Breaking News

Daily Archives: ಜುಲೈ 23, 2026

ಮೋದಿ ಬಗ್ಗೆ ಮಾತಾಡೋ ಯೋಗ್ಯತೆ ಕಾಂಗ್ರೆಸ್‌ಗಿಲ್ಲ: ಆರ್.ಅಶೋಕ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತಾಡೋ ಯೋಗ್ಯತೆ ಕಾಂಗ್ರೆಸ್  ಅವರಿಗೆ ಇಲ್ಲ ಅಂತ ವಿಪಕ್ಷ ನಾಯಕ ಆರ್.ಅಶೋಕ್  ಕಾಂಗ್ರೆಸ್ ನಾಯಕರ ವಿರುದ್ದ ಕಿಡಿಕಾರಿದರು. ದೆಹಲಿಯಲ್ಲಿ ಪ್ರಧಾನಿ ಮೋದಿ ನಿವಾಸದ ಮುಂದೆ ರಾಹುಲ್ ಗಾಂಧಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೋದಿ ಬಗ್ಗೆ ಮಾತಾಡುವ ಯೋಗ್ಯತೆ ಕಾಂಗ್ರೆಸ್‌ಗೆ ಇಲ್ಲ. ಹುಬ್ಬಳ್ಳಿ-ಧಾರವಾಡ ಲಾಠಿ ಚಾರ್ಜ್ಗೆ ಉತ್ತರ ಕೊಡಿ. ಮೋದಿ ಮನೆ ಮುಂದೆ ಪ್ರತಿಭಟನೆ ಮಾಡಿರೋದು ಒಳ್ಳೆಯ ಸಂಪ್ರದಾಯ …

Read More »

ಕೈಕೊಟ್ಟ ಮುಂಗಾರು; ಹೊಲದಲ್ಲೇ ಒಣಗುತ್ತಿರುವ ಹೆಸರು ಬೆಳೆ ಕಂಡು ಕಂಗಾಲಾದ ರೈತರು

ಗದಗ: ಜಿಲ್ಲೆಯಲ್ಲಿ ಮುಂಗಾರು ಮಳೆ  ಕೈಕೊಟ್ಟ ಹೆಸರು ಸೇರಿದಂತೆ ಹಲವು ಬೆಳೆಗಳು ಹೊಲದಲ್ಲೇ ಒಣಗುತ್ತಿವೆ. ರೈತರು ತಾವು ಬೆಳೆದ ಬೆಳೆಯನ್ನ  ಕುಂಟೆ ಹೊಡೆದು ನಾಶ ಮಾಡುವ ಪರಿಸ್ಥಿತಿ ಎದುರಾಗಿದೆ. ಕಳೆದ ವರ್ಷ ಅತಿವೃಷ್ಟಿಯಿಂದ ಬೆಳೆ ಹಾಳಾಗಿದ್ದರೆ, ಈ ವರ್ಷ ಅನಾವೃಷ್ಟಿ ರೈತರನ್ನು ಕಂಗಾಲು ಮಾಡಿದೆ. ಹೆಸರು, ಈರುಳ್ಳಿ, ಮೆಣಸಿನಕಾಯಿ, ಹತ್ತಿ, ಮೆಕ್ಕೆಜೋಳ ಹಾಗೂ ಶೇಂಗಾ ಸೇರಿದಂತೆ ಹಲವು ಬೆಳೆಗಳು ತೇವಾಂಶದ ಕೊರತೆಯಿಂದ ನೆಲಕಚ್ಚಿವೆ. ಹೊಲದಲ್ಲಿ ಹಸಿರು ಕಾಣಬೇಕಾದ ಜಾಗದಲ್ಲಿ ಒಣಗಿದ …

Read More »

ಚೆನ್ನಮ್ಮ ಅವ್ರು ಕೊನೆಯ ದಿನಗಳಲ್ಲಿ ಪ್ರಜ್ವಲ್‌ ರೇವಣ್ಣರನ್ನ ನೋಡಬೇಕೆಂಬ ಆಸೆ ಇಟ್ಟುಕೊಂಡಿದ್ರು: ಕುಮಾರಸ್ವಾಮಿ

