Breaking News

Daily Archives: ಜುಲೈ 4, 2026

ಟೀ ಕುಡಿಯುವಾಗಲೇ ಕುಸಿದುಬಿದ್ದು ಟ್ರಕ್‌ ಚಾಲಕ ದುರ್ಮರಣ

ಹಾಸನ: ಟೀ ಕುಡಿಯುವಾಗಲೇ ಟ್ರಕ್‌ ಚಾಲಕನೊಬ್ಬ ಕುಸಿದುಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಕಲೇಶಪುರದ  ಬಾಳುಪೇಟೆಯಲ್ಲಿ ನಡೆದಿದೆ. ಉತ್ತರಪ್ರದೇಶದ ಬರೇಲಿ ಮೂಲದ ಅಮರ್ ಸಿಂಗ್ ಪೈ (50) ಸಾವನ್ನಪ್ಪಿದ ಟ್ರಕ್‌ ಚಾಲಕ. ಟ್ರಕ್‌ ಮಂಗಳೂರು ಕಡೆಗೆ ತೆರಳುತ್ತಿತ್ತು. ಮಾರ್ಗ ಮಧ್ಯೆ ಟೀ ಕುಡಿಯಲು ಚಾಲಕ ಟ್ರಕ್‌ ನಿಲ್ಲಿಸಿದ್ದರು. ಈ ವೇಳೆ ಟೀ ಕುಡಿಯುವಾಗಲೇ ಕುಸಿದುಬಿದ್ದು ಅವರು ಸಾವನ್ನಪ್ಪಿದ್ದಾರೆ. ಅಮರ್ ಸಿಂಗ್ ಕುಸಿದು ಬೀಳುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಹೃದಯಾಘಾತದಿಂದ  ಅವರು …

Read More »

ಸಿಎಂ ತಮ್ಮ ಮನೆಗೆ ಡಿಸಿ ಕರೆಸಿ ಎಸ್‌ಐಆರ್ ನಡೆಸಿದ್ರಲ್ಲ, ಅದೇ ಅಕ್ರಮದ ಮೊದಲ ಪೂಜೆ: ಹೆಚ್‌ಡಿಕೆ

ರಾಮನಗರ: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ ಕಾಂಗ್ರೆಸ್ ಸರ್ಕಾರ ವ್ಯವಸ್ಥಿತವಾಗಿ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಮನಗರದಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ  ಅಕ್ರಮಗಳ ವಿರುದ್ಧ ಚುನಾವಣಾ ಆಯೋಗಕ್ಕೆ ವಿಡಿಯೋ ಸಾಕ್ಷ್ಯ ಹಾಗೂ ದಾಖಲೆ ಸಮೇತ ದೂರು ನೀಡುವುದಾಗಿ ತಿಳಿಸಿದ್ದಾರೆ. ಅಕ್ರಮವಾಗಿ ಹೆಸರು ಸೇರ್ಪಡೆ ರಾಜ್ಯದ ಹಲವು ಭಾಗಗಳಿಂದ ತಮಗೆ ಅಕ್ರಮದ ಬಗ್ಗೆ ಮಾಹಿತಿ …

Read More »

