ಬೆಂಗಳೂರು: ನಾವೆಲ್ಲರು ಮಕ್ಕಳ ಭವಿಷ್ಯಕ್ಕಾಗಿ ಪ್ರತಿಭಟನೆ ಮಾಡ್ತಾ ಇದ್ದೇವೆ ಅಂತ ಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಹೋರಾಟವನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವೆಲ್ಲರು ನಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಮಾಡ್ತಿದ್ದೇವೆ. 100ಕ್ಕೂ ಹೆಚ್ಚು ಬಾರಿ ಪೇಪರ್ ಲೀಕ್ ಆಗಿದೆ. ಇಡೀ ದೇಶ ಮತ್ತು ಇಡೀ ವಿಶ್ವ ಯುವಕರ ಭವಿಷ್ಯದ ಬಗ್ಗೆ ಯೋಚನೆ ಮಾಡ್ತಿದೆ. ಭಾರತ ಟ್ಯಾಲೆಂಟ್ ಹಬ್. ನಮ್ಮ ಟ್ಯಾಲೆಂಟ್ ಇಡೀ ಪ್ರಪಂಚದಲ್ಲಿ …
Read More »Daily Archives: ಜುಲೈ 24, 2026
ಶಿವಮೊಗ್ಗದಲ್ಲೂ ಪ್ರತಿಭಟನೆಯ ಕಿಚ್ಚು – 1 ಕಿಮೀ ಓಡಿ ಬಿಜೆಪಿ ಕಚೇರಿಗೆ ನುಗ್ಗಿದ ʻಕೈʼ ಕಾರ್ಯಕರ್ತರು
ಶಿವಮೊಗ್ಗ: ನೀಟ್ ಅಕ್ರಮ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಕಿಚ್ಚು ರಾಜ್ಯಕ್ಕೂ ಹಬ್ಬಿದೆ. ಶಿವಮೊಗ್ಗದಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವ್ಯಾನ್ ಮೇಲೇರಿ ಭಾವುಟ ಬೀಸಿದ್ದಾರೆ. ನಗರದ ಮಹಾವೀರ ಸರ್ಕಲ್‌ನಲ್ಲಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ಏಕಾಏಕಿ ಪ್ರತಿಭಟನೆ ತೀವ್ರಗೊಳಿಸಿದ ಕಾಂಗ್ರೆಸ್ ಕಾರ್ಯಕರ್ತರು …
Read More »ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ
ಬೆಂಗಳೂರು: ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬಸವೇಶ್ವರ ನಗರದಲ್ಲಿ ನಡೆದಿದೆ. ಈಶ್ವರ್ ಆಚಾರ್ಯ ಹಾಗೂ ಗೌರಿ ಮೃತ ವೃದ್ಧ ದಂಪತಿ. ಇಬ್ಬರೂ ಶುಗರ್ ಹಾಗೂ ಬಿಪಿಯಿಂದ ಬಳಲುತ್ತಿದ್ದರು. ದಿನದಿಂದ ದಿನಕ್ಕೆ ಅನಾರೋಗ್ಯ ಉಲ್ಬಣಗೊಳ್ಳುತ್ತಿತ್ತು. ಇದೇ ಕಾರಣಕ್ಕೆ ಬೇಸತ್ತು ಜ್ಯೂಸ್ ಬಾಟಲ್‌ನಲ್ಲಿ ವಿಷ ಬೆರೆಸಿಕೊಂಡು ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬಸವೇಶ್ವರ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶಿಲನೆ ನಡೆಸಿದ್ದಾರೆ. ದಂಪತಿಗೆ …
Read More »ಮಗನ ಸಾವಿನ ಸುದ್ದಿ ಕೇಳಿ ಆಘಾತದಿಂದ ತಾಯಿ ಕೂಡ ಸಾವು
