ಚಿಕ್ಕಮಗಳೂರು: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಉರುಳಿಗೆ ಸಿಕ್ಕು ಗಾಯಗೊಂಡ ಹುಲಿ ಓಡಾಡುತ್ತಿದ್ದು, ಪ್ರವಾಸಿಗರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಜ್ರಾಗ್ರತೆಯಿಂದ ಇರುವಂತೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ. ಹುಲಿಯ ಸೊಂಟದಲ್ಲಿ ಉರುಳು ನೇತಾಡುತ್ತಿದೆ. ಇದರಿಂದ ಗಾಯಗೊಂಡ ಹುಲಿ, ನೋವಿನಿಂದಲೇ ಕಳೆದ ನಾಲ್ಕೈದು ದಿನಗಳಿಂದ ಓಡಾಡುತ್ತಿದೆ. ಆ ನೋವಿನಲ್ಲೂ ಜಿಂಕೆ ಹಾಗೂ ಕಡವೆಯನ್ನು ಹುಲಿ ಬೇಟೆಯಾಡಿದೆ. ಸುತ್ತಮುತ್ತ ಪ್ರಾಣಿಗಳ ಕಳೆಬರಹ ಪತ್ತೆಯಾಗಿವೆ. ಮೂರ್ನಾಲ್ಕು ದಿನದಿಂದ ಹುಲಿ ಸೆರೆಗೆ ಅರಣ್ಯ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಕ್ಯಾಮೆರಾಗಳನ್ನು …
Read More »Monthly Archives: ಜೂನ್ 2026
ಪತ್ನಿಯಿಂದಲೇ ಮಾಜಿ ಸೈನಿಕನ ಕೊಲೆ ಕೇಸ್‌ಗೆ ಟ್ವಿಸ್ಟ್ – ಪ್ರಿಯಕರ ಪುಂಡಲೀಕ ಸ್ಫೋಟಕ ಹೇಳಿಕೆ!
ಚಿಕ್ಕೋಡಿ: 2 ಕೋಟಿ ವಿಮೆ ಹಣಕ್ಕಾಗಿ ಮಾಜಿ ಸೈನಿಕನನ್ನ ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಮತ್ತೊಂದು ರೋಚಕ ತಿರುವು ಸಿಕ್ಕಿದೆ. 3 ತಿಂಗಳು ಹಿಂದೆ ನಡೆದ ಮಾಜಿ ಯೋಧನ ಮರ್ಡರ್ ಕಥೆಯ ಒಂದೊಂದೇ ಅಂಶಗಳು ಬೆಳಕಿಗೆ ಬರುತ್ತಿದೆ. ಈ ಮಧ್ಯೆ ಸೈನಿಕನ ಪತ್ನಿ ಸುಮಾಳ ಪ್ರಿಯಕರನಿಂದ ಸ್ಫೋಟಕ ಹೇಳಿಕೆಯೊಂದು ಹೊಸ ಸಂಚಲಕ ಸೃಷ್ಟಿಸಿದೆ. ಹೌದು. 2 ಕೋಟಿ ವಿಮೆ ಹಣಕ್ಕಾಗಿ ಸ್ವಂತ ಪತಿಯನ್ನೇ ಕೊಲೆ ಮಾಡಿದ ಪ್ರಕರಣಕ್ಕೆ ಸಂಧಿಸಿದಂತೆ ಆರೋಪಿ …
Read More »ಗುಂಡಿಗೆ ಬಿದ್ದು ದ್ವಿಚಕ್ರ ವಾಹನ ಸ್ಕಿಡ್ – ಮಗಳನ್ನು ಕಾಲೇಜಿಗೆ ಕರೆದೊಯ್ಯುತ್ತಿದ್ದ ತಾಯಿ ಸಾವು
ಬೆಂಗಳೂರು: ಮಗಳನ್ನು ಕಾಲೇಜಿಗೆ ಬಿಡಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ವೈಟ್‌ಫೀಲ್ಡ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾರತ್ತಹಳ್ಳಿಯಿಂದ ಸಿದ್ದಾಪುರ ಕಡೆಗೆ ತಾಯಿ ಕಾಂತಾ ಹಾಗೂ ಮಗಳು ನೇಹಾ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಮಳೆಯಿಂದಾಗಿ ರಸ್ತೆಯಲ್ಲಿದ್ದ ಗುಂಡಿಗೆ ವಾಹನ ಸ್ಕಿಡ್ ಆಗಿ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಕಾಂತಾ ಅವರ ಮೇಲೆ ಹಿಂದಿನಿಂದ ಬಂದ ಶಾಲಾ ಬಸ್ …
Read More »ಸಾವಿನ ವದಂತಿ ಬೆನ್ನಲ್ಲೇ ಆಂಜನೇಯನ ಮೊರೆ ಹೋದ ನಟ ದೊಡ್ಡಣ್ಣ
