ದಾವಣಗೆರೆ: ಇಲ್ಲಿನ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು , ಆಪರೇಷನ್ ಥಿಯೇಟರ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆಪರೇಷನ್ ಥಿಯೇಟರ್‌ನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಆಪರೇಷನ್ ಥಿಯೇಟರ್ ಸುತ್ತಾಮುತ್ತ ಇರುವ ಕೊಠಡಿಗಳಿಗೂ ಹಾನಿಯಾಗಿದೆ. ಅಗ್ನಿ ಅವಘಡದಿಂದ ದಟ್ಟ ಹೊಗೆ ಆವರಿಸಿದೆ. ಇದರಿಂದ ಭಯಭೀತರಾಗಿ ಸಿಬ್ಬಂದಿ ಅಲ್ಲಿಂದ ಓಡಿ ಹೊರಬಂದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಆಸ್ಪತ್ರೆ ಸಿಬ್ಬಂದಿ, ಏಳೆಂಟು ಜನ ಸಿಬ್ಬಂದಿ ಮಾತ್ರ ಇದ್ದೆವು. ಏಕಾಏಕಿ ಬೆಂಕಿ …
Read More »Monthly Archives: ಜುಲೈ 2026
220 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ 4 ವರ್ಷದ ಬಾಲಕ ಸಾವು
ಚಂಡೀಗಢ: ಹರಿಯಾಣದ ಅಂಬಾಲಾ ಜಿಲ್ಲೆಯಲ್ಲಿ 220 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ ನಾಲ್ಕು ವರ್ಷದ ಬಾಲಕ ಮೃತಪಟ್ಟಿದ್ದಾನೆ. 21 ಗಂಟೆಗಳ ರಕ್ಷಣಾ ಕಾರ್ಯಾಚರಣೆ ನಂತರ ಬುಧವಾರ ಮುಂಜಾನೆ ಬಾಲಕನನ್ನು ಕೊಳವೆ ಬಾವಿಯಿಂದ ಹೊರತೆಗೆಯಲಾಯಿತು. ಆದರೆ, ದುರದೃಷ್ಟವಶಾತ್ ಬಾಲಕ ಕೊನೆಯುಸಿರೆಳೆದಿದ್ದಾನೆ. ಮಂಗಳವಾರ ಬೆಳಗ್ಗೆ ಪ್ರಾರಂಭವಾದ ಬಹು-ಏಜೆನ್ಸಿ ಕಾರ್ಯಾಚರಣೆಯ ನಂತರ ಬಾಲಕ ನಿರ್ವೈರ್ ಸಿಂಗ್‌ನನ್ನು ಮುಂಜಾನೆ 3:40 ರ ಸುಮಾರಿಗೆ ಕೊಳವೆ ಬಾವಿಯಿಂದ ಹೊರತೆಗೆದು, ತಕ್ಷಣವೇ ಅಂಬುಲೆನ್ಸ್‌ನಲ್ಲಿ ಅಂಬಾಲಾ ಕಂಟೋನ್ಮೆಂಟ್‌ನಲ್ಲಿರುವ …
Read More »ಮಂಗಳೂರಿನಲ್ಲಿ ರಾತ್ರಿ ಮಳೆಗೆ ಭೂಕುಸಿತ – ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ
ಮಂಗಳೂರು: ಮಂಗಳವಾರ (ಜೂ.30) ರಾತ್ರಿ ಸುರಿದ ಭಾರೀ ಮಳೆಗೆ ಮಂಗಳೂರಿನ ನಾಗುರಿ ಎಂಬಲ್ಲಿ ಭೂಕುಸಿತ ಉಂಟಾಗಿದೆ. ಪರಿಣಾಮ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಭೂಕುಸಿತ ಉಂಟಾದ ಪರಿಣಾಮ ಮಣ್ಣು ಕುಸಿದು ಮನೆ ಮೇಲೆ ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ಆರು ಜನ ಮಣ್ಣಿನಡಿ ಸಿಲುಕಿಕೊಂಡಿದ್ದರು. ಈ ಪೈಕಿ ಓರ್ವ ಪುರುಷ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಇನ್ನುಳಿದಂತೆ ಓರ್ವ ಮಹಿಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ. …
Read More »ಮತದಾರರ ಪಟ್ಟಿ ಪರಿಷ್ಕರಣೆಗೆ ಎಲ್ಲರೂ ಸಹಕರಿಸಿ: ಬಲಿಷ್ಠ ಪ್ರಜಾತಂತ್ರ ನಿರ್ಮಾಣಕ್ಕೆ ಕೈಜೋಡಿಸಿ: ಡಾ. ವೀರಣ್ಣ ಚರಂತಿಮಠ
