ಧಾರವಾಡ: ಇತ್ತೀಚೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದಿಂದ ಬಾಹ್ಯಾಕಾಶಕ್ಕೆ ಮೆಂತೆ ಮತ್ತು ಹೆಸರು ಕಾಳುಗಳನ್ನ ತೆಗೆದುಕೊಂಡು ಹೋಗಿ ಪ್ರಯೋಗ ಮಾಡಲಾಗಿತ್ತು. ಈಗ ಇದೇ ಧಾರವಾಡದ ಕೃಷಿ ವಿಶ್ವವಿದ್ಯಾಲಯ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಈ ಬಾರಿ ಮತ್ತೊಂದು ದೇಶಕ್ಕೆ ಗೋಧಿ ತಳಿಯ ಬೀಜ ಕಳಿಸಲಾಗುತ್ತಿದೆ. ಇದಕ್ಕೆ ಸ್ವತಃ ಪ್ರಧಾನಿ ಮೋದಿಯವರೇ ಆ ದೇಶದ ಜೊತೆ ಒಡಂಬಡಿಕೆ ಮಾಡಿಕೊಂಡು ಬಂದಿದ್ದಾರೆ. ಇತ್ತೀಚೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇಂಡೋನೇಷಿಯಾಗೆ ಭೇಟಿ ನೀಡಿದ್ದರು. ಈ …
Read More »Daily Archives: ಜುಲೈ 10, 2026
ಕಾಡುಗೋಡಿ ಬಾಲಕಿ ಕೊಲೆ ಕೇಸ್ – ಆರೋಪಿ ಪ್ರಿಯಾಂಕಾಗೆ ಜಾಮೀನು ಮಂಜೂರು
ಬೆಂಗಳೂರು: ಕಾಡುಗೋಡಿಯಲ್ಲಿ ಮಗಳು ವೆನ್ನೀಲಾ ಕೊಲೆ ಪ್ರಕರಣ ಸಂಬಂಧ ಆರೋಪಿ ತಾಯಿ ಪ್ರಿಯಾಂಕಾಗೆ ಬೆಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಆರೋಪಿ ಪ್ರಿಯಾಂಕಾ ಪರ ವಕೀಲ ಪ್ರಸನ್ನ, ಕೊಲೆಯಲ್ಲಿ ತಾಯಿ ನೇರವಾಗಿ ಭಾಗಿಯಾಗಿಲ್ಲ ಎಂದು ವಾದ ಮಂಡಿಸಿದರು. ಇದರ ಆಧಾರದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಾ.24ರಂದು ಮಗು ವೆನ್ನೀಲಾ ಶವವಾಗಿ ಪತ್ತೆಯಾಗಿತ್ತು. ಪ್ರಕರಣದಲ್ಲಿ ಮಗುವಿನ ತಾಯಿ ಪ್ರಿಯಾಂಕಾ, ಪ್ರಿಯಕರ ಮೋಹನ್‌ನನ್ನು ಬಂಧನ ಮಾಡಲಾಗಿತ್ತು. ಜೂನ್ 11ರಂದು …
Read More »ಚಿಪ್ಪೆಕಲ್ಲು ದುರಂತದಲ್ಲಿ ತಾಯಿ ಸಾವು – ಮನನೊಂದಿದ್ದ ಮಗ ಆತ್ಮಹತ್ಯೆ
ಕಾರವಾರ: ಭಟ್ಕಳದ ಚಿಪ್ಪೆಕಲ್ಲು ದುರಂತದಲ್ಲಿ ತಾಯಿಯ ಸಾವಿನಿಂದ ಮನನೊಂದ ಮಗ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೇಂಗ್ರೆ ಗ್ರಾಮಪಂಚಾಯ್ತಿ ವ್ಯಾಪ್ತಿಯ ಮೋಳಿನಮನೆಯಲ್ಲಿ ಘಟನೆ ನಡೆದಿದೆ. ಆನಂದ ಅಣ್ಣಪ್ಪ ನಾಯ್ಕ (36) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಎಂ.ಕಾಂ ಪದವೀಧರನಾಗಿರುವ ಅಣ್ಣಪ್ಪ ನಾಯ್ಕ ಮದ್ಯ ವ್ಯಸನಿಯಾಗಿ, ತಾಯಿಯ ಆಶ್ರಯದಲ್ಲಿದ್ದ. ಕಳೆದ ಮೇ ತಿಂಗಳಲ್ಲಿ ನಡೆದ ಶಿರಾಲಿಯ ತಟ್ಟಿಹಕ್ಕಲಿನಲ್ಲಿ ನಡೆದ ಚಿಪ್ಪೆಕಲ್ಲು …
