ಮಹಿಳಾ ಸಂಘಟನೆಯ ನಾಯಕಿಯೊಬ್ಬಳ ನಿರಂತರ ಕಿರುಕುಳ ಮತ್ತು ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ರೈಲ್ವೆ ಉದ್ಯೋಗಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ತಿರುಪತಿ ಜಿಲ್ಲೆಯ ರೇಣಿಗುಂಟದಲ್ಲಿ ಬೆಳಕಿಗೆ ಬಂದಿದೆ. ಮೃತ ದುರ್ದೈವಿಯನ್ನು ಪೂರ್ವ ಗೋದಾವರಿ ಜಿಲ್ಲೆಯ ಕಡಿಯಂ ಮೂಲದ ರೈಲ್ವೆ ಉದ್ಯೋಗಿ ರವಿ ಎಂದು ಗುರುತಿಸಲಾಗಿದೆ. ರೇಣಿಗುಂಟದ ಬುಗ್ಗ ವೀಧಿಯಲ್ಲಿರುವ ಅವರ ಮನೆಯಲ್ಲಿ ರವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಿಳಾ ಸಂಘದ ಮುಖಂಡರಾಗಿದ್ದ ಉಷಾರಾಣಿ ಎಂಬಾಕೆಯೇ ಇವರ ಸಾವಿಗೆ ನೇರ ಕಾರಣ …
Read More »Monthly Archives: ಜೂನ್ 2026
ಮದುವೆಯ ಮುನ್ನವೇ ಬಾವಿ ಪತಿಯ ಕೊಲೆ ಮಾಡಿಸಿದ ಪತ್ನಿ
ಪುಣೆ:ಮಹಾರಾಷ್ಟ್ರದ ಪ್ರಸಿದ್ಧ ಪ್ರವಾಸಿ ತಾಣವಾದ ಲೋಹಗಢ ಕೋಟೆಯಲ್ಲಿ ಜೂನ್ 18 ರಂದು ನಡೆದಿದ್ದ ಉದ್ಯಮಿ ಕೇತನ್ ಅಗರ್ವಾಲ್ ಸಾವು ಪ್ರಕರಣ ಇದೀಗ ಭೀಕರ ಕೊಲೆ ಎಂಬುದು ಸಾಬೀತಾಗಿದ್ದು, ಈ ಸಂಬಂಧ ಮೃತನ ಭಾವಿ ಪತ್ನಿ ಸಿಯಾ ಗೋಯಲ್ ಮತ್ತು ಆಕೆಯ ಪ್ರಿಯಕರ ಚೇತನ್ ಚೌಧರಿಯನ್ನು ಪುಣೆ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯವು ಆರೋಪಿಗಳನ್ನು ಜೂನ್ 29 ರವರೆಗೆ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಜೂನ್ 18 ರಂದು …
Read More »ರಾಜ್ಯ ಸರ್ಕಾರಿ ನೌಕರರಿಗೆ ಇಲ್ವಾ ಗ್ಯಾರಂಟಿ?