ಮನೆಗೆ ನುಗ್ಗಿ ಯುವತಿಗೆ ಚಾಕು ಇರಿತ – ಮೂವರು ಅರೆಸ್ಟ್, ಪ್ರಮುಖ ಆರೋಪಿಗಳಿಗಾಗಿ ಶೋಧ

ಚಿಕ್ಕಬಳ್ಳಾಪುರ: ಯುವತಿಯೊಬ್ಬಳ ಮನೆಗೆ ನುಗ್ಗಿ ಆಕೆಗೆ ಚಾಕು ಇರಿದಿದ್ದ ಮೂವರು ದುಷ್ಕರ್ಮಿಗಳನ್ನು ಚಿಂತಾಮಣಿ  ನಗರ ಪೊಲೀಸರುಬಂಧಿಸಿದ್ದಾರೆ. ಲಕ್ಷ್ಮೀ, ಮಂಜುನಾಥ ಹಾಗೂ ಜಬಿವುಲ್ಲಾ ಬಂಧಿತ ಆರೋಪಿಗಳು. ಪ್ರಮುಖ ಆರೋಪಿಗಳಾದ ಕಾರ್ತಿಕ್ ಹಾಗೂ ವಿನೋದ್ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಚಿಂತಾಮಣಿ ನಗರದ ಆಶ್ರಯ ಬಡಾವಣೆಯಲ್ಲಿ ಮೇಘನಾ ಎಂಬ ಯುವತಿಗೆ ಆರೋಪಿಗಳು ಚುಡಾಯಿಸಿದ್ದರು. ಈ ವೇಳೆ ಸಿಟ್ಟಿಗೆದ್ದ ಯುವತಿ ಆರೋಪಿಗಳ ಕೆನ್ನೆಗೆ ಬಾರಿಸಿದ್ದಳು. ಇದೇ ಕಾರಣಕ್ಕೆ ಆರೋಪಿಗಳು, ಯುವತಿಯ ಮನೆಗೆ …

Read More »

ದೆಹಲಿಯಲ್ಲಿ ರಾಹುಲ್ ಗಾಂಧಿಗೆ ಅರ್ಥವಾಗುವಂತೆ ಇಂಗ್ಲಿಷ್‌ನಲ್ಲೇ ಪ್ರೆಸ್‌ಮೀಟ್ ಮಾಡ್ತೀನಿ: ನಿಖಿಲ್ ಕಿಡಿ

ರಾಮನಗರ: ರಾಮನಗರದಲ್ಲಿ SIR  ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ದೆಹಲಿಯಲ್ಲಿ ಕುಳಿತು ವೋಟ್ ಚೋರಿ ಬಗ್ಗೆ ಮಾತನಾಡುವ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ನಿಮ್ಮದೇ ಸರ್ಕಾರ ಏನು ಮಾಡುತ್ತಿದೆ ಎಂಬುದನ್ನು ಬಂದು ನೋಡಲಿ. ಈ ವಿಚಾರವನ್ನು ದೆಹಲಿಗೆ ತೆಗೆದುಕೊಂಡು ಹೋಗಿ, ರಾಹುಲ್ ಗಾಂಧಿಗೆ ಅರ್ಥವಾಗುವಂತೆ ಇಂಗ್ಲಿಷ್‌ನಲ್ಲೇ ಪ್ರೆಸ್‌ಮೀಟ್ ಮಾಡುತ್ತೇನೆ ಎಂದು ಸವಾಲು ಹಾಕಿದರು. ಮೂರು ದಿನಗಳ ಹಿಂದೆ ನಮ್ಮ ಬಿಎಲ್‌ಎ-2 ಗಳನ್ನು ಕರೆಸಿ …

Read More »

ಹುಸಿ ಬಾಂಬ್ ಕರೆಗಳು, ಇಮೇಲ್ ಪತ್ತೆ ಹಚ್ಚೋದು ಕಷ್ಟ- ಪ್ರಿಯಾಂಕ್ ಖರ್ಗೆ

ಬೆಂಗಳೂರು : ಹುಸಿ ಬಾಂಬ್ ಕರೆಗಳು , ಇಮೇಲ್‌ಗಳನ್ನು  ಪತ್ತೆ ಹಚ್ಚುವುದು ಕಷ್ಟದ ಕೆಲಸ. ಆದರೂ ಹುಸಿ ಬಾಂಬ್ ಕರೆಗಳ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ  ತಿಳಿಸಿದ್ದಾರೆ. ಇಸ್ರೋಗೆ ಹುಸಿ ಬಾಂಬ್ ಬೆದರಿಕೆ ಬಂದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆಗಾಗ ಇಂತಹ ಹುಸಿ ಬೆದರಿಕೆಗಳು ಬರುತ್ತದೆ. ವಿಮಾನ ನಿಲ್ದಾಣ  ಇರಬಹುದು, ಥರ್ಮಲ್ ಪವರ್ ಪ್ಲ್ಯಾಂಟ್ ಇರಬಹುದು.‌ ಎಚ್ಚೆತ್ತುಕೊಂಡು ಸೂಕ್ತ ಕ್ರಮ ತೆಗೆದುಕೊಂಡಿದ್ದೇವೆ ಎಂದರು. …

Read More »