ಬಾಗಲಕೋಟೆ: ಪ್ರತಿಯೊಬ್ಬರೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬಲಿಷ್ಠ ಪ್ರಜಾತಂತ್ರ ನಿರ್ಮಾಣಕ್ಕೆ ಕೈಜೋಡಿಸಬೇಕು” ಎಂದು ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಹೇಳಿದರು ಅವರು ರಾಜ್ಯಾದ್ಯಂತ ಜುಲೈ ೨೯ರವರೆಗೆ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಮನೆ-ಮನೆ ಸಮೀಕ್ಷೆ ಮಂಗಳವಾರ ಆರಂಭಗೊAಡಿದ್ದು ಈ ಹಿನ್ನೆಲೆಯಲ್ಲಿ ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಅವರು ತಮ್ಮ ನಿವಾಸದಲ್ಲಿ ಬೂತ್ ಮಟ್ಟದ ಅಧಿಕಾರಿಗಳಿಗೆ (SIR) ಅಗತ್ಯ ದಾಖಲೆಗಳು …
Read More »ಇಂದಿನಿಂದ ವಾಣಿಜ್ಯ ಬಳಕೆಯ ಎಲ್‌ಪಿಜಿ ದರ 183.50 ರೂ. ಇಳಿಕೆ
ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ಕೇಂದ್ರ ಮತ್ತೊಂದು ಗುಡ್‌ನ್ಯೂಸ್ ನೀಡಿದೆ. ಇಂದಿನಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್‌ಪಿಜಿ ದರ 183.50 ರೂ. ಇಳಿಕೆ ಮಾಡಿದೆ. ಇಂದಿನಿಂದ (ಜುಲೈ 1) ಜಾರಿಗೆ ಬರುವಂತೆ 19 ಕೆ.ಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು 183.50 ರೂ. ಇಳಿಕೆ ಮಾಡಲಾಗಿದೆ. ಈ ಮೂಲಕ 3,113.50 ರೂ. ಇದ್ದ ಸಿಲಿಂಡರ್ ಬೆಲೆ ಈಗ 2,930 ರೂ.ಗೆ ಇಳಿದಿದೆ. …
Read More »ಹನ್ನೊಂದು ಸಾವಿರ ನಕಲಿ ಮತದಾರರ ಸುಳಿವು
ತಲ್ಲೂರ: ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು ೧೧ ಸಾವಿರಕ್ಕೂ ಹೆಚ್ಚು ನಕಲಿ ಮತದಾರರು ಇದ್ದಾರೆ ಎನ್ನುವ ಸುಳಿವು ಸಿಕ್ಕಿದೆ ಎಂದು ಸವದತ್ತಿ ಬಿಜೆಪಿ ಮಂಡಲ ಅಧ್ಯಕ್ಷ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವಿರೂಪಾಕ್ಷ ಮಾಮನಿ ಹೇಳಿದರು. ಬುದಿಗೊಪ್ಪ, ಯರಝರ್ವಿ ಗ್ರಾಮದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಮತದಾರರ ಪಟ್ಟಿ ಪರಿಷ್ಕರಣೆಯ ವಿಶೇಷ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ, ಈಗಾಗಲೇ ಪ್ರತಿ ಬೂತ್‌ಗೂ ಏಜೆಂಟರನ್ನು ನೇಮಕ ಮಾಡಿದ್ದು, ಬಿಎಲ್‌ಎ ಸರ್ಕಾರದಿಂದ ನೇಮಕವಾಗಿರುವ ಬಿಎಲ್‌ಒ ಅಧಿಕಾರಿಗಳ ಜತೆಗೂಡಿ ನಿರ್ಭಯದಿಂದ ಕೆಲಸ …
Read More »ನಂದಿ ಕಾರ್ಖಾನೆಯ ತೂಕದಲ್ಲಿ ಗೋಲ್‌ಮಾಲ್ ಪ್ರಕರಣ ಎಂಟು ಜನರ ಬಂಧನ ರೂ.11.32 ಕೋಟಿ ವಶ
ವಿಜಯಪುರ: ಕೃಷ್ಣಾ ತೀರದ ಪ್ರತಿಷ್ಠಿತ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ರೈತರ ಹೆಸರಿನಲ್ಲಿ ನಡೆದಿದೆ ಕೋಟ್ಯಂತರ ರೂಪಾಯಿ ಗೋಲ್‌ಮಾಲ್ ಪ್ರಕರಣವನ್ನು ಭೇದಿಸಿದ್ದು, 8 ಆರೋಪಿಗಳನ್ನು ಬಂಧಿಸಿ ಒಟ್ಟು 11.32 ಕೋಟಿ ರೂ. ಹಣ ವಶಪಡಿಸಿಕೊಂಡಿದ್ದಾಗಿ ಎಸ್‌ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಜಮಖಂಡಿ ತಾಲೂಕಿನ ಬಿದರಿ ಗ್ರಾಮದ ಧರೆಪ್ಪ ದುಂಡಪ್ಪ ನಾವಿ, ಬೆಳಗಾವಿಯ ಯರಗಟ್ಟಿ ಗ್ರಾಮದ ಭೀರಪ್ಪ ಬಸಪ್ಪ ಗಾಡದಾರ, ಯಲ್ಲಪ್ಪ ಬಸಪ್ಪ ಗಾಡದರ, ಆಲಕನೂರ ಗ್ರಾಮದ ಪ್ರಕಾಶ ಸಿದ್ದಲಿಂಗ್ ಗಡ್ಡಿ, …
