Breaking News

Daily Archives: ಜುಲೈ 4, 2026

ಆತ್ಮಹತ್ಯೆಗೆ ಹೇಮಾವತಿ ನದಿಗೆ ಹಾರಿ ಮರಳಿನ ಮೇಲೆ ಬಿದ್ದವನ ರಕ್ಷಣೆ

ಹಾಸನ: ಹೇಮಾವತಿ ನದಿಗೆ  ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಅಗ್ನಿಶಾಮಕದಳ ಹಾಗೂ ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ರಕ್ಷಿಸಿದ ಘಟನೆ ಹಾಸನ  ಜಿಲ್ಲೆ, ಸಕಲೇಶಪುರ  ಪಟ್ಟಣದ, ಮಳಲಿ ಬೈಪಾಸ್‌ನಲ್ಲಿ ನಡೆದಿದೆ. ಹಾಸನ ಮೂಲದ ಚಿರಂತ್ (38) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಚಿರಂತ್ ರಾಷ್ಟ್ರೀಯ ಹೆದ್ದಾರಿ 75ರ ಬಿಎಂ ರಸ್ತೆಯ ಮಳಲಿ ಬೈಪಾಸ್‌ನಲ್ಲಿರುವ ಹೇಮಾವತಿ ಸೇತುವೆಯಿಂದ ನದಿಗೆ ಜಿಗಿದಿದ್ದಾನೆ. ಚಿರಂತ್ ಜಿಗಿದಿದ್ದನ್ನು ಕಂಡು ಸ್ಥಳೀಯರು ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. …

Read More »

ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲ, ರೈತರು ಬೆಳೆ ಬೆಳೆಯಬೇಡಿ ಎಂದಿರೋದು ಆಶ್ಚರ್ಯ: ಸಿಎಂ ಹೇಳಿಕೆಗೆ ವಿಜಯೇಂದ್ರ ಕಿಡಿ

ಬೆಂಗಳೂರು: ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲ, ರೈತರು ಬೆಳೆ ಬೆಳೆಯಬೇಡಿ ಎಂದು ಮುಖ್ಯಮಂತ್ರಿ ಹೇಳಿರುವುದು ಆಶ್ಚರ್ಯಕರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೀಕರ ಬರಗಾಲದ ಮುನ್ಸೂಚನೆ ಇದೆ. ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲ. ಅದಕ್ಕಾಗಿ ರೈತರು ಬೆಳೆ ಬೆಳೆಯಬೇಡಿ ಎಂದು ಸಿಎಂ ಹೇಳಿರುವುದು ಆಶ್ಚರ್ಯ ಹಾಗೂ ನೋವು ತಂದಿದೆ. ಮುಖ್ಯಮಂತ್ರಿಯವರ ಈ ಹೇಳಿಕೆ ರಾಜ್ಯದ ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದೆ. …

Read More »

ಬ್ರೇಕ್ ಫೇಲ್ ಆಗಿ ಮರಕ್ಕೆ ಡಿಕ್ಕಿ ಹೊಡೆದ ಸಾರಿಗೆ ಬಸ್‌; 20ಕ್ಕೂ ಹೆಚ್ಚು ಮಂದಿಗೆ ಗಾಯ

ಗದಗ: ಬ್ರೇಕ್ ಫೇಲ್ ಆದ ಪರಿಣಾಮ ಸಾರಿಗೆ ಬಸ್‌ ಮರಕ್ಕೆ ಡಿಕ್ಕಿ ಹೊಡೆದು, 13 ವಿದ್ಯಾರ್ಥಿಗಳು ಸೇರಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಗದಗಜಿಲ್ಲೆಯ ಲಕ್ಷ್ಮೇಶ್ವರತಾಲೂಕಿನ ದೊಡ್ಡೂರು ಸಮೀಪ ನಡೆದಿದೆ. ಲಕ್ಷ್ಮೇಶ್ವರದಿಂದ ಶಿಗ್ಲಿ, ಬಾಳೆಹೊಸೂರ ಮಾರ್ಗವಾಗಿ ಗುತ್ತಲಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಸುಮಾರು 90 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ದೊಡ್ಡೂರು ಮತ್ತು ಶಿಗ್ಲಿ ಗ್ರಾಮದ ನಡುವಿನ ಸೇತುವೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಬಸ್‌ನ ಬ್ರೇಕ್ ಏಕಾಏಕಿ ಫೇಲ್ ಆಗಿದೆ. …

Read More »

