Breaking News

Daily Archives: ಜುಲೈ 4, 2026

ರಾಮ ಮಂದಿರ ಆಯ್ತು, ಈಗ ಬದರಿನಾಥ ಧಾಮದಲ್ಲೂ ದೇಣಿಗೆ ದುರುಪಯೋಗ ಆರೋಪ: ತನಿಖೆಗೆ ಆದೇಶ

ಡೆಹ್ರಾಡೂನ್: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗ ಪ್ರಕರಣದ ಬೆನ್ನಲ್ಲೇ ಇದೀಗ ಬದರಿನಾಥ ಧಾಮದಲ್ಲೂ ಕಾಣಿಕೆ ದುರುಪಯೋಗವಾಗಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿದ್ದು, ತನಿಖೆಗೆ ಆದೇಶಿಸಲಾಗಿದೆ. ಬದರಿನಾಥ-ಕೇದರನಾಥ ದೇವಸ್ಥಾನ ಸಮಿತಿ ಅಧ್ಯಕ್ಷ ಹೇಮಂತ್ ದ್ವಿವೇದಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ದೇಣಿಗೆ ದುರುಪಯೋಗದ ಆರೋಪಗಳನ್ನು ದೇವಸ್ಥಾನ ಸಮಿತಿಯು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಸಮಗ್ರ ತನಿಖೆಗಾಗಿ ತನಿಖಾ ಸಮಿತಿಯೊಂದನ್ನು ರಚಿಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ …

Read More »

ವೈದ್ಯ ವೃತ್ತಿ ಮಾನವ ಸೇವೆಯ ಶ್ರೇಷ್ಠ ಕ್ಷೇತ್ರ

ಬೆಳಗಾವಿ : ವೈದ್ಯ ವೃತ್ತಿಯು ಕೇವಲ ಉದ್ಯೋಗವಲ್ಲ. ಮಾನವ ಸೇವೆಯ ಶ್ರೇಷ್ಠ ಕ್ಷೇತ್ರ. ಹೀಗಾಗಿ, ಓದುವ ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಕಾಪಾಡಿಕೊಂಡು ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಬೇಕು ಎಂದು ನವಜೀವನ ಫೌಂಡೇಶನ್ ಮತ್ತು ಆಸ್ಪತ್ರೆಯ ಎಂಡಿ ಡಾ.ಸತೀಶ ಚೌಲಿಗರ ಹೇಳಿದರು. ಗುರುದೇವ ಜಂಬಗಿ ಪಿಯು ವಿಜ್ಞಾನ ಕಾಲೇಜಿಯಲ್ಲಿ ಬುಧವಾರ ಜರುಗಿದ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಸಮಾಜದ ಆರೋಗ್ಯ ರಕ್ಷಣೆಯಲ್ಲಿ ವೈದ್ಯರ ಅಮೂಲ್ಯ ಸೇವೆಯನ್ನು ಸ್ಮರಿಸಿದರು. ಡಾ. ಸರ್ಫರಾಜ ಪಟೇಲ ಮಾತನಾಡಿ, …

Read More »

ಬರಗಾಲ ಭೀತಿಯಲ್ಲಿರುವ  ರೈತರ ಹಿತರಕ್ಷಣೆಗೆ ಕವಟಗಿಮಠ ಆಗ್ರಹ

ಬೆಳಗಾವಿ: ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಬರಗಾಲ ಭೀತಿಯಲ್ಲಿರುವ  ಬೆಳಗಾವಿ ಜಿಲ್ಲೆಯಲ್ಲಿ ಹತ್ತಾರು ಸಮಸ್ಯೆಗಳು ಉದ್ಬವಿಸಿದ್ದು, ರೈತರು, ಕೂಲಿ ಕಾರ್ಮಿಕರನ್ನು ರಕ್ಷಿಸುವ ನಿಟ್ಟಿನಲ್ಲಿ ವಿಶೇಷ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿ ಬುಧವಾರ ಬೆಳಗಾವಿಗೆ ಭೇಟಿ ನೀಡಿದ್ದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರನ್ನು ಭೇಟಿ ಮಾಡಿದ  ವಿಧಾನಪರಿಷತ್ ಮಾಜಿ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಮನವಿ ಸಲ್ಲಿಸಿದರು. ಈಗಾಗಲೇ ಮಳೆಯ ಅಭಾವದಿಂದಾಗಿ ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ಕಬ್ಬು ಬೆಳೆಗೆ ಗೊಣ್ಣೆಹುಳು …

Read More »

ಜು.10ರಿಂದ ಬೆಳಗಾವಿಯಲ್ಲಿ ಆರ್‌ಎಸ್‌ಎಸ್ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ

ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಬೆಳಗಾವಿಯಲ್ಲಿ  ಜು.10ರಿಂದ 12ರವರೆಗೆ ನಡೆಯಲಿದೆ. ಈ ಸಭೆಯಲ್ಲಿ ದೇಶವ್ಯಾಪ್ತಿಯ ಪ್ರಾಂತ ಪ್ರಚಾರಕರು, ಸಹ ಪ್ರಾಂತ ಪ್ರಚಾರಕರು, ಕ್ಷೇತ್ರ ಪ್ರಚಾರಕರು ಹಾಗೂ ಸಹ ಕ್ಷೇತ್ರ ಪ್ರಚಾರಕರು ಹಾಗೂ ಸಂಘದ ಸಂಘಟನಾ ವ್ಯವಸ್ಥೆಯ 11 ಕ್ಷೇತ್ರಗಳು, 46 ಪ್ರಾಂತಗಳ ಕಾರ್ಯಕರ್ತರು ಜತೆಗೆ ಸಂಘಪ್ರೇರಿತ 32 ಸಂಘಟನೆಗಳ ಅಖಿಲ ಭಾರತೀಯ ಸಂಘಟನಾ ಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಅಖಿಲ ಭಾರತೀಯ ಪ್ರಚಾರ ಪ್ರಮುಖ …

Read More »

ಎಸ್‌ಐಆರ್ ಪ್ರಕ್ರಿಯೆಗೆ ಮರಾಠಿ ನಮೂನೆಗಳನ್ನೇ ಬಳಸಬೇಕು: ಕೊಂಕು ತೆಗೆದ ಎಂಇಎಸ್

ಬೆಳಗಾವಿ : ಜಿಲ್ಲೆಯ ಮರಾಠಿ ಭಾಷಿಕ ಪ್ರದೇಶಗಳಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಮರಾಠಿ ನಮೂನೆಗಳನ್ನೇ ಬಳಸಬೇಕು. ಮರಾಠಿ ಪ್ರತಿಗಳು ಲಭ್ಯವಾಗುವವರೆಗೂ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಬೇಕು ಎಂದು ಎಂಇಎಸ್ ಸರ್ಕಾರ ಹಾಗೂ ಚುನಾವಣಾ ಆಯೋಗವನ್ನು  ಆಗ್ರಹಿಸಿದೆ. ಈ ಸಂಬಂಧ ಶುಕ್ರವಾರ ಮಹಾನಗರ ಪಾಲಿಕೆ ಎದುರು ಪ್ರತಿಭಟಿಸಿದ ಪಾಲಿಕೆಯ ಎಂಇಎಸ್ ಹಾಲಿ ಮತ್ತು ಮಾಜಿ ಸದಸ್ಯರು ಮತ್ತು ಮುಖಂಡರು, ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು. ಬೆಳಗಾವಿ ದಕ್ಷಿಣ ವಿಧಾನ ಸಭಾ ಕ್ಷೇತ್ರ ಸೇರಿದಂತೆ ಅನೇಕ ಕಡೆಗಳಲ್ಲಿ …

Read More »

ಸಹಕಾರ ಕ್ಷೇತ್ರದಿಂದ ಗುಣಮಟ್ಟದ ಸೇವೆ

ಸದೃಢ ಸಮಾಜ ನಿರ್ಮಿಸುವುದು ಪ್ರತಿಯೊಬ್ಬರ ಜವಾಬ್ದಾರಿ. ಗ್ರಾಮೀಣ ಪ್ರದೇಶದ ನಾಗರಿಕರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಆರೋಗ್ಯ ಸೌಲಭ್ಯ ಒದಗಿಸುವಲ್ಲಿ ಸಹಕಾರ ಕ್ಷೇತ್ರದ ಪಾತ್ರ ಮುಖ್ಯವಾಗಿದೆ ಎಂದು ಯುವ ನಾಯಕ ಉತ್ತಮ ಪಾಟೀಲ ಹೇಳಿದರು. ಪಟ್ಟಣದಲ್ಲಿ ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಗೊಂಡು 5 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬಿಡಿಸಿಸಿ ಬ್ಯಾಂಕ್, ಅರಿಹಂತ ಉದ್ಯೋಗ ಸಮೂಹ, ಲಠ್ಠೆ ಶಿಕ್ಷಣ ಸಂಸ್ಥೆ, ಆಚಾರ್ಯ ದೇಶಭೂಷಣ ಆಯುರ್ವೇದ ಕಾಲೇಜು ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ …

Read More »

