ಚಿತ್ರದುರ್ಗ: ಫುಟ್‌ಪಾತ್‌ನಲ್ಲಿ ನಿಂತಿದ್ದವರ ಮೇಲೆ ಕಾರು ಹರಿದ ಪರಿಣಾಮ ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿದ್ದು, ಮಹಿಳೆಯ ಕಾಲು ಮುರಿತಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಪುಟ್‌ಪಾತ್‌ಗೆ ನುಗ್ಗಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಹೊಳಲ್ಕೆರೆ ತಾಲೂಕಿನ ದಗ್ಗೆ ಗ್ರಾಮದ ಪ್ರದೀಪ್ (30) ಸಾವನ್ನಪ್ಪಿದ್ದಾರೆ. ಮತ್ತೋರ್ವ ಮಹಿಳೆಗೆ ಕಾಲು ಮುರಿದಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಅಪಘಾತದ ಭೀಕರ ದೃಶ್ಯ …
Read More »Daily Archives: ಜುಲೈ 22, 2026
ಕಾಫಿನಾಡಲ್ಲಿ ಕಾಡುಕೋಣ ದಾಳಿಗೆ ಮತ್ತೊಂದು ಬಲಿ – 15 ದಿನಗಳ ಅಂತರದಲ್ಲಿ ಇಬ್ಬರು ಸಾವು
ಚಿಕ್ಕಮಗಳೂರು: ಕಾಡುಕೋಣ ದಾಳಿಗೆ ಕಾಫಿನಾಡಲ್ಲಿ ಮತ್ತೊಂದು ಬಲಿಯಾಗಿದೆ. ಈ ಮೂಲಕ 15 ದಿನಗಳ ಅಂತರದಲ್ಲಿ ಎರಡನೇ ಬಲಿ ಇದಾಗಿದೆ. ಕೊಪ್ಪ ತಾಲೂಕಿನ ದೋಣಿಹಡ್ಲು ಗ್ರಾಮದ ಮಂಜುನಾಥ್ (45) ಕಾಡುಕೋಣ ದಾಳಿಗೆ ಬಲಿಯಾದ ದುರ್ದೈವಿ. ಮನೆಯಿಂದ ತೋಟಕ್ಕೆ ಹೋಗುವಾಗ ಕಾಡುಕೋಣ ಏಕಾಏಕಿ ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತು. ಆದರೆ ಮಾರ್ಗ ಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಿರಂತರ …
Read More »ಬಲ್ಡೋಟಾ ಕಾರ್ಖಾನೆಯ ವಿರುದ್ಧ ರೈತರು, ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಕೊಪ್ಪಳ: ಜಿಲ್ಲೆಯಲ್ಲಿ ರೈತ ಹುತಾತ್ಮ ದಿನಾಚರಣೆ ಹಿನ್ನೆಲೆ ಅನ್ನದಾತರು ಸಿಡಿದೆದ್ದಿದ್ದಾರೆ. ಬಲ್ಡೋಟಾ ಕಾರ್ಖಾನೆಯ ವಿರುದ್ಧ ರೈತರು, ಪರಿಸರ ಹೋರಾಟಗಾರರು ಮತ್ತು ವಿವಿಧ ರಾಜಕೀಯ ಹಾಗೂ ಸಾಮಾಜಿಕ ಸಂಘಟನೆಗಳು ಒಗ್ಗೂಡಿ ಬೃಹತ್ ಪ್ರತಿಭಟನೆ ನಡೆಸಿವೆ. ಬಲ್ಡೋಟಾ ಕಾರ್ಖಾನೆ ಎದುರು ಪ್ರತಿಭಟನಾ ಸಮಾವೇಶ ನಡೆಸಲಾಗಿದ್ದು, ರಾಷ್ಟ್ರೀಯ ಹೆದ್ದಾರಿ 63ರಲ್ಲಿಯೇ ರೈತರು ಕುರ್ಚಿಗಳನ್ನು ಹಾಕಿದ ಪರಿಣಾಮ, ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿದೆ. ಬಳಿಕ ಬಲ್ಡೋಟಾ ಕೆರೆಗೆ ನುಗ್ಗಿದ ರೈತರು ಕಾಂಪೌಂಡ್ ಒಡೆದು ಒಳನುಗ್ಗಿದ್ದಾರೆ. ಕಾರ್ಖಾನೆ ಮುಂಭಾಗದ …
Read More »ಎಲ್ ನಿನೋ ಎಫೆಕ್ಟ್ – ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ
