ವಿಜಯಪುರ: ನಿದ್ದೆ ಮಂಪರಿನಲ್ಲಿ ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ಡಿವೈಡರ್ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮನಗೂಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಘಟನೆ ನಡೆದಿದೆ. ತಾಯಿ ಸತ್ಯವೇಣಿ (38), ಪುತ್ರ ಹರಿವೆಂಕಟರಾಮ್ (20), ಜಶ್ವಂತ (18) ಮೃತರು. ತಂದೆ ರಾಘವೇಂದ್ರ ಅವರು (41) ಗಂಭೀರವಾಗಿ ಗಾಯಗೊಂಡಿದ್ದಾರೆ. KA 33 N 4689 ನಂಬರ್‌ನ ಕ್ರೇಟಾ ಕಾರು ಅಪಘಾತಕ್ಕೆ ಒಳಗಾಗಿದೆ. ಕುಟುಂಬಸ್ಥರು ಎಲ್ಲರೂ ಸೇರಿ …
Read More »Daily Archives: ಜುಲೈ 11, 2026
ಜು.12ರಂದು ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಣೆ – ಇಲಾಖೆ ಮಾಹಿತಿ
ಬೆಂಗಳೂರು: ಜು.12ರ ಭಾನುವಾರದಂದು ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳು ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ಮಾಹಿತಿ ನೀಡಿದೆ. ರಾಜ್ಯಾದ್ಯಂತ ಇರುವ ಎಲ್ಲಾ ಉಪನೋಂದಣಿ ಕಚೇರಿಗಳು ಇದೇ ಭಾನುವಾರ (ಜು.12) ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ. ಸಾರ್ವಜನಿಕ ರಜಾ ದಿನವಾಗಿದ್ದರೂ ಸಹ, ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಇಲಾಖೆಯ ಕಾರ್ಯದೊತ್ತಡ ನಿವಾರಣೆಗಾಗಿ ಎಂದಿನಂತೆ ತೆರೆದಿದ್ದು, ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ. ಈ ದಿನದಂದು ಸಾರ್ವಜನಿಕರು ಎಂದಿನಂತೆ ಆಸ್ತಿ ನೋಂದಣಿ, ಮುದ್ರಾಂಕ ಖರೀದಿ …
Read More »ಹಿಂದೂ ಮಹಿಳೆಯರೇ ಟಾರ್ಗೆಟ್ – ಜಿಮ್ ಟ್ರೇನರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ
