Breaking News

Monthly Archives: ಜೂನ್ 2026

ಹಾಸನದಲ್ಲಿ ರೌಡಿಶೀಟರ್‌ನ ಬರ್ಬರ ಹತ್ಯೆ – ದುಷ್ಕರ್ಮಿಗಳು ಎಸ್ಕೇಪ್‌

ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಹಾಸನದಲ್ಲಿ  ನಡೆದಿದೆ. ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ಕೋರ್ಟ್ ಮುಂಭಾಗ ಇಂದು ಮುಂಜಾನೆ ಘಟನೆ ನಡೆದಿದೆ. ಮಂಜೇಶ್ (43) ಕೊಲೆಯಾದ ರೌಡಿಶೀಟರ್. ಮಂಜೇಶ್ ತಾಯಿ ಹಾಸನ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ಬೆಂಗಳೂರಿನಲ್ಲಿ ರೌಡಿಶೀಟರ್ ಆಗಿರುವ ಮಂಜೇಶ್ ಹಾಸನಕ್ಕೆ ಬಂದಿದ್ದ ವೇಳೆ ಹಂತಕರು ಮಾರಕಾಸ್ತ್ರಗಳನ್ನ ಹಿಡಿದು ದಾಳಿ ನಡೆಸಿದ್ದು ಮುಖದ ಗುರುತು ಸಿಗದಂತೆ ಕೊಚ್ಚಿ ಕೊಲೆಗೈದು ಎಸ್ಕೇಪ್ ಆಗಿದ್ದಾರೆ. …

Read More »

ರಾಜ್ಯದಲ್ಲಿ ಮುಂಗಾರು ಅಬ್ಬರ – ಬೆಂಗಳೂರು ಸೇರಿ 19 ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಕರ್ನಾಟಕಕ್ಕೆ (Karnataka) ಯೆಲ್ಲೋ ಅಲರ್ಟ್ ಘೋಷಿಸಿದ್ದು, ಇನ್ನೂ ನಾಲ್ಕು ದಿನ ಬೆಂಗಳೂರು (Bengaluru) ಸೇರಿ 19 ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದೆ. ಆರಂಭದಲ್ಲೇ ವರುಣ ಅಬ್ಬರಿಸುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. 2018-19ರ ಸಾಲಿನ ಮಳೆಗಾಲದಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಸಂಭವಿಸಿತ್ತು. ಕೊಡಗು (Kodagu) ಜಿಲ್ಲೆ ಬೆಟ್ಟ ಗುಡ್ಡಗಳಿಂದ ಕೂಡಿರುವುದರಿಂದ ಜಿಲ್ಲಾಡಳಿತ ಎಚ್ಚರಿಕೆ ವಹಿಸಿದೆ. …

Read More »

ಮಾಜಿ ಸಿಎಂ ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನ

ಬೆಂಗಳೂರು: ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ, ಮಾಜಿ ಸಿಎಂ ದೇವರಾಜ ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ ಅವರು ನಿಧನರಾಗಿದ್ದಾರೆ. ಭಾನುವಾರ (ಜೂ.7) ರಾತ್ರಿ ಸೂರಜ್ ಹೆಗ್ಡೆ (55) ಹೃದಯಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ. ಸೂರಜ್ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೇರಿ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ತಮ್ಮ ತಾತ ದೇವರಾಜ ಅರಸು ಅವರಂತೆ ಹಿಂದುಳಿದ ವರ್ಗಗಳು, ಕಾರ್ಮಿಕರ ಹಕ್ಕು, ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುತ್ತಿದ್ದರು. ರಾಷ್ಟ್ರೀಯ …

Read More »