ಧಾರವಾಡ: ಮಗನ ಸಾವಿನ ಸುದ್ದಿ ಕೇಳಿ ಆಘಾತದಿಂದ ತಾಯಿ ಕೂಡ ಸಾವನ್ನಪ್ಪಿರುವ ಘಟನೆ ಧಾರವಾಡ ನಗರದ ತೇಜಸ್ವಿನಗರದಲ್ಲಿ ನಡೆದಿದೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮೆಹಬೂಬ್ ಸಾಬ್ ನದಾಫ್ (47) ಬುಧವಾರ ಬೆಳಗ್ಗೆ ಧಾರವಾಡ ನಗರದ ರಾಜೀವ್ ಗಾಂಧಿನಗರದ ಬಳಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರು. ರೈಲ್ವೆ ಪೊಲೀಸರು ಸಂಜೆ ಮೆಹಬೂಬ್ ಶವ ಮರಣೋತ್ತರ ಪರೀಕ್ಷೆ ಮುಗಿಸಿ ಕೊಟ್ಟಿದ್ದರು. ಸಂಜೆ ಏಳು ಗಂಟೆಗೆ ಮೆಹಬೂಬ್ ಅಂತ್ಯಕ್ರಿಯೆ ಮಾಡಲು ತಯಾರಿ ಮಾಡಿದ್ದರು. …
Read More »ಮಳೆ ಅಬ್ಬರ; ಸಿದ್ದಾಪುರ, ಜೋಯಿಡಾ, ದಾಂಡೇಲಿ, ಶಿರಸಿ ಶಾಲಾ-ಕಾಲೇಜುಗಳಿಗೆ ಜು.24ಕ್ಕೆ ರಜೆ
ಕಾರವಾರ: ಅಬ್ವರದ ಮಳೆ ಹಿನ್ನೆಲೆಯಲ್ಲಿ ಸಿದ್ದಾಪುರ, ಜೋಯಿಡಾ ದಾಂಡೇಲಿ, ಶಿರಸಿ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಜು.24 ರಂದು ರಜೆ ಘೋಷಣೆ ಮಾಡಲಾಗಿದೆ. ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ.
Read More »ನೀಟ್ ಪ್ರಶ್ನೆಪತ್ರಿಕೆ ಅಕ್ರಮಕ್ಕೆ ಮೊದಲ ತಲೆದಂಡ – ಕೇಂದ್ರ ಶಿಕ್ಷಣ ಕಾರ್ಯದರ್ಶಿ ಎತ್ತಂಗಡಿ
ನವದೆಹಲಿ: ನೀಟ್ ಅಕ್ರಮಕ್ಕೆ ಮೊದಲ ತಲೆದಂಡ ಆಗಿದೆ. ಕೇಂದ್ರ ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ಅವರನ್ನು ಎತ್ತಂಗಡಿ ಮಾಡಲಾಗಿದೆ. ಜೋಶಿ ಅವರನ್ನು ಪಂಚಾಯತ್ ರಾಜ್ ಸಚಿವಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ನರೇಶ್ ಪಾಲ್ ಗಂಗ್ವಾರ್ ಅವರನ್ನು ನಿಯೋಜಿಸಲಾಗಿದೆ.
Read More »CJP ಪ್ರತಿಭಟನೆ: ಮುಂಬೈನಲ್ಲಿ ಪೊಲೀಸ್ ವ್ಯಾನ್ ತಡೆದು ನಿಂತ ನಟಿ ರಿಯಾ ಅಹೀರ್
ಮುಂಬೈ: ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಮುಂಬೈನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ನಟಿ ರಿಯಾ ಅಹೀರ್ ಪೊಲೀಸ್ ವ್ಯಾನ್ ತಡೆದು ಲ್ಲಿಸಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದಾದರ್‌ನ ಶಿವಾಜಿ ಪಾರ್ಕ್ ಬಳಿ ನಡೆದ ಪ್ರತಿಭಟನೆಯಲ್ಲಿ ನಟಿ ರಿಯಾ ಅಹೀರ್ ಮಳೆಯಲ್ಲೇ ಚಲಿಸುತ್ತಿದ್ದ ಪೊಲೀಸ್ ವ್ಯಾನ್ ತಡೆದು ನಿಂತಿದ್ದಾರೆ. ಇದನ್ನು ಕಂಡು ಸುತ್ತಲಿದ್ದ ಜನರು ನಟಿಗೆ ಬೆಂಬಲವಾಗಿ ಘೋಷಣೆಗಳನ್ನು ಕೂಗಲಾರಂಭಿಸಿದರು. ಮೂಲಗಳ …
Read More »ಬೆಂಗಳೂರಲ್ಲಿ 2ನೇ ಏರ್‌ಪೋರ್ಟ್ ನಿರ್ಮಾಣಕ್ಕೆ ಇಲ್ಲಿವರೆಗೂ ನಮಗೆ ಪ್ರಸ್ತಾವ ಸಲ್ಲಿಕೆಯಾಗಿಲ್ಲ: ಕೇಂದ್ರ
