Breaking News

Daily Archives: ಜುಲೈ 18, 2026

ಡಿಸೆಂಬರ್‌ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುತ್ತೇವೆ: ಡಿಕೆ ಶಿವಕುಮಾರ್‌

ಬೆಂಗಳೂರು: ಈ ವರ್ಷ ಡಿಸೆಂಬರ್‌ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್‌  ಹೇಳಿದರು. ಬೆಂಗಳೂರಿನ 5 ಪಾಲಿಕೆಗಳ 369 ವಾರ್ಡ್‌ಗಳಿಗೆ ಚುನಾವಣೆ ನಡೆಸುವ ಗಡುವನ್ನು ಡಿಸೆಂಬರ್ ವರೆಗೆ ವಿಸ್ತರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ  ಮತ್ತು ಕರ್ನಾಟಕ ರಾಜ್ಯ ಚುನಾವಣಾ ಆಯೋಗದಿಂದ ಪ್ರತ್ಯೇಕ ಮನವಿಗಳನ್ನು ಸುಪ್ರೀಂ ಕೋರ್ಟ್ ಅನುಮತಿಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಎಸ್‌ಐಆರ್‌ ನಡೆಯುತ್ತಿರುವ ಹಿನ್ನೆಲೆ ಸಮಯ ಕೇಳಿದ್ದೆವು. ಸುಪ್ರೀಂ …

Read More »

ಮನೆಬಿಟ್ಟು ಬಂದಿದ್ದ ಬಾಲಕಿ ಬೇರೊಬ್ಬನ ಜೊತೆ ಚಾಟಿಂಗ್ ಮಾಡ್ತಿದ್ದಾಳೆಂದು ಗುಂಡಿಕ್ಕಿ ಹತ್ಯೆ!

ರಾಮನಗರ: 16 ವರ್ಷದ ಅಪ್ರಾಪ್ತರ ಪ್ರೀತಿಯಲ್ಲಿ ಮೂಡಿದ ಅನುಮಾನ ಬಾಲಕಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕನಕಪುರ ತಾಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತನ್ನನ್ನೇ ನೆಚ್ಚಿಕೊಂಡು ಮನೆ ಬಿಟ್ಟು ಬಂದಿದ್ದ ಹುಡುಗಿ ಬೇರೊಬ್ಬರ ಜೊತೆ ಸಂಬಂಧ ಹೊಂದಿದ್ದಾಳೆಂದು ಅನುಮಾನಿಸಿದ ಬಾಲಕ, ಆಕೆಯನ್ನು ನಾಡ ಬಂದೂಕಿನಿಂದ ಗುಂಡಿಟ್ಟು ಕೊಂದಿರುವ ಘಟನೆ ಜುಲೈ 10 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಶವವನ್ನು ಮನೆ ಬಳಿಯೇ ಹೂತು ಹಾಕಿ ಬಾಲಕನನ್ನ …

Read More »

ಬೇರೆ ಯಾವ ತೊಂದರೆಯೂ ಇಲ್ಲ, ಉಸಿರಾಟದ ಸಮಸ್ಯೆ ಬಗೆಹರಿಯಬೇಕು: ಪತ್ನಿ ಬಗ್ಗೆ ಹೆಚ್‌ಡಿಡಿ ಮಾತು

ಬೆಂಗಳೂರು: ಪತ್ನಿ ಚೆನ್ನಮ್ಮ ಅವರಿಗೆ ಬೇರೆ ಯಾವ ತೊಂದರೆಯೂ ಇಲ್ಲ, ಉಸಿರಾಟದ ಸಮಸ್ಯೆ ಇದೆ. ಅದೊಂದು ಬಗೆಹರಿಯಬೇಕು ಎಂದು ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು  ಹೇಳಿದ್ದಾರೆ. ಪತ್ನಿ ಆರೋಗ್ಯದ ಬಗ್ಗೆ ಮಾಧ್ಯಮಗಳಿಗೆ ಅವರು ಮಾಹಿತಿ ನೀಡಿದರು. ಈ ವೇಳೆ, ಉಸಿರಾಟದ ಸಮಸ್ಯೆ ಇದೆ ಎಂದು ಬುಧವಾರ (ಜು.15) ಆಸ್ಪತ್ರೆಗೆ ದಾಖಲಿಸಿದ್ದೆವು. ಮೊನ್ನೆ‌ ನಿನ್ನೆ ಇವತ್ತು ಅವರನ್ನು ವಿಚಾರಿಸಿದ್ದೇನೆ. ಅವರ ಹಾರ್ಟ್, ಕಿಡ್ನಿ ಎಲ್ಲಾ ಸರಿಯಾಗಿದೆ. ಲಂಗ್ಸ್ ಸಮಸ್ಯೆ ಇದೆ. ಉಸಿರಟಾದ …

