Breaking News

Daily Archives: ಜುಲೈ 27, 2026

5,000 ರೂ. ಲಂಚ ಪಡೆದ ಆರೋಪ – ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

ಬೆಂಗಳೂರು: 5,000 ರೂ. ಲಂಚ ಪಡೆದ ಆರೋಪದ ಮೇಲೆ ಪುಲಕೇಶಿನಗರ ಟ್ರಾಫಿಕ್‌ ಪೊಲೀಸ್‌ ಠಾಣೆಯ ಹೆಡ್‌ ಕಾನ್ಸ್‌ಟೇಬಲ್  ಒಬ್ಬರನ್ನ ಅಮಾನತು ಮಾಡಿರುವ ಘಟನೆ ನಡೆದಿದೆ. ಬೆಂಗಳೂರು  ಪೂರ್ವ ವಿಭಾಗ ಟ್ರಾಫಿಕ್‌ ಡಿಸಿಪಿ ಸಾಹಿಲ್ ಬಾಗ್ಲಾ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಸೋಮಶೇಖರ್ ಅಮಾನತುಗೊಂಡ ಹೆಡ್‌ ಕಾನ್ಸ್‌ಟೇಬಲ್. ಕಾರಣ ಏನು? ಸೋಮಶೇಖರ್ ಅವರು ವಾಹನ ತಪಾಸಣೆ ಕರ್ತವ್ಯದಲ್ಲಿದ್ದಾಗ, ಕಬ್ಬಿಣ ತುಂಬಿದ ಲಾರಿ ಚಾಲಕ ಸಯ್ಯದ್‌ ಅಪ್ರೋಜ್‌ ಎಂಬಾತನಿಂದ 5,000 ರೂ. ಲಂಚ  ಪಡೆದಿದ್ದರು. …

Read More »

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ  ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಕೆ.ಆರ್‌ ಪೇಟೆಯಲ್ಲಿ  ದಿ.ಕೆ.ಆರ್.ಪೇಟೆ ಕೃಷ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಅವರು ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅಭಿಮಾನಿಗಳು ಮುಂದಿನ 10 ವರ್ಷಗಳ ಚುನಾವಣಾ ರಾಜಕೀಯದಲ್ಲಿ ಇರುವಂತೆ ಮನವಿ ಮಾಡಿದ್ದಾರೆ. ಆದರೂ 2028ರ ಚುನಾವಣೆಗೆ ನಾನು ಸ್ಪರ್ಧೆ ಮಾಡಲ್ಲ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಮೂಲಕ 2028ಕ್ಕೆ ಸ್ಪರ್ಧೆ ಮಾಡುವುದಿಲ್ಲ ಎಂಬ ಸ್ಪಷ್ಟ ಸಂದೇಶ …

Read More »

ಪತ್ರಕರ್ತರ ಸೋಗಿನಲ್ಲಿ ಸುಲಿಗೆ ಮಾಡ್ತಿದ್ದ ನಾಲ್ವರು ಯೂಟ್ಯೂಬರ್ಸ್ ಅರೆಸ್ಟ್

ಚಿಕ್ಕೋಡಿ: ಪತ್ರಕರ್ತರ ಸೋಗಿನಲ್ಲಿ ಜನರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ನಾಲ್ವರು ಯೂಟ್ಯೂಬರ್‌ಗಳನ್ನು ಬೆಳಗಾವಿ  ಪೊಲೀಸರು ಬಂಧಿಸಿದ್ದಾರೆ. ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಸುಲಿಗೆ ನಡೆಸುತ್ತಿದ್ದ ಈ ಗ್ಯಾಂಗ್‌ನ್ನು ಹುಕ್ಕೇರಿ ಪೊಲೀಸರು ಪತ್ತೆಹಚ್ಚಿ ಜೈಲಿಗಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಕೊಟಬಾಗಿ ಗ್ರಾಮದ ಮೆಹಬೂಬ್ ಜಮಾದಾರ್ ಅವರನ್ನು ಟಾರ್ಗೆಟ್ ಮಾಡಿಕೊಂಡು ಆರೋಪಿಗಳು ಮೊದಲೇ ಗಾಂಜಾ ಪ್ಯಾಕೆಟ್ ನೀಡಿದ್ದಾರೆ. ಬಳಿಕ ಪೊಲೀಸರ ಹೆಸರಿನಲ್ಲಿ ಬೆನ್ನಟ್ಟಿಕೊಂಡು ಬಂದು, ಗಾಂಜಾ ಮಾರಾಟ ಮಾಡುತ್ತಿದ್ದೀಯಾ ಎಂದು ಬೆದರಿಕೆ ಹಾಕಿದ್ದಾರೆ. ಗಾಂಜಾ ಪ್ಯಾಕೆಟ್ …

Read More »

