ಬೀದರ್: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಸರ್ವೆ ಕಾರ್ಯದ ವೇಳೆ ಬಿಎಲ್‌ಒ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೀದರ್ಜಿಲ್ಲೆಯ ಅಮಲಾಪುರ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಸುನೀಲ್ ಮೃತ BLO. ಭಾಲ್ಕಿ ತಾಲೂಕಿನ ಮೂಲದ ಸುನೀಲ್ ಅವರು ಕಳೆದ ಹಲವು ದಿನಗಳಿಂದ SIR ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಅಮಲಾಪುರ ಗ್ರಾಮದ 33ನೇ ಬೂತ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಬಳಿಕ ಕುಸಿದು ಬಿದ್ದಿದ್ದಾರೆ. ಸ್ಥಳೀಯರು ತಕ್ಷಣವೇ ಅವರನ್ನು …
Read More »Daily Archives: ಜುಲೈ 6, 2026
ಕಾಂಗ್ರೆಸ್‌ಗೆ ಬಿಗ್ ಶಾಕ್ – ಜಾರಕಿಹೊಳಿ ಆಪ್ತ, ಕುರುಬ ಸಮುದಾಯದ ಪ್ರಭಾವಿ ಮುಖಂಡ ಸದಾಶಿವ ದೇಶಿಂಗೆ ಬಿಜೆಪಿಗೆ ಸೇರ್ಪಡೆ
ಬೆಂಗಳೂರು: ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ, ಕೆಎಂಎಫ್ ಮಾಜಿ ನಿರ್ದೇಶಕ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕುರುಬ ಸಮುದಾಯದ ಹಿರಿಯ ಮುಖಂಡ ಸದಾಶಿವ ದೇಶಿಂಗೆಅವರು ಕಾಂಗ್ರೆಸ್ ತೊರೆದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ದೇಶಿಂಗೆ ಅವರಿಗೆ ಪಕ್ಷದ ಬಾವುಟ ನೀಡಿ, ಹೆಗಲಿಗೆ ಕಂಬಳಿ ಹೊದೆಸುವ ಮೂಲಕ ಆತ್ಮೀಯವಾಗಿ ಪಕ್ಷಕ್ಕೆ …
Read More »ಹಾಸನ ಜಿಲ್ಲೆಯ ವಿವಿಧೆ ಭಾರೀ ಗಾಳಿ ಸಹಿತ ಮಳೆ – ಮನೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ
ಹಾಸನ: ಜಿಲ್ಲೆಯ ವಿವಿಧೆಡೆ ಭಾರೀ ಗಾಳಿ ಸಹಿತ ಸಾಧಾರಣ ಮಳೆಯಾಗುತ್ತಿದೆ . ಈ ಮಧ್ಯೆ ಬಿರುಗಾಳಿಗೆ ಮನೆ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಘಟನೆ ಹಾಸನ ತಾಲ್ಲೂಕಿನ, ಹನುಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ತಾಂತಯ್ಯ ಎಂಬುವವರು ಕುಟುಂಬಸ್ಥರೊಂದಿಗೆ ತಮ್ಮ ಜಮೀನಿನ ಬಳಿ ಮನೆಯಲ್ಲಿ ವಾಸವಾಗಿದ್ದು ಬಿರುಗಾಳಿ ಸಹಿತ ಮಳೆಗೆ ಮನೆ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಾಸದ ಮನೆಗೆ ಹಾನಿಯಾಗಿದ್ದರುವುದರಿಂದ ಬಡ ಕುಟುಂಬ …
Read More »ರಾಮನ ಹೆಸರಿನಲ್ಲಿ 20 ಸಾವಿರ ಕೋಟಿ ಲೂಟಿ ಆಗಿದೆ ಅನ್ನೋ ಮಾಹಿತಿ ಇದೆ: ಮಲ್ಲಿಕಾರ್ಜುನ ಖರ್ಗೆ ಆತಂಕ
ಚಿಕ್ಕಬಳ್ಳಾಪುರ: ರಾಮಮಂದಿರದ ಹೆಸರಿನಲ್ಲಿ 20 ಸಾವಿರ ಕೋಟಿ ರೂಪಾಯಿ ಲೂಟಿ ನಡೆದಿದೆ ಎಂಬ ಸುದ್ದಿಗಳು ಬರುತ್ತಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದ ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಮನ ದೇಣಿಗೆ ಕದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ, ಆರ್‌ಎಸ್‌ಎಸ್ (BJP – RSS) ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ರಾಮಮಂದಿರದ ಹೆಸರಿನಲ್ಲಿ 20 ಸಾವಿರ …
Read More »ಬೈಕ್‌ಗೆ ಸೈಡ್ ಕೊಡುವಾಗ ಕಾಫಿ ತೋಟಕ್ಕೆ ಉರುಳಿದ ಕಾರು – ಐವರಿಗೆ ಗಾಯ