ಮರದ ರೆಂಬೆ ಬಿದ್ದು ಎರಡು ಕಾರುಗಳು ಜಖಂ – ತಪ್ಪಿದ ಭಾರೀ ಅನಾಹುತ

ಬೆಂಗಳೂರು: ರಸ್ತೆ ಪಕ್ಕದಲ್ಲಿದ್ದ ಬೃಹತ್‌ ಮರದ ರೆಂಬೆಯೊಂದು ಬಿದ್ದು ಎರಡು ಕಾರು ಹಾಗೂ ಒಂದು ಸ್ಕೂಟಿ ಜಖಂಗೊಂಡ ಘಟನೆ ಆರ್‌ಆರ್ ನಗರದ  ಹಲಗೆವಡೆರಹಳ್ಳಿಯಲ್ಲಿ ನಡೆದಿದೆ. ವಾಹನಗಳು ಜಖಂಗೊಂಡಿದ್ದರಿಂದ ಮಾಲೀಕರು ಆತಂಕಕ್ಕೆ ಒಳಗಾಗಿದ್ದಾರೆ. ಇನ್ನೂ ಸರ್ಕಾರಿ ಶಾಲೆ ಪಕ್ಕದಲ್ಲೇ ಈ ಘಟನೆ ನಡೆದಿದೆ. ಈ ವೇಳೆ ಮಕ್ಕಳು ಹಾಗೂ ಜನರು ಸ್ಥಳದಲ್ಲಿ ಇಲ್ಲದೇ ಇದ್ದಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಜಿಬಿಎ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. …

Read More »

ಡ್ರಗ್ ಪೆಡ್ಲರ್ ಬಂಧನಕ್ಕೆ ಹೋದ ಪೊಲೀಸರಿಗೆ ಶಾಕ್; 17 ಲಾಂಗು, 230 ಮೊಬೈಲ್ ಜಪ್ತಿ

ಬೆಂಗಳೂರು: ಡ್ರಗ್ ಪೆಡ್ಲರ್‌ನನ್ನು ಬಂಧಿಸಲು ತೆರಳಿದ್ದ ಬ್ಯಾಟರಾಯನಪುರ ಪೊಲೀಸರಿಗೆ ಶಾಕ್ ಎದುರಾಗಿದ್ದು. ಆರೋಪಿ ಮನೆಯ ಮೇಲೆ ದಾಳಿ ನಡೆಸಿದ ವೇಳೆ 17 ಮಾರಕಾಸ್ತ್ರಗಳು, 230 ಕಳವು ಮೊಬೈಲ್‌ಗಳು ಹಾಗೂ 600-700 ಗ್ರಾಂ ಗಾಂಜಾ ಪತ್ತೆಯಾಗಿದೆ. ಜುಲೈ 1ರಂದು ರಾತ್ರಿ ಸುಮಾರು 10.50ಕ್ಕೆ ಬ್ಯಾಟರಾಯನಪುರ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ 37 ವರ್ಷದ ಅಕ್ಬರ್ ಶರೀಫ್‌ನನ್ನು ಗಸ್ತಿನಲ್ಲಿದ್ದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಅಕ್ಬರ್ ನೀಡಿದ …

Read More »

ಮಳೆ ಕೊರತೆಯಿಂದ ವಿದ್ಯುತ್ ಉತ್ಪಾದನೆಯಲ್ಲಿ ವ್ಯತ್ಯಯ ಸಾಧ್ಯ; ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಸಿಎಂ ಸೂಚನೆ

ಬೆಂಗಳೂರು: ಎಲ್ ನಿನೊ ಪರಿಣಾಮದಿಂದ ಜಲವಿದ್ಯುತ್ ಉತ್ಪಾದನೆ ಕುಸಿಯುವ ಸಾಧ್ಯತೆ ಇರುವುದನ್ನು ಗಮನದಲ್ಲಿಟ್ಟುಕೊಂಡು, ವಿಶೇಷ ತುರ್ತು ಕಾರ್ಯಯೋಜನೆ ರೂಪಿಸಬೇಕು. ಜೊತೆಗೆ ವಿದ್ಯುತ್ ಸಂಗ್ರಹಣೆ ಹಾಗೂ ಇತರೆ ಮೂಲಗಳಿಂದ ಉತ್ಪಾದನೆ ಹೆಚ್ಚಿಸಲು ತುರ್ತು ಗಮನ ಹರಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಮೊದಲ ಬಾರಿಗೆ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ, ಬರಗಾಲದ ಪರಿಸ್ಥಿತಿ ಎದುರಿಸಲು ಇಲಾಖೆ ಯಾವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂಬುದರ ಬಗ್ಗೆ ಮಾಹಿತಿ …

Read More »

ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆಗೆ ಸಜ್ಜಾದ ಶಾಸಕರು

ಹಾವೇರಿ: ರಾಜ್ಯದಲ್ಲೀಗ ಎಲ್ಲೆಲ್ಲೂ ಬರಗಾಲದ ಛಾಯೆ ಆವರಿಸಿದೆ. ರೈತರ ಜಮೀನಿನಲ್ಲಿ ಬಿತ್ತನೆ ಮಾಡಿದ ಬೀಜ ಮಳೆರಾಯನ ಅವಕೃಪೆಯಿಂದ ಮೊಳಕೆ ಒಡೆಯುತ್ತಿಲ್ಲ. ಕೆಲವೆಡೆ ಮೊಳಕೆಯೊಡೆದ ಬೀಜ ಇನ್ನೇನೂ ಚಿಗುರಬೇಕು ಎನ್ನುವಾಗಲೇ ಒಣಗಿ ಹೋಗ್ತಿದೆ. ರೈತರು ಮಳೆಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ. ಇದೀಗ ರೈತರ ಸಮಸ್ಯೆ ಬಗೆಹರಿಸಲು ಹಾವೇರಿಯ ವಿವಿಧ ಕ್ಷೇತ್ರಗಳ ಶಾಸಕರು ಮುಂದಾಗಿದ್ದಾರೆ. ಮಂಗಳವಾರದಿಂದಲೇ ಮೋಡ ಬಿತ್ತನೆ ನಡೆಯಲಿದೆ. ಹಾವೇರಿ ಜಿಲ್ಲೆ ಕೃಷಿ ಪ್ರಧಾನವಾದ ಜಿಲ್ಲೆ. ಜಿಲ್ಲೆಯ ಎಂಟು ತಾಲೂಕುಗಳಲ್ಲಿ ಕೃಷಿಯೇ ಪ್ರಧಾನವಾಗಿದೆ. …

Read More »

ಮಲೆನಾಡಿನಲ್ಲಿ ಮಳೆಯ ಕೊರತೆ – ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆಗಿಲ್ಲ ಭದ್ರಾ ಡ್ಯಾಂ ನೀರು!

ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ 1.05 ಹೆಕ್ಟೇರ್ ಪ್ರದೇಶದ ರೈತರಿಗೆ  ರಾಜ್ಯ ಸರ್ಕಾರ ಕಹಿ ಸುದ್ದಿ ನೀಡಿದೆ. ಪ್ರಸ್ತುತ ಸನ್ನಿವೇಶದಲ್ಲಿ ಈ ಬಾರಿ ಮುಂಗಾರು ಹಂಗಾಮಿಗೆ ಸತತವಾಗಿ ನಾಲೆಗಳ ಮೂಲಕ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ರೈತರು ಹಲವು ವರ್ಷಗಳಿಂದ ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆ ಬೆಳೆದು ಸಂತೃಪ್ತರಾಗಿದ್ದರು ಆದರೆ, ಈ ವರ್ಷ ಭತ್ತದ ಬೆಳೆಗೆ ಅಗತ್ಯವಿರುವ …

Read More »

ಬೈಕ್‌ ಸಮೇತ ಸುಟ್ಟು ಕರಕಲಾಗಿದ್ದ ಯುವಕನ ಗುರುತು ಪತ್ತೆ

ಬೆಂಗಳೂರು: ಆನೇಕಲ್‌ನ ಸರ್ಜಾಪುರ ಸಮೀಪದ ಬಿಕ್ಕನಹಳ್ಳಿ ರಸ್ತೆಯ ನಿರ್ಜನ ಪ್ರದೇಶದಲ್ಲಿ ಬೈಕ್ ಜೊತೆಗೆ ಸುಟ್ಟು ಕರಕಲಾಗಿದ್ದ ಸ್ಥಿತಿಯಲ್ಲಿ ಯುವಕನ ಗುರುತು ಪತ್ತೆಯಾಗಿದೆ. ಮೃತನನ್ನು ಆಂಧ್ರಪ್ರದೇಶದ ಗುಂಟೂರು ಮೂಲದ 26 ವರ್ಷದ ವಂಶಿಕೃಷ್ಣ ಎಂದು ಗುರುತಿಸಲಾಗಿದೆ. ಈ ಸಾವಿನ ಹಿಂದೆ ಕೊಲೆ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಿನ್ನೆ ಸಂಜೆ ಬಿಕ್ಕನಹಳ್ಳಿ ರಸ್ತೆಯ ಬಳಿ ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು …

Read More »

ಕೈಕೊಟ್ಟ ಮಳೆ – ಪೂರ್ವ ಮುಂಗಾರು ನಂಬಿ ಬಿತ್ತನೆ ಮಾಡಿದ್ದ ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ

ಬಳ್ಳಾರಿ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ವಿಜಯನಗರ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೂರ್ವ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ಬೆಳೆ ಇದೀಗ ಒಣಗಲಾರಂಭಿಸಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ. ಮಳೆ ಬರದ ಕಾರಣ ಬೆಳೆ ಒಣಗದಂತೆ ಕಾಪಾಡಲು ರೈತರು ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿದ್ದಾರೆ. ಸಾವಿರಾರು ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆ ಕೈತಪ್ಪುವ ಆತಂಕದಲ್ಲಿ ಅನ್ನದಾತರು ದಿನ ಕಳೆಯುತ್ತಿದ್ದಾರೆ. ವಿಜಯನಗರ ಜಿಲ್ಲೆಯ …

Read More »