Breaking News

Daily Archives: ಜುಲೈ 1, 2026

ಇಂದಿನಿಂದ ವಾಣಿಜ್ಯ ಬಳಕೆಯ ಎಲ್‌ಪಿಜಿ ದರ 183.50 ರೂ. ಇಳಿಕೆ

ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ಕೇಂದ್ರ ಮತ್ತೊಂದು ಗುಡ್‌ನ್ಯೂಸ್‌ ನೀಡಿದೆ. ಇಂದಿನಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್‌ಪಿಜಿ ದರ 183.50 ರೂ. ಇಳಿಕೆ ಮಾಡಿದೆ. ಇಂದಿನಿಂದ (ಜುಲೈ 1) ಜಾರಿಗೆ ಬರುವಂತೆ 19 ಕೆ.ಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು 183.50 ರೂ. ಇಳಿಕೆ ಮಾಡಲಾಗಿದೆ. ಈ ಮೂಲಕ 3,113.50 ರೂ. ಇದ್ದ ಸಿಲಿಂಡರ್ ಬೆಲೆ ಈಗ 2,930 ರೂ.ಗೆ ಇಳಿದಿದೆ. …

Read More »

ಹನ್ನೊಂದು ಸಾವಿರ ನಕಲಿ ಮತದಾರರ ಸುಳಿವು

ತಲ್ಲೂರ: ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು ೧೧ ಸಾವಿರಕ್ಕೂ ಹೆಚ್ಚು ನಕಲಿ ಮತದಾರರು ಇದ್ದಾರೆ ಎನ್ನುವ ಸುಳಿವು ಸಿಕ್ಕಿದೆ ಎಂದು ಸವದತ್ತಿ ಬಿಜೆಪಿ ಮಂಡಲ ಅಧ್ಯಕ್ಷ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವಿರೂಪಾಕ್ಷ ಮಾಮನಿ ಹೇಳಿದರು. ಬುದಿಗೊಪ್ಪ, ಯರಝರ್ವಿ ಗ್ರಾಮದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಮತದಾರರ ಪಟ್ಟಿ ಪರಿಷ್ಕರಣೆಯ ವಿಶೇಷ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ, ಈಗಾಗಲೇ ಪ್ರತಿ ಬೂತ್‌ಗೂ ಏಜೆಂಟರನ್ನು ನೇಮಕ ಮಾಡಿದ್ದು, ಬಿಎಲ್‌ಎ ಸರ್ಕಾರದಿಂದ ನೇಮಕವಾಗಿರುವ ಬಿಎಲ್‌ಒ ಅಧಿಕಾರಿಗಳ ಜತೆಗೂಡಿ ನಿರ್ಭಯದಿಂದ ಕೆಲಸ …

Read More »

ನಂದಿ ಕಾರ್ಖಾನೆಯ ತೂಕದಲ್ಲಿ ಗೋಲ್‌ಮಾಲ್ ಪ್ರಕರಣ ಎಂಟು ಜನರ ಬಂಧನ ರೂ.11.32 ಕೋಟಿ ವಶ

ವಿಜಯಪುರ: ಕೃಷ್ಣಾ ತೀರದ ಪ್ರತಿಷ್ಠಿತ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ರೈತರ ಹೆಸರಿನಲ್ಲಿ ನಡೆದಿದೆ ಕೋಟ್ಯಂತರ ರೂಪಾಯಿ ಗೋಲ್‌ಮಾಲ್ ಪ್ರಕರಣವನ್ನು ಭೇದಿಸಿದ್ದು, 8 ಆರೋಪಿಗಳನ್ನು ಬಂಧಿಸಿ ಒಟ್ಟು 11.32 ಕೋಟಿ ರೂ. ಹಣ ವಶಪಡಿಸಿಕೊಂಡಿದ್ದಾಗಿ ಎಸ್‌ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಜಮಖಂಡಿ ತಾಲೂಕಿನ ಬಿದರಿ ಗ್ರಾಮದ ಧರೆಪ್ಪ ದುಂಡಪ್ಪ ನಾವಿ, ಬೆಳಗಾವಿಯ ಯರಗಟ್ಟಿ ಗ್ರಾಮದ ಭೀರಪ್ಪ ಬಸಪ್ಪ ಗಾಡದಾರ, ಯಲ್ಲಪ್ಪ ಬಸಪ್ಪ ಗಾಡದರ, ಆಲಕನೂರ ಗ್ರಾಮದ ಪ್ರಕಾಶ ಸಿದ್ದಲಿಂಗ್ ಗಡ್ಡಿ, …

