Breaking News

Daily Archives: ಜುಲೈ 13, 2026

ಸೌಜನ್ಯ ಪ್ರಕರಣ ಬಳಸಿ ಸಾರ್ವಜನಿಕ ಭಾವನೆ ಕೆರಳಿಸಲು ಯತ್ನ – ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ತರಾಟೆ

ನವದೆಹಲಿ: ಗಡಿಪಾರು  ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ  ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್  ವಜಾ ಮಾಡಿದ್ದು, ಕಾನೂನು ಪ್ರಕಾರ ಸೂಕ್ತ ಸಕ್ಷಮ ಪ್ರಾಧಿಕಾರವನ್ನೇ ಸಂಪರ್ಕಿಸುವಂತೆ ನಿರ್ದೇಶಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಸಂಜಯ್ ಕುಮಾರ್ ನೇತೃತ್ವದ ದ್ವಿ ಸದಸ್ಯ ಪೀಠ ಮಹೇಶ್ ಶೆಟ್ಟಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಉಚ್ಚ ನ್ಯಾಯಾಲಯ ಈಗಾಗಲೇ ವಜಾಗೊಳಿಸಿರುವುದನ್ನು ಪ್ರಸ್ತಾಪಿಸಿತು. ಲಭ್ಯವಿರುವ ಶಾಸನಬದ್ಧ ಪರಿಹಾರಗಳನ್ನು ಬಳಸಿಕೊಳ್ಳುವ ಬದಲು ನೇರವಾಗಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವುದರ ಕುರಿತು …

Read More »

ರಾಜ್ಯದ 13 ರೋಪ್‌ವೇ ಯೋಜನೆಗಳ ಅನುಷ್ಠಾನಕ್ಕೆ ವೇಗ ನೀಡಿ: ಕೆ.ಜೆ. ಜಾರ್ಜ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತಾಪಿಸಲಾಗಿರುವ 13 ರೋಪ್‌ವೇ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಇಂಧನ ಹಾಗೂ ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್  ಅವರು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಕೆ.ವಿ. ತ್ರಿಲೋಕ್ ಚಂದ್ರ, ಆಯುಕ್ತರಾದ ಡಾ. ವಿ. ರಾಮ್ ಪ್ರಸಾತ್ ಮನೋಹರ್, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ  ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ …

Read More »

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟ ಟೆಕ್ಕಿ

ರಾಯ್ಪುರ: ಸಾಫ್ಟ್‌ವೇರ್ ಎಂಜಿನಿಯರ್  ಒಬ್ಬ ತನ್ನ ಪ್ರಿಯತಮೆಯನ್ನು ಚಾಕುವಿನಿಂದ ಬರ್ಬರವಾಗಿ ಹತ್ಯೆಗೈದು ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ  ನಡೆದಿದೆ. ಮೃತರನ್ನು ಛತ್ತೀಸ್‌ಗಢದ  ಭಿಲಾಯಿ ಮೂಲದ ಶ್ರೇಷ್ಠ್ ಮಲಿಕ್ (25) ಹಾಗೂ ಉತ್ತರ ಪ್ರದೇಶದ ಸೀತಾಪುರ ಮೂಲದ ಇಶಾರಾ ಆಯೂಬಿ (25) ಎಂದು ಗುರುತಿಸಲಾಗಿದೆ. ಇಬ್ಬರೂ ಗುರುಗ್ರಾಮದ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಎಂಜಿನಿಯರ್‌ಗಳಾಗಿ ಕೆಲಸ ಮಾಡುತ್ತಿದ್ದರು. ಇಶಾರಾ ಅವರ ಕುಟುಂಬದವರು ಹಲವು ಬಾರಿ ಕರೆ ಮಾಡಿದರೂ …

Read More »

ಮತದಾರರಿಗೆ ಹಣ ಹಂಚಲು 10 ಕೋಟಿ ರೂ. ಸಂಗ್ರಹ ಆರೋಪ; ಸುಧಾಕರ್ ಪ್ರಕರಣದ ವಿಚಾರಣೆ ಮುಂದೂಡಿಕೆ

ನವದೆಹಲಿ: ಲೋಕಸಭೆ ಚುನಾವಣೆ ವೇಳೆ ಮತದಾರರಿಗೆ ಹಂಚಲು ಸುಮಾರು 10 ಕೋಟಿ ರೂ. ಹಣವನ್ನು ಸಂಗ್ರಹಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ವಿರುದ್ಧದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಹಾಗೂ ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ಪೀಠ ಪ್ರಕರಣದ ವಿಚಾರಣೆ ನಡೆಸಿತು. ಈ ಹಿಂದೆ ನಡೆದ ವಿಚಾರಣೆಯಲ್ಲಿ ಸಂಸದ ಡಾ. ಕೆ. ಸುಧಾಕರ್ ಅವರಿಗೆ …

Read More »

ಅಯೋಧ್ಯೆ ಶ್ರೀರಾಮ ಮಂದಿರ‌ ಟ್ರಸ್ಟ್‌ ಸಿಇಒ ಹುದ್ದೆಗೆ ಅರ್ಜಿ ಆಹ್ವಾನ – ಆಕರ್ಷಕ ವೇತನ, ಬಂಗಲೆ ಸೌಲಭ್ಯ!