ಧುಮ್ಮಿಕ್ಕುತ್ತಿರುವ ʻಜೋಗದ ಸಿರಿʼಯನ್ನು ಕಣ್ತುಂಬಿಕೊಂಡ ಸಾವಿರಾರು ಪ್ರವಾಸಿಗರು

ಶಿವಮೊಗ್ಗ: ಶರಾವತಿ ಕಣಿವೆ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ಹಿನ್ನೆಲೆ ಶರಾವತಿ ನದಿಗೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿದ್ದು, ಸಾಗರ ತಾಲೂಕಿನಲ್ಲಿರುವ ಜೋಗ ಜಲಪಾತಕ್ಕೆ ಜೀವಕಳೆ ಬಂದಿದೆ. ಧುಮ್ಮಿಕ್ಕಿ ಹರಿಯುತ್ತಿರುವ ಜೋಗ ಜಲಪಾತವನ್ನು ನೋಡಲು ಪ್ರವಾಸಿಗರ ದಂಡೇ ಬರುತ್ತಿದೆ. ಇಂದು ಭಾನುವಾರವಾಗಿರುವುದರಿಂದ ಜೋಗಕ್ಕೆ ಸಾವಿರಾರು ಪ್ರವಾಸಿಗರು ಆಗಮಿಸಿದ್ದಾರೆ. ಶನಿವಾರ ಸಹ ಸಾವಿರಾರು ಮಂದಿ ಪ್ರವಾಸಿಗರು ಭೇಟಿ ನೀಡಿದ್ದರು. ಮಳೆ ಹಾಗೂ ಮಂಜಿನಾಟದ ನಡುವೆ ಜೋಗದ ಸಿರಿಯನ್ನು ಪ್ರವಾಸಿಗರು ಕಣ್ತುಂಬಿಕೊಳ್ಳುತ್ತಿದ್ದಾರೆ. ರಾಜ, …

Read More »

ನಿಪ್ಪಾಣಿಯಲ್ಲಿ ಆಲ್ ಇಂಡಿಯಾ ಪ್ಯಾಂಥರ್ ಸೇನೆಯಿಂದ ಗಮನ ಸೆಳೆಯುವ ಧರಣಿ; NEET ಪ್ರಕರಣದ ವಿವಿಧ ಬೇಡಿಕೆಗಳ ಕುರಿತು ತಹಶೀಲ್ದಾರರಿಗೆ ಮನವಿ

ನಿಪ್ಪಾಣಿ, ಪ್ರತಿನಿಧಿ : ದೆಹಲಿಯ ಜಂತರ್-ಮಂತರ್‌ನಲ್ಲಿ ನಡೆಯುತ್ತಿರುವ ಯುವಕರ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಆಲ್ ಇಂಡಿಯಾ ಪ್ಯಾಂಥರ್ ಸೇನೆಯ ನಿಪ್ಪಾಣಿ ಘಟಕದ ವತಿಯಿಂದ ಒಂದು ದಿನದ ಗಮನ ಸೆಳೆಯುವ ಧರಣಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ತಹಶೀಲ್ದಾರರ ಮೂಲಕ ಭಾರತ ಸರ್ಕಾರಕ್ಕೆ ವಿವಿಧ ಬೇಡಿಕೆಗಳ ಮನವಿಯನ್ನು ಸಲ್ಲಿಸಲಾಯಿತು. ಮನವಿಯಲ್ಲಿ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ, NEET ಪರೀಕ್ಷೆಯಲ್ಲಿ ನಡೆದಿರುವ ಎನ್ನಲಾದ ಅಕ್ರಮಗಳ ಸಮಗ್ರ ತನಿಖೆ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಆರೋಪಿಗಳ …

Read More »

ಬೆಳಗಾವಿಯಲ್ಲಿ SIR ಕೆಲಸದ ಒತ್ತಡಕ್ಕೆ ಶಿಕ್ಷಕ ಸಾವು

ಬೆಳಗಾವಿ: SIR  ಕಾರ್ಯದ ಒತ್ತಡದ ನಡುವೆ ಬೆಳಗಾವಿ  ಜಿಲ್ಲೆಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಅಥಣಿ ಪಟ್ಟಣದ ನಿವಾಸಿ ಹಾಗೂ ರಾಯಬಾಗ ತಾಲೂಕಿನ ನಿಲಜಿ ಗ್ರಾಮದ ಪಡದಾಳೆ ತೋಟದ ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕ ಪ್ರಕಾಶ್ ಕಾಂಬಳೆ ಮೃತಪಟ್ಟ ದುರ್ದೈವಿ. ಪ್ರತಿದಿನ ಮನೆಗೆ ಬಂದ ಬಳಿಕವೂ ಕೆಲಸ ಬಹಳ ಇದೆ, ಬೇಗ ಮುಗಿಸಬೇಕು ಎಂದು ಪ್ರಕಾಶ್ ಹೇಳಿಕೊಳ್ಳುತ್ತಿದ್ದರು. ಕಳೆದ ಕೆಲವು ದಿನಗಳಿಂದ SIR ಕೆಲಸದ ಒತ್ತಡ ಹೆಚ್ಚಾಗಿತ್ತು …

Read More »

