Breaking News

Daily Archives: ಜುಲೈ 8, 2026

ರಸ್ತೆ ಬದಿ ಪತ್ತೆಯಾದ ನವಜಾತ ಗಂಡು ಶಿಶು: ಕುರಿಗಾಹಿಗಳಿಂದ ರಕ್ಷಣೆ

ಬೆಳಗಾವಿ: ರಸ್ತೆ ಬದಿ ಬಿಸಾಡಿದ್ದ ನವಜಾತ ಗಂಡು ಶಿಶುವನ್ನು ಕುರಿಗಾಹಿಗಳು, ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತರು ರಕ್ಷಿಸಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸುರೇಬಾನ ಹತ್ತಿರವಿರುವ ಕಿತ್ತೂರು ಬಸವನಕಟ್ಟಿ ಬ್ರಿಡ್ಜ್ ಬಳಿ ನವಜಾತ ಗಂಡು ಶಿಶು ಪತ್ತೆಯಾಗಿದೆ.‌ ಮಗು ಅಳುವ ಸದ್ದು ಕೇಳಿ ಅಲ್ಲಿ ಕುರಿ ಮೇಯಿಸುತ್ತಿದ್ದ ಕುರಿ ಕಾಯಿಗಳು ಬಟ್ಟೆಯಲ್ಲಿ ಸುತ್ತಿ ನೆಲದ ಮೇಲೆ ಬಿಟ್ಟಿದ್ದ ಮಗುವನ್ನು ಕಂಡ ಕೂಡಲೇ ರಕ್ಷಿಸಿದ್ದಾರೆ. ಯಾರೋ ದುರುಳರು ರಸ್ತೆಗೆ …

Read More »

ಅಪ್ರಾಪ್ತರಿಗೆ ಬೈಕ್ ಕೊಟ್ಟವರಿಗೆ ದಂಡ ವಿಧಿಸಿದ ಕೋರ್ಟ್

ಅಪ್ರಾಪ್ತ ವಯಸ್ಸಿನ ಮಗನಿಗೆ ಬೈಕ್ ಚಲಾಯಿಸಲು ಅವಕಾಶ ನೀಡಿದ ಪಾಲಕರಿಗೆ ಪ್ರತ್ಯೇಕ ಪ್ರಕರಣದಲ್ಲಿ ಕಾಗವಾಡ ಹಾಗೂ ನಿಪ್ಪಾಣಿಯ JMFC ನ್ಯಾಯಾಲಯವು  ಭಾರಿ ದಂಡ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ಸಾರ್ವಜನಿಕರ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲಾ ಪೊಲೀಸರು ಬಳಸುತ್ತಿರುವ ಆಧುನಿಕ ಎ.ಎನ್.ಪಿ.ಆರ್  ತಂತ್ರಜ್ಞಾನವು ಇಂದು ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧದ ಕಠಿಣ ಕಾನೂನು ಜಾರಿಗೆ ಪ್ರಬಲ ಅಸ್ತ್ರವಾಗಿ ಪರಿಣಮಿಸಿದೆ. ಇತ್ತೀಚೆಗೆ ನಡೆದ ಸಂಚಾರ ನಿಯಮ …

Read More »

ಬೆಳಗಾವಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆಗಾಗಿ ಕಿತ್ತಾಡಿಕೊಂಡ ಕಾಂಗ್ರೆಸ್–ಬಿಜೆಪಿ ಕಾರ್ಯಕರ್ತರು

ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಇಂದು ನಡೆದ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭದ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಕೆಲಕಾಲ ವಾಗ್ವಾದ ನಡೆಯಿತು. ಕಾರ್ಯಕ್ರಮವನ್ನು ಪ್ರೊಟೋಕಾಲ್ ಪ್ರಕಾರ ನಡೆಸಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು. ಈ ವಿಚಾರವಾಗಿ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ನಂತರ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಹಿರಿಯರು ಮಧ್ಯಪ್ರವೇಶಿಸಿ ಎರಡೂ …

Read More »

