Breaking News

Daily Archives: ಜುಲೈ 24, 2026

ಮಗನ ಸಾವಿನ ಸುದ್ದಿ ಕೇಳಿ ಆಘಾತದಿಂದ ತಾಯಿ ಕೂಡ ಸಾವು

ಧಾರವಾಡ: ಮಗನ  ಸಾವಿನ ಸುದ್ದಿ ಕೇಳಿ ಆಘಾತದಿಂದ ತಾಯಿ  ಕೂಡ ಸಾವನ್ನಪ್ಪಿರುವ ಘಟನೆ ಧಾರವಾಡ  ನಗರದ ತೇಜಸ್ವಿನಗರದಲ್ಲಿ  ನಡೆದಿದೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮೆಹಬೂಬ್ ಸಾಬ್ ನದಾಫ್ (47) ಬುಧವಾರ ಬೆಳಗ್ಗೆ ಧಾರವಾಡ ನಗರದ ರಾಜೀವ್ ಗಾಂಧಿನಗರದ ಬಳಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರು. ರೈಲ್ವೆ ಪೊಲೀಸರು ಸಂಜೆ ಮೆಹಬೂಬ್ ಶವ ಮರಣೋತ್ತರ ಪರೀಕ್ಷೆ ಮುಗಿಸಿ ಕೊಟ್ಟಿದ್ದರು. ಸಂಜೆ ಏಳು ಗಂಟೆಗೆ ಮೆಹಬೂಬ್ ಅಂತ್ಯಕ್ರಿಯೆ ಮಾಡಲು ತಯಾರಿ ಮಾಡಿದ್ದರು. …

Read More »

ಮಳೆ ಅಬ್ಬರ; ಸಿದ್ದಾಪುರ, ಜೋಯಿಡಾ, ದಾಂಡೇಲಿ, ಶಿರಸಿ ಶಾಲಾ-ಕಾಲೇಜುಗಳಿಗೆ ಜು.24ಕ್ಕೆ ರಜೆ

ಕಾರವಾರ: ಅಬ್ವರದ ಮಳೆ ಹಿನ್ನೆಲೆಯಲ್ಲಿ ಸಿದ್ದಾಪುರ, ಜೋಯಿಡಾ ದಾಂಡೇಲಿ, ಶಿರಸಿ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಜು.24 ರಂದು ರಜೆ ಘೋಷಣೆ ಮಾಡಲಾಗಿದೆ. ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ.

Read More »

ನೀಟ್‌ ಪ್ರಶ್ನೆಪತ್ರಿಕೆ ಅಕ್ರಮಕ್ಕೆ ಮೊದಲ ತಲೆದಂಡ – ಕೇಂದ್ರ ಶಿಕ್ಷಣ ಕಾರ್ಯದರ್ಶಿ ಎತ್ತಂಗಡಿ

ನವದೆಹಲಿ: ನೀಟ್‌ ಅಕ್ರಮಕ್ಕೆ ಮೊದಲ ತಲೆದಂಡ ಆಗಿದೆ. ಕೇಂದ್ರ ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಕಾರ್ಯದರ್ಶಿ ವಿನೀತ್‌ ಜೋಶಿ  ಅವರನ್ನು ಎತ್ತಂಗಡಿ ಮಾಡಲಾಗಿದೆ. ಜೋಶಿ ಅವರನ್ನು ಪಂಚಾಯತ್‌ ರಾಜ್‌ ಸಚಿವಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ನರೇಶ್ ಪಾಲ್ ಗಂಗ್ವಾರ್ ಅವರನ್ನು ನಿಯೋಜಿಸಲಾಗಿದೆ.

Read More »

CJP ಪ್ರತಿಭಟನೆ: ಮುಂಬೈನಲ್ಲಿ ಪೊಲೀಸ್‌ ವ್ಯಾನ್ ತಡೆದು ನಿಂತ ನಟಿ ರಿಯಾ ಅಹೀರ್

ಮುಂಬೈ: ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್  ರಾಜೀನಾಮೆಗೆ ಆಗ್ರಹಿಸಿ ಮುಂಬೈನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ನಟಿ ರಿಯಾ ಅಹೀರ್ ಪೊಲೀಸ್ ವ್ಯಾನ್ ತಡೆದು ಲ್ಲಿಸಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದಾದರ್‌ನ ಶಿವಾಜಿ ಪಾರ್ಕ್ ಬಳಿ ನಡೆದ ಪ್ರತಿಭಟನೆಯಲ್ಲಿ ನಟಿ ರಿಯಾ ಅಹೀರ್ ಮಳೆಯಲ್ಲೇ ಚಲಿಸುತ್ತಿದ್ದ ಪೊಲೀಸ್ ವ್ಯಾನ್ ತಡೆದು ನಿಂತಿದ್ದಾರೆ. ಇದನ್ನು ಕಂಡು ಸುತ್ತಲಿದ್ದ ಜನರು ನಟಿಗೆ ಬೆಂಬಲವಾಗಿ ಘೋಷಣೆಗಳನ್ನು ಕೂಗಲಾರಂಭಿಸಿದರು.  ಮೂಲಗಳ …

