ಬೆಳಗಾವಿ: ಮಾರುಕಟ್ಟೆಯಲ್ಲಿ ಕೊತ್ತಂಬರಿ ಸೊಪ್ಪಿಗೆ ಸೂಕ್ತ ಬೆಲೆ ಸಿಗದ ಹಿನ್ನೆಲೆ ಬೆಳಗಾವಿ ತಾಲೂಕಿನ ಕೇದನೂರ ಗ್ರಾಮದ ರೈತರು ತಾವು ಬೆಳೆದಿದ್ದ ಕೊತ್ತಂಬರಿ ಬೆಳೆಯನ್ನು ಹೊಲದಲ್ಲೇ ನಾಶಪಡಿಸಿದ್ದಾರೆ. ಸಾವಿರಾರು ರೂಪಾಯಿ ವೆಚ್ಚ ಮಾಡಿ ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ಸಿಗದ ಕಾರಣ ರೈತರು ತಮ್ಮ ಕೈಯಾರೆ ಕೊತ್ತಂಬರಿ ಕಿತ್ತು, ಮಿನಿ ರೂಟರ್ ಹರಿಸಿ ಸಂಪೂರ್ಣ ಬೆಳೆ ನಾಶಪಡಿಸಿದ್ದಾರೆ. ಈ ವರ್ಷ ಉತ್ತಮ ಆದಾಯದ ನಿರೀಕ್ಷೆಯೊಂದಿಗೆ ಕೇದನೂರಿನ ಹಲವು ರೈತರು ಕೊತ್ತಂಬರಿ ಬೆಳೆ …
Read More »Daily Archives: ಜುಲೈ 2, 2026
ಗಾಂಜಾ ಮಾರಾಟಕ್ಕೆ ವಿರೋಧ – ತಲೆ ಮೇಲೆ ಕಲ್ಲು ಎತ್ತಿಹಾಕಿ ಅಜ್ಜಿಯನ್ನೇ ಕೊಂದ ಮೊಮ್ಮಗ
ಶಿವಮೊಗ್ಗ: ಗಾಂಜಾ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ ಅಜ್ಜಿಯ ಮೇಲೆ ಮೊಮ್ಮಗ ಹಲ್ಲೆ ಮಾಡಿ, ತಲೆ ಮೇಲೆ ಸೈಜುಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯ ತಖ್ವಾ ಮಸೀದಿ ಎದುರಿನ ರಸ್ತೆಯಲ್ಲಿಯೇ ಈ ಭೀಕರ ಘಟನೆ ನಡೆದಿದ್ದು, ಕಿಶೋರ್ (26) ಎಂಬ ಯುವಕ ಈ ಕೃತ್ಯವನ್ನು ಎಸೆಗಿದ್ದಾನೆ. ಸುಶೀಲಮ್ಮ (55) ಕೊಲೆಯಾದ ವೃದ್ಧೆ. ಕೊಲೆ ಆರೋಪಿ ಕಿಶೋರ್ ಮನೆಯಲ್ಲಿ ಗಾಂಜಾ …
Read More »ಹಾಸನ, ತುಮಕೂರಿನಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ
ತುಮಕೂರು: ರಾಜ್ಯದ ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ನಡೆಸಿದ ಪರಿಶೀಲನೆ ವೇಳೆ ಅನಧಿಕೃತವಾಗಿ ದಾಸ್ತಾನು ಮಾಡಲಾಗಿದ್ದ ಬೀಜ ಹಾಗೂ ಸೂಕ್ಷ್ಮ ಪೋಷಕಾಂಶಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಾಸನ ಜಿಲ್ಲೆಯ ಸಾಲಗಾಮೆ ಹೋಬಳಿಯ ಕೊಂಡಜ್ಜಿಕೊಪ್ಪಲುವಿನ ಕಾರ್ತಿಕ್ ಟ್ರೇಡರ್ಸ್‌ನಲ್ಲಿ ಬೀಜ ಕಾಯ್ದೆ-1966 ಉಲ್ಲಂಘಿಸಿ ಯಾವುದೇ ಅನುಮತಿಯಿಲ್ಲದೆ ದಾಸ್ತಾನು ಮಾಡಲಾಗಿದ್ದ ಸುಮಾರು 85 ಸಾವಿರ ರೂ. ಮೌಲ್ಯದ 180 ಕೆ.ಜಿ. ಹೈಬ್ರೀಡ್ ಮೆಕ್ಕೆಜೋಳ ಬೀಜಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಅದೇ ರೀತಿ, ತುಮಕೂರು …