Read More »

ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿರವಾಗಿದೆ: ಆರ್‌. ಅಶೋಕ್‌

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌  ಹೇಳಿದ್ದಾರೆ. ನಗರದ ಮಣಿಪಾಲ್‌ ಆಸ್ಪತ್ರೆಗೆ ಭೇಟಿ ನೀಡಿ ಚೆನ್ನಮ್ಮ ಅವರ ಆರೋಗ್ಯವನ್ನು ಅವರು ವಿಚಾರಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ, ಚೆನ್ನಮ್ಮನವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ವೈದ್ಯರು ಸಹ ಆರೋಗ್ಯ ಸುಧಾರಣೆ ಕಾಣುತ್ತಿದೆ ಎಂದು ತಿಳಿಸಿದ್ದಾರೆ ಎಂದರು. ಚೆನ್ನಮ್ಮ  ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಗರದ …

Read More »

ದ. ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ; ಜು.18 ರಂದು ಶಾಲಾ – ಕಾಲೇಜುಗಳಿಗೆ ರಜೆ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ (ಜುಲೈ 18) ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಈ ಆದೇಶ ಹೊರಡಿಸಿದ್ದಾರೆ. ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ …

Read More »

ರಾಜ್ಯದ ಹಲವೆಡೆ ವರುಣನ ಅಬ್ಬರ – ಅನ್ನದಾತನ ಮೊಗದಲ್ಲಿ ಸಂತಸ

ಬೀದರ್‌: ಜಿಲ್ಲೆಯ  ಹಲವೆಡೆ ಒಂದು ಗಂಟೆಯಿಂದ ಸುರಿದ ಧಾರಾಕಾರ ಮಳೆಗೆ  ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಬೀದರ್, ಹುಮ್ನಾಬಾದ್, ಚಿಟ್ಟಗುಪ್ಪ, ಬಸವಕಲ್ಯಾಣ, ಔರಾದ್ ಸೇರಿದಂತೆ ಜಿಲ್ಲೆಯಾದ್ಯಂತ ಬಿರುಗಾಳಿ, ಸಿಡಿಲು ಸಹಿತ ಮಳೆಯಾಗಿದೆ. ರಾಯಚೂರು: ಮಳೆಯಿಲ್ಲದೆ ಕಂಗೆಟ್ಟಿದ್ದ ಬಿಸಿಲನಾಡು ರಾಯಚೂರು  ಜಿಲ್ಲೆಯಲ್ಲಿ ಕೊನೆಗೂ ಮಳೆರಾಯ ದರ್ಶನ ನೀಡಿದ್ದಾನೆ. ರಾಯಚೂರು ಜಿಲ್ಲೆಯಾದ್ಯಂತ ಗುಡುಗು ಮಿಂಚು ಸಹಿತ ಜೋರು ಮಳೆಯಾಗಿದೆ. ಸುಮಾರು ಒಂದು ಗಂಟೆ ಕಾಲ ಮಳೆ ಸುರಿದಿದೆ. ಮುಂಗಾರು ಆರಂಭವಾದಾಗಿನಿಂದ ಮಳೆ ಬಾರದೇ ರೈತರು …

Read More »

ಅರಣ್ಯ ಸಿಬ್ಬಂದಿ ಮೇಲೆಯೇ ಜೀಪ್‌ ಹತ್ತಿಸಲು ಯತ್ನಿಸಿದ ಆರೋಪ – ಕಳ್ಳ ಬೇಟೆಗಾರರ ಮೇಲೆ ಫೈರಿಂಗ್‌

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಿತಿಮೀರಿದ ಕಳ್ಳಬೇಟೆಗೆ ಕಡಿವಾಣ ಹಾಕಲು ಅರಣ್ಯ ಇಲಾಖೆ ಮುಂದಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿಗಳ ಮೇಲೆಯೇ ಜೀಪ್ ಹತ್ತಿಸಲು ಯತ್ನಿಸಿದ ಆರೋಪದ ಮೇಲೆ ಆತ್ಮರಕ್ಷಣೆಗಾಗಿ ಸಿಬ್ಬಂದಿ ಗುಂಡು ಹಾರಿಸಿದ್ದು, ಇಬ್ಬರು ಕಳ್ಳ ಬೇಟೆಗಾರರು ಗಾಯಗೊಂಡಿದ್ದಾರೆ. ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಕಾಡುಕೋಣ ಬೇಟೆಯಾಡಿ ಜೀಪ್‌ನಲ್ಲಿ ಮಾಂಸ ಸಾಗಿಸುತ್ತಿದ್ದ ಇಬ್ಬರು ಕಳ್ಳಬೇಟೆಗಾರರನ್ನ ಅರಣ್ಯ ಇಲಾಖೆ ಸಿಬ್ಬಂದಿ ತಡೆದಿದ್ದಾರೆ. ಈ ವೇಳೆ ಆರೋಪಿಗಳು ಜೀಪನ್ನು …