Read More »

ಬೆಂಗಳೂರಲ್ಲಿ 2ನೇ ಏರ್‌ಪೋರ್ಟ್‌ ನಿರ್ಮಾಣಕ್ಕೆ ಇಲ್ಲಿವರೆಗೂ ನಮಗೆ ಪ್ರಸ್ತಾವ ಸಲ್ಲಿಕೆಯಾಗಿಲ್ಲ: ಕೇಂದ್ರ

ಬೆಂಗಳೂರು: ರಾಜಧಾನಿಯಲ್ಲಿ 2ನೇ ಏರ್‌ಪೋರ್ಟ್‌ ನಿರ್ಮಾಣಕ್ಕೆ ಇಲ್ಲಿಯವರೆಗೂ ಪ್ರಸ್ತಾವ ಸಲ್ಲಿಕೆಯಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್ ಪ್ರಶ್ನೆ ಕೇಳಿದ್ದರು. ಪ್ರಶ್ನೆಗೆ ಕೇಂದ್ರ ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ಮುರಳೀಧ‌ರ್ ಮೊಹೊಲ್ ಲಿಖಿತ ಉತ್ತರ ನೀಡಿದ್ದಾರೆ. ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಕರ್ನಾಟಕ ಸರ್ಕಾರದ ಮನವಿಯ ಮೇರೆಗೆ ಮೂರು ಸ್ಥಳಗಳಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಪೂರ್ವ ಕಾರ್ಯಸಾಧ್ಯತಾ ಅಧ್ಯಯನ …

Read More »

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕಠಿಣ ಕಾನೂನು: ಮಿಡ್‌ನೈಟ್‌ ಮೋದಿ ಸಂದೇಶ

ನವದೆಹಲಿ: ದೇಶಾದ್ಯಂತ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಾಗುತ್ತಿರುವ ಪ್ರಕರಣಗಳ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಈ ಕುರಿತು ಗುರುವಾರ ತಡರಾತ್ರಿ ವಿಡಿಯೋ ಸಂದೇಶ ರವಾನಿಸಿರುವ ಪ್ರಧಾನಿ ನರೇಂದ್ರ ಮೋದಿ  ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕಠಿಣ ಕಾನೂನು ಮತ್ತು ಶಿಕ್ಷೆ ಒದಗಿಸುವ ಹೊಸ ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಪ್ರಕಟಿಸಿದ್ದಾರೆ. ರಾತ್ರಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಮೋದಿ ಈ ಹೊಸ ನಿಯಮಗಳು ಮತ್ತು …

Read More »

ಅಕ್ರಮವಾಗಿ ಚಿಪ್ಪುಹಂದಿಯ ಚಿಪ್ಪು ಮಾರಾಟಕ್ಕೆ ಯತ್ನಿಸಿದ ವ್ಯಕ್ತಿ ಬಂಧನ

ಚಾಮರಾಜನಗರ: ತಾಲೂಕಿನ ಹೆಗ್ಗೋಠಾರ ಗ್ರಾಮದ ದೊಡ್ಡಬೆಟ್ಟದ ಬಳಿ ಅಕ್ರಮವಾಗಿ ಚಿಪ್ಪುಹಂದಿಯ ಚಿಪ್ಪುಗಳನ್ನು ಮಾರಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಆರೋಪಿಯನ್ನು ಬಂಧಿಸಿ, 2 ಕೆಜಿ 800 ಗ್ರಾಂ ಚಿಪ್ಪುಹಂದಿಯ ಚಿಪ್ಪು, 4 ನಾಡ ಬಂದೂಕು, ಮೋಟಾರ್ ಬೈಕ್, ಇನ್ನಿತರ ಬಂದೂಕಿಗೆ ಬಳಸುವ ವಸ್ತುಗಳನ್ನು ವಶಪಡಿಸಿಕೊಂಡಿದೆ. 27 ವರ್ಷದ ಮಹೇಶ ನಾಯಕ ಹೆಚ್ ಬಂಧಿತ ವ್ಯಕ್ತಿಯಾಗಿದ್ದಾನೆ. ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದ ಬಳಿ …

Read More »