ಮುಖ್ಯಮಂತ್ರಿಗಳ ಬೆಳಗಾವಿ ಪ್ರವಾಸದಲ್ಲಿ ಬದಲಾವಣೆ

ಬೆಂಗಳೂರು: ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಗುರುವಾರ (ಜುಲೈ 9) ಬೆಳಗಾವಿಗೆ ಆಗಮಿಸುತ್ತಿರುವ ಡಿ.ಕೆ.ಶಿವಕುಮಾರ ಅಂದು ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಬೆಳಗ್ಗೆ 9.30ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ಹೊರಡಲಿರುವ ಅವರು 10.40ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. 11 ಗಂಟೆಗೆ ಸುವರ್ಣ ವಿಧಾನಸೌಧ ತಲುಪಿ ಬೆಳಗಾವಿ ವಿಭಾಗ ಮಟ್ಟದ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಸುವರ್ಣ ವಿಧಾನಸೌಧದಲ್ಲಿ ಸೌಥ ಇಂಡಿಯನ್ ಶುಗರ್ ಮಿಲ್ಸ್ ಅಸೋಸಿಯೇಶನ್ …

Read More »

ರೈತರ ಕುಟುಂಬಗಳ ಸಂಕಷ್ಟಕ್ಕೆ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್: ಪರಿಹಾರದ ಚೆಕ್ ವಿತರಣೆ, ಸಾಂತ್ವನ

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಹಾಗೂ ಆಕಸ್ಮಿಕವಾಗಿ ಸಾವನ್ನಪ್ಪಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಮಂಜೂರಾಗಿರುವ ಪರಿಹಾರಧನದ ಚೆಕ್‌ಗಳನ್ನು ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ವಿತರಿಸಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಸರ್ಕಾರದ ಪರಿಹಾರ ಸೌಲಭ್ಯವನ್ನು ಶೀಘ್ರವಾಗಿ ಸಂತ್ರಸ್ತ ಕುಟುಂಬಗಳಿಗೆ ತಲುಪಿಸುವ ಉದ್ದೇಶದಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಪರಿಹಾರದ ಚೆಕ್‌ಗಳನ್ನು ಹಸ್ತಾಂತರಿಸಿದ ಅವರು, ಕುಟುಂಬದ …

Read More »

ಬೆಳಗಾವಿಯ ಆರ್‌ಟಿಓ ಸರ್ಕಲ್ ಬಳಿ ಆಟೋ ಮೇಲೆ ಬಿದ್ದ ಮರ

ಬೆಳಗಾವಿ: ಬೆಳಗಾವಿ ನಗರದ ಆರ್ ಟಿ ಓ ವೃತ್ತದ ಬಳಿ ಭಾರಿ ಗಾತ್ರದ ನೀಲಗಿರಿ ಮರವೊಂದು ರಸ್ತೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಆಟೋ ಮೇಲೆ ಧರೆಗುರುಳಿದ ಘಟನೆ ನಡೆದಿದೆ. ಆಟೋ ಮೇಲೆ ಮರ ಬಿದಿದ್ದರಿಂದ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ಭಾರಿ ಗಾತ್ರದ ಮರ ಮತ್ತು ಅದರ ಕೊಂಬೆಗಳು ರಸ್ತೆಗೆ ಅಡ್ಡಲಾಗಿ ಬಿದ್ದಿರುವುದರಿಂದ ಈ ಭಾಗದಲ್ಲಿ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ಸದ್ಯಕ್ಕೆ ವರದಿಯಾಗಿಲ್ಲ. ಸ್ಥಳದಲ್ಲಿ …

Read More »

ಬೆಳಗಾವಿಯಲ್ಲಿ ಎಲ್ ಆ್ಯಂಡ್ ಟಿ ಆಕ್ಸಿಜನ್ ಘಟಕ ಕಾರ್ಯಾರಂಭ

ಬೆಳಗಾವಿ-  ಬೆಳಗಾವಿಯಲ್ಲಿ ಆಮ್ಲಜನಕ ಕೊರತೆಯನ್ನು ಗಮನಿಸಿದ ಶಾಸಕ, ಅಭಯ ಪಾಟೀಲ ಆಮ್ಲಜನಕ ತಯಾರಿಕಾ ಘಟವನ್ನು ಸ್ಥಾಪಿಸುವಂತೆ ಎಲ್&ಟಿ ಕಂಪನಿಗೆ ವೈಯಕ್ತಿಕವಾಗಿ ವಿನಂತಿಸಿದ್ದರು. ಅದಕ್ಕೆ ಸ್ಪಂದಿಸಿ, ಪ್ರತಿ ನಿಮಿಷಕ್ಕೆ 700 ಲಿಟರ್ ಅಂದರೆ (50 ರಿಂದ 60 ಹಾಸಿಗೆಗಳಿಗೆ 24 ಗಂಟೆಗಳ ಕಾಲ) ಆಮ್ಲಜನಕ ಪೂರೈಕೆ ಮಾಡುವಂತ ಘಟಕ ಸ್ಥಾಪನೆ ಮಾಡಿದ್ದಾರೆ.  ಘಟಕ ಶನಿವಾರದಿಂದ ಕಾರ್ಯಾರಂಭ ಮಾಡಿತು. ಕರ್ನಾಟಕದಲ್ಲಿ ಮೊದಲನೆಯ ಭಾರಿಗೆ ಸಿಎಸ್ಆರ್ ಅನುದಾನ ಉಪಯೋಗಿಸಿ, ಎಲ್&ಟಿ ಕಂಪನಿಯ   ಆಮ್ಲಜನಕ …