ಹಾಸನ: ಚೆನ್ನಮ್ಮ ಅವರು ಕೊನೆಯ ದಿನಗಳಲ್ಲಿ ಪ್ರಜ್ವಲ್‌ ರೇವಣ್ಣ ಅವರನ್ನ ನೋಡಬೇಕೆಂಬ ಆಸೆ ಇಟ್ಟುಕೊಂಡಿದ್ರು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಭಾವುಕರಾದರು. ಹಾಸನ  ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ, ಹರದನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಹಲವು ಭಾವನಾತ್ಮಕ ವಿಚಾರಗಳನ್ನ ಹಂಚಿಕೊಂಡರು. ಚೆನ್ನಮ್ಮ ಅವರು ಬಹುಶಃ ಇನ್ನೂ 3-4 ವರ್ಷಗಳ ಕಾಲ ಬದುಕುತ್ತಿದ್ದರು, ಈ ದಿನ ನೋಡಲು ಸಾಧ್ಯವಾಗುತ್ತಿರಲಿಲ್ಲ. ಆದರೆ, ಇದು ಆ ದೇವರು ತೀರ್ಮಾನ ಮಾಡಿರೋದು ನಾವಲ್ಲ. ದೇವರ ತೀರ್ಮಾನಕ್ಕೆ …

Read More »

ಕಾಂಗ್ರೆಸ್‌ನಿಂದ ಗೂಂಡಾಗಿರಿ – ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ ಬಿಜೆಪಿ ನಿಯೋಗ

ಬೆಂಗಳೂರು: ಕಾಂಗ್ರೆಸ್  ಕಚೇರಿ ಎದುರು ತಮ್ಮ ಮೇಲೆ ನಡೆದ ಹಲ್ಲೆ ಖಂಡಿಸಿ ಬಿಜೆಪಿ  ನಾಯಕರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಹೈಗ್ರೌಂಡ್ಸ್ ಠಾಣೆಯಿಂದ ಪಾದಯಾತ್ರೆ ಮಾಡಿಕೊಂಡು ಕಮೀಷನರ್ ಕಚೇರಿಗೆ ಆಗಮಿಸಿದ ಬಿಜೆಪಿ ನಾಯಕರು ದೂರು ನೀಡಿದ್ದಾರೆ. ಕಾಂಗ್ರೆಸ್‌ನವರು ಗೂಂಡಾಗಿರಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಎದುರು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಕೈಬರಹದಲ್ಲಿಯೇ ದೂರು ನೀಡಿದ್ದಾರೆ. ಈ ವೇಳೆ ಆಯುಕ್ತರ ಕಚೇರಿ ಎದುರು ಧಿಕ್ಕಾರ ಘೋಷಣೆ ಕೂಗಿದ್ದಾರೆ. ಅಶ್ವಥ್ …

Read More »

ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬಿದ್ದ ಮರ – ಐದು ವರ್ಷದ ಬಾಲಕಿ ಸಾವು

ಮಂಗಳೂರು: ಚಲಿಸುತ್ತಿದ್ದ ಶಾಲಾ ವಾಹನದ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಐದು ವರ್ಷದ ಬಾಲಕಿ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಚಿರನ್ವಿ (5) ಮೃತಪಟ್ಟ ಮಗು. ಬಂಟ್ವಾಳ ತಾಲೂಕಿನ ಬಿಳಿಯೂರಿನ ಚಂದ್ರಹಾಸ ಅವರ ಪುತ್ರಿ ಚಿರನ್ವಿ. ಕಲ್ಲಡ್ಕ ಶ್ರೀರಾಮ ಶಾಲೆಗೆ ಸೇರಿದ ಶಾಲಾ ವಾಹನದ ಮೇಲೆ ಮರ ಬಿದ್ದು ಈ ಅವಘಡ ಸಂಭವಿಸಿದೆ. ಬಂಟ್ವಾಳ ತಾಲೂಕಿನ ಕಲ್ಲೇಟಿ ಕಾನಲ್ತಾಯ ದೈವಸ್ಥಾನದ ಬಳಿ ದುರ್ಘಟನೆ …