Read More »

ವಿವಾಹಿತೆಯನ್ನು ಓಡಿಸಿಕೊಂಡು ಹೋಗಿದ್ದಕ್ಕಾಗಿ ಮನೆ ಧ್ವಂಸ ಪ್ರಕರಣ: 3 ಅರೆಸ್ಟ್

 ಬೆಳಗಾವಿ: ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದ ವಿವಾಹಿತೆಯನ್ನು ಓಡಿಸಿಕೊಂಡು ಹೋದ ಎಂಬ ಕಾರಣಕ್ಕೆ ಯುವಕನ ಮನೆ ಧ್ವಂಸ ಮಾಡಿದ್ದ ಪ್ರಕರಣದಲ್ಲಿ ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ವಿವಾಹಿತೆ ನಾಗವ್ವ ಎಂಬಾಕೆಯನ್ನು  ಓಡಿಸಿಕೊಂಡು ಹೋಗಿದ್ದ ಯಲ್ಲಪ್ಪ ನಾಯಕ್ ಮನೆ ಮೇಲೆ ದಾಳಿ ಮಾಡಿ ಮನೆ ಧ್ವಂಸ ಮಾಡಿದ ಪ್ರಕರಣದಲ್ಲಿ  ಪ್ರಮುಖ ಆರೋಪಿಗಳಾದ ನಾಗರಾಜ್ ನಾಯಕ, ರವಿ ಬೀಜಗತ್ತಿ, ಈಶ್ವರ ಮುಚ್ಚಂಡಿ ಎಂಬುವರನ್ನು ಬೆಳಗಾವಿಯ ಮಾರಿಹಾಳ ಠಾಣೆ ಪೊಲೀಸರಿಂದ ಬಂಧಿಸಲಾಗಿದೆ. ಮೂರು ಆರೋಪಿ …

Read More »

ಕಳ್ಳತನವಾಗಿದ್ದ 19 ಬೈಕ್‌ ವಶ: ಆರೋಪಿಯನ್ನು ಬಂಧಿಸಿದ ಬೆಳಗಾವಿ ಪೊಲೀಸರು

ಬೆಳಗಾವಿ: ವಿವಿಧ ಬೈಕ್ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚಿರುವ ಬೆಳಗಾವಿ ಜಿಲ್ಲಾ ಪೊಲೀಸರು 19 ಬೈಕ್ ಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ರಾಯಬಾಗ ತಾಲೂಕಿನ ಕುಡಚಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ವಾಹನ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು ತಮ್ಮ  19 ಬೈಕ್‌ಗಳನ್ನು ಪತ್ತೆಹಚ್ಚಿ, ಮಲಗೌಡ ಅಣ್ಣಾಸಾಬ ಪಾಟೀಲ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ತನಿಖೆ ವೇಳೆ ಆರೋಪಿಯಿಂದ 5,75,000ರೂ. ಮೌಲ್ಯದ ಒಟ್ಟು 19 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

Read More »

