Breaking News

Daily Archives: ಜುಲೈ 16, 2026

78 ಕೋಟಿ ಭ್ರಷ್ಟಾಚಾರ ಆರೋಪ ಕೇಸ್‌ – ಕೊಪ್ಪಳದ KRIDL ಕಾರ್ಯನಿರ್ವಾಹಕ ಎಂಜಿನಿಯರ್ ಅರೆಸ್ಟ್‌

ಕೊಪ್ಪಳ: ವಿವಿಧ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆಸಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತದ  ಕಾರ್ಯನಿರ್ವಾಹಕ ಎಂಜಿನಿಯರ್ ಅವರನ್ನ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಝರಣಪ್ಪ ಎಂ. ಚಿಂಚೋಳಿಕರ್ ಬಂಧಿತ ಆರೋಪಿ. ಇಲಾಖೆಯಲ್ಲಿ ಗ್ರೂಪ್ ಲೀಡರ್ ಆಗಿದ್ದ ದೇವರಾಜ ರೇಷ್ಮೆ ಎಂಬುವರನ್ನೂ ಬಂಧಿಸಿ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೊಪ್ಪಳದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವನ್ನು ʻಪಬ್ಲಿಕ್ ಟಿವಿʼ ಬಯಲಿಗೆಳೆದಿತ್ತು. ಕೆಆರ್‌ಐಡಿಎಲ್ ಅಕ್ರಮದ ಬಗ್ಗೆ ಪಬ್ಲಿಕ್ ಟಿವಿ ನಿರಂತರ …

Read More »

ಶಿಥಿಲಗೊಂಡ ಶಾಲಾ ಕಟ್ಟಡದಲ್ಲಿಯೇ ಮಕ್ಕಳಿಗೆ ಶಿಕ್ಷಣ

ಬೆಳಗಾವಿ ಚಿಕ್ಕೋಡಿ ಶಿಕ್ಷಣ ಜಿಲ್ಲೆಯಲ್ಲಿ 1,438 ಶಾಲಾ ಕೊಠಡಿಗಳು ಶಿಥಿಲಗೊಂಡು, ಬೀಳುವ ಹಂತ ತಲುಪಿದರೂ ಕೈಗೊಳ್ಳದೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಪಾಲಕರು ಮಕ್ಕಳಿಗೆ ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿರುವುದು ಒಂದೆಡೆಯಾದರೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಹಿನ್ನಡೆ ಆಗಿರುವುದು ಮತ್ತೊಂದೆಡೆ. ಕೆಲ ಕೊಠಡಿಗಳ ಮೇಲ್ಛಾವಣಿ, ನೆಲಹಾಸು ಹಾಳಾಗಿವೆ. ಕಿಟಕಿ, ಬಾಗಿಲು ಮುರಿದಿವೆ. ಜಿಟಿಜಿಟಿ ಮಳೆಯಾದರೂ ಸಾಕು ಕೆಲ ಕೊಠಡಿಗಳು ಸೊರಿವೆ. ಗೋಡೆಗಳು ಬಿರುಕು ಬಿಟ್ಟಿವೆ. ಕೆಲ ಶಾಲೆಗಳ ಸ್ಥಿತಿಯಂತೂ ಹೇಳತೀರದ್ದಾಗಿದೆ. ಇಂತಹ ಕೊಠಡಿಗಳಲ್ಲೇ …

Read More »

ಡ್ರಗ್ಸ್ ಜಾಲ ಪತ್ತೆ ಪ್ರಕರಣ, ಬೆಳಗಾವಿ ವಿಭಾಗದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ

ವಿಜಯಪುರ: ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಸಂಕಲ್ಪ ಮಾಡಿರುವ ಆರಕ್ಷಕರ ಅಭಿಯಾನಕ್ಕೆ ಸಾರ್ವಜನಿಕರಿಂದ ವ್ಯಾಪಕ ಸ್ಪಂದನೆ ವ್ಯಕ್ತವಾಗಿದ್ದು, ಕಳೆದ ವರ್ಷ ಹಾಗೂ ಪ್ರಸಕ್ತ ಸಾಲಿನಲ್ಲಿ ಜೂನ್ ಅಂತ್ಯದವರೆಗೆ 98,76,720 ರೂ. ಮೌಲ್ಯದ ಮಾದಕ ದ್ರವ್ಯಗಳನ್ನು ಜಪ್ತು ಮಾಡಿ ಒಟ್ಟು 79 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಬೆಳಗಾವಿ ಉತ್ತರ ವಲಯದ ಪೊಲೀಸ್ ಮಹಾ ನಿರೀಕ್ಷಕ ಸಂದೀಪ ಪಾಟೀಲ ಮಾಹಿತಿ ತಿಳಿಸಿದರು. ಬೆಳಗಾವಿ ವಿಭಾಗದಲ್ಲಿ ಡ್ರಗ್ಸ್ ಭೇದಿಸುವ ಪ್ರಕರಣದಲ್ಲಿ ವಿಜಯಪುರ …

Read More »