ಸ್ನೇಹಿತರೊಟ್ಟಿಗೆ ಪಾರ್ಟಿಗೆ ಹೋಗಿದ್ದ ಮಹಿಳೆ ಅನುಮಾನಾಸ್ಪದ ಸಾವು – ಹಳ್ಳದಲ್ಲಿ ಮೃತದೇಹ ಪತ್ತೆ

ಬಳ್ಳಾರಿ: ಸ್ನೇಹಿತರು & ಸಹೋದ್ಯೋಗಿಗಳ ಜೊತೆ ಪಾರ್ಟಿಗೆ  ಹೋಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಬಳ್ಳಾರಿಯ  ಹಂದ್ರಾಳ್‌ ಹಳ್ಳದಲ್ಲಿ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಬಳ್ಳಾರಿಯ ಕೌಲ್ ಬಜಾರ್ ನಿವಾಸಿ ಅನಿಷಾ ಫಾತೀಮಾ (38) ಎಂದು ಗುರುತಿಸಲಾಗಿದೆ. ಈಕೆ ಪ್ರಗತಿ ಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿದ್ದರು. ಶನಿವಾರ (ಜೂ.6) ರಾತ್ರಿ ಬ್ಯಾಂಕ್ ಸಿಬ್ಬಂದಿಯೊಂದಿಗೆ ಪಾರ್ಟಿಗೆ ಹೋಗಿದ್ದರು. ಬಳಿಕ ರಾತ್ರಿ 11 ಗಂಟೆಗೆ ತಮ್ಮ ಪತಿಗೆ ಕರೆ ಮಾಡಿದ್ದಾರೆ. ನಂತರ ಅನಿಷಾ ಫಾತೀಮಾ ಸಂಪರ್ಕಕ್ಕೆ ಸಿಕ್ಕಿಲ್ಲ. …

Read More »

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ 3 ವರ್ಷ ಜೈಲು ಶಿಕ್ಷೆ,15 ಸಾವಿರ ದಂಡ

ದಾವಣಗೆರೆ: ಮದುವೆಯಾಗುವುದಾಗಿ  ನಂಬಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ದಾವಣಗೆರೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು  3 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ವಿರೂಪಾಕ್ಷಿ ಶಿಕ್ಷೆಗೆ ಗುರಿಯಾದ ಅಪರಾಧಿ. 2023ರ ಅಕ್ಟೋಬರ್ 4ರಂದು, ವಿರೂಪಾಕ್ಷಿ ತನ್ನ 14 ವರ್ಷದ ಅಪ್ರಾಪ್ತ ಮಗಳನ್ನು ಬಲವಂತವಾಗಿ ಕರೆದುಕೊಂಡು ಹೋಗಿದ್ದಾನೆ, ಪತ್ತೆ ಮಾಡಿಕೊಡುವಂತೆ ಬಾಲಕಿ ತಂದೆ ಬಿಳಿಚೋಡು ಠಾಣೆಗೆ …

Read More »

ಸಿದ್ದಗಂಗಾ ಮಠಕ್ಕೆ ಡಿಸಿಎಂ ಪರಮೇಶ್ವರ್ ಭೇಟಿ – ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ

ತುಮಕೂರು: ನೂತನ ಡಿಸಿಎಂ ಜಿ.ಪರಮೇಶ್ವರ್ ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟು ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದ ಪಡೆದರು. ಬಳಿಕ ಮಾತನಾಡಿದ ಅವರು, ಎಂದಿನ ಸಂಪ್ರದಾಯದಂತೆ ಯಾವುದೇ ಒಂದು ಶುಭಕಾರ್ಯ ಅಥವಾ ಮುಂದಿನ ಶುಭಗಳನ್ನ ನಾವು ಆಲೋಚನೆ ಮಾಡುವಾಗ ಸಿದ್ದಗಂಗಾ ಮಠಕ್ಕೆ ಭೇಟಿ ಕೊಡುವಂತದ್ದು ಸಂಪ್ರದಾಯವಾಗಿ ನಡೆದುಬಂದಿದೆ. ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಮೇಲೆ ಮೊದಲ ಬಾರಿಗೆ ತುಮಕೂರಿಗೆ ಬಂದಿದ್ದು, ಮಠಕ್ಕೆ …

Read More »

ಮೋದಿ ಸರ್ಕಾರ ಜನರು ಹಾಳಾಗಿ ಹೋಗ್ಲಿ ಅಂತಾ ಬೆಲೆ ಜಾಸ್ತಿ ಮಾಡಿದ್ದಾರೆ: ಕೇಂದ್ರದ ವಿರುದ್ಧ ಯತೀಂದ್ರ ಕಿಡಿ