ದಾವಣಗೆರೆ: ಇಲ್ಲಿನ ಸರಸ್ವತಿ ನಗರದಲ್ಲಿರುವ ಫಿಟ್‌ನೆಸ್ ಕ್ಲಬ್‌ವೊಂದು ಇದೀಗ ವಿವಾದದ ಕೇಂದ್ರಬಿಂದುವಾಗಿದ್ದು, ಜಿಮ್ ಟ್ರೇನರ್ ಜಿಮ್‌ಗೆ ಬರುವ ಹಿಂದೂ ಹೆಣ್ಣುಮಕ್ಕಳನ್ನೇ ಟಾರ್ಗೆಟ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಜಿಮ್ ಟ್ರೇನರ್‌ನನ್ನು ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಪ್ರೊಫೆಸರ್‌ಗಳು, ಅಧಿಕಾರಿಗಳು, ವೈದ್ಯರು, ಇಂಜಿನಿಯರ್‌ಗಳು ಹಾಗೂ ಪ್ರತಿಷ್ಠಿತ ಮನೆತನದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ರೀಲ್ಸ್ ಮಾಡಿ ಬುಟ್ಟಿಗೆ ಬೀಳಿಸಿಕೊಳ್ಳೋದು, ಡ್ರೆಸ್ಸಿಂಗ್ ರೂಮ್‌ಗಳಲ್ಲಿ …
Read More »ಭಾರೀ ಮಳೆಯಿಂದ ಹಿಡಕಲ್ ಜಲಾಶಯ ಭರ್ತಿ; ಹುನ್ನೂರು ವಿಠ್ಠಲ ದೇವಸ್ಥಾನ ಮುಳುಗಡೆ
ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಹಿಡಕಲ್ ಜಲಾಶಯ ತುಂಬಲಾರಂಭಿಸಿದೆ. ಹಿನ್ನೀರಿನಲ್ಲಿರುವ ಐತಿಹಾಸಿಕ ಹುನ್ನೂರು ವಿಠ್ಠಲ ದೇವಸ್ಥಾನ ಮತ್ತೆ ಜಲಾವೃತವಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುನ್ನೂರು ಗ್ರಾಮದ ಈ ವಿಠ್ಠಲ ದೇವಸ್ಥಾನ 1978ರಲ್ಲಿ ಹಿಡಕಲ್ ಜಲಾಶಯ ನಿರ್ಮಾಣವಾದ ಬಳಿಕ ನೀರಿನಲ್ಲೇ ಉಳಿದಿತ್ತು. ಗ್ರಾಮವನ್ನು ಸ್ಥಳಾಂತರ ಮಾಡಲಾಗಿದ್ದರೂ, ದೇವಸ್ಥಾನ ಮಾತ್ರ ಇಂದಿಗೂ ಅದೇ ಸ್ಥಳದಲ್ಲಿ ನಿಂತಿದೆ. …
Read More »ಭೀಮಾತೀರದ ರೌಡಿಶೀಟರ್ ತುಳಸಿರಾಮ ಚಾಮರಾಜನಗರಕ್ಕೆ ಗಡಿಪಾರು
ಜಯಪುರ: ಭೀಮಾತೀರದ ರೌಡಿಶೀಟರ್ ತುಳಸಿರಾಮನನ್ನು ಗಡಿಪಾರು ಮಾಡಲಾಗಿದ್ದು, ಚಾಮರಾಜನಗರ ಜೈಲಿನಲ್ಲಿ ಇರಿಸಲು ಆದೇಶ ಹೊರಡಿಸಲಾಗಿದೆ. ಭೀಮಾತೀರದ ಹಂತಕ ಬಾಗಪ್ಪ ಹರಿಜನ ಶಿಷ್ಯ ಆಗಿದ್ದ ತುಳಸಿರಾಮನನ್ನು ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ್ ಕೆ ಗಡಿಪಾರು ಮಾಡಿ, ಆದೇಶ ಹೊರಡಿಸಿದ್ದಾರೆ. ಮೂಲತಃ ಇಂಡಿ ತಾಲೂಕಿನ ಅರ್ಜನಾಳ ಗ್ರಾಮದವನಾಗಿರುವ ತುಳಸಿರಾಮ, ಪ್ರಸ್ತುತ ವಿಜಯಪುರದ ಗಣೇಶ್ ನಗರದಲ್ಲಿ ವಾಸವಾಗಿದ್ದ. ತುಳಸಿರಾಮ ಓರ್ವ ವೃತ್ತಿಪರ ಅಪರಾಧಿ, ಸಮಾಜ ದ್ರೋಹಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ. …
