೆದಿದೆ. ಟೈಯರ್ ರೋಡ್‌ನಲ್ಲಿ ಅಪಘಾತ ಸಂಭವಿಸಿದ್ದು, ರಾಯಚೂರಿನ ನಿವೃತ್ತ ಉಪನ್ಯಾಸಕ ಶೇಖರಪ್ಪ ಗೌಡ (70) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಯಾದಗಿರಿಯಲ್ಲಿನ ಮನೆ ದೇವರು ಕಾಳಬೆಳಗುಂದಿ ಬನದೇಶ್ವರ ದೇವಾಲಯಕ್ಕೆ ತೆರಳಿದ್ದ ಕುಟುಂಬ ವಾಪಸ್ ರಾಯಚೂರಿಗೆ ಮರಳುವಾಗ ಅಪಘಾತ ನಡೆದಿದೆ. ಅಪಘಾತದಲ್ಲಿ ಶೇಖರಪ್ಪ …
Read More »ಇಂದಿರಾ ಗಾಂಧಿ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ವಿವಾದ ಸೃಷ್ಟಿಸಿದ ಅಶೋಕ್ ಗೆಹ್ಲೋಟ್ ಹೇಳಿಕೆ
ಜೈಪುರ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಇಂದು ಬದುಕಿದ್ದರೆ ಬಿಜೆಪಿಯನ್ನು ಬ್ಯಾನ್ ಮಾಡಿರುತ್ತಿದ್ದರು ಎಂಬ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿಕೆ ವಿವಾದ ಹುಟ್ಟುಹಾಕಿದೆ. ಅಶೋಕ್ ಗೆಹ್ಲೋಟ್ ಭಾನುವಾರ ಜೈಪುರದಲ್ಲಿ ಈ ಬಗ್ಗೆ ಮಾತನಾಡಿ, ಪ್ರಸ್ತುತ ದೇಶದಲ್ಲಿ ನಿರ್ಮಾಣವಾಗಿರುವ ವಾತಾವರಣ ಅತ್ಯಂತ ಅಪಾಯಕಾರಿಯಾಗಿದೆ. ನನ್ನ 50 ವರ್ಷಗಳ ರಾಜಕಾರಣದಲ್ಲೇ ಇಂತಹ ಪರಿಸ್ಥಿತಿಯನ್ನು ಎಂದಿಗೂ ನೋಡಿರಲಿಲ್ಲ. ದೇಶ ಈಗಲಾದರೂ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ದುಷ್ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಉತ್ತರ …
Read More »ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಆಕ್ರೋಶ: ಪಾದರಾಯನಪುರದಲ್ಲಿ ಜಮೀರ್ ಬೆಂಬಲಿಗರ ಪ್ರತಿಭಟನೆ, ಇಮ್ರಾನ್ ಪಾಷಾ ವಶಕ್ಕೆ
ಬೆಂಗಳೂರು: ರಾಜ್ಯ ಸಚಿವ ಸಂಪುಟದ ಮೊದಲ ಹಂತದಲ್ಲಿ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ, ಇಂದು ಬೆಂಗಳೂರಿನ ಪಾದರಾಯನಪುರದಲ್ಲಿ ಅವರ ಬೆಂಬಲಿಗರು ಹಾಗೂ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಪಾಲಿಕೆ ಮಾಜಿ ಸದಸ್ಯ ಇಮ್ರಾನ್ ಪಾಷಾ ನೇತೃತ್ವದಲ್ಲಿ ಜಮೀರ್ ಅಹಮ್ಮದ್ ಅವರಿಗೆ ಸಚಿವ ಹಾಗೂ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿ ‘ವಿಧಾನಸೌಧ ಚಲೋ’ ಪಾದಯಾತ್ರೆಗೆ ಕರೆ ನೀಡಲಾಗಿತ್ತು. ಆದರೆ, ಹೈಕೋರ್ಟ್ ನಿರ್ದೇಶನದಂತೆ ಫ್ರೀಡಂ ಪಾರ್ಕ್‌ನಲ್ಲಿ …
Read More »ಗ್ರೂಪ್ ಇನ್ಶೂರೆನ್ಸ್ ಹಣ ಬಿಡುಗಡೆಗೆ 3 ಸಾವಿರ ರೂ. ಲಂಚ – ದ್ವಿತೀಯ ದರ್ಜೆ ಸಹಾಯಕಿ ಲೋಕಾ ಬಲೆಗೆ
ಹಾವೇರಿ: ಗ್ರೂಪ್ ಇನ್ಶೂರೆನ್ಸ್ ಮಂಜೂರು ಮಾಡಿಕೊಡಲು 3 ಸಾವಿರ ರೂ. ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಸಹಕಾರ ಸಂಘಗಳ ಉಪಬಂಧಕರ ಕಚೇರಿಯ ದ್ವಿತೀಯ ದರ್ಜೆ ಸಹಾಯಕಿ ಬಂಧನ ಮಾಡಿದ್ದಾರೆ. ಹಾವೇರಿಯ ದೇವಗಿರಿ ಗ್ರಾಮದ ಬಳಿ ಇರುವ ಜಿಲ್ಲಾಧಿಕಾರಿ ಕಚೇರಿಯ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯಲ್ಲಿ ಬಂಧನ ಮಾಡಿದ್ದಾರೆ. ಅಕ್ಕಮ್ಮ ಬಿದರೇರ್ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹದೇವ ಜೇಕಿನಕಟ್ಟಿ ಎಂಬುವರ ವಯೋ ನಿವೃತ್ತಿಯಾಗಿದ್ದು, …
Read More »
Laxmi News 24×7