ಬೆಂಗಳೂರು: ಸಾವಿನ ಸುದ್ದಿ ವದಂತಿ ಬೆನ್ನಲ್ಲೇ ಕಂಟಕ ಪರಿಹಾರಕ್ಕಾಗಿ ನಟ ದೊಡ್ಡಣ್ಣ ಅವರು ಆಂಜನೇಯ ದೇವರ ಮೊರೆ ಹೋಗಿದ್ದಾರೆ. ಕಂಟಕ ಪರಿಹಾರಕ್ಕಾಗಿ ದೊಡ್ಡಣ್ಣ ಕುಟುಂಬ ಸಮೇತರಾಗಿ ಮಹಾಲಕ್ಷ್ಮಿ ಲೇಔಟ್‌ನ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಿನ್ನೆ ಶುಕ್ರವಾರ ಬೆಳಗ್ಗೆ ಕೆಲ ಕಿಡಿಗೇಡಿಗಳು ಹಿರಿಯ ನಟ ದೊಡ್ಡಣ್ಣ ಬಗ್ಗೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದರು. ಈ ಸುದ್ದಿ ಅಭಿಮಾನಿಗಳು ಹಾಗೂ ಆಪ್ತರಲ್ಲಿ ಆತಂಕ ಮೂಡಿಸಿತ್ತು. ಈ ಕುರಿತು …
Read More »ಅಪ್ರಾಪ್ತೆ ಲವ್ ಜಿಹಾದ್ ಪ್ರಕರಣ: ಗರಗ ಸಿಪಿಐ ತಲೆದಂಡ
ಧಾರವಾಡ: ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತೆ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ ಗರಗ ಸರ್ಕಲ್ ಸಿಪಿಐ ಶಿವಯೋಗಿ ಲೋಹಾರ್ ಅವರನ್ನು ಅಮಾನತು ಮಾಡಲಾಗಿದೆ. ಈ ಕುರಿತು ಧಾರವಾಡ ಜಿಲ್ಲಾ ಪೊಲೀಸ್ ಎಸ್‌ಪಿ ಗುಂಜನ್ ಆರ್ಯ ಆದೇಶ ಹೊರಡಿಸಿದ್ದಾರೆ. ಅಪ್ರಾಪ್ತೆ ಲವ್ ಜಿಹಾದ್ ಪ್ರಕರಣದಲ್ಲಿ ಪೊಲೀಸರು ರಾಜಿ ಸಂಧಾನ ಮಾಡಲು ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೆ, ಈ ಪ್ರಕರಣದ ಹಿನ್ನೆಲೆ ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ …
Read More »ಪರಿಷತ್ ಚುನಾವಣೆಗೆ ʻಆಪರೇಷನ್ ಹಸ್ತʼದ ಭೀತಿ – ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್?
ಬೆಂಗಳೂರು: ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಸಮೀಪಿಸುತ್ತಿದೆ. ಈ ಹಿನ್ನೆಲೆ ಕುದುರೆ ವ್ಯಾಪಾರದ ಭೀತಿ ಹೆಚ್ಚಾಗಿದ್ದು, ವಿಪಕ್ಷಗಳು ತಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳಲು ರೆಸಾರ್ಟ್ ರಾಜಕಾರಣಕ್ಕೆ ಮುಂದಾಗುತ್ತಿವೆ. ಜೂನ್ 18 ರಂದು ಪರಿಷತ್ ಚುನಾವಣೆ ಇರುವ ಕಾರಣ ತಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳಲು ಜೆಡಿಎಸ್ ಪ್ಲ್ಯಾನ್ ಮಾಡಿದೆ. ಜೂನ್ 16 ರಂದೇ ಶಾಸಕರನ್ನ ರೆಸಾರ್ಟ್ ಅಥವಾ ಹೋಟೆಲ್‌ಗಳಿಗೆ ಶಿಫ್ಟ್ ಮಾಡಲು ತೀರ್ಮಾನಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸದ್ಯ ಕಾಂಗ್ರೆಸ್‌ನ 5ನೇ …
Read More »ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿದ್ದ ದೇವಸ್ಥಾನ ಗೋಚರ – ಫೋಟೋಶೂಟ್‌ಗೆ ಮುಗಿಬಿದ್ದ ಸೆಲೆಬ್ರಿಟಿ, ಜನರು