RTO ಅಧಿಕಾರಿಗಳ ವಿಶೇಷ ಕಾರ್ಯಾಚರಣೆ – 390 ಖಾಸಗಿ ಶಾಲಾ ವಾಹನಗಳು ಸೀಜ್

ವಿಜಯನಗರ: ಫಿಟ್ನೆಸ್‌, ಇನ್ಶುರೆನ್ಸ್‌ ಇಲ್ಲದೇ ಓಡಾಟ ನಡೆಸುತ್ತಿದ್ದ ಖಾಸಗಿ ಶಾಲಾ ವಾಹನಗಳ ವಿರುದ್ಧ ವಿಜಯನಗರ ಜಿಲ್ಲೆಯ ಆರ್‌ಟಿಒ ಅಧಿಕಾರಿಗಳ ತಂಡ ಸಮರ ಸಾರಿದೆ. ವಿಶೇಷ ಕಾರ್ಯಾಚರಣೆ ನಡೆಸಿದ್ದು, ನೂರಾರು ವಾಹನಗಳನ್ನ ಜಪ್ತಿ ಮಾಡಿದೆ. ಹೌದು. ಜಿಲ್ಲೆಯಲ್ಲಿ ಫಿಟ್ನೆಸ್‌, ಇನ್ಶುರೆನ್ಸ್‌ ಇಲ್ಲದೇ ಓಡಾಟ ನಡೆಸುತ್ತಿದ್ದ ಖಾಸಗಿ ಶಾಲೆಗಳ 390 ವಾಹನಗಳನ್ನ ಆರ್‌ಟಿಒ ಅಧಿಕಾರಿಗಳ ತಂಡ ಜಪ್ತಿ ಮಾಡಿದೆ. ಕಳೆದ ಫೆಬ್ರವರಿಯಿಂದ ಈವರೆಗೆ 103 ಪ್ರಕರಣಗಳು ದಾಖಲಾಗಿದ್ದು, 11 ಲಕ್ಷ ರೂ.ಗಿಂತಲೂ ಅಧಿಕ ದಂಡ …

Read More »

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ನಿರ್ಧಾರ

ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ  ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ, ಆರಂಭಿಕ ಹಂತದಲ್ಲೇ ಸೋಂಕು ಪತ್ತೆಹಚ್ಚಿ, ಕಡಿವಾಣ ಹಾಕುವ ನಿರ್ಧಾರಕ್ಕೆ ಆರೋಗ್ಯ ಇಲಾಖೆ  ಮುಂದಾಗಿದೆ. ಅದಕ್ಕಾಗಿ ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ನಿರ್ಧಾರ ಮಾಡಿದೆ. ಏಕೆ ಈ ಮಹತ್ವದ ನಿರ್ಧಾರ? ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ  ಹಾಗೂ ಇತರ ಸಂಸ್ಥೆಗಳ ವರದಿಗಳ ಪ್ರಕಾರ, ಹೆಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕ ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ …

Read More »

ನನಗಾಗಿ ಎಲ್ಲವನ್ನೂ ತ್ಯಾಗ ಮಾಡಿದ್ದೀರಿ, ಆದ್ರೆ ನಾನು ಫೇಲಾದೆ: ಡೆತ್‌ನೋಟ್‌ ಬರೆದಿಟ್ಟು ನೀಟ್‌ ವಿದ್ಯಾರ್ಥಿನಿ ಆತ್ಮಹತ್ಯೆ

ಮುಂಬೈ: ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಲಾಲ್ಪುರ ಗ್ರಾಮದ ನಿವಾಸಿ ಅಂಕಿತಾ ಸಾಂಗ್ಲೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕೇವಲ 166 ಅಂಕಗಳನ್ನು ಗಳಿಸಿದ ನಂತರ ಆಕೆ ಒತ್ತಡಕ್ಕೊಳಗಾಗಿದ್ದಳು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಶನಿವಾರ ಸಂಜೆ 4.30 ರ ಸುಮಾರಿಗೆ ಆಕೆ ತನ್ನ …

Read More »

ಪೇಪರ್ ಲೀಕ್‌ ತಡೆಗೆ ಕಠೋರ ಕಾನೂನು – ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆ?

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ ತಣ್ಣಗಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗ ತನ್ನ ಪ್ರಮುಖ ಶಾಸನಾತ್ಮಕ ಆದ್ಯತೆಗಳತ್ತ ಗಮನಹರಿಸುತ್ತಿದೆ. ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಿದ ಬಳಿಕ ಹೌದು. ಕಾಕ್ರೋಚ್‌ ಜನತಾ ಪಾರ್ಟಿ  ತನ್ನ ಪ್ರತಿಭಟನೆ ಹಿಂಪಡೆದುಕೊಂಡಿದೆ. ಇದಾದ ಒಂದು ದಿನದ ನಂತರ, ಪ್ರಧಾನಿ ಮೋದಿ ಅವರು ಇನ್ಫೋಸಿಸ್ ಸಹ-ಸ್ಥಾಪಕ, ವಿಶ್ವಪ್ರಸಿದ್ಧ ತಂತ್ರಜ್ಞಾನ ತಜ್ಞ ನಂದನ್ ನಿಲೇಕಣಿ …

Read More »