ಬೆಂಗಳೂರು: ಎಲ್‌ನಿನೋ ಎಫೆಕ್ಟ್‌ನಿಂದ ರಾಜ್ಯದಲ್ಲಿ ಮಳೆ ಕೊರತೆಯಾಗಿದೆ. ದಕ್ಷಿಣ ಕನ್ನಡ, ಮೈಸೂರು, ಕೊಡಗು, ಉತ್ತರ ಕನ್ನಡ, ಉಡುಪಿ, ಮಂಡ್ಯ ಸೇರಿದಂತೆ ಒಟ್ಟು 25 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದೆ. ವಿಜಯನಗರದ ಜಿಲ್ಲೆಯಲ್ಲಂತೂ ತೀವ್ರ ಮಳೆಯ ಕೊರತೆ ಎದುರಾಗಿದ್ದು, ಕರುನಾಡು ಬರದ ತೀವ್ರತೆಗೆ ಸಿಲುಕಿದೆ. ಕೇವಲ 5 ಜಿಲ್ಲೆಗಳಿಗೆ ಮಾತ್ರ ವಾಡಿಕೆಯ ಮಳೆಯಾಗಿದೆ. ಬೆಳಗಾವಿಯ ರೈತರು ಸಹ ವಾಡಿಕೆಯಂತೆ ಕಡಿಮೆ ಮೆಳೆಯಾಗಿದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಪ ಮಳೆಯಿಂದ ಕುಡಿಯುವ ನೀರಿನ ಸಮಸ್ಯೆ …
Read More »ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಪತಿ ನೇಣಿಗೆ ಶರಣು
ಮೈಸೂರು : ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಆಘಾತ ಮೂಡಿಸಿದೆ. ಸಾಲದ ಒತ್ತಡವೇ ಈ ದುರಂತಕ್ಕೆ ಕಾರಣವೇ ಎಂಬ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಹರೀಶ್ (49), ಪತ್ನಿ ನಿಶ್ಚಿತ (36), …
Read More »ಜೈಲಲ್ಲಿರೋ ದರ್ಶನ್ ಭೇಟಿಯಾದ ರಕ್ಷಿತಾ, ವಿಜಯಲಕ್ಷ್ಮಿ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ನಟಿ ರಕ್ಷಿತಾ ತೆರಳಿದ್ದಾರೆ. ಪರಪ್ಪನ ಅಗ್ರಹಾರ ಜೈಲಿಗೆ ಇಬ್ಬರು ಪ್ರತ್ಯೇಕವಾಗಿ ಆಗಮಿಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ದರ್ಶನ್ ಅವರೊಂದಿಗೆ ಮಾತುಕತೆ ನಡೆಸಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಜೈಲಿನಲ್ಲಿರುವ ಗೆಳೆಯ ದರ್ಶನ್ ರನ್ನ ಎರಡನೇ ಬಾರಿಗೆ ರಕ್ಷಿತಾ ಭೇಟಿ ಮಾಡಿದ್ದು, ಜೈಲಿನಲ್ಲಿ ದರ್ಶನ್ ಪರಿಸ್ಥಿತಿ ಕಂಡು ರಕ್ಷಿತಾ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ. ಗೆಳೆಯನಿಗೆ …
Read More »C-ST ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಪರಮೇಶ್ವರ್
ಬೆಂಗಳೂರು: SC-ST ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹೆಚ್ಚಳ ಮಾಡುವ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಜೊತೆ ಚರ್ಚೆ ಮಾಡೋದಾಗಿ ಡಿಸಿಎಂ ಪರಮೇಶ್ವರ್ ತಿಳಿಸಿದ್ದಾರೆ. ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಪದಾಧಿಕಾರಿಗಳ ಜೊತೆ ಮಂಗಳವಾರ (ಜು.21) ಸಮಸ್ಯೆಗಳ ಕುರಿತು ವಿಧಾನಸೌಧದಲ್ಲಿ ಡಿಸಿಎಂ ಪರಮೇಶ್ವರ್ ಚರ್ಚೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಅವರು, ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿಯನ್ನು ತಂದಿದ್ದೇವೆ. ಆದರೂ ಕಾಯ್ದೆ ಅನುಷ್ಠಾನ ಆಗುತ್ತಿಲ್ಲ ಎಂದು ಪ್ರಸ್ತಾಪ ಮಾಡಿದ್ದಾರೆ. ಸರಿಯಾದ ಅನುಷ್ಠಾನ …