ಬೆಂಗಳೂರು: ರಾಜಧಾನಿಯಲ್ಲಿ 2ನೇ ಏರ್‌ಪೋರ್ಟ್ ನಿರ್ಮಾಣಕ್ಕೆ ಇಲ್ಲಿಯವರೆಗೂ ಪ್ರಸ್ತಾವ ಸಲ್ಲಿಕೆಯಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್ ಪ್ರಶ್ನೆ ಕೇಳಿದ್ದರು. ಪ್ರಶ್ನೆಗೆ ಕೇಂದ್ರ ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ಮುರಳೀಧರ್ ಮೊಹೊಲ್ ಲಿಖಿತ ಉತ್ತರ ನೀಡಿದ್ದಾರೆ. ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಕರ್ನಾಟಕ ಸರ್ಕಾರದ ಮನವಿಯ ಮೇರೆಗೆ ಮೂರು ಸ್ಥಳಗಳಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಪೂರ್ವ ಕಾರ್ಯಸಾಧ್ಯತಾ ಅಧ್ಯಯನ …
Read More »ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕಠಿಣ ಕಾನೂನು: ಮಿಡ್‌ನೈಟ್ ಮೋದಿ ಸಂದೇಶ
ನವದೆಹಲಿ: ದೇಶಾದ್ಯಂತ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಾಗುತ್ತಿರುವ ಪ್ರಕರಣಗಳ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಈ ಕುರಿತು ಗುರುವಾರ ತಡರಾತ್ರಿ ವಿಡಿಯೋ ಸಂದೇಶ ರವಾನಿಸಿರುವ ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕಠಿಣ ಕಾನೂನು ಮತ್ತು ಶಿಕ್ಷೆ ಒದಗಿಸುವ ಹೊಸ ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಪ್ರಕಟಿಸಿದ್ದಾರೆ. ರಾತ್ರಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಮೋದಿ ಈ ಹೊಸ ನಿಯಮಗಳು ಮತ್ತು …
Read More »ಅಕ್ರಮವಾಗಿ ಚಿಪ್ಪುಹಂದಿಯ ಚಿಪ್ಪು ಮಾರಾಟಕ್ಕೆ ಯತ್ನಿಸಿದ ವ್ಯಕ್ತಿ ಬಂಧನ
ಚಾಮರಾಜನಗರ: ತಾಲೂಕಿನ ಹೆಗ್ಗೋಠಾರ ಗ್ರಾಮದ ದೊಡ್ಡಬೆಟ್ಟದ ಬಳಿ ಅಕ್ರಮವಾಗಿ ಚಿಪ್ಪುಹಂದಿಯ ಚಿಪ್ಪುಗಳನ್ನು ಮಾರಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಆರೋಪಿಯನ್ನು ಬಂಧಿಸಿ, 2 ಕೆಜಿ 800 ಗ್ರಾಂ ಚಿಪ್ಪುಹಂದಿಯ ಚಿಪ್ಪು, 4 ನಾಡ ಬಂದೂಕು, ಮೋಟಾರ್ ಬೈಕ್, ಇನ್ನಿತರ ಬಂದೂಕಿಗೆ ಬಳಸುವ ವಸ್ತುಗಳನ್ನು ವಶಪಡಿಸಿಕೊಂಡಿದೆ. 27 ವರ್ಷದ ಮಹೇಶ ನಾಯಕ ಹೆಚ್ ಬಂಧಿತ ವ್ಯಕ್ತಿಯಾಗಿದ್ದಾನೆ. ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದ ಬಳಿ …
Read More »
Laxmi News 24×7