ಬೆಳಗಾವಿ: ರಾಜ್ಯದಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗಳು ನಡೆಯುತ್ತಿದೆ. ಇದೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದೆ. ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಎಐಸಿಸಿ ವೀಕ್ಷಕ ಮನೋಜ್ ಚವ್ಹಾಣ ನೇತೃತ್ವದಲ್ಲಿ ನಗರ ಘಟಕದ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿತ್ತು. ಅಭಿಪ್ರಾಯ ಸಂಗ್ರಹದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಮಾಜಿ ಶಾಸಕ ರಮೇಶ ಕುಡಚಿ …
Read More »Daily Archives: ಜುಲೈ 27, 2026
ಅರಣ್ಯ ಇಲಾಖೆಯಿಂದ ಶಾಕ್ – ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ ರೇಟ್ ಡಬಲ್
ಚಾಮರಾಜನಗರ: ಅರಣ್ಯ ಇಲಾಖೆಯು ಸಫಾರಿ ಮಾಡೋರಿಗೆ ಶಾಕ್ ನೀಡಿದ್ದು, ಪ್ರಸಿದ್ಧ ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ ದರವನ್ನು ಬಹುತೇಕ ಡಬಲ್ ಮಾಡಲಾಗಿದೆ. ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಸೆಪ್ಟೆಂಬರ್ 1ರಿಂದ ಪರಿಷ್ಕತ ಸಫಾರಿ ದರ ಜಾರಿಯಾಗಲಿದೆ. ಬಸ್, ಜೀಪ್, ಕ್ಯಾಮೆರಾ ಬಳಕೆ ಶುಲ್ಕ, ವಾಹನ ಪಾರ್ಕಿಂಗ್ ಸೇರಿದಂತೆ ಎಲ್ಲವನ್ನೂ ಬಹುತೇಕ ದ್ವಿಗುಣಗೊಳಿಸಿದ್ದಾರೆ. ಬಂಡೀಪುರದಲ್ಲಿ ಬಸ್ ಸಫಾರಿಗೆ ವಯಸ್ಕರ ದರವನ್ನು 650 ರೂ.ಯಿಂದ 1,000 ರೂ.ಗೆ ಏರಿಕೆ ಮಾಡಿದ್ದಾರೆ. ಇನ್ನೂ 12 ವರ್ಷದೊಳಗಿನ ಮಕ್ಕಳಿಗೆ …
Read More »ರಾಜೀನಾಮೆ ಬಳಿಕ ಸಂಸತ್ ಭವನಕ್ಕೆ ಬಂದ ಧರ್ಮೇಂದ್ರ ಪ್ರಧಾನ್‌ಗೆ ಪೇಟ ತೊಡಿಸಿ ಅದ್ಧೂರಿ ಸ್ವಾಗತ
ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇಂದು (ಸೋಮವಾರ) ಮೊದಲ ಬಾರಿಗೆ ಸಂಸತ್ ಭವನಕ್ಕೆ ಆಗಮಿಸಿದ ಧರ್ಮೇಂದ್ರ ಪ್ರಧಾನ್ ಅವರಿಗೆ ಎನ್‌ಡಿಎ ಸಂಸದರು ಅದ್ಧೂರಿ ಸ್ವಾಗತ ಕೋರಿದರು. ಸಂಸತ್ ಆವರಣದ ಮಕರದ್ವಾರದಲ್ಲಿ ಪೇಟ ತೊಡಿಸಿ, ಅದ್ಧೂರಿ ಸ್ವಾಗತ ಕೋರಿದ ಬಳಿಕ, ಎಲ್ಲಾ ಎನ್‌ಡಿಎ ಸಂಸದರು ಪೂರ್ಣ ಗೌರವದೊಂದಿಗೆ ಅವರನ್ನ ಸದನಕ್ಕೆ ಬರಮಾಡಿಕೊಂಡರು. ಈ ಸ್ವಾಗತದ ಮೂಲಕ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅವರ ಆತ್ಮಸಾಕ್ಷಿಯಿಂದ ತೆಗೆದುಕೊಂಡ …
Read More »ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK-47 ಹಿಡಿದು ಗುಂಡು ಹಾರಿಸಿದ ಕಾನ್ಸ್‌ಟೇಬಲ್ – ವಿಡಿಯೋ ವೈರಲ್ ಬೆನ್ನಲ್ಲೇ ಅಮಾನತು