ಬೆಂಗಳೂರು: ರಾಜ್ಯ ಸರ್ಕಾರ ಇದೀಗ ಗ್ಯಾರಂಟಿ ಇಕ್ಕಟ್ಟಿನಲ್ಲಿ ಸಿಲುಕಿದೆ. ಸದ್ಯ ಗ್ಯಾರಂಟಿ ಪರಿಷ್ಕರಣೆ ನಡೆಯುತ್ತಿದ್ದು, ಇದೇ ಹೊತ್ತಲ್ಲಿ ಸರ್ಕಾರಿ ನೌಕರರನ್ನು ಗ್ಯಾರಂಟಿ ಯೋಜನೆಗಳಿಂದ ಹೊರಗಿಡಲು ಚಿಂತನೆ ನಡೆಸಿದೆ. ಗ್ಯಾರಂಟಿ ಪ್ರಾಧಿಕಾರ ಈ ಬಗ್ಗೆ ಚಿಂತನೆ ನಡೆಸಿದ್ದು, ಸರ್ಕಾರಿ ನೌಕರರ ಕುಟುಂಬಗಳನ್ನು ಗ್ಯಾರಂಟಿ ಯೋಜನೆಗಳಿಂದ ಕಡಿತಗೊಳಿಸುವ ಬಗ್ಗೆ ಚರ್ಚಿಸುತ್ತಿದೆ. ಸದ್ಯ ಪ್ರಾಧಿಕಾರವು ಸರ್ಕಾರಿ ನೌಕರರಿಗೆ ಸ್ವಯಂ ಪ್ರೇರಿತವಾಗಿ ಗ್ಯಾರಂಟಿ ಸೌಲಭ್ಯ ಬಿಟ್ಟುಕೊಡಿ ಎಂದು ಸಲಹೆ ನೀಡಿದೆ. ಈ ಕುರಿತು ಗ್ಯಾರಂಟಿ ಪ್ರಾಧಿಕಾರದ …
Read More »ಜೈಲಿನಲ್ಲಿ ಪ್ರಾಣಾಯಾಮ, ಶವಾಸನ ಮಾಡಿದ ದರ್ಶನ್
ಬೆಂಗಳೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆಯಅಂಗವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೂ ವಿಶೇಷ ಯೋಗಾಭ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕೊಲೆ ಪ್ರಕರಣದ ಆರೋಪಿಯಾಗಿ ಸದ್ಯ ಜೈಲು ಪಾಲಾಗಿರುವ ನಟ ದರ್ಶನ್ ಹಾಗೂ ಅವರ ಗ್ಯಾಂಗ್ ಈ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿ ಗಮನ ಸೆಳೆದಿದ್ದಾರೆ. ಕಾರಾಗೃಹದ ಎಲ್ಲಾ ಕೈದಿಗಳಿಗಾಗಿ ಸಾಮೂಹಿಕ ಯೋಗಾಭ್ಯಾಸ ಹಮ್ಮಿಕೊಳ್ಳಲಾಗಿತ್ತು. ಆದರೆ, ತಮಗೆ ತೀವ್ರ ಬೆನ್ನು ನೋವಿನ ಸಮಸ್ಯೆ ಇದೆ ಎಂದು ಹೇಳಿದ್ದ ನಟ ದರ್ಶನ್, ಆರಂಭದಲ್ಲಿ ಯೋಗ ದಿನಾಚರಣೆಯಲ್ಲಿ …
Read More »ಮೈಸೂರು ರೈಲು ನಿಲ್ದಾಣದಲ್ಲಿ 40ಕ್ಕೂ ಹೆಚ್ಚು ಶಂಕಿತ ಬಾಂಗ್ಲಾ ವಲಸಿಗರು ಪತ್ತೆ – ತೀವ್ರ ವಿಚಾರಣೆ
ಮೈಸೂರು: ಮೈಸೂರು ರೈಲು ನಿಲ್ದಾಣದಲ್ಲಿ 40ಕ್ಕೂ ಹೆಚ್ಚು ಶಂಕಿತ ಬಾಂಗ್ಲಾ ವಲಸಿಗರುಪತ್ತೆಯಾಗಿದ್ದು, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಇವರನ್ನು ಗುರುತಿಸಿ ಪೊಲೀಸರಿಗೆಮಾಹಿತಿ ನೀಡಿದ್ದಾರೆ. ಕೊಲ್ಕತ್ತಾದಿಂದ ವಾರಕ್ಕೊಮ್ಮೆ ಸಂಚರಿಸುವ ಹೌರಾ ಎಕ್ಸ್‌ಪ್ರೆಸ್ ರೈಲಿನ ಮೂಲಕ ಇವರು ಮೈಸೂರಿಗೆ ಬಂದಿರುವುದಾಗಿ ತಿಳಿದುಬಂದಿದೆ. ರೈಲು ನಿಲ್ದಾಣದಲ್ಲಿ ಕಾರ್ಯಕರ್ತರು ಅವರ ಗುರುತಿನ ಚೀಟಿಗಳು ಮತ್ತು ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಪರಿಶೀಲನೆ ವೇಳೆ ಹಲವರ ಬಳಿ ಇದ್ದ ಗುರುತಿನ ಚೀಟಿಗಳ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಕೆಲವು ದಾಖಲೆಗಳು ನಕಲಿಯಾಗಿರುವ …