ಮಂಡ್ಯ: ಕೆಆರ್‌ಎಸ್ ಡ್ಯಾಂ ಹಿನ್ನೀರಿನಲ್ಲಿ ವರ್ಷಗಳ ಕಾಲ ಮುಳುಗಿದ್ದ ಲಕ್ಷ್ಮೀನಾರಾಯಣ ಸ್ವಾಮಿ ದೇವಸ್ಥಾನ ಮತ್ತೆ ಬೆಳಕಿಗೆ ಬಂದಿದೆ. ಡ್ಯಾಂ ನೀರಿನ ಮಟ್ಟ ಕುಸಿದ ಪರಿಣಾಮ ಕಾಣಿಸಿಕೊಂಡಿರುವ ಈ ದೇವಸ್ಥಾನ ಇದೀಗ ಪ್ರವಾಸಿಗರು ಹಾಗೂ ಫೋಟೋಶೂಟ್ ಪ್ರಿಯರ ಪ್ರಮುಖ ಆಕರ್ಷಣೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಚುರುಕುಗೊಳ್ಳದ ಹಿನ್ನೆಲೆ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿದಿದೆ. ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಇಳಿಕೆಯಾಗಿರುವುದು ಆತಂಕ …
Read More »ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ
ಬೆಂಗಳೂರು: ಪ್ರಮಾಣವಚನ ಸ್ವೀಕಾರ ಮಾಡಿ 10 ದಿನ ಕಳೆದರೂ ಸಚಿವ ಕೃಷ್ಣ ಬೈರೇಗೌಡ ಇನ್ನೂ ಬೆಂಗಳೂರು ಅಭಿವೃದ್ಧಿ ಖಾತೆ ಅಧಿಕಾರ ವಹಿಸಿಕೊಂಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಖಾತೆ ಜವಾಬ್ದಾರಿ ತೆಗೆದುಕೊಳ್ಳುವಾಗ ಕೆಲ ಸ್ಪಷ್ಟತೆ ಇರಬೇಕು ಎಂದಿದ್ದಾರೆ. ಖಾತೆ ಅಧಿಕಾರ ವಹಿಸಿಕೊಳ್ಳದ ಬಗ್ಗೆ ಮಾತನಾಡಿದ ಅವರು, ಖಾತೆ ವಿಚಾರಕ್ಕೆ ಕೆಲವು ಸ್ಪಷ್ಟತೆ ಬೇಕಿದೆ. ಖಾತೆ ಜವಾಬ್ದಾರಿ ತೆಗೆದುಕೊಳ್ಳುವಾಗ ಕೆಲ ಸ್ಪಷ್ಟತೆ ಇರಬೇಕು. ಜವಾಬ್ದಾರಿಗೆ ಸರಿಯಾಗಿ ನಿರ್ವಹಣೆ ಮಾಡಿ ರಿಸಲ್ಟ್ ಕೊಡಬೇಕು. …
Read More »ಮತ್ತೆ ಸದ್ದು ಮಾಡಿದ ಮುತ್ತಪ್ಪ ರೈ ಪುತ್ರನ ಲ್ಯಾಂಬೋರ್ಗಿನಿ – ಏರ್‌ಪೋರ್ಟ್ ರಸ್ತೆಯಲ್ಲಿ ಪುಂಡಾಟದ ವಿಡಿಯೋ ವೈರಲ್
ಬೆಂಗಳೂರು: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಒಡೆತನದ ಲ್ಯಾಂಬೋರ್ಗಿನಿ ಕಾರು ಮತ್ತೊಮ್ಮೆ ಸುದ್ದಿಯಲ್ಲಿದೆ. ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿ ಡ್ರಿಫ್ಟಿಂಗ್ ಮಾಡುವ ಮೂಲಕ, ಸೈಲೆನ್ಸರ್‌ನಿಂದ ಬೆಂಕಿ ಉಗುಳುತ್ತಾ ಕರ್ಕಶ ಶಬ್ದ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. KA 05 NR 0009 ನೋಂದಣಿ ಸಂಖ್ಯೆಯ ಲ್ಯಾಂಬೋರ್ಗಿನಿ ಕಾರಿನ ವಿಡಿಯೋ ಇದೀಗ ಪೊಲೀಸರ ಗಮನ ಸೆಳೆದಿದೆ. ವೈರಲ್ ವಿಡಿಯೋ ಆಧರಿಸಿ ಘಟನೆ ಯಾವ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂಬುದನ್ನು ಪೊಲೀಸರು …
Read More »ಡಿವೈಡರ್‌ಗೆ ಬೈಕ್ ಡಿಕ್ಕಿ – ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು
ಬೆಂಗಳೂರು: ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಂಗೇರಿಯ ಆರ್.ಆರ್ ಡೆಂಟಲ್ ಕಾಲೇಜು ಬಳಿ ನಡೆದಿದೆ. ಅತುಲ್, ಗೌರಿಶಂಕರ್ ಮೃತ ನರ್ಸಿಂಗ್ ವಿದ್ಯಾರ್ಥಿಗಳು. ನಸುಕಿನ ಜಾವ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿಗಳು ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಘಟನಾ …
Read More »
Laxmi News 24×7