Read More »ಕನ್ನಡ ಚಿತ್ರರಂಗದ ಉಳಿವಿಗೆ ಸರ್ಕಾರದಿಂದ ನೆರವು – ಸಿಎಂ ಡಿಕೆಶಿ ಭರವಸೆ
ಕನ್ನಡ ಚಿತ್ರರಂಗದ ಉಳಿವಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ಯಾವ ರೀತಿಯಲ್ಲಿ ಸಹಾಯ ಮಾಡಬಹುದು ಎಂದು ಆಲೋಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ಹಾಗೆಯೇ, ಚಿತ್ರನಗರಿ ಘೋಷಣೆ ಮಾಡಿರುವ ಅನುದಾನದ ಬಿಡುಗಡೆಗೆ ಕ್ರಮಕೈಗೊಳ್ಳುವುದಾಗಿ ಸಿಎಂ ತಿಳಿಸಿದ್ದಾರೆ. ಕನ್ನಡ ಚಿತ್ರರಂಗ ಉಳಿವಿಗಾಗಿ ʻಸಮಗ್ರ ಹೊಸ ಚಲನಚಿತ್ರ ನೀತಿʼ ಸೇರಿದಂತೆ ʻಚಲನಚಿತ್ರ ಪ್ರಾಚ್ಯಾಗಾರ (ಆರ್ಕೈವ್) ಸಹಾಯಧನ ಹೆಚ್ಚಳʼ, ʻಸರ್ಕಾರದ ಓಟಿಟಿ ವೇದಿಕೆ, ಸಿನಿಮಾಟೋಗ್ರಫಿ ಕಾಯ್ದೆ ತಿದ್ದುಪಡಿʼ, ʻಏಕಪರದೆ ಚಿತ್ರಮಂದಿರಗಳ ನವೀಕರಣʼ, …
Read More »ವಾಟ್ಸಪ್ ಹೊಸ ಅಪ್‌ಡೇಟ್ ಬಗ್ಗೆ ಕಳವಳ – ಮೆಟಾಗೆ ಕೇಂದ್ರ ಸರ್ಕಾರ ನೋಟಿಸ್
ನವದೆಹಲಿ: ಮೊಬೈಲ್ ಸಂಖ್ಯೆ ಹಂಚಿಕೊಳ್ಳದೇ ಯೂಸರ್‌ನೇಮ್ ಮೂಲಕ ಸಂಪರ್ಕ ಸಾಧಿಸಲು ಅವಕಾಶ ಕಲ್ಪಿಸುವ ವಾಟ್ಸಪ್‌ನ ಹೊಸ ವೈಶಿಷ್ಟ್ಯದ ಬಗ್ಗೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಈ ವೈಶಿಷ್ಟ್ಯವನ್ನು ಪರಿಚಯಿಸಿದ್ದಕ್ಕಾಗಿ ಕೇಂದ್ರ ಸರ್ಕಾರ ಮೆಟಾಗೆ ನೋಟಿಸ್ ಜಾರಿಗೊಳಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ವಾಟ್ಸಪ್‌ನ ಹೊಸ ವೈಶಿಷ್ಟ್ಯವು ಹೇಗೆ ಕಾರ್ಯನಿರ್ವಹಿಸುತ್ತದೆ? ಯಾವ ಸುರಕ್ಷತಾ ಕ್ರಮಗಳನ್ನ ಒಳಗೊಂಡಿದೆ? ಎಂಬುದರ ಕುರಿತು 3 ದಿನಗಳಲ್ಲಿ ವಿವರವಾದ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. …