Read More »

ಮಹದಾಯಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆ

ನವದೆಹಲಿ: ಮಹದಾಯಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಯೋಜನೆಗೆ ಅನುಮತಿಯ ನೀರಿಕ್ಷೆಯಲ್ಲಿದ್ದ ರಾಜ್ಯಕ್ಕೆ ಕೇಂದ್ರ ಸರ್ಕಾರ ಶಾಕ್‌ ನೀಡಿದೆ. ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥವಾಗುವವರೆಗೂ ಅನುಮತಿ ಇಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ. ಈ ಬಗ್ಗೆ ರಾಜ್ಯ ನೀರಾವರಿ ನಿಗಮಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯ ಮಾಹಿತಿ ನೀಡಿದೆ. ಯೋಜನೆಯನ್ನು ಆಕ್ಷೇಪಿಸಿ ಕೇರಳದ ವನ್ಯಜೀವಿ ವಾರ್ಡನ್‌ ಕರ್ನಾಟಕ ಸರ್ಕಾರಕ್ಕೆ 2023ರ ಮಾರ್ಚ್‌ನಲ್ಲಿ ನೋಟಿಸ್‌ ನೀಡಿತ್ತು. ಈ ನೋಟಿಸ್‌ ಪ್ರಶ್ನಿಸಿ ಕರ್ನಾಟಕ …

Read More »

ಜಂತರ್ ಮಂತರ್‌ನಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ- ಇಂಟರ್‌ನೆಟ್‌ ಬಂದ್‌

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕಾಕ್ರೋಚ್‌ ಜನತಾ ಪಾರ್ಟಿ  ನೇತೃತ್ವದ ಪ್ರತಿಭಟನೆ  ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ರಾತ್ರಿ ಘರ್ಷಣೆ ನಡೆದಿದೆ. ಪ್ರತಿಭಟನಾಕಾರರು ‘ಸಂಸದ್ ಚಲೋ’ ಕರೆಯನ್ನು ನೀಡಿ ಬ್ಯಾರಿಕೇಡ್‌ಗಳನ್ನು ದಾಟಿ ಮುನ್ನುಗ್ಗಲು ಯತ್ನಿಸಿದಾಗ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಅವರನ್ನು ತಡೆಯಲು ಲಾಠಿಚಾರ್ಜ್ ಹಾಗೂ ಟಿಯರ್‌ ಗ್ಯಾಸ್‌ ಪ್ರಯೋಗ ಮಾಡಿದ್ದಾರೆ. ಟಾಲ್‌ಸ್ಟಾಯ್ ಮಾರ್ಗ ಮತ್ತು ಜಂತರ್ ಮಂತರ್ ಸುತ್ತಮುತ್ತ ಪ್ರತಿಭಟನೆ ವಿಕೋಪಕ್ಕೆ ತಿರುಗಿದ್ದು, …

Read More »

ಪರಿಸರ ಸ್ನೇಹಿ ಗಣೇಶ ಮೂರ್ತಿಗೆ ಆದ್ಯತೆ ನೀಡಲು ಆಗ್ರಹಿಸಿ ಜಿಲ್ಲಾಧಿಕಾರಿಗೆ ರೋಟರಿ ಕ್ಲಬ್ ಮನವಿ

ಬೆಳಗಾವಿ : ಗಣೇಶೋತ್ಸವದಲ್ಲಿ ಪರಿಸರಕ್ಕೆ ಹಾನಿಯಾಗುವ ಪಿಒಪಿ ಮೂರ್ತಿಗಳ ಬಳಕೆ ನಿರ್ಬಂಧಿಸಿ, ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿ ಬಳಕೆಗೆ ಜಿಲ್ಲಾಡಳಿತ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ರೋಟರಿ ಕ್ಲಬ್ ಬೆಳಗಾವಿ ಉತ್ತರ ವಲಯ ಆಗ್ರಹಿಸಿದೆ. ಈ ಸಂಬಂಧ ಕ್ಲಬ್ ಸದಸ್ಯರು ಬುಧವಾರ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ಗೆ ಮನವಿ ಸಲ್ಲಿಸಿದ್ದಾರೆ. ಪಿಒಪಿ ಮೂರ್ತಿ  ನೀರಿನಲ್ಲಿ ಕರಗದೆ ಜಲಮೂಲಗಳನ್ನು ಕಲುಷಿತಗೊಳಿಸುತ್ತಿವೆ. ರಾಸಾಯನಿಕ ಬಣ್ಣಗಳಿಂದ ಜಲಚರ ಮತ್ತು ಪರಿಸರಕ್ಕೂ ಹಾನಿ. ಆದರೆ, ನೈಸರ್ಗಿಕವಾಗಿ ಮಣ್ಣಿನಿಂದ …

