Breaking News

Daily Archives: ಜುಲೈ 15, 2026

ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು – ಪರಾರಿಯಾಗಿದ್ದ ಆರೋಪಿ ಅರೆಸ್ಟ್ ವೇಳೆ ಪೊಲೀಸರಿಂದ ಫೈರಿಂಗ್

ಕಲಬುರಗಿ: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಬಂದಿದೆ. ನಿನ್ನೆಯಷ್ಟೇ ಪರಾರಿಯಾಗಿದ್ದ ಆರೋಪಿಯನ್ನು ಅರೆಸ್ಟ್ ಮಾಡುವಾಗ ಹಲ್ಲೆಗೆ ಯತ್ನಿಸಿದ್ದು, ಈ ವೇಳೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರಾರಿಯಾಗಿದ್ದ ಮೂರು ಜನ ಆರೋಪಿಗಳ ಪತ್ತೆಗಾಗಿ ಕಲಬುರಗಿ ನಗರ, ಎಸ್‌ಪಿ ಹಾಗೂ ಬೀದರ್ ಪೊಲೀಸರ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಅದರಂತೆ ಸಂತೋಷ್ ಎಂಬ ಕೈದಿ ಕಪನೂರ್ ಇಂಡಸ್ಡ್ರಿಯಲ್ ಏರಿಯಾದಲ್ಲಿ ಇರುವ ಖಚಿತ ಮಾಹಿತಿ …

Read More »

ಕರ್ನಾಟಕಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ – ಮೋದಿಗೆ ಪತ್ರ ಬರೆದು ಸಿಎಂ ಡಿಕೆಶಿ ಮನವಿ

ಬೆಂಗಳೂರು: ಎಲ್ ನೀನೋ  ಪರಿಣಾಮದಿಂದಾಗಿ ಕರ್ನಾಟಕ  ರಾಜ್ಯದಲ್ಲಿ ಶೇ. 30ರಷ್ಟು (ಜು.11ರ ಮಾಹಿತಿ) ಮಳೆ ಕೊರತೆಯಾಗಿದ್ದು, ರಾಜ್ಯದಲ್ಲಿನ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ಸರ್ಕಾರ ತಂಡ ನಿಯೋಜಿಸಬೇಕು ಎಂದು ಸಿಎಂ ಡಿ.ಕೆ ಶಿವಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿನ ಮಳೆ ಕೊರತೆ ಕುರಿತಂತೆ ಶಿವಕುಮಾರ್ ಅವರು ಪ್ರಧಾನಮಂತ್ರಿಗಳಿಗೆ ಪತ್ರ ಬರೆದು ಪರಿಸ್ಥಿತಿ ವಿವರಿಸಿದ್ದಾರೆ. ಕೇಂದ್ರ ಸರ್ಕಾರ ನಿಯೋಜಿತ ತಂಡದ ಭೇಟಿಯೂ ಉದ್ಭವಿಸುತ್ತಿರುವ ಬರ ಪರಿಸ್ಥಿತಿಯ ತೀವ್ರತೆಯನ್ನು …

Read More »

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ತಲೆದಂಡವಾಗಿದ್ದ ಮೂವರು ಐಪಿಎಸ್ ಅಧಿಕಾರಿಗಳಿಗೆ ಬಿಗ್ ರಿಲೀಫ್

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ  ಬಳಿ ಕಾಲ್ತುಳಿತ  ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆದಂಡವಾಗಿದ್ದ ಮೂವರು ಐಪಿಎಸ್  ಅಧಿಕಾರಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಮೂವರು ಅಧಿಕಾರಿಗಳ ವಿರುದ್ಧದ ಇಲಾಖಾ ತನಿಖೆಯನ್ನು ಸರ್ಕಾರ ಕೈಬಿಟ್ಟಿದೆ. ಈ ಹಿಂದೆ ಪ್ರಕರಣ ಸಂಬಂಧ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಆದೇಶವನ್ನು ಹಿಂಪಡೆದಿದ್ದ ಸರ್ಕಾರ, ಬಳಿಕ ಇಲಾಖಾ ತನಿಖೆಗೆ ಆದೇಶಿಸಿತ್ತು. ಅದರಂತೆ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ, ಅವರಿಂದ ಲಿಖಿತ ಹಾಗೂ ಮೌಖಿಕ ವಿವರಣೆ …

Read More »

ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಉಗ್ರನಿಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರು: ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಉಗ್ರನಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಎನ್‌ಐಎ ಕೋರ್ಟ್‌  ತೀರ್ಪು ನೀಡಿದೆ. ಪ್ರಮುಖ ಆರೋಪಿ ಮೊಹಮ್ಮದ್ ಹನೀಫ್ ಖಾನ್‌ಗೆ ಕೋರ್ಟ್‌ ಶಿಕ್ಷೆ ವಿಧಿಸಿದೆ. 2020 ರಂದು ರಾಜ್ಯ ಪೊಲೀಸರು ಪ್ರಕರಣ‌ ದಾಖಲಿಸಿಕೊಂಡಿದ್ದರು. ನಂತರ ಎನ್‌ಐಎ ಎಂಟ್ರಿಯಾಗಿ ಒಟ್ಟು 20 ಆರೋಪಿಗಳನ್ನು ಬಂಧಿಸಿತ್ತು. ಬಂಧನ ಮಾಡಿ ದೋಷಾರೋಪಣೆ ಪಟ್ಟಿ ಸಲ್ಲಿಕೆ ಮಾಡಿತ್ತು. ಇದರಲ್ಲಿ ಪ್ರಮುಖ ಆರೋಪಿ ಮೊಹಮ್ಮದ್ ಹನೀಫ್ ಖಾನ್ ಜೀವಾವಧಿ …

Read More »

ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ದಂಪತಿ ಸಾವು

ಬೆಳಗಾವಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ದಂಪತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ನಾಗನೂರ ಗ್ರಾಮದ ಮುತ್ತಪ್ಪ ಶ್ರೀಶೈಲ ಮುಗೋಳಖೋಡ (42), ಪತ್ನಿ ರಾಜಶ್ರೀ ಮುಗೋಳಖೋಡ (36) ಮೃತ ದುರ್ದೈವಿಗಳು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ದಂಪತಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮೂಡಲಗಿ ಪೊಲೀಸ್ …

Read More »

ಮನೆ ಮನೆಗೆ ಹೋಗದೆ ಒಂದೇ ಕಡೆ ಕುಳಿತು SIR ಪ್ರಕ್ರಿಯೆ; BLOಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಚಿಕ್ಕೋಡಿ: ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಿದ್ದ SIR  ಪ್ರಕ್ರಿಯೆಯನ್ನು ಒಂದೇ ಸ್ಥಳದಲ್ಲಿ ಕುಳಿತು ನಡೆಸಲಾಗುತ್ತಿದೆ ಎಂಬ ಆರೋಪ ಬೆಳಗಾವಿ  ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಕೇಳಿಬಂದಿದೆ. ಸಂಕೇಶ್ವರ ಪಟ್ಟಣದಲ್ಲಿ ಕೆಲವು BLO ಅಧಿಕಾರಿಗಳು ಮನೆ ಮನೆಗೆ ತೆರಳದೆ ಸಮುದಾಯ ಭವನದಲ್ಲೇ ಕುಳಿತು SIR ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಸರ್ಕಾರದ ನಿಯಮದಂತೆ ಮಾಹಿತಿ ಸಂಗ್ರಹಿಸದೆ, ಫೋನ್ ಕರೆ ಮೂಲಕ ಮಾಹಿತಿ ಪಡೆದು ಫಾರ್ಮ್ ಭರ್ತಿ ಮಾಡಲಾಗುತ್ತಿದೆ …

Read More »

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಜೀವ ಉಳಿಸಿಕೊಳ್ಳಲು ವಾರ್ಡ್‌ನಿಂದ ಓಡಿದ ರೋಗಿಗಳು

ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಏಕಾಏಕಿ ಅಗ್ನಿ ಅವಘಡ ಸಂಭವಿಸಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಆಪರೇಷನ್ ಥಿಯೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆ ಆವರಿಸುತ್ತಿದ್ದಂತೆ ಜೀವ ಉಳಿಸಿಕೊಳ್ಳಲು ರೋಗಿಗಳು ಆಸ್ಪತ್ರೆಯಿಂದ ಹೊರಗೆ ಓಡಿಬಂದಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹೊಗೆ ಕಾಣಿಸುತ್ತಿದ್ದಂತೆಯೇ ಆಸ್ಪತ್ರೆ ಸಿಬ್ಬಂದಿ ಕೆಳ ಮಹಡಿಯಲ್ಲಿದ್ದ ರೋಗಿಗಳನ್ನು ಸುರಕ್ಷಿತವಾಗಿ ಹೊರಗೆ ಸ್ಥಳಾಂತರಿಸಿದ್ದಾರೆ. ಇದರಿಂದ ಆಸ್ಪತ್ರೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. …

