ಉಡುಪಿ: ಕೇರಳ ಸಿಎಂ ವಿ.ಡಿ. ಸತೀಶನ್ ಅವರು ಇಂದು (ಜು.11) ಮುಂಜಾನೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು. Z-ಪ್ಲಸ್ ಭದ್ರತೆಯಲ್ಲಿ ಅವರು ದೇವಸ್ಥಾನಕ್ಕೆ ಆಗಮಿಸಿದ್ದರು. ಮುಂಜಾನೆಯೇ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಬಳಿಕ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಅವರಿಗೆ ಗೌರವ ಸಲ್ಲಿಸಲಾಯಿತು. ಸತೀಶನ್ ಅವರು ಸಿಎಂ ಆದ ಬಳಿಕ ಮೊದಲ ಭೇಟಿ ಇದಾಗಿದೆ. ಅವರು ಕೊಲ್ಲೂರು ಮೂಕಾಂಬಿಕೆಯ ಅಪಾರ ಭಕ್ತರಾಗಿದ್ದಾರೆ. …
Read More »Daily Archives: ಜುಲೈ 11, 2026
ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ – ರಾಜಮನೆತನ, ಪ್ರತಾಪ್ ಸಿಂಹ ವಿರೋಧ, ಅಶೋಕ್ ರೈ ಸಮರ್ಥನೆ
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳು ಅಧಿಕೃತವಾಗಿ ಚಾಲನೆ ಪಡೆದುಕೊಂಡ ಬೆನ್ನಲ್ಲೇ, ಈ ಬಾರಿ ದಸರಾದಲ್ಲಿ ಕರಾವಳಿಯ ಜಾನಪದ ಕ್ರೀಡೆ ಕಂಬಳವನ್ನು ಆಯೋಜಿಸುವ ಕುರಿತು ಪರ-ವಿರೋಧದ ಚರ್ಚೆಗಳು ತೀವ್ರಗೊಂಡಿವೆ. ಒಂದು ಕಡೆ ಕಂಬಳ ಆಯೋಜನೆಗೆ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಸಿದ್ಧತೆಗಳು ನಡೆಯುತ್ತಿದ್ದರೆ, ಮತ್ತೊಂದೆಡೆ ಮೈಸೂರು ರಾಜಮನೆತನದ ಸಂಸದ ಯದುವೀರ್ ಒಡೆಯರ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯದ ಹೆಮ್ಮೆಯಾದ ಮೈಸೂರು …
Read More »ಬಹಾಮಾಸ್‌ನಲ್ಲಿ ವಿಮಾನ ಪತನ – 10 ಮಂದಿ ದುರ್ಮರಣ
ನಸ್ಸೌ: ಬಹಾಮಾಸ್‌ನ ನಾರ್ತ್ ಆಂಡ್ರೋಸ್‌ನಲ್ಲಿ ಫ್ಲೆಮಿಂಗೊ ಏರ್ ಸೆಸ್ನಾ 402 ವಿಮಾನ ಪತನಗೊಂಡಿದೆ. ಈ ಅಪಘಾತದಲ್ಲಿ ವಿಮಾನದಲ್ಲಿದ್ದ ಎಲ್ಲಾ 10 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತ ಬಹಾಮಾಸ್‌ನ ಸ್ವಾತಂತ್ರ್ಯ ದಿನಾಚರಣೆಯನ್ನು ಶೋಕದಲ್ಲಿ ಮುಳುಗಿಸಿದೆ. ಅಧಿಕಾರಿಗಳು ವಿಮಾನ ಅಪಘಾತದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಮೃತಪಟ್ಟವರ ಗುರುತು ಪತ್ತೆಹಚ್ಚಲಾಗುತ್ತಿದೆ. ವಿಮಾನ ಪತನದ ಬಳಿಕ ಫ್ಲೆಮಿಂಗೊ ಏರ್ ವಿಮಾನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬಹಾಮಾಸ್ ಪ್ರಧಾನಿ ಫಿಲಿಪ್ ಬ್ರೇವ್ ಡೇವಿಸ್, ವಿಮಾನ ಅಪಘಾತದಲ್ಲಿ ಓರ್ವ ವ್ಯಕ್ತಿ …
Read More »ಮುಚ್ಚೋ ಸ್ಥಿತಿಗೆ ಸರ್ಕಾರಿ ಶಾಲೆ – ರಾಜ್ಯ ಸರ್ಕಾರದ ವಿರುದ್ಧ ಪ್ರಹ್ಲಾದ ಜೋಶಿ ಕಿಡಿ