Read More »

 ವ್ಯಾಪಕ ಮಳೆಯಿಂದಾಗಿಬೆಳಗಾವಿ ಜಿಲ್ಲೆಯ ನದಿಗಳ ನೀರು ಮಟ್ಟ ಹೆಚ್ಚಳ

 ವ್ಯಾಪಕ ಮಳೆಯಿಂದಾಗಿ ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿ ನೀರಿನ ಮಟ್ಟ ಹೆಚ್ಚಿದೆ. ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದ ಕೊಯ್ನಾದಲ್ಲಿ ೬೭ ಮಿಮೀ, ನವಜಾದಲ್ಲಿ ೮೫ ಮಿಮೀ ಮತ್ತು ಮಹಾಬಲೇಶ್ವರದಲ್ಲಿ ೭೮ ಮಿಮೀ. ಮಳೆಯಾಗಿದೆ. ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್‌ನಿಂದ ಕೃಷ್ಣಾ ನದಿಗೆ 48 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ, ಜೊತೆಗೆ ವೇದಗಂಗಾ ಮತ್ತು ದೂಧಗಂಗಾ ನದಿ ನೀರು ಸೇರಿ ಚಿಕ್ಕೋಡಿ ತಾಲೂಕಿನ ಕಲ್ಲೋಳ ಬ್ಯಾರೇಜ್ ಬಳಿ ಕೃಷ್ಣಾ ನದಿಗೆ …

Read More »

ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಬೆಳಗಾವಿಯ ಸ್ವಾತಿಕ್ ಆಯ್ಕೆ

ಬೆಳಗಾವಿ : ನಗರದ ಸ್ಮಿಮ್ಮರ್ಸ್ ಕ್ಲಬ್ ಈಜುಪಟು ಸ್ವಾತಿಕ ಪಾಟೀಲ ಸ್ಕಾಟ್ಲೆಂಡ್ ನ ಗ್ಲಾಸ್ಗೋದಲ್ಲಿ ಜು.23 ರಿಂದ ಆ.2 ರವರೆಗೆ ನಡೆಯಲಿರುವ 2026 ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಪುರುಷರ 100 ಮೀಟರ್ ಬ್ರೆಸ್ಟ್‌ಸ್ಟ್ರೋಕ್ ಎಸ್ ಬಿ9 ಸ್ಪರ್ಧೆಯಲ್ಲಿ ಸ್ವಾತಿಕ್ ಅರ್ಹತೆ ಪಡೆದಿದ್ದಾರೆ. ಸ್ವಾತಿಕ್ ಪಾಟೀಲ ತಾಲೂಕಿನ ಮುತಗಾ ಗ್ರಾಮದವರಾಗಿದ್ದು, ಅಲಹಾಬಾದ್‌ನಲ್ಲಿ ಎನ್ಐಟಿ ಪದವೀಧರರಾಗಿದ್ದು, ಪ್ರಸ್ತುತ ಝೋಪಿಂಗ್‌ನಲ್ಲಿ ಸಾಫ್ಟ್‌ವೇರ್ ಡೆವಲಪರ್ ಆಗಿ ಕೆಲಸ ಮಾಡುತ್ತಿದ್ದಾರೆ.ನಗರದ ಜೆಎನ್‌ಎಂಸಿ ಈಜುಕೊಳದಲ್ಲಿ ತರಬೇತಿ …

Read More »