ರಾಮ ಮಂದಿರಕ್ಕೆ ನಾನು ಕೊಟ್ಟ ದೇಣಿಗೆ ವಾಪಸ್‌ ಬೇಕು, ಕೋರ್ಟಿಗೆ ಹೋಗ್ತೇನೆ – ದಿಗ್ವಿಜಯ್ ಸಿಂಗ್

ಭೋಪಾಲ್‌: ರಾಮ ಮಂದಿರ ನಿರ್ಮಾಣಕ್ಕಾಗಿ ನಾನು ನೀಡಿದ್ದ ದೇಣಿಗೆ ದುರುಪಯೋಗವಾಗಿದೆ ಎಂದು ಅಯೋಧ್ಯೆಯ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡುವುದಾಗಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್‌ ಸಿಂಗ್ ಹೇಳಿದ್ದಾರೆ. ಅಲ್ಲದೇ ತಮ್ಮ ದೇಣಿಗೆಯನ್ನು ಹಿಂದಿರುಗಿಸುವಂತೆ ಒತ್ತಾಯಿಸುವುದಾಗಿಯೂ ಹೇಳಿದ್ದಾರೆ. ನಾನು ನೀಡಿದ ದೇಣಿಗೆಯನ್ನ ದುರುಪಯೋಗ ಪಡಿಸಿಕೊಳ್ಳಲಾಗಿದೆ. ಇದರ ವಿರುದ್ಧ ಅಯೋಧ್ಯೆ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಲು ನಿರ್ಧರಿಸಿದ್ದೇನೆ. ದೇಣಿಗೆ ನೀಡಿದ್ದ ಹಣವನ್ನ ಅವರು ಲೂಟಿ ಮಾಡಿದ್ದಾರೆ, ಆದ್ದರಿಂದ ಅದನ್ನ ನನಗೆ …

Read More »

ಮಳೆಗಾಲದ ಅಧಿವೇಶನ ಮುಗಿಯೋವರೆಗೆ ಮೋದಿ ಸಂಪುಟ ಪುನಾರಚನೆ ಇಲ್ಲ?

ನವದೆಹಲಿ: ಜುಲೈ 21 ರಿಂದ ಆಗಸ್ಟ್ 21 ರ ವರೆಗೆ ನಡೆಯಲಿರುವ ಮಳೆಗಾಲದ ಸಂಸತ್‌ ಅಧಿವೇಶನ ಅಂತ್ಯದ ವರೆಗೆ ಪ್ರಧಾನಿ ನರೇಂದ್ರ ಮೋದಿ  ಸರ್ಕಾರದಲ್ಲಿ ಸಂಪುಟ ಪುನಾರಚನೆ ಅಸಾಧ್ಯ ಎಂದು ಉನ್ನತ ಮೂಲಗಳನ್ನಾಧರಿಸಿ ಮಾಧ್ಯಮಗಳು ವರದಿ ಮಾಡಿವೆ. ಸಂಪುಟ ಪುನಾರಚನೆ ಸೇರಿದಂತೆ ಯಾವುದೇ ಕೆಲಸಗಳಿದ್ದರೂ, ಅದು ಅಧಿವೇಶನ ಮುಗಿದ ನಂತರ ಕೈಗೊಳ್ಳಲು ಪಕ್ಷ ನಿರ್ಧರಿಸಿದೆ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ. ಮುಂದಿನವಾರದಲ್ಲಿ ಪ್ರಧಾನಿ ಮೋದಿ ಒಂದು ವಾರಗಳ ಕಾಲ ವಿದೇಶಿ …

Read More »