Read More »

ಬಟಕುರ್ಕಿ ಇಂದಿರಾಗಾಂಧಿ ವಸತಿ ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಭೇಟಿ

ತಾಲೂಕಿನ ಬಟಕುರ್ಕಿ ಇಂದಿರಾಗಾಂಧಿ ವಸತಿ ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ ಬುಧವಾರ ಭೇಟಿ ನೀಡಿ ಮೂಲಸೌಕರ್ಯ ಹಾಗೂ ವ್ಯವಸ್ಥೆ ಪರಿಶೀಲಿಸಿದರು. ಶಾಲೆಯಲ್ಲಿನ ಬೋಧನಾ ಕೊಠಡಿ, ವಸತಿ ಕಟ್ಟಡ ಹಾಗೂ ವಿಜ್ಞಾನ ಪ್ರಯೋಗಾಲಯ ಸೇರಿದಂತೆ ಮೂಲ ಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಪರಿತಪಿಸುತ್ತಿರುವ ಕುರಿತು ಜು.11ರಂದು “ವಸತಿ ಶಾಲೆಗೆ ಬೇಕು ಸೌಕರ್ಯ’ ಶೀರ್ಷಿಕೆಯಡಿ ವಿಜಯವಾಣಿ ವಿಶೇಷ ವರದಿ ಪ್ರಕಟಿಸಿತ್ತು. ಪರಿಶೀಲನೆ ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಕನ್ನೊಳ್ಳಿ …

Read More »

ಮೀನುಗಾರರ ಜೀವನ ಸುಧಾರಣೆಗೆ ಒತ್ತು

ಸರ್ಕಾರವು ಮೀನುಗಾರರ ಆರ್ಥಿಕ ಸ್ಥಿತಿ ಸುಧಾರಿಸಲು ಮತ್ತು ಸ್ವಾವಲಂಬಿಗಳನ್ನಾಗಿ ಮಾಡಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಶಾಸಕ ನಿಖಿಲ ಕತ್ತಿ ಹೇಳಿದರು. ಪಿಕಾರ್ಡ್​ ಬ್ಯಾಂಕ್​ ಆವರಣದಲ್ಲಿ ಈಚೆಗೆ ಲಾನುಭವಿಗಳಿಗೆ ಕಿಟ್​ ಹಾಗೂ ವಾಹನದ ಕೀ ಹಸ್ತಾಂತರಿಸಿ ಮಾತನಾಡಿದ ಅವರು, ಮೀನುಗಾರರ ಜೀವನಮಟ್ಟ ಸುಧಾರಿಸುವ ಉದ್ದೇಶದಿಂದ ಮೀನುಗಾರಿಕೆ ಇಲಾಖೆ ವತಿಯಿಂದ ಅರ್ಹ ಲಾನುಭವಿಗಳಿಗೆ ಮೀನು ಸಲಕರಣೆ ಕಿಟ್​ ಮತ್ತು ನಾಲ್ಕು ಚಕ್ರದ ವಾಹನಗಳನ್ನು ವಿತರಿಸಲಾಗುತ್ತಿದೆ ಎಂದರು. ಬೆಮುಲ್​ ನಿರ್ದೇಶಕ ರಾಯಪ್ಪ …

Read More »

ನಮೂನೆ ಸಲ್ಲಿಸದಿದ್ದರೆ ಹೆಸರು ಕೈಬಿಡಲಾಗುವುದು

ಬೆಳಗಾವಿ ಮಹಾನಗರ ಪಾಲಿಕೆಯ ಎಸ್‌ಐಆರ್ ಕೇಂದ್ರದಲ್ಲಿ ನಡೆಯುತ್ತಿರುವ ಗಣಕೀಕರಣ ಕಾರ್ಯವನ್ನು ಡಾ. ಸಿದ್ದು ಹುಲ್ಲೋಳಿ ಹಾಗೂ ಉದಯಕುಮಾರ ಟಿ. ಪರಿಶೀಲಿಸಿದರು. ಬೆಳಗಾವಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ವಿತರಿಸಲಾದ ನಮೂನೆಗಳನ್ನು ಭರ್ತಿ ಮಾಡಿ ನಿಗದಿತ ಅವಧಿಯಲ್ಲಿ ಸಲ್ಲಿಸದಿದ್ದರೆ ಸಂಬಂಧಿತ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್. ಎಂ ಎಚ್ಚರಿಕೆ ನೀಡಿದರು. ಶುಕ್ರವಾರ ನಗರದ ಉತ್ತರ ಹಾಗೂ ದಕ್ಷಿಣ ವಿಧಾನಸಭಾ …

Read More »