ಮುಂಬರುವ ಚುನಾವಣೆ ಎದುರಿಸಲು ಸಜ್ಜಾಗಿ: ಭೈರತಿ ಬಸವರಾಜ

ಬೆಳಗಾವಿ: ರಾಜ್ಯದಲ್ಲಿ ಪಕ್ಷ ತಳಮಟ್ಟದಿಂದ ಸಂಘಟನೆಯ ಜತೆಗೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಎದುರಿಸಲು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ವಾರ್ಡ್, ಬೂತ ಮಟ್ಟದಿಂದಲೇ ಕಾರ್ಯಕರ್ತರನ್ನು ಸಂಘಟಿತರನ್ನಾಗಿ ಮಾಡಬೇಕು ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಭೈರತಿ ಬಸವರಾಜ ಹೇಳಿದರು. ನಗರದ ಬಿಜೆಪಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಿಜೆಪಿ ಸಂಘಟನಾತ್ಮಕ ಸಭೆಯಲ್ಲಿ ಮಾತನಾಡಿ, ಪಕ್ಷದ ತಾಲೂಕು, ಜಿಲ್ಲಾ ಹಾಗೂ ವಿಧಾನ ಮಂಡಲ ಮಟ್ಟದ ಮುಖಂಡರು ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿ …

Read More »

ಜಾನುವಾರುಗಳನ್ನು ರಸ್ತೆಗಿಳಿಸಿ ರೈತರ ಪ್ರತಿಭಟನಾ ಮೆರವಣಿಗೆ

ಬೆಳಗಾವಿ : ನೀರಾವರಿ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ನೀಡಿದ ಭೂಮಿಗೆ ನ್ಯಾಯಯುತ ಪರಿಹಾರ ಹಾಗೂ ಸೂಕ್ತ ಪುನರ್ವಸತಿಗೆ ಆಗ್ರಹಿಸಿ ಎರಡು ದಿನಗಳಿಂದ ಅನಿರ್ದಿಷ್ಟ ಪ್ರತಿಭಟನೆ ನಡೆಸುತ್ತಿರುವ ಹುಕ್ಕೇರಿ ತಾಲೂಕಿನ ಮಾಸ್ತಿಹೊಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು ಬುಧವಾರ ಜಾನುವಾರುಗಳನ್ನು ರಸ್ತೆಗಿಳಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಂಗಳವಾರದಿಂದ ನೀರಾವರಿ ನಿಗಮದ ಆವರಣದಲ್ಲೇ ವಾಸ್ತವ್ಯ ಹೂಡಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಮಾಸ್ತ್ತಿಹೊಳಿ, ಗುಡಗನಟ್ಟಿ, ಬೀರನಹೊಳಿ, ಸುತಗಟ್ಟಿ ಹಾಗೂ ಜಾರಕಿಹೊಳಿ ಗ್ರಾಮಗಳ 500ಕ್ಕೂ ಹೆಚ್ಚು ರೈತರು …

Read More »

ಹಿರೇಬಾಗೇವಾಡಿಯಲ್ಲಿ ಕೆಳ ಸೇತುವೆ ನಿರ್ಮಾಣ ಸಂಸದ ಜಗದೀಶ ಶೆಟ್ಟರ ಸೂಚನೆ

ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ರೈಲ್ವೆ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಜಗದೀಶ ಶೆಟ್ಟರ್ ಸಭೆ ನಡೆಸಿದರು. ಭುವನೇಶ ಕುಮಾರ, ಈರಣ್ಣ ರೊಟ್ಟಿ ಇತರರಿದ್ದರು. ಬೆಳಗಾವಿ: ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ಬಸವೇಶ್ವರ ವೃತ್ತದ ಸಮೀಪ ಸಾರ್ವಜನಿಕರ ಅನುಕೂಲಕ್ಕಾಗಿ ಕೆಳ ಸೇತುವೆ (ಅಂಡರ್‌ಪಾಸ) ನಿರ್ಮಾಣ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸಂಸದ ಜಗದೀಶ ಶೆಟ್ಟರ ಸೂಚನೆ ನೀಡಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ  ಈಚೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಹಿರೇಬಾಗೇವಾಡಿ ಗ್ರಾಮದ …

Read More »