Read More »ಡಿ-ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ – ಪ್ರಮುಖ ಸಾಕ್ಷಿಗೆ ಬೆದರಿಕೆ; ಮೂವರು ಅರೆಸ್ಟ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಸಂದೀಪ್‌ಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಮೂವರು ಆರೋಪಿಗಳನ್ನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಅಭಿಮಾನಿಗಳಾದ ಸುಹಾಸ್, ವೇಣು ಮತ್ತು ಪುನೀತ್ ಬಂಧಿತ ಆರೋಪಿಗಳಾಗಿದ್ದು, ಮೂವರು ಮೂಲತಃ ತುಮಕೂರಿನವರು. ಪುನೀತ್ ʻಡಿ-ಕಮ್ಯುನಿಟಿʼ ಫೇಸ್‌ಬುಕ್ ಪೇಜ್‌ನ ಅಡ್ಮಿನ್ ಅನ್ನೋದು ಬೆಳಕಿಗೆ ಬಂದಿದೆ. ಸಾಕ್ಷ್ಯನಾಶಕ್ಕೆ ಸಂಚು ರೂಪಿಸಿದ ಈ ಅಭಿಮಾನಿಗಳ ಕೃತ್ಯದಿಂದ ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ಕಾನೂನು ಸಂಕಷ್ಟ ಮತ್ತು ಜೈಲು ವಾಸದ ಭೀತಿ …
Read More »ಚಾಮುಂಡಿ ಬೆಟ್ಟದಲ್ಲಿ ಜು.17 ರಿಂದ ಆಷಾಢ ಮಾಸದ ಪೂಜೆ – 2,000 ರೂ. ಟಿಕೆಟ್ ಖರೀದಿಸಿದ್ರೆ ನೇರ ದರ್ಶನ!
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಜುಲೈ 17 ರಿಂದ ಆಷಾಢ ಮಾಸ ವಿಶೇಷ ಪೂಜೆ ಆರಂಭವಾಗಲಿದೆ. ಭಕ್ತ ಸಾಗರವೇ ಹರಿದುಬರುವ ಹಿನ್ನೆಲೆ ಮೂರು ದಿನಗಳ ಕಾಲ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಭಕ್ತರಿಗೆ ವಿಶೇಷ ವಾಹನ ಸೌಲಭ್ಯ ಕಲ್ಪಿಸಿದ್ದು, ವಿಶೇಷ ದರ್ಶನಕ್ಕೆ ಬರೋಬ್ಬರಿ 2000 ರೂ. ಟಿಕೆಟ್ ದರ ನಿಗದಿ ಮಾಡಲಾಗಿದೆ ಎಂದು ಸಚಿವರಾದ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಆಷಾಢ ಸಂಭ್ರಮಕ್ಕೆ ಸಿದ್ಧತಾ ಕಾರ್ಯ ಪರಿಶೀಲಿಸಿದ ಸಚಿವ …
Read More »ಮಳೆಗಾಗಿ ಕತ್ತೆ ಕಾಂತೇಶ – ಕಸ್ತೂರಿ ಮದುವೆ; ಧಾರವಾಡದ ಶಿರೂರಿನಲ್ಲಿ ವಿಶಿಷ್ಟ ಆಚರಣೆ
ಧಾರವಾಡ: ಮಳೆಯ ಕೊರತೆಯಿಂದ ರೈತರು ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಿರೂರು ಗ್ರಾಮದಲ್ಲಿ ಕತ್ತೆ ಹಾಗೂ ಕಪ್ಪೆಗಳ ಮದುವೆ ಮಾಡಿಸುವ ಮೂಲಕ ವಿಶೇಷ ಪೂಜೆ ನೆರವೇರಿಸಲಾಗಿದೆ. ಗ್ರಾಮಸ್ಥರು ಗಂಡು ಕತ್ತೆಗೆ `ಕಾಂತೇಶ್’ ಹಾಗೂ ಹೆಣ್ಣು ಕತ್ತೆಗೆ `ಕಸ್ತೂರಿ’ ಎಂದು ಹೆಸರಿಟ್ಟು ಹಿಂದೂ ಸಂಪ್ರದಾಯದಂತೆ ಅದ್ದೂರಿಯಾಗಿ ವಿವಾಹ ನೆರವೇರಿಸಿದರು. ಮದುವೆಗೆ ಮುನ್ನ ದೇವಕಾರ್ಯ ನಡೆಸಿ, ನಂತರ ಶಾಸ್ತ್ರೋಕ್ತವಾಗಿ ಮದುವೆ ಮಾಡಲಾಯಿತು. ಕತ್ತೆಗಳ ಜೊತೆಗೆ ಎರಡು ಕಪ್ಪೆಗಳಿಗೂ ಸಂಪ್ರದಾಯಬದ್ಧವಾಗಿ …
Read More »ಆರ್‌ಎಸ್‌ಎಸ್ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ
ಬೆಂಗಳೂರು: ಆರ್‌ಎಸ್‌ಎಸ್ ನೋಂದಣಿ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬರೆದಿರುವ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ನೀಡದಿರಲು ಸಂಘದ ಮುಖಂಡರು ನಿರ್ಧರಿಸಿದ್ದಾರೆ. ಈ ಕುರಿತು ಇಂದು ನಡೆದ ಆರ್‌ಎಸ್‌ಎಸ್ ಬೈಠಕ್‌ನಲ್ಲಿ ಬಿಜೆಪಿ ನಾಯಕರಿಗೂ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಆರ್‌ಎಸ್‌ಎಸ್ ನೋಂದಣಿ ವಿಚಾರಕ್ಕೆ ಸಂಬಂಧಿಸಿದಂತೆ ಸರಸಂಘಚಾಲಕ ಮೋಹನ್ ಭಾಗವತ್ ಈಗಾಗಲೇ ಹಲವು ಬಾರಿ ಸ್ಪಷ್ಟನೆ ನೀಡಿದ್ದಾರೆ. ಕೇರಳದಲ್ಲಿಯೂ ಈ ಕುರಿತು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. …
Read More »ಆಯುರ್ವೇದ ಆರೋಗ್ಯ ಸೇವೆ ಮೂಲಕ ಸಮಾಜ ಸೇವೆ
ಬೆಳಗಾವಿ: ಆಯುರ್ವೇದ ಆರೋಗ್ಯ ಸೇವೆ ಮೂಲಕ ಸಮಾಜ ಸೇವೆ ಸಲ್ಲಿಸುವಾಗ ಕರುಣೆ, ನೈತಿಕತೆ ಹಾಗೂ ಶ್ರೇಷ್ಠತೆಯ ಮೌಲ್ಯಗಳನ್ನು ಪಾಲಿಸಬೇಕು ಎಂದು ನವದೆಹಲಿಯ ರಾಷ್ಟ್ರೀಯ ಭಾರತೀಯ ವೈದ್ಯಕೀಯ ಪದ್ಧತಿ ಆಯೋಗದ ಆಯುರ್ವೇದ ಮಂಡಳಿ ಅಧ್ಯಕ್ಷ ಡಾ.ಅಲ್ಲಮಪ್ರಭು ಗುಡ್ಡ ಹೇಳಿದರು. ನಗರದ ಡಿಬಿಎಇಟಿ ಸಂಸ್ಥೆಯ ಎಸ್‌ಬಿಜಿ ಆಯುರ್ವೇದ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆ ಸಭಾಂಗಣದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮಾತನಾಡಿ, ವೈದ್ಯಕೀಯ ಕ್ಷೇತ್ರದಲ್ಲಿ ಕಲಿಕೆಗೆ ಕೊನೆಯಿಲ್ಲ. ಹೀಗಾಗಿ, ಪದವಿ ಮುಗಿಸಿದರೂ ಅಧ್ಯಯನ …
Read More »
Laxmi News 24×7