Read More »

ಲಕ್ಷ್ಮೀತಾಯಿ ಫೌಂಡೇಶನ್‌ನಿಂದ ಭಾಗ್ಯಶ್ರೀ ಚಿಕಿತ್ಸೆಗೆ ಆರ್ಥಿಕ ನೆರವು

ಬೆಳಗಾವಿ: ಖಾನಾಪುರ ತಾಲೂಕಿನ ಲಾಲವಾಡಿ ಗ್ರಾಮದ ನಿವಾಸಿ ಜ್ಯೋತಿಬಾ ಉತ್ತೂರಕರ್ ಅವರ ಪುತ್ರಿ ಭಾಗ್ಯಶ್ರೀ ಅವರ ತುರ್ತು ಆರೋಗ್ಯ ಚಿಕಿತ್ಸೆಗೆ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು ನೀಡಲಾಯಿತು.   ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಕಟಪೂರ್ವ ಸಚಿವರು ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ನೆರವಿನ ಚೆಕ್‌ ಅನ್ನು ಕುಟುಂಬದವರಿಗೆ ಹಸ್ತಾಂತರಿಸಿದರು.   ಈ …

Read More »

ಕೆಎಲ್ಇ ಸಂಸ್ಥೆಯ ನೂತನ ಕಾರ್ಯದರ್ಶಿಯಾಗಿ ಡಾ. ಸುನೀಲ ಜಲಾಲಪುರೆ ಆಯ್ಕೆ

ಬೆಳಗಾವಿ : ಕೆ.ಎಲ್.ಇ. ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಕಾಹೇರ್)ನ ಕೆ.ಎಲ್.ಇ. ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲರು ಹಾಗೂ ಸಂಸ್ಥೆಯ ಜಂಟಿ ಕಾರ್ಯದರ್ಶಿಗಳಾಗಿದ್ದ ಪ್ರೊ. (ಡಾ.) ಸುನೀಲ ಎಸ್. ಜಲಾಲಪುರೆ ಅವರು ಕೆ.ಎಲ್.ಇ. ಸಂಸ್ಥೆಯ ನೂತನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. 1998ರಿಂದ ಕೆ.ಎಲ್.ಇ. ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅವರು 2013ರಿಂದ ಆಜೀವ ಸದಸ್ಯರಾಗಿದ್ದಾರೆ. ಬೋಧನೆ, ಸಂಶೋಧನೆ ಹಾಗೂ ಶೈಕ್ಷಣಿಕ ಆಡಳಿತ ಕ್ಷೇತ್ರಗಳಲ್ಲಿ 28 ವರ್ಷಗಳ ಅನುಭವ ಹೊಂದಿರುವ ಡಾ. …

Read More »

ಬುಧವಾರವೂ ಶಾಲೆ, ಕಾಲೇಜುಗಳಿಗೆ ರಜೆ

ಬೆಳಗಾವಿ : ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ 3 ತಾಲೂಕುಗಳ ಶಾಲೆಗಳಿಗೆ ಬುಧವಾರವೂ ರಜೆ ಘೋಷಿಸಲಾಗಿದೆ. ಬೆಳಗಾವಿ, ಖಾನಾಪುರ ಹಾಗೂ ನಿಪ್ಪಾಣಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ ವ್ಯಾಪಕ‌ ಮಳೆ: ಬೆಳಗಾವಿ, ಖಾನಾಪುರ ಮತ್ತು ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿಪ್ಪಾಣಿ, ಖಾನಾಪುರ ತಾಲ್ಲೂಕುಗಳ ಮತ್ತು ಬೆಳಗಾವಿ ನಗರ …

Read More »