Read More »15 ದಿನದ ಹಿಂದಷ್ಟೇ ಉದ್ಘಾಟನೆಯಾದ ಕೃಷ್ಣಪಥ ಹೆದ್ದಾರಿ ಈಗ ಸಾವಿನ ಹೈವೇ
ಬೆಂಗಳೂರು: ಕಳೆದ 15 ದಿನದ ಹಿಂದಷ್ಟೇ ಉದ್ಘಾಟನೆಯಾದ ಬೆಂಗಳೂರಿನ ಕೃಷ್ಣಪಥ ಹೆದ್ದಾರಿ ಈಗ ಸಾವಿನ ಹೈವೇ ಆಗ್ತಿದೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಎಸ್.ಎಂ ಕೃಷ್ಣ ದಶಪಥ ಹೆದ್ದಾರಿಯಲ್ಲಿ ಸವಾರರ ಒನ್ ವೇ ಸಂಚಾರ ಪ್ರಾಣಕ್ಕೆ ಕಂಟಕವಾಗ್ತಿದೆ. ಕಡಬಗೆರೆ ಟು ಚಲ್ಲಘಟ್ಟ ಸಂಪರ್ಕಿಸುವ 11 ಕಿ.ಮೀ ಉದ್ದದ ರಸ್ತೆಯ ಎಂಟ್ರಿ-ಎಕ್ಸಿಟ್‌ಗಳಲ್ಲಿ ನಿಯಮಬಾಹಿರವಾಗಿ ಸವಾರರು ಒನ್ ವೇ ಸಂಚಾರ ಮಾಡ್ತಿದ್ದಾರೆ. ಸರ್ವೀಸ್ ರಸ್ತೆಗಳಿಗೆ ತೆರಳುವ ಭರದಲ್ಲಿ ನೇರವಾಗಿ ಹೆದ್ದಾರಿಯಲ್ಲಿ ಒನ್ ವೇನಲ್ಲಿ ಸಂಚಾರ ಮಾಡ್ತಿದ್ದಾರೆ. …
Read More »ಎಸ್.ಆರ್ ವಿಶ್ವನಾಥ್ ಜೊತೆ ಜಟಾಪಟಿ ಮುಗಿದ ವಿಚಾರ – ಪಕ್ಷದ ಹಿತದೃಷ್ಟಿಯಿಂದ ಒಟ್ಟಿಗೆ ಕಾರ್ಯನಿರ್ವಹಣೆ: ಡಾ.ಸುಧಾಕರ್
ಬೆಂಗಳೂರು: ಎಸ್.ಆರ್ ವಿಶ್ವನಾಥ್ ಜೊತೆ ಜಟಾಪಟಿ ಮುಗಿದ ವಿಚಾರ. ಹೀಗಾಗಿ ಪಕ್ಷದ ಹಿತದೃಷ್ಟಿಯಿಂದ ಒಟ್ಟಿಗೆ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಸಂಸದ ಡಾ.ಸುಧಾಕರ್ ಅವರು ತಿಳಿಸಿದ್ದಾರೆ. ನಗರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ರಾಜ್ಯ ಉಸ್ತುವಾರಿ ಡಾ.ರಾಧಾಮೋಹನ್ ದಾಸ್ ಅಗರ್‌ವಾಲ್ ಅವರು ನಮ್ಮನ್ನು ಕರೆದಿದ್ದರು. ನಮ್ಮ ಭಾಗದಲ್ಲಿ ಅನ್ಯೋನ್ಯವಾಗಿ ಬಿಜೆಪಿಯನ್ನು ಸದೃಢವಾಗಿ ಕಟ್ಟಬೇಕು. ಪರಸ್ಪರ ಏನೇ ಭಿನ್ನಾಭಿಪ್ರಾವಿದ್ದರೂ ಅದು ಪಕ್ಷದ ಮೇಲೆ …
Read More »ವೈದ್ಯಕೀಯ ಸೀಟು ಕೊಡಿಸುವುದಾಗಿ ವಂಚನೆ; ಮಾಜಿ ಸಚಿವ ಜಾಲಪ್ಪ ಸೊಸೆಗೆ 5 ವರ್ಷ ಜೈಲು ಶಿಕ್ಷೆ