Read More »ಅಡ್ಡ ಮತದಾನ ಮಾಡಿದ್ದು ಸಾಬೀತಾದರೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಚಂದ್ರು ಲಮಾಣಿ
ಗದಗ: ಪ್ರಾಮಾಣಿಕವಾಗಿ ಎನ್‌ಡಿಎಅಭ್ಯರ್ಥಿಗೆ ಮತ ಹಾಕಿದ್ದೇನೆ. ಧರ್ಮಸ್ಥಳ ಮಂಜುನಾಥನ ಮೇಲೆ ಮಾತ್ರವಲ್ಲ, ಯಾವುದೇ ದೇವರ ಮೇಲೆ ಪ್ರಮಾಣ ಮಾಡಲು ಹೇಳಿದರೂ ಮಾಡುತ್ತೇನೆ. ಅಡ್ಡ ಮತದಾನ ಮಾಡಿದ್ದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕಡಾ. ಚಂದ್ರು ಲಮಾಣಿ ಹೇಳಿದ್ದಾರೆ. ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಪಬ್ಲಿಕ್ ಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿ, ಯಾವುದೇ ಆಧಾರವಿಲ್ಲದೆ ನಮ್ಮ ಹೆಸರು ಹರಿದಾಡುತ್ತಿದೆ. ಸತ್ಯಶೋಧನಾ ಸಮಿತಿಯಲ್ಲಿ …
Read More »ಈ ವರ್ಷದಿಂದಲೇ ವಿದ್ಯಾರ್ಥಿ ಚುನಾವಣೆ ಆರಂಭಿಸುತ್ತೇವೆ: ಡಿ.ಕೆ ಶಿವಕುಮಾರ್
ಬೆಂಗಳೂರು: ರಾಜ್ಯದಲ್ಲಿ ನಿಲ್ಲಿಸಿರುವ ವಿದ್ಯಾರ್ಥಿ ಚುನಾವಣೆಯನ್ನು ಈ ವರ್ಷದಿಂದಲೇ ಆರಂಭಿಸುತ್ತೇವೆ ಎಂದು ಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ, ಅಧಿಕಾರ ಹಸ್ತಾಂತರಿಸಿ ಅವರು ಮಾತಾಡಿದರು. ಈ ವೇಳೆ ವಿದ್ಯಾರ್ಥಿ ಚುನಾವಣೆ ಆರಂಭಿಸುವ ಬಗ್ಗೆ ಅವರು ಮಾಹಿತಿ ನೀಡಿದರು. ಈ ವೇಳೆ ತಾವು ಅಧಿಕಾರ ವಹಿಸಿಕೊಂಡ ದಿನವನ್ನು ನೆನಪಿಸಿಕೊಂಡರು. ನನಗೆ 2020ರ ಮಾ.10 ರಂದು ಸೋನಿಯಾ ಗಾಂಧಿ ಪಕ್ಷದ ಅಧಿಕಾರ ನೀಡಿದ್ದರು. ಆಗ …
Read More »ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಅನುಮಾನಾಸ್ಪದ ಸಾವು