ನವದೆಹಲಿ: ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಆಸರೆಯಾಗಿದ್ದ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿಗೆ ತರುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಾತ್ಮಕ ದಿವಾಳಿತನ ಪ್ರದರ್ಶಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದಲೂ ಅಧಿಕಾರ, ಕುರ್ಚಿ ಕಿತ್ತಾಟದಲ್ಲೇ ಕಾಲ ಕಳೆದಿದೆ. ಪರಿಣಾಮ ಆಡಳಿತಯಂತ್ರ ಸಂಪೂರ್ಣ ಸ್ತಬ್ಧಗೊಂಡಂತಿದ್ದು, ಶಿಕ್ಷಣ ಕ್ಷೇತ್ರದ ಮೇಲೂ ನೇರ ದುಷ್ಪರಿಣಾಮ ಬೀರಿದೆ …
Read More »ಮೀಟರ್ ಬಡ್ಡಿ ಟಾರ್ಚರ್‌ಗೆ ಬೇಸತ್ತು ಆಟೋ ಚಾಲಕ ಆತ್ಮಹತ್ಯೆ
ಬೆಂಗಳೂರು: ಮೀಟರ್ ಬಡ್ಡಿ ಕಿರುಕುಳ ಮತ್ತು ಸಾಲದ ಬಾಧೆಯಿಂದ ಬೇಸತ್ತು ಆಟೋ ಚಾಲಕನೊಬ್ಬ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಥಣಿಸಂದ್ರದಲ್ಲಿ ನಡೆದಿದೆ. ಜೀ ಯೌಸುಫ್ ಜಮಾಲ್‌ದ್ದಿನ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇಂದು ಸಂಜೆ ಸುಮಾರು 4 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ಆತ್ಮಹತ್ಯೆಗೂ ಮುನ್ನ ಯೌಸುಫ್ ಜಮಾಲ್‌ದ್ದಿನ್ ವಿಷ ಕುಡಿಯುವ ವಿಡಿಯೋ ಮಾಡಿ ತಮ್ಮ ಸ್ನೇಹಿತರಿಗೆ ಕಳುಹಿಸಿದ್ದಾನೆ. ವಿಡಿಯೋದಲ್ಲಿ ತಾನುಮಾಡಿಕೊಂಡಿದ್ದ ಸಾಲದ ಬಗ್ಗೆ ಹಾಗೂ ಬಡ್ಡಿ …
Read More »ನಿದ್ದೆ ಮಂಪರಿನಲ್ಲಿ ವೇಗವಾಗಿ ಕಾರು ಚಾಲನೆ – ಡಿವೈಡರ್‌ಗೆ ಡಿಕ್ಕಿ, ತಾಯಿ, ಇಬ್ಬರು ಮಕ್ಕಳು ಸಾವು
ವಿಜಯಪುರ: ನಿದ್ದೆ ಮಂಪರಿನಲ್ಲಿ ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ಡಿವೈಡರ್ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮನಗೂಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಘಟನೆ ನಡೆದಿದೆ. ತಾಯಿ ಸತ್ಯವೇಣಿ (38), ಪುತ್ರ ಹರಿವೆಂಕಟರಾಮ್ (20), ಜಶ್ವಂತ (18) ಮೃತರು. ತಂದೆ ರಾಘವೇಂದ್ರ ಅವರು (41) ಗಂಭೀರವಾಗಿ ಗಾಯಗೊಂಡಿದ್ದಾರೆ. KA 33 N 4689 ನಂಬರ್‌ನ ಕ್ರೇಟಾ ಕಾರು ಅಪಘಾತಕ್ಕೆ ಒಳಗಾಗಿದೆ. ಕುಟುಂಬಸ್ಥರು ಎಲ್ಲರೂ ಸೇರಿ …
Read More »ಜು.12ರಂದು ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಣೆ – ಇಲಾಖೆ ಮಾಹಿತಿ
ಬೆಂಗಳೂರು: ಜು.12ರ ಭಾನುವಾರದಂದು ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳು ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ಮಾಹಿತಿ ನೀಡಿದೆ. ರಾಜ್ಯಾದ್ಯಂತ ಇರುವ ಎಲ್ಲಾ ಉಪನೋಂದಣಿ ಕಚೇರಿಗಳು ಇದೇ ಭಾನುವಾರ (ಜು.12) ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ. ಸಾರ್ವಜನಿಕ ರಜಾ ದಿನವಾಗಿದ್ದರೂ ಸಹ, ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಇಲಾಖೆಯ ಕಾರ್ಯದೊತ್ತಡ ನಿವಾರಣೆಗಾಗಿ ಎಂದಿನಂತೆ ತೆರೆದಿದ್ದು, ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ. ಈ ದಿನದಂದು ಸಾರ್ವಜನಿಕರು ಎಂದಿನಂತೆ ಆಸ್ತಿ ನೋಂದಣಿ, ಮುದ್ರಾಂಕ ಖರೀದಿ …
