Breaking News

Daily Archives: ಜುಲೈ 10, 2026

ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಕೆ: ಸಿಎಂ ಘೋಷಣೆ

ಬೆಳಗಾವಿ: ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮಮಂದಿರದಲ್ಲಿ ನಮಗೆ ಬಹಳ ದೊಡ್ಡ ಅಗೌರವ ಬಂದಿದೆ. ಧರ್ಮದ ಹೆಸರಿನಲ್ಲಿ ಈ ರೀತಿ ಆಗಿದೆ. ಹೀಗಾಗಿ, ಕರ್ನಾಟಕದ ಎಲ್ಲಾ ಮುಜರಾಯಿ ದೇವಸ್ಥಾನದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ದೇವಸ್ಥಾನದಲ್ಲಿ ಅಳವಡಿಸಿದ ಸಿಸಿಟಿವಿ ಕಂಟ್ರೋಲ್ ರೂಮ್ ಸ್ಥಾಪಿಸುತ್ತೇವೆ. ಪ್ರತಿಯೊಂದು ಹಣವನ್ನ ಸಿಸಿಟಿವಿ ಕ್ಯಾಮೆರಾದಲ್ಲಿ ಚಿತ್ರಣ ಆಗಬೇಕು …

Read More »

13ರಂದು ಹಿಂಡಲಗಾ ಜೈಲು ಎದುರು ಪ್ರತಿಭಟನೆ

ಬೆಳಗಾವಿ: ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಮೂರು ತಿಂಗಳು ಜೈಲುವಾಸ ಅನುಭವಿಸಿದ್ದ ವೀರ ಸಾವರ್ಕರ್ ಐತಿಹಾಸಿಕ ಹಿನ್ನೆಲೆಯ ಸ್ಮರಣೆಗಾಗಿ ಜೈಲಿನಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಳವಡಿಸಿದ್ದ ಫೋಟೋ ಮತ್ತಿತರ ದಾಖಲೆಗಳನ್ನು ಕಾಂಗ್ರೆಸ್ ಸರ್ಕಾರ ಬಂದ ಬಳಿಕ ತೆಗೆದು ಹಾಕಿದ್ದಾರೆ. ಇದನ್ನು ಖಂಡಿಸಿ ಜು.13ರಂದು ಹಿಂಡಲಗಾ ಕಾರಾಗೃಹದ ಎದುರು ಹಾಗೂ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟಿಸಲಾಗುವುದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿಭಟನೆಯಲ್ಲಿ ಬಿಜೆಪಿ …

Read More »

ಕೇಂದ್ರ ಸರ್ಕಾರದ ಮಟ್ಟದಲ್ಲೂ ಗೃಹಲಕ್ಷ್ಮಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ ಗೃಹಲಕ್ಷ್ಮಿ ವಿರುದ್ಧದ ಆರೋಪಗಳಲ್ಲಿ ಹುರುಳಿಲ್ಲ

ಬೆಳಗಾವಿ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ವಿಶ್ವದಲ್ಲೇ ಮಾದರಿಯಾಗಿದೆ. ಎನ್‌ಡಿಎ ಆಡಳಿತದ ಕೆಲವು ರಾಜ್ಯಗಳೂ ಇದೇ ಮಾದರಿಯ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಕೇಂದ್ರ ಸರ್ಕಾರದ ಮಟ್ಟದಲ್ಲೂ ಗೃಹಲಕ್ಷ್ಮಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೀಗಿರುವಾಗ ನಮ್ಮ ಈ ಯೋಜನೆ ಕುರಿತು ರಾಜ್ಯದಲ್ಲಿ ವಿಪಕ್ಷಗಳು ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಶಾಸಕಿ, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮುಖ್ಯಮಂತ್ರಿಯಾದ ಬಳಿಕ ಡಿ.ಕೆ.ಶಿವಕುಮಾರ ಮೊದಲ ಸಲ ಬೆಳಗಾವಿಗೆ ಬಂದಿದ್ದಾರೆ. ಹೀಗಾಗಿ ಸಾಕಷ್ಟು …

Read More »