Read More »

ಕಸ ವಿಲೇವಾರಿ ವಾಹನಗಳ ಮಧ್ಯೆ ಅಪಘಾತ – ಪೌರ ಕಾರ್ಮಿಕ ಸಾವು

ಕೋಲಾರ: ಕಸ ವಿಲೇವಾರಿ ಕಾರ್ಯ ನಡೆಸುತ್ತಿದ್ದ ವೇಳೆ ಪುರಸಭೆಯ ಕಸ ವಿಲೇವಾರಿ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಪೌರಕಾರ್ಮಿಕ  ಮೃತಪಟ್ಟಿದ್ದು, ಮತ್ತೋರ್ವ ಮಹಿಳಾ ಪೌರಕಾರ್ಮಿಕರು ಗಾಯಗೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ  ಪಟ್ಟಣದ ಇಂದಿರಾನಗರದಲ್ಲಿ ಅಪಘಾತದಲ್ಲಿ ಪೌರ ಕಾರ್ಮಿಕರಾದ ಸಂಪತ್ (35) ಹಾಗೂ ಭೂಲಕ್ಷ್ಮಿ ಗಾಯಗೊಂಡಿದ್ದು, ಇಬ್ಬರನ್ನೂ ತಕ್ಷಣ ಶ್ರೀನಿವಾಸಪುರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಸಂಪತ್ ಅವರ ಸ್ಥಿತಿ ಗಂಭೀರವಾಗಿದ್ದ …

Read More »

ಜಿಬಿಎ ಚುನಾವಣೆ ಮುಂದೂಡಿಕೆ ಅರ್ಜಿ – ಜು.17ರಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

ನವದೆಹಲಿ: ಜಿಬಿಎ  ಚುನಾವಣೆ ನಡೆಸಲು ಡಿ.31ರವರೆಗೆ ಕಾಲಾವಕಾಶ ನೀಡುವಂತೆ ಕರ್ನಾಟಕ ಸರ್ಕಾರ  ಹಾಗೂ ಗ್ರೇಟರ್ ಬೆಂಗಳೂರು ಅಥಾರಿಟಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಜುಲೈ 17ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ಜಿಬಿಎ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅರ್ಜಿಯನ್ನು ಉಲ್ಲೇಖಿಸಿ, ಜುಲೈ 17ರಂದು ನಿಗದಿಯಾಗಿರುವ ವಿಚಾರಣೆಯನ್ನು ಪಟ್ಟಿಯಿಂದ ಕೈಬಿಡದಂತೆ ಮನವಿ ಮಾಡಿದರು. ಇದಕ್ಕೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಹಾಗೂ …

Read More »

ಆಸ್ತಿ ತೆರಿಗೆ ಹೆಚ್ಚಿಸಲ್ಲ: ಕೃಷ್ಣ ಬೈರೇಗೌಡ

ಬೆಂಗಳೂರು: ಸಿಲಿಕಾನ್ ಸಿಟಿ ಜನರಿಗೆ ಬೆಂಗಳೂರು  ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಗುಡ್‌ನ್ಯೂಸ್ ನೀಡಿದ್ದು, ಆಸ್ತಿ ತೆರಿಗೆ ಹೆಚ್ಚಿಸಲ್ಲ ಎಂದಿದ್ದಾರೆ. ಜಿಬಿಎ ಅಧಿಕಾರಿಗಳೊಂದಿಗೆ ನಡೆದ ಸಭೆ ಬಳಿಕ ಮಾತನಾಡಿದ ಅವರು, ಆಸ್ತಿ ತೆರಿಗೆ ಹೆಚ್ಚಳ ಮಾಡಲ್ಲ. ಬೆಂಗಳೂರಿನಲ್ಲಿ ಒಟ್ಟು 36 ಲಕ್ಷ ಆಸ್ತಿದಾರರು ಇದ್ದು, ಅದರಲ್ಲಿ 16 ಲಕ್ಷ ಆಸ್ತಿದಾರರು ತೆರಿಗೆ ಕಟ್ಟುತ್ತಿದ್ದಾರೆ. ಉಳಿದ ಅರ್ಧದಷ್ಟು ಮಂದಿ ಆಸ್ತಿ ತೆರಿಗೆ ಕಟ್ಟುತ್ತಿಲ್ಲ. ಹೀಗಾಗಿ ತೆರಿಗೆ ಕಟ್ಟದೇ ಸರ್ಕಾರಕ್ಕೆ ವಂಚಿಸುತ್ತಿರುವ 16 ಲಕ್ಷ …

Read More »