ಪಾಟ್ನಾ: ಬಿಹಾರದಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ AK-47 ಹಿಡಿದು ಗುಂಡು ಹಾರಿಸಿದ ಕಾನ್ಸ್‌ಟೇಬಲ್‌ನನ್ನು ಅಮಾನತು ಮಾಡಲಾಗಿದೆ. ಜುಲೈ 25 ರಂದು ಸಿವಾನ್ ಜಿಲ್ಲೆಯಲ್ಲಿ ನಡೆದ ‘ಬಿಹಾರ ಬಂದ್’ ಪ್ರತಿಭಟನೆಯ ಸಂದರ್ಭದಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಕಡೆ AK-47 ರೈಫಲ್ ಹಿಡಿದು ಕಾನ್ಸ್‌ಟೇಬಲ್ ಗುಂಡು ಹಾರಿಸಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಚಾರವಾಗಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ವರದಿಗಳ …
Read More »ಕುಡಿಯುವ ನೀರಿಗಾಗಿ 224 ಕೋಟಿ ಅನುದಾನ ಬಿಡುಗಡೆ – ಈಶ್ವರ್ ಖಂಡ್ರೆ
ಬೆಂಗಳೂರು: ಕುಡಿಯುವ ನೀರಿಗಾಗಿ 224 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲವಿದೆ. ಸಿಎಂ ಅಧ್ಯಕ್ಷತೆಯಲ್ಲಿ, ವಿಭಾಗೀಯ ಮಟ್ಟದ ಪ್ರಕೃತಿ ವಿಕೋಪದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ. ಈ ಹಿಂದೆ ಕುಡಿಯುವ ನೀರಿಗಾಗಿ 117 ಕೋಟಿ ರೂ. ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಈ ಬಾರಿ 224 ಕ್ಷೇತ್ರಕ್ಕೆ …
Read More »ಗದ್ದಲ ಕೋಲಾಹಲದ ನಡುವೆ ಲೋಕಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ ಮಂಡನೆ
ನವದೆಹಲಿ: ವಿಪಕ್ಷಗಳ ಗದ್ದಲ ಕೋಲಾಹಲದ ನಡುವೆಯೇ ಲೋಕಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ ಮಂಡನೆಯಾಗಿದೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಸೋಮವಾರ (ಇಂದು) ಲೋಕಸಭೆಯಲ್ಲಿ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ಮಸೂದೆ-2026 (Public Examinations (Prevention of Unfair Means) Amendment Bill, 2026) ಅನ್ನು ಮಂಡಿಸಿದರು. ಈ ವೇಳೆ ಪ್ರತಿಪಕ್ಷ ಸಂಸದರು ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಲು ಮುಂದಾದರು, ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಚ್‌ಗೆ ಹೊಣೆಗಾರಿಕೆಗೆ …
Read More »5,000 ರೂ. ಲಂಚ ಪಡೆದ ಆರೋಪ – ಹೆಡ್ ಕಾನ್ಸ್‌ಟೇಬಲ್ ಸಸ್ಪೆಂಡ್
ಬೆಂಗಳೂರು: 5,000 ರೂ. ಲಂಚ ಪಡೆದ ಆರೋಪದ ಮೇಲೆ ಪುಲಕೇಶಿನಗರ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಒಬ್ಬರನ್ನ ಅಮಾನತು ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ಪೂರ್ವ ವಿಭಾಗ ಟ್ರಾಫಿಕ್ ಡಿಸಿಪಿ ಸಾಹಿಲ್ ಬಾಗ್ಲಾ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಸೋಮಶೇಖರ್ ಅಮಾನತುಗೊಂಡ ಹೆಡ್ ಕಾನ್ಸ್‌ಟೇಬಲ್. ಕಾರಣ ಏನು? ಸೋಮಶೇಖರ್ ಅವರು ವಾಹನ ತಪಾಸಣೆ ಕರ್ತವ್ಯದಲ್ಲಿದ್ದಾಗ, ಕಬ್ಬಿಣ ತುಂಬಿದ ಲಾರಿ ಚಾಲಕ ಸಯ್ಯದ್ ಅಪ್ರೋಜ್ ಎಂಬಾತನಿಂದ 5,000 ರೂ. ಲಂಚ ಪಡೆದಿದ್ದರು. …