ಎಸ್‌ಐಆರ್ ಬಡವರ ಮತದಾನದ ಹಕ್ಕು ಕಸಿಯದು

ಬೆಳಗಾವಿ : ಎಸ್‌ಐಆರ್ ಒಂದು ಸಹಜ ಪ್ರಕ್ರಿಯೆ. ಇದುವರೆಗೂ ಸುಮಾರು ಎಂಟು ಸಲ ದೇಶದಲ್ಲಿ ನಡೆದಿದೆ. ಎಲ್ಲೂ ಬಡವರ ಮತದಾನದ ಹಕ್ಕು ಕಸಿಯುವ ಪ್ರಯತ್ನವಾಗಿಲ್ಲ. ಇದು ಎಸ್‌ಐಆರ್ ನೀತಿ ಹಾಗೂ ಉದ್ದೇಶವೂ ಅಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸ್ಪಷ್ಟಪಡಿಸಿದರು. ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಜರುಗಿದ ಬಿಜೆಪಿ ಸಂಘಟನಾತ್ಮಕ ಸಭೆಯಲ್ಲಿ ಮಾತನಾಡಿದ ಅವರು, ಬಿಎಲ್ಒಗಳು ಪ್ರತಿ ಮನೆಗೆ ಹೋಗಿ ನೈಜ ಮತದಾರರಿಗೆ ಮತದಾನದ ಹಕ್ಕು ದೊರಕುವಂತೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. …

Read More »

ಬೆಳಗಾವಿ: ವಿಜ್ಞಾನ ವನಕ್ಕೆ ಸಚಿವ ಈಶ್ವರ ಖಂಡ್ರೆ ಭೇಟಿ

ಬೆಳಗಾವಿ: ಸುವರ್ಣಸೌಧದ ಆವರಣದಲ್ಲಿರುವ ‘ವಿಜ್ಞಾನ ವನ’ಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಈಶ್ವರ ಖಂಡ್ರೆ ಗುರುವಾರ ಭೇಟಿ ನೀಡಿ, ಮಕ್ಕಳಲ್ಲಿ ಆಟದ ಮೂಲಕ ವಿಜ್ಞಾನದ ಅರಿವು ಮೂಡಿಸುವ ವಿನೂತನ ಪರಿಕಲ್ಪನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಜ್ಞಾನ ವನದಲ್ಲಿರುವ ವಿವಿಧ ವೈಜ್ಞಾನಿಕ ಪರಿಕರಗಳನ್ನು ವೀಕ್ಷಿಸಿದ ಸಚಿವರು, ಮಕ್ಕಳು ಹಾಗೂ ಸಾರ್ವಜನಿಕರು ಮನರಂಜನೆಯೊಂದಿಗೆ ವಿಜ್ಞಾನದ ಮೂಲತತ್ವಗಳನ್ನು ಸುಲಭವಾಗಿ ತಿಳಿದುಕೊಳ್ಳಲು ಈ ಕೇಂದ್ರ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಬಳಿಕ ವಿಜ್ಞಾನ ವನದ ಆವರಣದಲ್ಲಿ ಸಸಿ ನೆಟ್ಟು …

Read More »

ಮಹಾರಾಷ್ಟ್ರದ ಕನ್ನಡ ಶಿಕ್ಷಕರ ನೆರವಿಗೆ ಧಾವಿಸಲು ಕರವೇ ಆಗ್ರಹ

ಬೆಳಗಾವಿ : ಮಹಾರಾಷ್ಟ್ರದಲ್ಲಿ ಕನ್ನಡ ಶಿಕ್ಷಕರು ಕಡ್ಡಾಯವಾಗಿ ಮರಾಠಿ ಭಾಷೆಯಲ್ಲೇ ಟಿಇಟಿ ಪರೀಕ್ಷೆ ಬರೆಯುವಂತೆ ನಿಯಮ ಜಾರಿಗೊಳಿಸಿದ್ದರಿಂದ ಕನ್ನಡ ಬೋಧಕರಿಗೆ ತೊಂದರೆಯಾಗುತ್ತಿದೆ. ಈ ಕೂಡಲೇ ಕರ್ನಾಟಕ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ಮುಖ್ಯಮಂತ್ರಿ ಡಿ.ಕೆ.ಶಿವಕುಮಾರಗೆ ಮನವಿ ಸಲ್ಲಿಸಿದೆ. ಸುವರ್ಣ ವಿಧಾನಸೌಧದಲ್ಲಿ ಅಹವಾಲು ಸಲ್ಲಿಸಿದ ಕರವೇ ಕಾರ್ಯಕರ್ತರು, ಮಹಾರಾಷ್ಟ್ರ ಹಾಗೂ ಕೇಂದ್ರ ಸರ್ಕಾರದ ಸಂಬಂಧಿತ ಇಲಾಖೆಗಳೊಂದಿಗೆ ಉನ್ನತ ಮಟ್ಟದಲ್ಲಿ ಚರ್ಚಿಸಬೇಕು. ಮಹಾರಾಷ್ಟ್ರ ರಾಜ್ಯದ ಕನ್ನಡ ಮಾಧ್ಯಮ ಶಿಕ್ಷಕರಿಗೆ …

Read More »