ಜಿಐಟಿ – ಅನ್ಮಯಾ ಟೆಕ್ನಾಲಜೀಸ್ ನಡುವೆ ಒಪ್ಪಂದ

ಬೆಳಗಾವಿ : ವೇಗವಾಗಿ ಬೆಳೆಯುತ್ತಿರುವ ಸೆಮಿಕಂಡಕ್ಟರ್ ಉದ್ಯಮಕ್ಕೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ಬದ್ಧತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ, ಕೆಎಲ್‌ಎಸ್ ಗೋಗಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಕೆಎಲ್‌ಎಸ್ ಜಿಐಟಿ), ಬೆಳಗಾವಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗವು ಅನ್ಮಯಾ ಟೆಕ್ನಾಲಜೀಸ್ ಸಂಸ್ಥೆಯೊಂದಿಗೆ ಒಪ್ಪಂದ (MoU) ಮಾಡಿಕೊಂಡಿದೆ. ಈ ಒಪ್ಪಂದವು ಸೆಮಿಕಂಡಕ್ಟರ್ ತಂತ್ರಜ್ಞಾನ, ವೈರ್‌ಲೆಸ್ ಕಮ್ಯುನಿಕೇಶನ್, ವಿಎಲ್‌ಎಸ್‌ಐ, ಎಂಬೆಡೆಡ್ ಸಿಸ್ಟಮ್ಸ್ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ಅರ್ಥಪೂರ್ಣ ಅವಕಾಶಗಳನ್ನು ಕಲ್ಪಿಸುವ ಮೂಲಕ ಕೈಗಾರಿಕಾ-ಶೈಕ್ಷಣಿಕ …

Read More »

ಕೃತಕ ಬುದ್ಧಿಮತ್ತೆ ಆಧಾರಿತ “Selfy BookAI” ಮೊಬೈಲ್ ಅಪ್ಲಿಕೇಷನ್ ಉದ್ಘಾಟನಾ ಸಮಾರಂಭ

ಬೆಂಗಳೂರಿನ ಕ್ಯಾಪಿಟಲ್ ಹೊಟೇಲ್ ನಲ್ಲಿ ಇಂದು ವಿಶ್ವ ಸಾಮಾಜಿಕ ಮಾಧ್ಯಮ ದಿನಾಚರಣೆಯ ಅಂಗವಾಗಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಸಾಮಾಜಿಕ ತಂತ್ರಜ್ಞಾನ ಮೊಬೈಲ್ ಅಪ್ಲಿಕೇಷನ್ “Selfy BookAI” ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಮಾತನಾಡಿದೆ. ಈ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ತಮ್ಮಯ್ಯ, ಆಧ್ಯಾತ್ಮಿಕ ಚಿಂತಕರಾದ ಶ್ರೀ ವಿನಯ ಗುರೂಜಿ ಹಾಗೂ ವಿ.ಪ. ಸದಸ್ಯರಾದ ಶ್ರೀ ಸಲೀಂ ಅಹ್ಮದ್ ಹಾಗೂ ಶ್ರೀ ನಂಜೇಶ ಬೆಣ್ಣೂರು ಅವರು ಸೇರಿ ಗಣ್ಯರು …

Read More »