Read More »ವಿವಾಹಿತೆಯನ್ನು ಓಡಿಸಿಕೊಂಡು ಹೋಗಿದ್ದಕ್ಕಾಗಿ ಮನೆ ಧ್ವಂಸ ಪ್ರಕರಣ: 3 ಅರೆಸ್ಟ್
ಬೆಳಗಾವಿ: ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದ ವಿವಾಹಿತೆಯನ್ನು ಓಡಿಸಿಕೊಂಡು ಹೋದ ಎಂಬ ಕಾರಣಕ್ಕೆ ಯುವಕನ ಮನೆ ಧ್ವಂಸ ಮಾಡಿದ್ದ ಪ್ರಕರಣದಲ್ಲಿ ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ವಿವಾಹಿತೆ ನಾಗವ್ವ ಎಂಬಾಕೆಯನ್ನು ಓಡಿಸಿಕೊಂಡು ಹೋಗಿದ್ದ ಯಲ್ಲಪ್ಪ ನಾಯಕ್ ಮನೆ ಮೇಲೆ ದಾಳಿ ಮಾಡಿ ಮನೆ ಧ್ವಂಸ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ನಾಗರಾಜ್ ನಾಯಕ, ರವಿ ಬೀಜಗತ್ತಿ, ಈಶ್ವರ ಮುಚ್ಚಂಡಿ ಎಂಬುವರನ್ನು ಬೆಳಗಾವಿಯ ಮಾರಿಹಾಳ ಠಾಣೆ ಪೊಲೀಸರಿಂದ ಬಂಧಿಸಲಾಗಿದೆ. ಮೂರು ಆರೋಪಿ …
Read More »ಕಳ್ಳತನವಾಗಿದ್ದ 19 ಬೈಕ್ ವಶ: ಆರೋಪಿಯನ್ನು ಬಂಧಿಸಿದ ಬೆಳಗಾವಿ ಪೊಲೀಸರು
ಬೆಳಗಾವಿ: ವಿವಿಧ ಬೈಕ್ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚಿರುವ ಬೆಳಗಾವಿ ಜಿಲ್ಲಾ ಪೊಲೀಸರು 19 ಬೈಕ್ ಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ರಾಯಬಾಗ ತಾಲೂಕಿನ ಕುಡಚಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ವಾಹನ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು ತಮ್ಮ 19 ಬೈಕ್‌ಗಳನ್ನು ಪತ್ತೆಹಚ್ಚಿ, ಮಲಗೌಡ ಅಣ್ಣಾಸಾಬ ಪಾಟೀಲ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ತನಿಖೆ ವೇಳೆ ಆರೋಪಿಯಿಂದ 5,75,000ರೂ. ಮೌಲ್ಯದ ಒಟ್ಟು 19 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
Read More »ಜಿಐಟಿ – ಅನ್ಮಯಾ ಟೆಕ್ನಾಲಜೀಸ್ ನಡುವೆ ಒಪ್ಪಂದ
ಬೆಳಗಾವಿ : ವೇಗವಾಗಿ ಬೆಳೆಯುತ್ತಿರುವ ಸೆಮಿಕಂಡಕ್ಟರ್ ಉದ್ಯಮಕ್ಕೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ಬದ್ಧತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ, ಕೆಎಲ್‌ಎಸ್ ಗೋಗಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಕೆಎಲ್‌ಎಸ್ ಜಿಐಟಿ), ಬೆಳಗಾವಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗವು ಅನ್ಮಯಾ ಟೆಕ್ನಾಲಜೀಸ್ ಸಂಸ್ಥೆಯೊಂದಿಗೆ ಒಪ್ಪಂದ (MoU) ಮಾಡಿಕೊಂಡಿದೆ. ಈ ಒಪ್ಪಂದವು ಸೆಮಿಕಂಡಕ್ಟರ್ ತಂತ್ರಜ್ಞಾನ, ವೈರ್‌ಲೆಸ್ ಕಮ್ಯುನಿಕೇಶನ್, ವಿಎಲ್‌ಎಸ್‌ಐ, ಎಂಬೆಡೆಡ್ ಸಿಸ್ಟಮ್ಸ್ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ಅರ್ಥಪೂರ್ಣ ಅವಕಾಶಗಳನ್ನು ಕಲ್ಪಿಸುವ ಮೂಲಕ ಕೈಗಾರಿಕಾ-ಶೈಕ್ಷಣಿಕ …
Read More »
Laxmi News 24×7