ಬೆಂಗಳೂರು: ವೈದ್ಯಕೀಯ ಸೀಟು ಕೊಡಿಸುವುದಾಗಿ ಹಣ ಪಡೆದು ವಂಚನೆ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಜಾಲಪ್ಪ ಅವರ ಸೊಸೆ ನಾಗವೇಣಿ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ದೋಷಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕಾಶ್ ಕುಮಾರ್ ಯಾರಪ್ಪ ದೂರು ದಾಖಲಿಸಿದ್ದರು. ವೈದ್ಯಕೀಯ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ಕೋಟಾದಡಿ ಸೀಟು ಕೊಡಿಸುವುದಾಗಿ 45 ಲಕ್ಷ ರೂ. ಹಣ ಪಡೆದು ವಂಚಿಸಲಾಗಿದೆ …
Read More »ಅನ್ನಭಾಗ್ಯ ಅಕ್ಕಿಗೆ ಸ್ಪಲ್ಪ ಅರಿಶಿಣ ಬೆರೆಸಿ ಅಯೋಧ್ಯೆಯಿಂದ ತಂದಿರುವ ಪ್ರಸಾದ ಅಂದಿದ್ರು: ಬಿಜೆಪಿಗೆ ಡಿಕೆಶಿ ಟಾಂಗ್
ಬೆಳಗಾವಿ: ನಾವು ನೀಡಿದ್ದ ಅಕ್ಕಿಗೆ ಸ್ವಲ್ಪ ಅರಿಶಿನ ಬೆರೆಸಿ ಇದು ಅಯೋಧ್ಯೆಯಿಂದ ತಂದಿರುವ ಪ್ರಸಾದ್ ಅಂದಿದ್ರು ಎಂದು ಬಿಜೆಪಿಗೆ ಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ ಕೊಟ್ಟರು. ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ನೀವು ಮಾಧ್ಯಮದಲ್ಲಿ ನೋಡ್ತಿದ್ದೀರಿ. ಅವರೇನು ಸುಳ್ಳು ಹೇಳ್ತಿಲ್ಲ. ದೇಶದ ಜನತೆಯ ನಂಬಿಕೆಗೆ ದ್ರೋಹ ಆಗಿದೆ ಎಂದು ರಾಮಮಂದಿರ ದೇಣಿಗೆ ಕಳ್ಳತನಕ್ಕೆ ಬೇಸರ ವ್ಯಕ್ತಪಡಿಸಿದರು. ಇವತ್ತು ಸುವರ್ಣಸೌಧದಲ್ಲಿ ಕಿತ್ತೂರು ಕರ್ನಾಟಕದ ಶಾಸಕರು …
Read More »ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಕೆ: ಸಿಎಂ ಘೋಷಣೆ
ಬೆಳಗಾವಿ: ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮಮಂದಿರದಲ್ಲಿ ನಮಗೆ ಬಹಳ ದೊಡ್ಡ ಅಗೌರವ ಬಂದಿದೆ. ಧರ್ಮದ ಹೆಸರಿನಲ್ಲಿ ಈ ರೀತಿ ಆಗಿದೆ. ಹೀಗಾಗಿ, ಕರ್ನಾಟಕದ ಎಲ್ಲಾ ಮುಜರಾಯಿ ದೇವಸ್ಥಾನದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ದೇವಸ್ಥಾನದಲ್ಲಿ ಅಳವಡಿಸಿದ ಸಿಸಿಟಿವಿ ಕಂಟ್ರೋಲ್ ರೂಮ್ ಸ್ಥಾಪಿಸುತ್ತೇವೆ. ಪ್ರತಿಯೊಂದು ಹಣವನ್ನ ಸಿಸಿಟಿವಿ ಕ್ಯಾಮೆರಾದಲ್ಲಿ ಚಿತ್ರಣ ಆಗಬೇಕು …