ಸಿದ್ದರಾಮಯ್ಯ ಕನಸಿನ ಕೂಸು ಜಾತಿಗಣತಿ ಜಾರಿ ಮಾಡುತ್ತೇವೆ: ಯತೀಂದ್ರ

ದಾವಣಗೆರೆ: ಸಿದ್ದರಾಮಯ್ಯನವರು ಸಿಎಂ ಆಗಿ ಇನ್ನೂ ಎರಡು ವರ್ಷ ಇರುತ್ತಾರೆ ಎಂದುಕೊಂಡಿದ್ದೆವು. ಕಾರಣಾಂತರಗಳಿಂದ ಆ ಸ್ಥಾನದಿಂದ ಇಳಿದರು. ಆದರೆ ಅವರ ಕನಸಿನ ಕೂಸು ಜಾತಿಗಣತಿ ಸ್ವೀಕರಿಸಿದ್ದೇವೆ. ಅದನ್ನು ಜಾರಿ ಮಾಡುತ್ತೇವೆ ಎಂದು ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ದಾವಣಗೆರೆಯಲ್ಲಿ  ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ಜಾತಿಗಣತಿ ವರದಿಯನ್ನು ಜಾರಿಗೊಳಿಸಬೇಕು ಎಂದು ಸಿದ್ದರಾಮಯ್ಯನವರು ಎಂದುಕೊಂಡಿದ್ದರು. ಅದನ್ನು ನಾವು ಜಾರಿ ಮಾಡುತ್ತೇವೆ. ಕ್ಯಾಬಿನೆಟ್ ಮುಂದೆ ಇದರ ಚರ್ಚೆ ಬರಬೇಕಿದೆ. …

Read More »

ಮಡಿಕೇರಿಯಲ್ಲಿ 3 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ; ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು

ಮಡಿಕೇರಿ: ಕೊಡಗು ಜಿಲ್ಲೆಯ  ಮಡಿಕೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ಸಂಜೆ 7 ಗಂಟೆಯಿಂದ ಧಾರಾಕಾರ ಮಳೆ  ಸುರಿಯುತ್ತಿದೆ. ಕಳೆದ ಮೂರು ಗಂಟೆಗಳಿಗೂ ಹೆಚ್ಚು ಕಾಲ ಬಿಟ್ಟುಬಿಡದೆ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಡಿಕೇರಿ ನಗರ ಸೇರಿದಂತೆ ಸೋಮವಾರಪೇಟೆ, ವಿರಾಜಪೇಟೆ ಮತ್ತು ಮೂರ್ನಾಡು ಭಾಗಗಳಲ್ಲೂ ಉತ್ತಮ ಮಳೆಯಾಗಿದೆ. ನಿರಂತರ ಮಳೆಯಿಂದ ರಸ್ತೆಗಳು ಕೆರೆಯಂತಾಗಿವೆ. ಧಾರಾಕಾರ ಮಳೆಯಿಂದ ಹಳ್ಳ-ಕೊಳ್ಳಗಳು ಆತುಂಬಿ ಹರಿಯಲಾರಂಭಿಸಿವೆ. ಹಲವು ಕಡೆ ನೀರಿನ ಮಟ್ಟ ಏರಿಕೆಯಾಗಿದ್ದು, ಸ್ಥಳೀಯರಲ್ಲಿ …

Read More »

ಇಸ್ರೋ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ – ಯುಪಿ ಮೂಲದ ಆರೋಪಿ ಅರೆಸ್ಟ್‌

ಬೆಂಗಳೂರು: ಇಲ್ಲಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ  ಕೇಂದ್ರ ಕಚೇರಿಗೆ ಬಾಂಬ್ ಇಡುವುದಾಗಿ ಇ-ಮೇಲ್ ಬೆದರಿಕೆಹಾಕಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶದ ಘಾಜಿಯಾಬಾದ್‌ನಲ್ಲಿ ಆರೋಪಿಯನ್ನ ಸಂಜಯನಗರ ಪೊಲೀಸರು ಬಂಧಿಸಿದ್ದಾರೆ. ಯುಪಿ ಮೂಲದ ಆರೋಪಿಯನ್ನ ಬಂಧಿಸಿ ಬೆಂಗಳೂರಿಗೆ ಕರೆ ತಂದಿದ್ದಾರೆ. ಆರೋಪಿ ಬಳಿ ಇದ್ದ ಎಲೆಕ್ಟ್ರಾನಿಕ್‌ ಸಾಧನಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಆರೋಪಿಯ ವಿಚಾರಣೆ ವೇಳೆ ಮಾನಸಿಕ ಅಸ್ವಸ್ಥನೆಂದು ತಿಳಿದು ಬಂದಿದೆ. ಸದ್ಯ ಆರೋಪಿಯನ್ನ ಪೊಲೀಸರು ಹೆಚ್ಚಿನ ತನಿಖೆ ಮಾಡ್ತಿದ್ದಾರೆ. …

Read More »