Read More »ಮನೆಮುಂದೆ ಆಟವಾಡ್ತಿದ್ದಾಗ ಬೀದಿ ನಾಯಿಗಳು ದಾಳಿ – 4 ವರ್ಷದ ಬಾಲಕನ ಸ್ಥಿತಿ ಗಂಭೀರ
ರಾಯಚೂರು: ಬೀದಿ ನಾಯಿಗಳ ಕಾಟ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ರಾಯಚೂರು ಜಿಲ್ಲೆಯ ಮಲಿಯಾಬಾದ್ ಗ್ರಾಮದಲ್ಲಿ ಮನೆಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ದಾಳಿ ವೇಳೆ ನಾಯಿಗಳು ಬಾಲಕನ ತಲೆಯ ಭಾಗವನ್ನ ಸಂಪೂರ್ಣವಾಗಿ ಕಚ್ಚಿದೆ. ಈ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸದ್ಯ ಬಾಲಕನನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ, ಚಿತ್ರದುರ್ಗದಲ್ಲಿ ಬೀದಿ …
Read More »ಸಂಪುಟ ವಿಸ್ತರಣೆ ತಡ ಆಗಬಹುದು: ಡಿ.ಕೆ.ಶಿವಕುಮಾರ್
ಬೆಂಗಳೂರು: ಇವತ್ತು ರಾತ್ರಿ ಸಭೆ ಇತ್ತು. ಅದು ರದ್ದಾಗಿದೆ. ಸಂಪುಟ ವಿಸ್ತರಣೆ ತಡ ಆಗಬಹುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಳೆ ಪ್ರಮಾಣವಚನ ಕೊಡಬೇಕು ಅಂತಾ ತೀರ್ಮಾನ ಮಾಡಿದ್ದೆ. ರಾಜ್ಯಪಾಲರಿಗೂ ಮಾಹಿತಿ ನೀಡಿದ್ದೆ. ಮಧ್ಯಾಹ್ನ 12 ಕ್ಕೆ ಸಭೆ ಆಗಬೇಕಿತ್ತು. ಈಗ ಮುಂದಕ್ಕೆ ಹೋಗಬಹುದು. ನಮ್ಮ ನಾಯಕರು ಬಂಧನಕ್ಕೊಳಗಾಗಿದ್ದಾರೆ. ಸಂಪುಟ ವಿಸ್ತರಣೆ ತಡ ಆಗಬಹುದು ಎಂದರು. ಪ್ರತಿಭಟನಾ ಸ್ಥಳಕ್ಕೆ ಕೇಂದ್ರದ ಮಂತ್ರಿಗಳು ಬಂದಿದ್ದರು. …
Read More »ಪೊಲೀಸ್ ವಶದಲ್ಲಿದ್ದ ರಾಹುಲ್ ಗಾಂಧಿ ಬಿಡುಗಡೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಬಳಿ ನಡೆದ ಪ್ರತಿಭಟನೆ ವೇಳೆ ವಶಕ್ಕೆ ಪಡೆದಿದ್ದ ಪೊಲೀಸರು, ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರನ್ನು ರಿಲೀಸ್ ಮಾಡಿದ್ದಾರೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವಾರು ವಿರೋಧ ಪಕ್ಷದ ನಾಯಕರು ಮಂಗಳವಾರ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು. ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಿ …
Read More »
Laxmi News 24×7