ಚಿಕ್ಕಮಗಳೂರು: ಬೈಕ್‌ಗೆ ಸೈಡ್ ಕೊಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಫಿ ತೋಟಕ್ಕೆ ನುಗ್ಗಿ, ಪಲ್ಟಿಯಾಗಿರುವ ಘಟನೆ ಕಳಸ ತಾಲೂಕಿನ ಬೈನೇಕಾಡು ಹೋಮ್ ಸ್ಟೇ ಬಳಿ ನಡೆದಿದೆ. ಕಾರಿನಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವ್ಯಾಗನರ್ ಕಾರು ಹೊರನಾಡಿನಿಂದ ಉಡುಪಿ ಕಡೆ ಹೊರಟಿತ್ತು. ಈ ವೇಳೆ, ಬೈನೇಕಾಡು ಹೋಮ್ ಸ್ಟೇ ಬಳಿ ಎದುರಿನಿಂದ ಬಂದ ಬೈಕ್‌ಗೆ ಕಾರಿನ ಚಾಲಕ ಸೈಡ್ ಕೊಡುವಾಗ ಈ ಅವಘಡ ನಡೆದಿದೆ. ನಿರಂತರ ಮಳೆಯಿಂದ …
Read More »ಮೃತ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ, ಒಬ್ಬರಿಗೆ ಸರ್ಕಾರಿ ಕೆಲಸ – ಪರಮೇಶ್ವರ್ ಭರವಸೆ ಬೆನ್ನಲ್ಲೇ ಪ್ರತಿಭಟನೆ ವಾಪಸ್
ತುಮಕೂರು: ಮೃತ ವಿಎ ಭುವನಾಕುಟುಂಬಕ್ಕೆ 1 ಕೋಟಿ ವಿಮೆ ಹಣ 15 ದಿನಗಳಲ್ಲಿ ಬರುತ್ತದೆ. ಅಲ್ಲದೇ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರ ಉದ್ಯೋಗ ಕೊಡುತ್ತೇವೆ. ಚುನಾವಣಾ ಆಯೋಗದಿಂದ 30 ಲಕ್ಷ ರೂ. ಮಂಜೂರು ಮಾಡಿಸುತ್ತೇವೆ ಎಂದು ಕಂದಾಯ ಸಚಿವರೂ ಆದ ಡಿಸಿಎಂ ಪರಮೇಶ್ವರ್ ಭರವಸೆ ನೀಡಿದರು. ತುಮಕೂರಿನಲ್ಲಿ ವಿಎ ಭುವನಾ ಸಾವು ಖಂಡಿಸಿ ಕಂದಾಯ ನೌಕರರ ಸಂಘದಿಂದ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಡಿಸಿಎಂ ಶೀಘ್ರದಲ್ಲೇ ಪರಿಹಾರ ಕೊಡಿಸುವ ಹಾಗೂ …
Read More »ಕೃಷ್ಣಾ ನದಿಗೆ ಜೀವಕಳೆ: ಹಿಪ್ಪರಗಿ ಬ್ಯಾರೇಜ್‌ನ 16 ಗೇಟ್ ಓಪನ್
ಬಾಗಲಕೋಟೆ: ಮಹಾರಾಷ್ಟ್ರದ ಪಶ್ಚಿಮ ಘಟ್ಟಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷ್ಣಾ ನದಿಗೆಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ತೀವ್ರ ಬೇಸಿಗೆಯಿಂದಾಗಿ ಸಂಪೂರ್ಣ ಬರಿದಾಗಿದ್ದ ಕೃಷ್ಣಾ ನದಿಗೆ ಈಗ ದಿಢೀರ್ ಜೀವಕಳೆ ಬಂದಂತಾಗಿದ್ದು, ನದಿ ತೀರದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಜಮಖಂಡಿ ತಾಲ್ಲೂಕಿನ ಪ್ರಮುಖ ಜಲಮೂಲವಾದ ಹಿಪ್ಪರಗಿ ಬ್ಯಾರೇಜ್‌ಗೆನೀರಿನ ಒಳಹರಿವು ಗಂಟೆಯಿಂದ ಗಂಟೆಗೆ ಹೆಚ್ಚುತ್ತಿದೆ. ಪ್ರಸ್ತುತ ಒಳಹರಿವು 30,000 ಕ್ಯೂಸೆಕ್ ಇದ್ದರೆ 22,000 ಕ್ಯೂಸೆಕ್ ಹೊರ ಹರಿವಿದೆ. ನದಿಗೆ ಬರುತ್ತಿರುವ …
Read More »ವೈರ್‌ನಿಂದ ಕುತ್ತಿಗೆ ಬಿಗಿದು ಪತ್ನಿ ಕೊಲೆ; ಮೂವರು ಮಕ್ಕಳನ್ನು ಬಿಟ್ಟು ಗಂಡ ಎಸ್ಕೇಪ್
ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ನಡುವೆ ಪತಿಯೇ ಪತ್ನಿಯ ಕುತ್ತಿಗೆಗೆ ವೈರ್ ಬಿಗಿದು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. 35 ವರ್ಷದ ಪವಿತ್ರಾ ಕೊಲೆಯಾದ ಮಹಿಳೆ. ಆರೋಪಿ ಪತಿ ವೆಂಕಟೇಶ್, ವೈರ್‌ನಿಂದ ಪತ್ನಿಯ ಕುತ್ತಿಗೆ ಬಿಗಿದು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ದಂಪತಿಗೆ ಮದುವೆಯಾಗಿ 15 ವರ್ಷಗಳಾಗಿದ್ದು, ಮೂವರು ಮಕ್ಕಳಿದ್ದಾರೆ. ವೆಂಕಟೇಶ್‌ಗೆ ಕುಡಿತದ ಚಟವಿದ್ದು, ಸಾಕಷ್ಟು ಸಾಲವೂ ಮಾಡಿಕೊಂಡಿದ್ದ. ಈ ವಿಚಾರವಾಗಿ ಪತಿ-ಪತ್ನಿಯ …
Read More »
Laxmi News 24×7