ಬೆಳಗಾವಿ: ಮಾಹಾರಾಷ್ಟ್ರದ ಪಶ್ಚಿಮಘಟ್ಟ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಗಡಿಭಾಗಕ್ಕೆ ಹೊಂದಿಕೊಂಡಿರುವ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಮುಳಗುವ ಹಂತಕ್ಕೆ ತಲುಪಿದೆ. ಕೃಷ್ಣಾ ಮತ್ತು ಪಂಚಗಂಗಾ ನದಿಗಳ ನೀರಿನ ಮಟ್ಟದಲ್ಲಿ ಕಳೆದ 24 ಗಂಟೆಗಳಲ್ಲಿ ಭಾರಿ ಏರಿಕೆಯಾಗಿದೆ. ನದಿಗಳ ನೀರಿನ ಮಟ್ಟ ಬರೋಬ್ಬರಿ 10 ಅಡಿಗಳಷ್ಟು ಹೆಚ್ಚಾಗಿದ್ದು, ಪ್ರವಾಹದ ನೀರು ಇಲ್ಲಿನ ಪ್ರಸಿದ್ಧ ದತ್ತ ಮಂದಿರದ ಸಮೀಪಕ್ಕೆ ಬಂದು ತಲುಪಿದೆ. ನದಿಯ ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ದತ್ತ ದೇವಸ್ಥಾನದ ಆಡಳಿತ ಮಂಡಳಿ …
Read More »Daily Archives: ಜುಲೈ 7, 2026
ಬೆಳಗಾವಿ ಅರಣ್ಯ ಇಲಾಖೆಯಿಂದ ತುರ್ತು ನಿಯಂತ್ರಣ ಕೊಠಡಿ ಸ್ಥಾಪನೆ
ಬೆಳಗಾವಿ: ಮುಂಗಾರು ಮಳೆ ಗಾಳಿಗೆ ಬೆಳಗಾವಿ ನಗರದ ರಸ್ತೆ ಅಕ್ಕಪಕ್ಕದಲ್ಲಿರುವ ಮರಗಳು ಮತ್ತು ಅದರ ಕೊಂಬೆಗಳು ರಸ್ತೆಯಲ್ಲಿ ಸಂಚರಿಸುವ ಜನರ, ವಾಹನ ಸಂಚಾಲಕು ಮತ್ತು ವಾಹನಗಳ ಮೇಲೆ ಬಿದ್ದು ಜೀವಹಾನಿ, ಆಸ್ತಿ ಹಾನಿಯಾಗುವ ಸಂಭವವಿರುವುದರಿಂದ ಅಂತಹ ಮರಗಳನ್ನು ಜಂಟಿಯಾಗಿ ಸರ್ವೆ ಮಾಡಿ ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವುದು ಹಾಗೂ ಬಿದ್ದ ಮರಗಳನ್ನು ತಕ್ಷಣವೇ ತೆರವುಗೊಳಿಸಲು ಅವಶ್ಯಕವಾದ ಪರಿಕರಗಳನ್ನು ಹಾಗೂ ಸಿಬ್ಬಂದಿಗಳನ್ನು ಸದಾ ಸಿದ್ಧತೆಯಲ್ಲಿಡಲು ತಂಡವನ್ನು ರಚಿಸಿ ತುರ್ತು ಪ್ರತಿಕ್ರಿಯೆ ತಂಡವನ್ನು …
Read More »ಪ್ರವಾಹ ಪರಿಸ್ಥಿತಿ ವೀಕ್ಷಿಸಿ ಜನರಿಗೆ ಧೈರ್ಯ ತುಂಬಿದ ಶಾಸಕಿ ಶಶಿಕಲಾ ಜೊಲ್ಲೆ
ಬೆಳಗಾವಿ: ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನಿಪ್ಪಾಣಿ ಮತಕ್ಷೇತ್ರದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಪ್ರವಾಹ ಪರಿಸ್ಥಿತಿ ವೀಕ್ಷಿಸಿದ ಶಾಸಕಿ ಶಶಿಕಲಾ ಜೊಲೆ ಅವರು ನದಿ ತೀರದ ಜನರೊಂದಿಗೆ ನಾವಿದ್ದೇವೆ ಎಂದು ಭರವಸೆ ನೀಡಿದ್ದಾರೆ. ಶಶಿಕಲಾ ಜೊಲ್ಲೆ ಅವರು ಸೋಮವಾರ ಕ್ಷೇತ್ರದ ಭೀವಶಿ ಗ್ರಾಮಕ್ಕೆ ಖುದ್ದಾಗಿ ಭೇಟಿ ನೀಡಿ, ವೇದಗಂಗಾ ನದಿಯ ನೀರಿನ ಮಟ್ಟ ಹಾಗೂ ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಿದರು. …
Read More »ಸಂಶೋಧನೆಯಲ್ಲಿ ನೈತಿಕತೆ ಮತ್ತು ಮೌಲ್ಯಗಳು ಅಗತ್ಯ: ಪ್ರೊ. ಪಿ.ಜಿ. ತಡಸದ
ಬೆಳಗಾವಿ: ನಾವು ಯಾವುದೇ ಕೆಲಸದಲ್ಲಿ ತೊಡಗಿಕೊಂಡಾಗ ನೈತಿಕತೆ ಮತ್ತು ಮೌಲ್ಯಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ. ಸಂಶೋಧನೆಯು ವೈಜ್ಞಾನಿಕ ಪ್ರಕ್ರಿಯೆ ಆಗಿರುವುದರಿಂದ ನಾವು ಸಂಶೋಧನೆಯ ಚೌಕಟ್ಟಿನೊಳಗೆ ಅಗತ್ಯವಾದ ಮಾರ್ಗಸೂಚಿಗಳು ಮತ್ತು ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ವಿಜಯಪುರದ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಪಿ.ಜಿ. ತಡಸದ ಹೇಳಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುವೆಂಪು ಸಭಾಂಗಣದಲ್ಲಿ, ಆಂತರಿಕ ಗುಣಮಟ್ಟ ಆಂತರಿಕ ಗುಣಮಟ್ಟದ ಭರವಸೆ ಕೋಶ ಮತ್ತು ಗ್ರಂಥಾಲಯ ವಿಜ್ಞಾನ ವಿಭಾಗ “ಸಂಶೋಧನೆ …
Read More »
Laxmi News 24×7