ಅಯೋಧ್ಯೆ: ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಇತ್ತೀಚೆಗಷ್ಟೇ ಹೊಸ ಸಾರಥಿ ಬಂದಿದ್ದಾರೆ. ರಾಮ ಮಂದಿರದ ಹುಂಡಿ ಹಣ ಲೂಟಿ ಹಗರಣದ ನೈತಿಕ ಹೊಣೆ ಹೊತ್ತು ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ ನೀಡಿದ ಬೆನ್ನಲ್ಲೇ ತಾತ್ಕಾಲಿಕ ಪ್ರಧಾನ ಕಾರ್ಯದರ್ಶಿಯನ್ನಾಗಿ ನಿವೃತ್ತ ಐಎಫ್‌ಎಸ್ ಅಧಿಕಾರಿ ಕೃಷ್ಣಮೋಹನ್  ಅವರನ್ನು ನೇಮಕ ಮಾಡಲಾಗಿದೆ. ಇದಾದ ಒಂದೇ ವಾರದಲ್ಲಿ ರಾಮಮಂದಿರ ಟ್ರಸ್ಟ್‌ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಮೊದಲ ಬಾರಿಗೆ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ …

Read More »

ಮದುವೆಯಾದ ನಾಲ್ಕೇ ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ದಾರುಣ ಘಟನೆ ಸಂಭವಿಸಿದ್ದು, ಮದುವೆಯಾಗಿ ಕೇವಲ ನಾಲ್ಕು ತಿಂಗಳಾಗಿದ್ದ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಮೂಲದ ಶ್ವೇತಾ (25) ಮೃತಪಟ್ಟ ದುರ್ದೈವಿ. ಇವರು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ವಾಸವಾಗಿದ್ದರು ಹಾಗೂ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತ ಶ್ವೇತಾ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿದ ಯುವಕನ ಕೈಹಿಡಿದು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, …

Read More »

ವ್ಯಸನ ಮುಕ್ತ ಕೇಂದ್ರದಲ್ಲಿ ನೇಣಿಗೆ ಶರಣಾದ ಕಾನ್ಸ್‌ಟೇಬಲ್‌

ಕೊಪ್ಪಳ: ವ್ಯಸನ ಮುಕ್ತ ಕೇಂದ್ರಕ್ಕೆ ದಾಖಲಾಗಿದ್ದ ಪೊಲೀಸ್ ಪೇದೆಯೊಬ್ಬರು ನೇಣಿಗೆ ಶರಣಾದ ಘಟನೆ ಕುಷ್ಟಗಿಯಲ್ಲಿ  ನಡೆದಿದೆ. ಶರಣಪ್ಪ ಉಪ್ಪಾರ (49) ನೇಣಿಗೆ ಶರಣಾದ ಪೊಲೀಸ್ ಪೇದೆ. ಇವರು ಮುನಿರಾಬಾದ್ ಐಆರ್‌ಬಿಯಲ್ಲಿ ಕೆಲಸ ಮಾಡುತ್ತಿದ್ದರು. ಮದ್ಯ ವ್ಯಸನಕ್ಕೆ ದಾಸರಾಗಿದ್ದರು ಎಂದು ತಿಳಿದುಬಂದಿದೆ. ಎರಡು ದಿನಗಳ ಹಿಂದೆ ಅವರು ವ್ಯಸನಮುಕ್ತ ಕೇಂದ್ರದಿಂದ ಮನೆಗೆ ಕರೆದುಕೊಂಡು ಹೋಗುವಂತೆ ಪತ್ನಿಗೆ ಕರೆ ಮಾಡಿದ್ದರು. ಮನೆಗೆ ಕರೆದುಕೊಂಡು ಹೋಗದೇ ಇದ್ದಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ …

Read More »

ಪತಿ, ನಾದಿನಿಯನ್ನು ಸುಮ್ಮನೆ ಬಿಡಬೇಡ – ಮದುವೆಯಾದ ನಾಲ್ಕೇ ತಿಂಗಳಿಗೆ ಶಿಕ್ಷಕಿ ಆತ್ಮಹತ್ಯೆ

ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸಂಭವಿಸಿದೆ. ಆತ್ಮಹತ್ಯೆಗೂ ಮುನ್ನ ಆಕೆ ಬರೆದಿಟ್ಟಿರುವ ಡೆತ್‌ನೋಟ್ ಈಗ ಲಭ್ಯವಾಗಿದ್ದು, ಅದರಲ್ಲಿ ಪತಿ ಹಾಗೂ ಪತಿಯ ಅಕ್ಕನ ಕಿರುಕುಳದ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಚಿಕ್ಕಮಗಳೂರು ಮೂಲದ ಶ್ವೇತಾ (25) ಮೃತಪಟ್ಟ ದುರ್ದೈವಿ. ಇವರು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ವಾಸವಾಗಿದ್ದರು ಹಾಗೂ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ನಾಲ್ಕು ತಿಂಗಳ …

Read More »