ದಾವಣಗೆರೆ: ಇಲ್ಲಿನ ಕೈದಾಳೆ ಗ್ರಾಮದಲ್ಲಿ ಪ್ರೀತಿಸಿ ಮದುವೆಯಾಗಿದ್ದ ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗ್ರಾಮದ ನಿವಾಸಿಯಾಗಿದ್ದ ಅಮೂಲ್ಯ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವತಿ. ಈಕೆ ಅದೇ ಗ್ರಾಮದ ಧನುಷ್ (19) ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ಇಬ್ಬರು ಕ್ಲಾಸ್‌ಮೇಟ್ ಆಗಿದ್ದರು. ಇವರ ಪ್ರೀತಿಗೆ ಜಾತಿ ಕಾರಣಕ್ಕೆ ಕುಟುಂಬಸ್ಥರು ವಿರೋಧಿಸಿದ್ದರು. ಆದರೆ ಇಬ್ಬರೂ ಪೊಲೀಸ್ ಭದ್ರತೆಯಲ್ಲಿ ಮದುವೆಯಾಗಿದ್ದರು. ಮದುವೆಯಾಗಿ ಒಂದೇ ವರ್ಷದಲ್ಲಿ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಯುವತಿಯ ಪೋಷಕರು ಆಕೆಯ ಪತಿ …
Read More »ಕ್ಯೂರಿಂಗ್ ಮಾಡುವಾಗ ವಿದ್ಯುತ್ ಶಾಕ್ – ಸ್ಥಳದಲ್ಲೇ ಆರ್‌ಎಫ್‌ಓ ಸಾವು
ಹಾಸನ: ಕ್ಯೂರಿಂಗ್ ಮಾಡುವಾಗ ವಿದ್ಯುತ್ ಶಾಕ್‌ನಿಂದ ಅರಣ್ಯ ಇಲಾಖೆ ಆರ್‌ಎಫ್‌ಓ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ನಡೆದಿದೆ. ಜಗದೀಶ್.ಪಿ (46) ಮೃತಪಟ್ಟ ಅರಣ್ಯಾಧಿಕಾರಿ. ಕುಣಿಗಲ್‌ನಲ್ಲಿ ಅವರು ಕಾರ್ಯನಿರ್ವಹಿಸುತ್ತಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ನೂತನ ಮನೆ ನಿರ್ಮಿಸುತ್ತಿದ್ದರು. ಇಂದು (ಜೂ.21) ಮನೆಯ ಗೋಡೆಗೆ ನೀರು ಹಾಕುವಾಗ ವಿದ್ಯುತ್ ಶಾಕ್‌ನಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 2015 ರಿಂದ 2020 ರವರೆಗೆ ಹಾಸನ ಜಿಲ್ಲೆಯಲ್ಲಿ ಆರ್‌ಎಫ್‌ಓ ಆಗಿ ಕರ್ತವ್ಯ ನಿರ್ವಹಿಸಿದ್ದರು. ಜಗದೀಶ್.ಪಿ ಸಾವಿಗೆ ಅರಣ್ಯ …
Read More »ಯಲ್ಲಾಪುರದಲ್ಲಿ ಹಂದಿಜ್ವರಕ್ಕೆ ವ್ಯಕ್ತಿ ಬಲಿ
ಕಾರವಾರ: ಯಲ್ಲಾಪುರ ತಾಲೂಕಿನ ಚವತ್ತಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಹಂದಿಜ್ವರಕ್ಕೆ ಬಲಿಯಾಗಿದ್ದಾರೆ. ಮೃತರನ್ನು ರಾಜು ಮಂಜಗೌಡ (41) ಎಂದು ಗುರುತಿಸಲಾಗಿದೆ. ಜೂ.8 ರಂದು ಅವರು ಅಸ್ವಸ್ಥರಾಗಿ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಶಿರಸಿ ಮಾರಿಕಾಂಬಾ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತು. ಆದರೂ ಅವರಿಗೆ ಕಾಯಿಲೆ ಉಲ್ಬಣಗೊಂಡಿತ್ತು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಯಲ್ಲಾಪುರ ಭಾಗದಲ್ಲಿ ಆತಂಕಕ್ಕೆ ಕಾರಣವಾಗಿದ್ದು, …
Read More »
Laxmi News 24×7