Read More »ಬರಗಾಲ ಕಾರಣಕ್ಕೆ ದಸರಾ ನಿಲ್ಲಿಸುವ, ಸರಳವಾಗಿ ಆಚರಿಸುವ ಪ್ರಶ್ನೆಯೇ ಇಲ್ಲ: ಸಿಎಂ
ಬೆಂಗಳೂರು: ನಾಡಹಬ್ಬ ದಸರಾ ಹಬ್ಬವನ್ನು ಈ ಬಾರಿ 11 ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದ್ದು, ಕರ್ನಾಟಕ ರಾಜ್ಯದ ಎಲ್ಲಾ ಸಂಸ್ಕೃತಿ ಪರಂಪರೆಗಳಿಗೆ ಅನುಗುಣವಾಗಿ ಹೊಸ ಹೊಸ ಕಾರ್ಯಕ್ರಮಗಳನ್ನು ಅಳವಡಿಸಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ನಾಡಹಬ್ಬ ದಸರಾ- 2026 ಆಚರಣೆ ಸಂಬಂಧ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಬಾರಿಯ ದಸರಾ ಕಾರ್ಯಕ್ರಮದ ಅಂಗವಾಗಿ ಆ.26 …
Read More »GBA ಚುನಾವಣೆ ಮುಂದೂಡಿಕೆಗೆ ಸುಪ್ರೀಂ ಮೆಟ್ಟಿಲೇರಿದ ರಾಜ್ಯ ಸರ್ಕಾರ
ಬೆಂಗಳೂರು: ಗ್ರೇಟರ್ ಬೆಂಗಳೂರು ಚುನಾವಣೆ ಮತ್ತಷ್ಟು ವಿಳಂಬ ಆಗಲಿದೆ. ಡಿಸೆಂಬರ್‌ವರೆಗೆ ಚುನಾವಣೆ ಮುಂದೂಡಿಕೆ ಅಗತ್ಯ ಅಂತ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರ ಕೋರಿದೆ ಆಗಸ್ಟ್‌ನೊಳಗೆ ಚುನಾವಣೆ ನಡೆಸಬೇಕಂತ ಸುಪ್ರೀಂಕೋರ್ಟ್ ಆದೇಶ ನೀಡಿದ್ದರೂ ಕೂಡ ಎಲೆಕ್ಷನ್ ನಡೆಯೋದು ಡೌಟು ಆಗಿದೆ. ಬೆಂಗಳೂರಿನಲ್ಲಿ ಸುಮಾರು 1.03 ಕೋಟಿ ಮತದಾರರಿದ್ದಾರೆ. ಸುಮಾರು 40 ಲಕ್ಷ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದೆ. ಕರಡು ಮತದಾರರ ಪಟ್ಟಿ ಪ್ರಕಟಣೆ, ಆಕ್ಷೇಪಣೆಗಳ ಸ್ವೀಕಾರ ಮತ್ತು ಅವುಗಳ ವಿಚಾರಣೆ ಇನ್ನೂ …
Read More »ಒಂದೆಡೆ ಡ್ಯಾಂಗಳಿಗೆ ಜೀವಕಳೆ.. ಇತ್ತ ಕೈಕೊಟ್ಟ ಮುಂಗಾರಿನಿಂದ ಕಾರಂಜಾ ಜಲಾಶಯ ಬಹುತೇಕ ಖಾಲಿ
ಬೀದರ್: ಜಿಲ್ಲೆಯಲ್ಲಿ ಮುಂಗಾರು ಕೈಕೊಟ್ಟ ಪರಿಣಾಮ ರೈತರ ಜೀವನಾಡಿ ಕಾರಂಜಾ ಜಲಾಶಯದ ನೀರಿನ ಪ್ರಮಾಣದಲ್ಲಿ ಇಳಿಕೆಯಾಗಿದೆ. ಮಳೆ ಕೊರತೆಯಿಂದಾಗಿ ಭಾಲ್ಕಿ ತಾಲೂಕಿನ ಹಾಲಹಳ್ಳಿ ಗ್ರಾಮದ ಬಳಿಯ ಕಾರಂಜಾ ಡ್ಯಾಂ ಒಳಹರಿವು ಶೂನ್ಯವಾಗಿದೆ. 7.65 ಟಿಎಂಸಿ ಸಂಗ್ರಹ ಸಾಮರ್ಥ್ಯದ ಕಾರಂಜಾ ಜಲಾಶಯದಲ್ಲಿ ಸದ್ಯ 4.5 ಟಿಎಂಸಿ ನೀರು ಮಾತ್ರ ಇದ್ದು, ಬಹುತೇಕ 1 ಟಿಎಂಸಿ ನೀರು ಡೆಡ್ ಸ್ಟೋರೆಜ್ ಇದೆ. ಸದ್ಯ 3 ಟಿಎಂಸಿ ನೀರು ಮಾತ್ರ ಇದ್ದು, ಈ ತಿಂಗಳು ಮಳೆ …