Read More »ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಕೆ.ಆರ್ ಪೇಟೆಯಲ್ಲಿ ದಿ.ಕೆ.ಆರ್.ಪೇಟೆ ಕೃಷ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಅವರು ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅಭಿಮಾನಿಗಳು ಮುಂದಿನ 10 ವರ್ಷಗಳ ಚುನಾವಣಾ ರಾಜಕೀಯದಲ್ಲಿ ಇರುವಂತೆ ಮನವಿ ಮಾಡಿದ್ದಾರೆ. ಆದರೂ 2028ರ ಚುನಾವಣೆಗೆ ನಾನು ಸ್ಪರ್ಧೆ ಮಾಡಲ್ಲ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಮೂಲಕ 2028ಕ್ಕೆ ಸ್ಪರ್ಧೆ ಮಾಡುವುದಿಲ್ಲ ಎಂಬ ಸ್ಪಷ್ಟ ಸಂದೇಶ …
Read More »ಪತ್ರಕರ್ತರ ಸೋಗಿನಲ್ಲಿ ಸುಲಿಗೆ ಮಾಡ್ತಿದ್ದ ನಾಲ್ವರು ಯೂಟ್ಯೂಬರ್ಸ್ ಅರೆಸ್ಟ್
ಚಿಕ್ಕೋಡಿ: ಪತ್ರಕರ್ತರ ಸೋಗಿನಲ್ಲಿ ಜನರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ನಾಲ್ವರು ಯೂಟ್ಯೂಬರ್‌ಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಸುಲಿಗೆ ನಡೆಸುತ್ತಿದ್ದ ಈ ಗ್ಯಾಂಗ್‌ನ್ನು ಹುಕ್ಕೇರಿ ಪೊಲೀಸರು ಪತ್ತೆಹಚ್ಚಿ ಜೈಲಿಗಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಕೊಟಬಾಗಿ ಗ್ರಾಮದ ಮೆಹಬೂಬ್ ಜಮಾದಾರ್ ಅವರನ್ನು ಟಾರ್ಗೆಟ್ ಮಾಡಿಕೊಂಡು ಆರೋಪಿಗಳು ಮೊದಲೇ ಗಾಂಜಾ ಪ್ಯಾಕೆಟ್ ನೀಡಿದ್ದಾರೆ. ಬಳಿಕ ಪೊಲೀಸರ ಹೆಸರಿನಲ್ಲಿ ಬೆನ್ನಟ್ಟಿಕೊಂಡು ಬಂದು, ಗಾಂಜಾ ಮಾರಾಟ ಮಾಡುತ್ತಿದ್ದೀಯಾ ಎಂದು ಬೆದರಿಕೆ ಹಾಕಿದ್ದಾರೆ. ಗಾಂಜಾ ಪ್ಯಾಕೆಟ್ …
Read More »ಧುಮ್ಮಿಕ್ಕುತ್ತಿರುವ ʻಜೋಗದ ಸಿರಿʼಯನ್ನು ಕಣ್ತುಂಬಿಕೊಂಡ ಸಾವಿರಾರು ಪ್ರವಾಸಿಗರು
ಶಿವಮೊಗ್ಗ: ಶರಾವತಿ ಕಣಿವೆ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ಹಿನ್ನೆಲೆ ಶರಾವತಿ ನದಿಗೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿದ್ದು, ಸಾಗರ ತಾಲೂಕಿನಲ್ಲಿರುವ ಜೋಗ ಜಲಪಾತಕ್ಕೆ ಜೀವಕಳೆ ಬಂದಿದೆ. ಧುಮ್ಮಿಕ್ಕಿ ಹರಿಯುತ್ತಿರುವ ಜೋಗ ಜಲಪಾತವನ್ನು ನೋಡಲು ಪ್ರವಾಸಿಗರ ದಂಡೇ ಬರುತ್ತಿದೆ. ಇಂದು ಭಾನುವಾರವಾಗಿರುವುದರಿಂದ ಜೋಗಕ್ಕೆ ಸಾವಿರಾರು ಪ್ರವಾಸಿಗರು ಆಗಮಿಸಿದ್ದಾರೆ. ಶನಿವಾರ ಸಹ ಸಾವಿರಾರು ಮಂದಿ ಪ್ರವಾಸಿಗರು ಭೇಟಿ ನೀಡಿದ್ದರು. ಮಳೆ ಹಾಗೂ ಮಂಜಿನಾಟದ ನಡುವೆ ಜೋಗದ ಸಿರಿಯನ್ನು ಪ್ರವಾಸಿಗರು ಕಣ್ತುಂಬಿಕೊಳ್ಳುತ್ತಿದ್ದಾರೆ. ರಾಜ, …
Read More »
Laxmi News 24×7