ಕಾಳಜಿ ಇಲ್ಲದೆ, ಜನರು ಹಾಳಾಗಿ ಹೋಗ್ಲಿ ಅಂತಾ bjp ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ. ಗ್ಯಾಸ್ ಬೆಲೆ ಏರಿಕೆ ವಿಚಾರವಾಗಿ ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಯಾವಾಗಲೂ ಜನವಿರೋಧಿ ನೀತಿಯನ್ನ ಅನುಸರಿಸಿಕೊಂಡು ಬಂದಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಕಡಿಮೆ ಇದ್ದಾಗಲೂ ಕೂಡ ಜನರಿಗೆ ಲಾಭ ಆಗುವ ಹಾಗೆ ಮಾಡಲಿಲ್ಲ. ಕಚ್ಚಾತೈಲ ಬೆಲೆ ಕಡಿಮೆ ಇದ್ದಾಗಲೂ ಕೂಡ ಪೆಟ್ರೋಲ್, ಡಿಸೇಲ್ …

Read More »

ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು

ಬೆಳಗಾವಿ: ಈಜಲು  ಹೋಗಿದ್ದ ಬಾಲಕ  ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಳಗಾವಿ  ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಹೊರವಲಯದ ಮಲಪ್ರಭಾ ನದಿಯಲ್ಲಿ  ನಡೆದಿದೆ. ಈಜಲು ತೆರಳಿದ್ದ 15 ವರ್ಷದ ಮಹೇಶ್ ಗಣಾಚಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ ಬಾಲಕನ ಮೃತದೇಹ ನೀರಿನಿಂದ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಬೈಲಹೊಂಗಲ ಸಿಪಿಐ ಪ್ರಮೋದ ಯಲಿಗಾರ ಭೇಟಿ ನೀಡಿ …

Read More »

ಸಿಎಂ ಡಿಕೆ ಶಿವಕುಮಾರ್‌ಗೆ ವಿಡಿಯೋ ಕಾಲ್ ಮಾಡಿ ಮಲೇಷ್ಯಾ ಪ್ರಧಾನಿ ವಿಶ್

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಇಂದು ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಕರ್ನಾಟಕ ಮತ್ತು ಮಲೇಷ್ಯಾ ನಡುವಿನ ಸಂಬಂಧವನ್ನು ಇನ್ನಷ್ಟು ಬಲಪಡಿಸುವ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾ ಎಕ್ಸ್‌ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಯಾಗಿ ಹೊಸ ಜವಾಬ್ದಾರಿ ವಹಿಸಿಕೊಂಡಿರುವ ಹಿನ್ನೆಲೆ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ದೂರವಾಣಿ ಕರೆ …

Read More »

ಹುಟ್ಟೂರಿನ ಮಗನನ್ನು ಮನದುಂಬಿ ಹರಸಿದ ಕನಕಪುರ ಜನತೆ – ದಾರಿಯುದ್ದಕ್ಕೂ ಸಿಎಂಗೆ ಬೃಹತ್ ಸೇಬಿನ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮ

ರಾಮನಗರ: ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್  ಅವರಿಗೆ ಅಭಿಮಾನಿಗಳಿಂದ ಅಭೂತಪೂರ್ವ ಸ್ವಾಗತ ದೊರೆಯಿತು. ಅಭಿಮಾನಿಗಳ ಹರ್ಷೋದ್ಗಾರದಲ್ಲಿ ಡಿ.ಕೆ. ಶಿವಕುಮಾರ್ ಮಿಂದೆದ್ದರು. ‘ಡಿ.ಕೆ, ಡಿ.ಕೆ’ ಎನ್ನುವ ಘೋಷಣೆ ಮುಗಿಲು ಮುಟ್ಟುತ್ತಿದ್ದಂತೆ ಮುಖ್ಯಮಂತ್ರಿ ಡಿಕೆಶಿ ಭಾವುಕರಾದರು. ನಿಮ್ಮ ಪ್ರೀತಿಗೆ ಆಭಾರಿ. ನಿಮ್ಮಿಂದ ನಾನು ವಿಧಾನಸೌಧದ ಮೂರನೇ ಮಹಡಿಯಲ್ಲಿದ್ದೇನೆ. ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದೇನೆ. ನಿಮಗೆಲ್ಲರಿಗೂ ಕೋಟಿ, ಕೋಟಿ ವಂದನೆಗಳು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿನಯಪೂರ್ವಕವಾಗಿ ಹೇಳಿದರು. …

Read More »