Read More »ಮತಾಂತರಕ್ಕೆ ಒತ್ತಾಯಿಸಿ ಚಿತ್ರಹಿಂಸೆ, ಹಲ್ಲೆ ನಡೆಸಿ ಉಜ್ಬೇಕಿಸ್ತಾನದಲ್ಲಿ ಕೇರಳ ಮೂಲದ ವಿದ್ಯಾರ್ಥಿನಿ ಹತ್ಯೆ
ತಾಷ್ಕೆಂಟ್: ಉಜ್ಬೇಕಿಸ್ತಾನ್‌ನಲ್ಲಿ 22 ವರ್ಷದ ಭಾರತೀಯ ವೈದ್ಯಕೀಯ ವಿದ್ಯಾರ್ಥಿನಿ ಹತ್ಯೆ ಮಾಡಲಾಗಿದೆ. ಮತಾಂತರಕ್ಕೆ ಒತ್ತಾಯಿಸಿ ಆಕೆಗೆ ಚಿತ್ರಹಿಂಸೆ ನೀಡಿ, ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆಂದು ವಿದ್ಯಾರ್ಥಿನಿ ಪೋಷಕರು ದೂರು ನೀಡಿದ್ದಾರೆ. ಸವಾರಿಯಾ ಬಸಂತ್ ಕೊಲೆಯಾದ ವಿದ್ಯಾರ್ಥಿನಿ. ಆಕೆಯ ಕುಟುಂಬದವರು ನೀಡಿದ ದೂರಿನ ಮೇರೆಗೆ ಕೇರಳ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾವಿಗೂ ಮುನ್ನ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿತ್ತೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಪರಾಧವು ಉಜ್ಬೇಕಿಸ್ತಾನ್‌ನಲ್ಲಿ ನಡೆದಿದ್ದರೂ, ಇಲ್ಲಿ ಪ್ರಕರಣ …
Read More »40 ವರ್ಷಗಳ ಬಳಿಕ ನ್ಯೂಜಿಲೆಂಡ್‌ಗೆ ಭಾರತದ ಪ್ರಧಾನಿ ಭೇಟಿ
ವೆಲ್ಲಿಂಗ್ಟನ್: ಇಂಡೋನೇಷ್ಯಾ, ಆಸ್ಟ್ರೇಲಿಯಾ ಬಳಿಕ ಪ್ರಧಾನಿ ನರೇಂದ್ರ ಮೋದಿ ನ್ಯೂಜಿಲೆಂಡ್‌ಗೆ ಭೇಟಿ ನೀಡಿದ್ದಾರೆ. ಮೋದಿ ಆಗಮನದ ಹಿನ್ನೆಲೆಯಲ್ಲಿ ಆಕ್ಲೆಂಡ್‌ನ ಸ್ಕೈಟವರ್‌ನಲ್ಲಿ ತ್ರಿವರ್ಣಧ್ವಜದ ದೀಪಬೆಳಗಿಸಿ ವಿಶೇಷ ಸ್ವಾಗತ ಕೋರಲಾಗಿದೆ. 40 ವರ್ಷಗಳಲ್ಲೇ ಮೊದಲ ಬಾರಿಗೆ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ಭೇಟಿ ನೀಡಿದ್ದು, ಪ್ರಧಾನಿ ಕ್ರಿಸ್ಟೋಫರ್ ಲಕ್ಸುನ್ ಬರಮಾಡಿಕೊಂಡರು. 2 ದೇಶಗಳ ಮಧ್ಯೆ ಮುಕ್ತವ್ಯಾಪಾರ ಒಪ್ಪಂದ ಏರ್ಪಡಲಿದೆ. ಈ ಭೇಟಿ ಐತಿಹಾಸಿಕವಾಗಿದ್ದು, ನಾಲ್ಕು ದಶಕಗಳಲ್ಲಿ ನ್ಯೂಜಿಲೆಂಡ್‌ಗೆ ಪ್ರಧಾನಿಯವರ ಮೊದಲ ಭೇಟಿ ಇದಾಗಿದೆ. ಪ್ರಧಾನಿ ಲಕ್ಸನ್ …
Read More »
Laxmi News 24×7