ಅಕ್ಕ ಕೆಫೆ ಬೆಳಗಾವಿ ಮಹಾನಗರ ಪಾಲಿಕೆ ಸೇರಿ ಜಿಲ್ಲೆಯ್ಯದ್ಯಂತ ವಿಸ್ತರಣೆಗೆ ಸಿದ್ಧತೆ

ಜನ ಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಉತ್ತಮ ಗುಣಮಟ್ಟದ ಆಹಾರ, ದುಡಿಯುವ ಮಹಿಳೆಯರ ಕೈಗೆ ಕೆಲಸ ನೀಡುವ ಉದ್ದೇಶದಿಂದ ಆರಂಭಗೊಂಡಿರುವ ‘ಅಕ್ಕ ಕೆಫೆ’ ಬೆಳಗಾವಿ ಮಹಾನಗರ ಪಾಲಿಕೆ ಸೇರಿ ಜಿಲ್ಲೆಯ್ಯದ್ಯಂತ ವಿಸ್ತರಣೆಗೆ ಸರ್ಕಾರ ಮುಂದಾಗಿದೆ. ಹೌದು.ಮಹಿಳಾ ಸ್ವಸಹಾಯ ಸಂಘಗಳನ್ನು ( ಸಂಜೀವಿನಿ) ಹೋಟೆಲ್ ಉದ್ದಿಮೆಯಲ್ಲಿ ತೊಡಗಿಸಿ ಉತ್ತೇಜಿಸಲು ಮತ್ತು ಆರ್ಥಿಕ ಸ್ವಾವಲಂಬನೆಗೆ ನೆರವಾಗುವ ಉದ್ದೇಶದಿಂದ ಕರ್ನಾಟಕ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ರಾಷ್ಟ್ರೀಯ ಜೀವನೋಪಾಯ ಮಿಷನ್ (ಎನ್‌ಎಲ್‌ಎಂ)  ಆರಂಭಿಸಿರುವ …

Read More »

ದೇವಸ್ಥಾನದ ಬೆಳ್ಳಿ ಮೂರ್ತಿ, ಆಭರಣ ಕದಿಯುತ್ತಿದ್ದವರ ಬಂಧನ

ಬೆಳಗಾವಿ : ದೇವಸ್ಥಾನಗಳನ್ನೇ ಗುರಿಯಾಗಿಸಿಕೊಂಡು, ದೇವರ ಬೆಳ್ಳಿ ಮೂರ್ತಿ, ಆಭರಣ, ಗಂಟೆಯನ್ನೂ ಬಿಡದೇ ಕದಿಯುತ್ತಿದ್ದ ಕಳ್ಳರ ತಂಡವೊಂದನ್ನು ಬಂಧಿಸಿರುವ ಹಾರೂಗೇರಿ ಠಾಣೆ ಪೊಲೀಸರು  25.89 ಲಕ್ಷ ರೂ. ಮೌಲ್ಯದ ಮೂರ್ತಿ ಮತ್ತು ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಥಣಿ ತಾಲೂಕಿನ ಅಡಳಹಟ್ಟಿಯ ವಿಜಯ ಗುಡದಿನ್ನಿ, ಕಲ್ಮೇಶ ಮೂರಾಬಟ್ಟಿ, ಶಿವಾನಂದ ಚಿಕ್ಕಟ್ಟಿ, ಸಂಗಮೇಶ ಐನಾಪೂರ ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು …

Read More »

ಸ್ಮಾರ್ಟ್ ಸಿಟಿಯ ಸಿಟೀಸ್ 2.0 ಅನುಷ್ಠಾನ

ಬೆಳಗಾವಿ:  ಇಲ್ಲಿನ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬುಧವಾರ ಸ್ಮಾರ್ಟ್ ಸಿಟಿ-2 ಯೋಜನೆ ಅನುಷ್ಠಾನ ಕುರಿತು ಮೇಯರ್ ಪ್ರೀತಿ ಕಾಮಕರ್, ಉಪಮೇಯರ್ ಹನಮಂತ ಕೊಂಗಾಲಿ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು. ಘನ ತ್ಯಾಜ್ಯ ಸಂಸ್ಕರಣ ಘಟಕ ಸೇರಿದಂತೆ ಕ್ರಿಯಾಯೋಜನೆಗೊಳಪಡುವ  ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿ, ಇ ತ್ಯಾಜ್ಯ ಸಂಗ್ರಹಣ ಘಟಕ, ಯಂತ್ರಗಳು, ವಾಹನಗಳು ಹಾಗೂ ಮಾನವ ಸಂಪನ್ಮೂಲದ ಅಗತ್ಯತೆ ಸೇರಿದಂತೆ ಮುಂತಾದ ಸಂಪನ್ಮೂಲಗಳ ಕುರಿತು ಚರ್ಚಿಸಲಾಯಿತು. ಪಾಲಿಕೆ ಆಯುಕ್ತ ಕಾರ್ತಿಕ ಎಂ., ಆಡಳಿತ …

Read More »

ನೀಟ್ ಪರೀಕ್ಷೆ ರದ್ದುಗೊಳಿಸಿ ಸಿಇಟಿ ಮರು ಜಾರಿಗೆ ಒತ್ತಾಯ

ದಾವಣಗೆರೆ : ಕೇಂದ್ರ ಸರ್ಕಾರ ವೈದ್ಯಕೀಯ ಕೋರ್ಸ್‌ಗಳಿಗೆ ನಡೆಸುತ್ತಿರುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ರದ್ದುಗೊಳಿಸಿ, ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನೇ ಮರು ಜಾರಿಗೆ ತರಬೇಕು ಎಂದು ಆಗ್ರಹಿಸಿ ಎನ್‌ಎಸ್‌ಯುಐ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.  ಜಯದೇವ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.  ಈ ಸಂದರ್ಭದಲ್ಲಿ ಶಾಸಕ ಸಮರ್ಥ್ ಶಾಮನೂರು ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ, …

Read More »