ಸಮಾಜದ ಸಂಕಷ್ಟಗಳಿಗೆ ಸ್ಪಂದಿಸಲು ಟ್ರಸ್ಟ್ ಸ್ಥಾಪನೆ

ಬೆಳಗಾವಿ:ಬ್ರಾಹ್ಮಣ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಬೆನ್ನಿಗೆ ನಿಲ್ಲುವುದರ ಜತೆಗೆ ಸಮಾಜದ ಸಂಕಷ್ಟಗಳಿಗೆ ಸ್ಪಂದಿಸುವ ಸಮರ್ಥ ಸಂಘಟನೆಯಾಗಿ ಬೆಳಗಾವಿ ಜಿಲ್ಲಾ ಬ್ರಾಹ್ಮಣ ಟ್ರಸ್ಟ್‌ನ್ನು ರೂಪಿಸಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ರಾಮ ಭಂಡಾರೆ ಹೇಳಿದರು. ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಮಾಜದ ಅರ್ಹ ವಿದ್ಯಾರ್ಥಿಗಳಿಗೆ ಸಹಾಯಧನದ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಶಿಕ್ಷಣವೇ ಸಮಾಜದ ಭವಿಷ್ಯವನ್ನು ರೂಪಿಸುವ ಶಕ್ತಿ ಹೀಗಾಗಿ ಆರ್ಥಿಕ ಸಮಸ್ಯೆದಿಂದ  ಯಾವ ವಿದ್ಯಾರ್ಥಿಯ ಶಿಕ್ಷಣವೂ ಮೊಟಕುಗೊಳ್ಳಬಾರದು. ಬ್ರಾಹ್ಮಣ ಸಮಾಜದ ಪ್ರತಿ ಕುಟುಂಬವೂ …

Read More »

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಬಿಎಸ್‌ಎನ್‌ಎಲ್ ನೌಕರರ ಪ್ರತಿಭಟನೆ

ಬೆಳಗಾವಿ:ವೇತನ, ಪಿಂಚಣಿ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಗುರುವಾರ ನಗರದ ಭಾರತ ಸಂಚಾರ್ ನಿಗಮ ಲೀ. (ಬಿಎಸ್‌ಎನ್‌ಎಲ್) ಕಚೇರಿ ಆವರಣದಲ್ಲಿ  ಬಿಎಸ್‌ಎನ್‌ಎಲ್ ನೌಕರರ ಸಂಘ, ಡಿಒಟಿ ಪಿಂಚಣಿದಾರರ ಸಂಘ ಮತ್ತು ಗುತ್ತಿಗೆ ಕಾರ್ಮಿಕರ ಒಕ್ಕೂಟದ ನೇತೃತ್ವದಲ್ಲಿ ನೌಕರರು, ಪಿಂಚಣಿದಾರರು, ಗುತ್ತಿಗೆ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಬಿಎಸ್‌ಎನ್ ಎಲ್ ನೌಕರರಿಗೆ ವೇತನ ಪರಿಷ್ಕರಣೆ ಆಗಬೇಕು. ನಿವೃತ್ತರಿಗೆ ಶೇ.30ರಷ್ಟು  ಸೌಲಭ್ಯ ಕೊಡಬೇಕು. 2017ರಿಂದಲೇ ಪಿಂಚಣಿದಾರರ ಪರಿಷ್ಕರಣೆ ಜಾರಿ ಆಗಬೇಕು. ಗುತ್ತಿಗೆ …

Read More »

ಗೋಕಾಕದಲ್ಲಿ ಎಬಿವಿಪಿ ಬೃಹತ್ ಪ್ರತಿಭಟನೆ

ಬೆಳಗಾವಿ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗೀಕ ದೌರ್ಜನ್ಯ ಎಸಗಿದ ಆರೋಪಿಗೆ ಕಠಿಣ ಶಿಕ್ಷೆಗೆ  ಆಗ್ರಹಿಸಿ ಅಖಲಿ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು  ಗೋಕಾಕ ನಗರದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ತಹಸೀಲ್ದಾರ ಮೂಲಕ ರಾಜ್ಯಪಾಲರು, ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಗೋಕಾಕ ನಗರಕ್ಕೆ  ಶಿಕ್ಷಣಕ್ಕಾಗಿ  ಸುತ್ತಮುತ್ತಲಿನ ಗ್ರಾಮಗಳಿಂದ ವಿದ್ಯಾರ್ಥಿಗಳು ಬರುತ್ತಿದ್ದಾರೆ.ಆದರೆ, ಶಿಕ್ಷಣ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗೀಕ ದೌರ್ಜನ್ಯ, ಅತ್ಯಾಚಾರ ಎಸಗಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. …

Read More »