ಅಡ್ಡ ಮತದಾನ ಮಾಡಿರೋರ ಮೇಲೆ ಹೈಕಮಾಂಡ್‌ನಿಂದ ಕ್ರಮ: ಸುರೇಶ್ ಗೌಡ

ಬೆಂಗಳೂರು: ಅಡ್ಡ ಮತದಾನಮಾಡಿರುವವರ ವಿರುದ್ಧ ಹೈಕಮಾಂಡ್ ಕ್ರಮ ತೆಗೆದುಕೊಳ್ಳುತ್ತದೆ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ತಿಳಿಸಿದ್ದಾರೆ. ಅಡ್ಡ ಮತದಾನ ವಿಚಾರವಾಗಿ ಬೇಲೂರು ಶಾಸಕ ಹೆಚ್.ಕೆ. ಸುರೇಶ್ ಆಣೆ-ಪ್ರಮಾಣ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಅಡ್ಡ ಮತದಾನದ ಕುರಿತು ಕಾಂಗ್ರೆಸ್‌ನವರೇ ಅಪಪ್ರಚಾರ ಮಾಡುತ್ತಿದ್ದಾರೆ. ನಾನೇ ಕ್ರಾಸ್ ವೋಟ್ ಮಾಡಿದ್ದೀನಿ ಅಂತ ಹೇಳ್ತಿದ್ರು. ನಾನು ಅಡ್ಡ ಮತದಾನ ಮಾಡಿಲ್ಲ. ಅವರ ಆರೋಪಕ್ಕೆ ನಾನೇನು ತಲೆಕೆಡಿಸಿಕೊಂಡಿಲ್ಲ. ಪ್ರಾಮಾಣಿಕವಾಗಿ ಇರುವವರಿಗೆ ಯಾವುದೇ ಆಣೆ-ಪ್ರಮಾಣ …

Read More »

ರಾಮ ಮಂದಿರ ದೇಣಿಗೆ ಅಕ್ರಮ: ಸಿಎಂ ಯೋಗಿ ಯಾರನ್ನೂ ಬಿಡಲ್ಲ – ಸಿ.ಟಿ.ರವಿ

ಬೆಂಗಳೂರು: ರಾಮ ಮಂದಿರ ದೇಣಿಗೆ ಅಕ್ರಮ ವಿಚಾರ ಮನಸಿಗೆ ಘಾಸಿ ಉಂಟು ಮಾಡಿದೆ. ಯೋಗಿ ಯಾರ ತಪ್ಪನ್ನೂ ಸಹಿಸಲ್ಲ ಎಂದು ಬಿಜೆಪಿ ನಾಯಕ ಸಿ.ಟಿ ರವಿ ತಿಳಿಸಿದ್ದಾರೆ. ರಾಮ ಮಂದಿರ ದೇಣಿಗೆ ಅಕ್ರಮ ವಿಚಾರ ಮತ್ತು ಬಿಜೆಪಿ – ಆರ್‌ಎಸ್‌ಎಸ್‌ಗೆ ಡೊನೇಷನ್ ಫಸ್ಟ್ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಮ ಮಂದಿರ ನಿರ್ಮಾಣ ಕಾರ್ಯ 500 ವರ್ಷಗಳ ಶ್ರಮ. ಇದಕ್ಕಾಗಿ ಲಕ್ಷಾಂತರ ಜನ …

Read More »

ಮದುವೆಯಾದ ಎರಡೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ

ಶಿವಮೊಗ್ಗ: ಮದುವೆಯಾದ ಎರಡೇ ತಿಂಗಳಿಗೆ ನವಾವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸೊರಬತಾಲೂಕಿನ ಹಣಜಿ ಗ್ರಾಮದಲ್ಲಿ ನಡೆದಿದೆ. ಸ್ವಾತಿ (24) ಆತ್ಮಹತ್ಯೆಗೆ ಶರಣಾದ ಮಹಿಳೆ. ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಸ್ವರೂಪ್‌ನನ್ನು ಸ್ವಾತಿ ಮದುವೆಯಾಗಿದ್ದಳು. ಗರ್ಭಿಣಿಯಾಗಿದ್ದ ಆಕೆಗೆ ಅನಾರೋಗ್ಯದ ಸಮಸ್ಯೆ ಕಾಣಿಸಿಕೊಂಡಿತ್ತು. 20 ದಿನಗಳ ಹಿಂದೆ ಹಣಜಿ ಗ್ರಾಮದ ತವರು ಮನೆಗೆ ಸ್ವಾತಿ ಬಂದಿದ್ದಳು. ತಂದೆ ತಾಯಿ ಜಮೀನು ಕೆಲಸಕ್ಕೆ ಹೋದಾಗ ಸೀರೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಇದನ್ನು ಗಮನಿಸಿದ …

Read More »