Read More »13ರಂದು ಹಿಂಡಲಗಾ ಜೈಲು ಎದುರು ಪ್ರತಿಭಟನೆ
ಬೆಳಗಾವಿ: ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಮೂರು ತಿಂಗಳು ಜೈಲುವಾಸ ಅನುಭವಿಸಿದ್ದ ವೀರ ಸಾವರ್ಕರ್ ಐತಿಹಾಸಿಕ ಹಿನ್ನೆಲೆಯ ಸ್ಮರಣೆಗಾಗಿ ಜೈಲಿನಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಳವಡಿಸಿದ್ದ ಫೋಟೋ ಮತ್ತಿತರ ದಾಖಲೆಗಳನ್ನು ಕಾಂಗ್ರೆಸ್ ಸರ್ಕಾರ ಬಂದ ಬಳಿಕ ತೆಗೆದು ಹಾಕಿದ್ದಾರೆ. ಇದನ್ನು ಖಂಡಿಸಿ ಜು.13ರಂದು ಹಿಂಡಲಗಾ ಕಾರಾಗೃಹದ ಎದುರು ಹಾಗೂ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟಿಸಲಾಗುವುದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿಭಟನೆಯಲ್ಲಿ ಬಿಜೆಪಿ …
Read More »ಕೇಂದ್ರ ಸರ್ಕಾರದ ಮಟ್ಟದಲ್ಲೂ ಗೃಹಲಕ್ಷ್ಮಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ ಗೃಹಲಕ್ಷ್ಮಿ ವಿರುದ್ಧದ ಆರೋಪಗಳಲ್ಲಿ ಹುರುಳಿಲ್ಲ
ಬೆಳಗಾವಿ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ವಿಶ್ವದಲ್ಲೇ ಮಾದರಿಯಾಗಿದೆ. ಎನ್‌ಡಿಎ ಆಡಳಿತದ ಕೆಲವು ರಾಜ್ಯಗಳೂ ಇದೇ ಮಾದರಿಯ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಕೇಂದ್ರ ಸರ್ಕಾರದ ಮಟ್ಟದಲ್ಲೂ ಗೃಹಲಕ್ಷ್ಮಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೀಗಿರುವಾಗ ನಮ್ಮ ಈ ಯೋಜನೆ ಕುರಿತು ರಾಜ್ಯದಲ್ಲಿ ವಿಪಕ್ಷಗಳು ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಶಾಸಕಿ, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮುಖ್ಯಮಂತ್ರಿಯಾದ ಬಳಿಕ ಡಿ.ಕೆ.ಶಿವಕುಮಾರ ಮೊದಲ ಸಲ ಬೆಳಗಾವಿಗೆ ಬಂದಿದ್ದಾರೆ. ಹೀಗಾಗಿ ಸಾಕಷ್ಟು …
Read More »
Laxmi News 24×7