Read More »ಹಿಂದೂ ಮಹಿಳೆಯರೇ ಟಾರ್ಗೆಟ್ – ಜಿಮ್ ಟ್ರೇನರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ
ದಾವಣಗೆರೆ: ಇಲ್ಲಿನ ಸರಸ್ವತಿ ನಗರದಲ್ಲಿರುವ ಫಿಟ್‌ನೆಸ್ ಕ್ಲಬ್‌ವೊಂದು ಇದೀಗ ವಿವಾದದ ಕೇಂದ್ರಬಿಂದುವಾಗಿದ್ದು, ಜಿಮ್ ಟ್ರೇನರ್ ಜಿಮ್‌ಗೆ ಬರುವ ಹಿಂದೂ ಹೆಣ್ಣುಮಕ್ಕಳನ್ನೇ ಟಾರ್ಗೆಟ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಜಿಮ್ ಟ್ರೇನರ್‌ನನ್ನು ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಪ್ರೊಫೆಸರ್‌ಗಳು, ಅಧಿಕಾರಿಗಳು, ವೈದ್ಯರು, ಇಂಜಿನಿಯರ್‌ಗಳು ಹಾಗೂ ಪ್ರತಿಷ್ಠಿತ ಮನೆತನದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ರೀಲ್ಸ್ ಮಾಡಿ ಬುಟ್ಟಿಗೆ ಬೀಳಿಸಿಕೊಳ್ಳೋದು, ಡ್ರೆಸ್ಸಿಂಗ್ ರೂಮ್‌ಗಳಲ್ಲಿ …
Read More »ಭಾರೀ ಮಳೆಯಿಂದ ಹಿಡಕಲ್ ಜಲಾಶಯ ಭರ್ತಿ; ಹುನ್ನೂರು ವಿಠ್ಠಲ ದೇವಸ್ಥಾನ ಮುಳುಗಡೆ
ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಹಿಡಕಲ್ ಜಲಾಶಯ ತುಂಬಲಾರಂಭಿಸಿದೆ. ಹಿನ್ನೀರಿನಲ್ಲಿರುವ ಐತಿಹಾಸಿಕ ಹುನ್ನೂರು ವಿಠ್ಠಲ ದೇವಸ್ಥಾನ ಮತ್ತೆ ಜಲಾವೃತವಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುನ್ನೂರು ಗ್ರಾಮದ ಈ ವಿಠ್ಠಲ ದೇವಸ್ಥಾನ 1978ರಲ್ಲಿ ಹಿಡಕಲ್ ಜಲಾಶಯ ನಿರ್ಮಾಣವಾದ ಬಳಿಕ ನೀರಿನಲ್ಲೇ ಉಳಿದಿತ್ತು. ಗ್ರಾಮವನ್ನು ಸ್ಥಳಾಂತರ ಮಾಡಲಾಗಿದ್ದರೂ, ದೇವಸ್ಥಾನ ಮಾತ್ರ ಇಂದಿಗೂ ಅದೇ ಸ್ಥಳದಲ್ಲಿ ನಿಂತಿದೆ. …
Read More »ಭೀಮಾತೀರದ ರೌಡಿಶೀಟರ್ ತುಳಸಿರಾಮ ಚಾಮರಾಜನಗರಕ್ಕೆ ಗಡಿಪಾರು
ಜಯಪುರ: ಭೀಮಾತೀರದ ರೌಡಿಶೀಟರ್ ತುಳಸಿರಾಮನನ್ನು ಗಡಿಪಾರು ಮಾಡಲಾಗಿದ್ದು, ಚಾಮರಾಜನಗರ ಜೈಲಿನಲ್ಲಿ ಇರಿಸಲು ಆದೇಶ ಹೊರಡಿಸಲಾಗಿದೆ. ಭೀಮಾತೀರದ ಹಂತಕ ಬಾಗಪ್ಪ ಹರಿಜನ ಶಿಷ್ಯ ಆಗಿದ್ದ ತುಳಸಿರಾಮನನ್ನು ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ್ ಕೆ ಗಡಿಪಾರು ಮಾಡಿ, ಆದೇಶ ಹೊರಡಿಸಿದ್ದಾರೆ. ಮೂಲತಃ ಇಂಡಿ ತಾಲೂಕಿನ ಅರ್ಜನಾಳ ಗ್ರಾಮದವನಾಗಿರುವ ತುಳಸಿರಾಮ, ಪ್ರಸ್ತುತ ವಿಜಯಪುರದ ಗಣೇಶ್ ನಗರದಲ್ಲಿ ವಾಸವಾಗಿದ್ದ. ತುಳಸಿರಾಮ ಓರ್ವ ವೃತ್ತಿಪರ ಅಪರಾಧಿ, ಸಮಾಜ ದ್ರೋಹಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ. …
Read More »
Laxmi News 24×7