ಮಾದಕ ವ್ಯಸನದಿಂದ ದೂರವಿರಿ

ಮಾದಕ ವಸ್ತುಗಳ ಸೇವನೆ ವ್ಯಕ್ತಿಯ ಆರೋಗ್ಯ, ಶಿಕ್ಷಣ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ದುಷ್ಪರಿಣಾಮ ಉಂಟುಮಾಡುವುದರ ಜತೆಗೆ ಅಪರಾಧ ಚಟುವಟಿಕೆಗಳಿಗೆ ದಾರಿಮಾಡಿಕೊಡುತ್ತದೆ ಎಂದು ರಾಮದುರ್ಗ ಉಪವಿಭಾಗದ ಡಿವೈಎಸ್ಪಿ ಚಿದಂಬರ ಮಡಿವಾಳರ ಹೇಳಿದರು. ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಮುರಗೋಡ ಪೊಲೀಸ್ ಆಶ್ರಯದಲ್ಲಿ ಶುಕ್ರವಾರ ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಮಾದಕ ವಸ್ತು ವಿರೋಧಿ ಜಾಗತಿ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸಾರ್ವಜನಿಕರು, …

Read More »

ಮೂವರು ಅಪ್ರಾಪ್ತ ಮಕ್ಕಳಿಗೆ ವಿಷವಿಕ್ಕಿ ಮತ್ತು ಕತ್ತು ಹಿಸುಕಿ ಕೊಲೆ: ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ಚಂಡೀಗಢ: ಮಹಿಳೆಯೊಬ್ಬರು ತನ್ನ ಮೂವರು ಅಪ್ರಾಪ್ತ ಮಕ್ಕಳಿಗೆ ವಿಷವಿಕ್ಕಿ ಮತ್ತು ಕತ್ತು ಹಿಸುಕಿ ಕೊಂದು, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್​ನ ಮಾನ್ಸಾ ಜಿಲ್ಲೆಯಲ್ಲಿ ನಡೆದಿದೆ ಎಂದು ಶುಕ್ರವಾರ(ಜು. 03) ವರದಿಯಾಗಿದೆ. ಗುರುವಾರ ಸಂಜೆ ಸಮಯದಲ್ಲಿ ಮಾನ್ಸಾದಲ್ಲಿ ಈ ಘಟನೆ ನಡೆದಿದೆ. ಬಾಡಿಗೆ ಮನೆಯ ನಿವಾಸಿಯಾಗಿದ್ದ 36 ವರ್ಷದ ಸಂದೀಪ್ ಕೌರ್ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅದಕ್ಕೂ ಮೊದಲು ತಮ್ಮ 12 ವರ್ಷದ ಹಿರಿಯ ಮಗಳು ಖುಷ್‌ಪ್ರೀತ್‌ಗೆ …

Read More »

ಬೆಳಗಾವಿಯ ಜಲಪಾತಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಬೆಳಗಾವಿ ಅರಣ್ಯ ವಲಯ ಹಾಗೂ ಜಲಪಾತಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ಜಲಪಾತಗಳಿಗೆ ಸಾರ್ವಜನಿಕರು ಭೇಟಿ ನೀಡುತ್ತಿರುವುದು ಕಂಡು ಬಂದಿದೆ. ಹೀಗಾಗಿ, ಅರಣ್ಯ ಪ್ರದೇಶದಲ್ಲಿ ಮತ್ತು ಬೆಳಗಾವಿ ಜಲಪಾತಗಳಿಗೆ ಸದ್ಯ ಸಾರ್ವಜನಿಕರ ಪ್ರವೇಶದ ನಿರ್ಭಂದವಿರುತ್ತದೆ. ಅರಣ್ಯ ಪ್ರದೇಶದ ಆಯಕಟ್ಟಿನ ಪ್ರದೇಶಗಳಲ್ಲಿ ಇಲಾಖಾ ಸಿಬ್ಬಂದಿಗಳನ್ನು ಸಾರ್ವಜನಿಕರ …

Read More »

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಹೆರಾಯಿನ್ ಸಾಗಿಸುತ್ತಿದ್ದ ಇಬ್ಬರ ಬಂಧನ

ಬೆಳಗಾವಿ: ಬೆಳಗಾವಿಯ ಸಿಸಿಬಿ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ಹೆರಾಯಿನ್ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬೆಳಗಾವಿ ನಗರದ ಕಂಗ್ರಾಳಿ ಕೆ ಹೆಚ್ ಗ್ರಾಮದ ಗಜಾನನ ಪಾಟೀಲ್ ಹಾಗೂ ರಾಮದೇವ ಗಲ್ಲಿಯ ವಿನಾಯಕ ಖಂಡಾಳೆ ಬಂಧಿತರು ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಹಣ್ಣಿನ ಮಾರುಕಟ್ಟೆಯ ಕಾಂಪ್ಲೇಕ್ಸ್ ಬಳಿ ಹೆರಾಯಿನ್ ಸಾಗಾಟ ಮಾಡುತ್ತಿದ್ದ ಸಮಯದಲ್ಲಿ ಸಿಸಿಬಿ ವಿಭಾಗದ ಪಿಐ ಮಂಜುನಾಥ ನಾಯಿಕ ಅವರ …

Read More »